Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 9:10 - ಕನ್ನಡ ಸಮಕಾಲಿಕ ಅನುವಾದ

10 “ನಾನು ಮರುಭೂಮಿಯಲ್ಲಿ ದ್ರಾಕ್ಷಾಫಲದ ಹಾಗೆ ಇಸ್ರಾಯೇಲನ್ನು ಕಂಡುಕೊಂಡೆನು. ಅಂಜೂರದ ಗಿಡದಲ್ಲಿ ಮೊದಲು ಮಾಗಿದ ಹಣ್ಣನ್ನು ಕಂಡ ಹಾಗೆ ನಿಮ್ಮ ಪಿತೃಗಳನ್ನು ನೋಡಿದೆನು. ಆದರೆ ಅವರು ಬಾಳ್ ಪೆಯೋರನ ಹತ್ತಿರ ಬಂದು ನಾಚಿಕೆಯ ವಿಗ್ರಹಕ್ಕೆ ತಮ್ಮನ್ನು ಪ್ರತ್ಯೇಕಿಸಿಕೊಂಡರು. ಅವರು ಪ್ರೀತಿಸಿದ ವಿಗ್ರಹಗಳ ಹಾಗೆ ಅಸಹ್ಯರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಕಾಡಿನಲ್ಲಿ ದ್ರಾಕ್ಷಿಯ ಹಣ್ಣು ಸಿಕ್ಕಿದಂತೆ ಇಸ್ರಾಯೇಲು ನನಗೆ ಸಿಕ್ಕಿತು; ಹೊಸದಾಗಿ ಫಲಕ್ಕೆ ಬಂದ ಅಂಜೂರದ ಗಿಡದಲ್ಲಿ ಮೊದಲು ಮಾಗಿದ ಹಣ್ಣನ್ನು ಕಂಡ ಹಾಗೆ ನಿಮ್ಮ ಪೂರ್ವಿಕರನ್ನು ಕಂಡೆನು. ಆದರೆ ಅವರು ಬಾಳ್ ಪೆಗೋರಿಗೆ ಬಂದು ಬಾಳ್ ದೇವತೆಯ ಭಕ್ತರಾಗಿ ದೀಕ್ಷೆಗೊಂಡು, ತಾವು ಪ್ರೀತಿಸಿದ ದೇವತೆಯ ಹಾಗೆ ಅಸಹ್ಯರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಬೆಂಗಾಡಿನಲ್ಲಿ ದ್ರಾಕ್ಷೆ ಸಿಕ್ಕಿದಂತೆ ಇಸ್ರಯೇಲ್ ನನಗೆ ಸಿಕ್ಕಿತು. ಅಂಜೂರದ ಮರದ ಮೊತ್ತಮೊದಲ ಹಣ್ಣು ಕಣ್ಣಿಗೆ ಬೀಳುವಂತೆ ನಿಮ್ಮ ಪಿತೃಗಳು ನನಗೆ ಕಾಣಿಸಿಕೊಂಡರು. ಆದರೆ ಅವರು ಬಾಳ್‍ಪೆಗೋರಿಗೆ ಬಂದು ಬಾಳ್ ದೇವತೆಯ ಭಕ್ತರಾದರು. ಅವರು ನೆಚ್ಚಿಕೊಂಡ ದೇವತೆಯಂತೆ ನೀಚರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಕಾಡಿನಲ್ಲಿ ದ್ರಾಕ್ಷೆಯ ಹಣ್ಣು ಸಿಕ್ಕಿದಂತೆ ಇಸ್ರಾಯೇಲು ನನಗೆ ಸಿಕ್ಕಿತು; ಹೊಸದಾಗಿ ಫಲಕ್ಕೆ ಬಂದ ಅಂಜೂರದ ಗಿಡದಲ್ಲಿ ಮೊದಲು ಮಾಗಿದ ಹಣ್ಣನ್ನು ಕಂಡ ಹಾಗೆ ನಿಮ್ಮ ಪಿತೃಗಳನ್ನು ಕಂಡೆನು; ಆದರೆ ಅವರು ಬಾಳ್‍ಪೆಗೋರಿಗೆ ಬಂದು ಬಾಳ್‍ದೇವತೆಯ ಭಕ್ತರಾಗಿ ದೀಕ್ಷೆಗೊಂಡು ತಾವು ಪ್ರೀತಿಸಿದ ದೇವತೆಯ ಹಾಗೆ ಅಸಹ್ಯರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 “ನನಗೆ ಇಸ್ರೇಲ್ ಜನಾಂಗವು ಮರುಭೂಮಿಯಲ್ಲಿ ದೊರಕಿದ ದ್ರಾಕ್ಷಿಹಣ್ಣಿನಂತಿತ್ತು. ನಿನ್ನ ಪೂರ್ವಿಕರು ಫಲಕಾಲದ ಆರಂಭದಲ್ಲಿ ದೊರೆತ ಅಂಜೂರದ ಹಣ್ಣಿನಂತಿದ್ದರು. ಆದರೆ ಅವರು ಬಾಳ್‌ಪೆಗೋರಿಗೆ ಬಂದಾಗ ಅವರು ಬದಲಾದರು. ಅವರು ಕೊಳೆತುಹೋದ ವಸ್ತುವಿನಂತೆ ಆದರು. ಅವರು ಪ್ರೀತಿಸಿದ ಭಯಂಕರ ವಿಗ್ರಹಗಳಂತೆ ಆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 9:10
32 ತಿಳಿವುಗಳ ಹೋಲಿಕೆ  

“ನಿಮ್ಮ ಪುತ್ರಿಯರು ವ್ಯಭಿಚಾರ ಮಾಡುವಾಗಲೂ, ನಿಮ್ಮ ಸೊಸೆಯಂದಿರು ವ್ಯಭಿಚಾರ ಮಾಡುವಾಗಲೂ ನಾನು ಅವರನ್ನು ಶಿಕ್ಷಿಸುವುದಿಲ್ಲ. ಏಕೆಂದರೆ ಪುರುಷರು ಸ್ವತಃ ವೇಶ್ಯೆಯರೊಂದಿಗೆ ವಾಸಿಸುತ್ತಾರೆ ಮತ್ತು ದೇವಾಲಯದ ವೇಶ್ಯೆಯರೊಂದಿಗೆ ಬಲಿ ಅರ್ಪಿಸುತ್ತಾರೆ. ಆದ್ದರಿಂದ ವಿವೇಕವಿಲ್ಲದ ಜನರು ನಾಶವಾಗುತ್ತಾರೆ.


ಓ ಯೆಹೂದವೇ, ನಿನ್ನ ಪಟ್ಟಣಗಳಷ್ಟು ನಿನ್ನ ದೇವರುಗಳು ಇದ್ದವು. ಯೆರೂಸಲೇಮಿಗೆ ಎಷ್ಟು ಬೀದಿಗಳೋ, ಅಷ್ಟು ಬಲಿಪೀಠಗಳನ್ನು ನಾಚಿಗೆಗೆ ಎಂದರೆ, ಅಷ್ಟು ಬಲಿಪೀಠಗಳನ್ನು ಬಾಳನಿಗೆ ಧೂಪವನ್ನರ್ಪಿಸುವುದಕ್ಕೆ ಇಟ್ಟಿದ್ದೀ.’


ಎಂತಹ ಸಂಕಟ ನನ್ನದು! ನಾನು ಬೇಸಿಗೆ ಕಾಲದ ಹಣ್ಣುಗಳನ್ನು ಕೂಡಿಸುವವರ ಹಾಗೆಯೂ ದ್ರಾಕ್ಷಿ ಸುಗ್ಗಿಯಲ್ಲಿ ಹಕ್ಕಲು ಆರಿಸುವವರ ಹಾಗೆಯೂ ಇದ್ದೇನೆ. ತಿನ್ನುವುದಕ್ಕೆ ಗೊಂಚಲೇ ಇಲ್ಲ. ನನಗೆ ಪ್ರಿಯವಾದ ಮೊದಲು ಮಾಗಿದ ಅಂಜೂರದ ಹಣ್ಣುಗಳೂ ಇಲ್ಲ.


ಅವಳ ದ್ರಾಕ್ಷಿತೋಟಗಳನ್ನು ಅಲ್ಲಿರುವಾಗಲೇ ಅವಳಿಗೆ ಹಿಂದಕ್ಕೆ ಕೊಡುವೆನು. ಆಕೋರಿನ ಕಣಿವೆಯನ್ನೇ, ಅವಳ ನಿರೀಕ್ಷೆಗೆ ದ್ವಾರವನ್ನಾಗಿ ಮಾಡುವೆನು. ಅಲ್ಲಿ ಅವಳು ತಾನು ಯೌವನದ ದಿವಸಗಳಲ್ಲಿಯೂ, ಈಜಿಪ್ಟ್ ದೇಶದೊಳಗಿಂದ ಹೊರಟು ಬಂದ ದಿವಸಗಳಲ್ಲಿಯೂ ಆದ ಹಾಗೆ ಆಡುವಳು.


“ ‘ಆದರೆ ಅವರು ನನಗೆ ವಿರುದ್ಧವಾಗಿ ತಿರುಗಿಬಿದ್ದರು. ನನಗೆ ಕಿವಿಗೊಡಲಿಲ್ಲ. ಅವರು ತಮ್ಮ ಕಣ್ಣಿಗೆ ಅಸಹ್ಯವಾದವುಗಳನ್ನು ಬಿಸಾಡಲಿಲ್ಲ. ಅವರು ಈಜಿಪ್ಟಿನ ವಿಗ್ರಹಗಳನ್ನು ಬಿಡಲಿಲ್ಲ. ಆಗ ನಾನು ಅವರ ಮೇಲೆ ನನ್ನ ರೋಷವನ್ನು ಸುರಿಸಿ, ಈಜಿಪ್ಟ್ ದೇಶದಲ್ಲಿ ಅವರ ಮೇಲೆ ನನ್ನ ಕೋಪವನ್ನು ತೀರಿಸುವೆನೆಂದು ಹೇಳಿದೆನು.


“ಹುಳಿಹಿಟ್ಟಿನ ರೊಟ್ಟಿಯನ್ನು ಹೋಮ ಮಾಡಿ, ಸ್ತೋತ್ರದ ಯಜ್ಞವನ್ನೂ ಅರ್ಪಿಸಿರಿ. ಕಾಣಿಕೆ ಕೊಟ್ಟದ್ದನ್ನು ಹೇಳಿಕೊಳ್ಳಿರಿ. ಇಸ್ರಾಯೇಲರೇ, ಹೀಗೆ ಮಾಡುವುದು ಇಷ್ಟವಾಗಿದೆ,” ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.


“ಇಸ್ರಾಯೇಲನು ಹುಡುಗನಾಗಿದ್ದಾಗ, ನಾನು ಅವನನ್ನು ಪ್ರೀತಿ ಮಾಡಿದೆನು ಮತ್ತು ಈಜಿಪ್ಟಿನಿಂದ ನನ್ನ ಮಗನನ್ನು ನಾನು ಕರೆದೆನು.


ಯೆಹೋವ ದೇವರು ಹೀಗೆ ಹೇಳುತ್ತಾರೆ: “ನಾನು ಅವರಿಗೆ ವಿಶ್ರಾಂತಿ ಕೊಡುವುದಕ್ಕೆ ಹೋಗಲಾಗಿ, ಖಡ್ಗಕ್ಕೆ ತಪ್ಪಿಸಿಕೊಂಡ ಇಸ್ರಾಯೇಲಿನ ಜನರಿಗೆ ಮರುಭೂಮಿಯಲ್ಲಿ ದಯೆ ದೊರಕಿತು.”


ಏನೆಂದರೆ, ಪ್ರವಾದಿಗಳು ಸುಳ್ಳಾಗಿ ಪ್ರವಾದಿಸುತ್ತಾರೆ. ಯಾಜಕರು ತಮ್ಮ ಅಧಿಕಾರದಿಂದ ದೊರೆತನ ಮಾಡುತ್ತಾರೆ. ನನ್ನ ಜನರು ಅದನ್ನು ಪ್ರೀತಿ ಮಾಡುತ್ತಾರೆ. ಆದರೆ ಅಂತ್ಯದಲ್ಲಿ ನೀವು ಏನು ಮಾಡುವಿರಿ?


ಫಲವತ್ತಾದ ಕಣಿವೆಗೆ ತಲೆಯ ಮೇಲಿರುವ ಅಲಂಕಾರದ ಶೃಂಗಾರವಾಗಿದ್ದು, ಬೇಸಿಗೆ ಮುಂಚೆ ಮಾಗಿದ ಅಂಜೂರದ ಹಣ್ಣಿನ ಹಾಗೆ ಇರುವುದು. ಜನರು ಅವರನ್ನು ನೋಡಿ ಕೈಗೆ ತೆಗೆದುಕೊಂಡ ತಕ್ಷಣ ಅವರು ನುಂಗುತ್ತಾರೆ.


ಆದ್ದರಿಂದ ಅವರ ಹೃದಯದ ದುರಾಶೆಗೆ ಅವರನ್ನು ನಾನು ಒಪ್ಪಿಸಿದೆನು; ಅವರು ತಮ್ಮ ಆಲೋಚನೆಗಳಂತೆ ನಡೆದುಕೊಂಡರು.


ನೆಬಾಟನ ಮಗ ಯಾರೊಬ್ಬಾಮನ ಪಾಪಗಳಲ್ಲಿ ನಡೆಯುವುದು ಅವನಿಗೆ ಅಲ್ಪವಾಗಿತ್ತು. ಅವನು ಸೀದೋನ್ಯರ ಅರಸನಾದ ಎತ್ಬಾಳನ ಮಗಳಾದ ಈಜೆಬೆಲಳನ್ನು ಮದುವೆಯಾಗಿ ಬಾಳನನ್ನು ಸೇವಿಸಿ ಅವನಿಗೆ ಅಡ್ಡಬಿದ್ದನು.


ಗಿದ್ಯೋನನು ಬಾಳನ ಬಲಿಪೀಠವನ್ನು ಕೆಡವಿದ ಕಾರಣ ಅವರು ಆ ದಿವಸದಲ್ಲಿ, “ಬಾಳನೇ ವ್ಯಾಜ್ಯವಾಡಲಿ” ಎಂದು ಹೇಳಿದ್ದರಿಂದ ಗಿದ್ಯೋನನಿಗೆ ಯೆರುಬ್ಬಾಳ ಎಂಬ ಹೆಸರಾಯಿತು.


ದೇವರಿಗೆ ಅಲ್ಲ, ದೆವ್ವಗಳಿಗೆ, ಅವರು ಮುಂಚಿತವಾಗಿ ಅರಿಯದ ದೇವರುಗಳಿಗೆ, ಸಮೀಪದಲ್ಲಿ ಹೊಸದಾಗಿ ತೋರಿ ಬಂದ ದೇವರುಗಳಿಗೆ, ಅಂದರೆ, ಅವರ ಪಿತೃಗಳು ಭಜಿಸದವುಗಳಿಗೆ ಬಲಿ ಅರ್ಪಿಸಿದರು.


ದೇವರು ಬರಿದಾದ ಮರುಭೂಮಿಯಲ್ಲಿ ಇಸ್ರಾಯೇಲರನ್ನು ಕಂಡು ನಡೆಸಿದರು. ದೇವರು ಇಸ್ರಾಯೇಲರನ್ನು ರಕ್ಷಿಸಿ, ಉಪದೇಶಿಸಿ, ತಮ್ಮ ಕಣ್ಣುಗುಡ್ಡೆಯಂತೆ ಕಾಪಾಡಿದರು.


ಬಾಳ್ ಪೆಯೋರನ ವಿಷಯದಲ್ಲಿ ಯೆಹೋವ ದೇವರು ಮಾಡಿದವುಗಳನ್ನು ನಿಮ್ಮ ಕಣ್ಣುಗಳು ನೋಡಿದವು. ಬಾಳ್ ಪೆಯೋರನನ್ನು ಹಿಂಬಾಲಿಸಿದ ಜನರನ್ನೆಲ್ಲಾ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮ ಮಧ್ಯದಲ್ಲಿಂದ ತೆಗೆದುಹಾಕಿದರಲ್ಲವೇ?


ಅದನ್ನು ನೀವು ಗೊಂಡೆಯಾಗಿ ಇಟ್ಟುಕೊಂಡು, ಅದನ್ನು ನೋಡುವಾಗ, ಯೆಹೋವ ದೇವರ ಸಕಲ ಆಜ್ಞೆಗಳನ್ನು ನೆನಸಿ ಅವುಗಳ ಪ್ರಕಾರಮಾಡಿ, ನಿಮ್ಮ ಹೃದಯ ಹಾಗೂ ಇಚ್ಛೆಗನುಸಾರ ನಿಮ್ಮ ಕಣ್ಣುಗಳು ಜಾರತ್ವ ಮಾಡುವಂತೆ ಹಿಂಬಾಲಿಸದೆ ಇರುವಿರಿ.


ಆದ್ದರಿಂದ ಈಗ ನೀವು ನಾಚಿಕೆ ಪಟ್ಟುಕೊಳ್ಳುತ್ತಿರುವ ಸಂಗತಿಗಳಿಂದ ನಿಮಗಾದ ಲಾಭವೇನು? ಅವು ಮರಣದಲ್ಲಿ ಸಮಾಪ್ತವಾಗುತ್ತವೆ!


ಅವುಗಳನ್ನು ಮಾಡುವವರು ಅವುಗಳಂತೆಯೇ ಇದ್ದಾರೆ; ಅವುಗಳಲ್ಲಿ ಭರವಸವಿಡುವವರು ಅವುಗಳಂತಾಗುವರು.


ನಾಚಿಕೆಯಾದದ್ದು, ನಮ್ಮ ಚಿಕ್ಕತನದಿಂದ ನಮ್ಮ ತಂದೆಗಳ ಕಷ್ಟವನ್ನೂ, ಅವರ ಕುರಿಗಳನ್ನೂ, ಅವರ ದನಗಳನ್ನೂ, ಅವರ ಪುತ್ರರನ್ನೂ, ಅವರ ಪುತ್ರಿಯರನ್ನೂ ತಿಂದುಬಿಟ್ಟಿದೆ.


ಒಂದು ಬುಟ್ಟಿಯಲ್ಲಿ ಕಾಲಕ್ಕೆ ಮುಂಚೆ ಮಾಗಿದ ಹಣ್ಣುಗಳು ತುಂಬಿದ್ದವು. ಅವು ಅತ್ಯುತ್ತಮವಾದ ಅಂಜೂರದ ಹಣ್ಣುಗಳು. ಇನ್ನೊಂದು ಬುಟ್ಟಿಯಲ್ಲಿ ಯಾರೂ ತಿನ್ನಲಾಗದಷ್ಟು ಅಸಹ್ಯವಾದ ಅಂಜೂರದ ಹಣ್ಣುಗಳು ತುಂಬಿದ್ದವು.


ಅವರು ಮಿತಿಮೀರಿ ಕುಡಿಯುತ್ತಾರೆ. ಅವರು ಯಾವಾಗಲೂ ವ್ಯಭಿಚಾರ ಮಾಡುವವರಾಗಿದ್ದಾರೆ. ಅವರನ್ನು ಆಳುವವರು ಅವಮಾನ ಕಾರ್ಯಗಳಲ್ಲಿ ಇಷ್ಟಪಡುತ್ತಾರೆ.


ಅವರು ಯೆಹೋವ ದೇವರಿಗೆ ತರುವ ಅವರ ದೇಶದಲ್ಲಿರುವ ಎಲ್ಲವುಗಳ ಪ್ರಥಮ ಫಲಗಳು ನಿನ್ನವುಗಳಾಗಿರುವುವು. ನಿನ್ನ ಮನೆಯಲ್ಲಿರುವ ಶುದ್ಧನಾದ ಪ್ರತಿಯೊಬ್ಬನೂ ಅದನ್ನು ತಿನ್ನಬಹುದು.


ಯೆಹೋವ ದೇವರು ತಮ್ಮ ಮುಂದೆ ಓಡಿಸಿಬಿಟ್ಟ ಇತರ ಜನರಂತೆ ಅವರು ಎಲ್ಲಾ ಪೂಜಾಸ್ಥಳಗಳಲ್ಲಿ ಧೂಪವನ್ನು ಸುಟ್ಟು ಯೆಹೋವ ದೇವರನ್ನು ಸಿಟ್ಟುಗೊಳಿಸುವ ಹಾಗೆ ಕೆಟ್ಟ ಕಾರ್ಯಗಳನ್ನು ಮಾಡಿದರು.


ರಕ್ತಬೋಳ, ಸಾಂಬ್ರಾಣಿಗಳಿಂದಲೂ ವರ್ತಕರು ಮಾರುವ ಸಕಲ ಸುಗಂಧ ದ್ರವ್ಯಗಳಿಂದಲೂ ಧೂಮಸ್ತಂಭಗಳಂತೆ ಅಡವಿಯಿಂದ ಬರುವ ಈ ಮೆರವಣೆಗೆ ಯಾರದು?


ನಮ್ಮ ನಾಚಿಕೆಯಲ್ಲಿ ಮಲಗಿಕೊಳ್ಳುತ್ತೇವೆ. ನಮ್ಮ ಗಲಭೆ ನಮ್ಮನ್ನು ಮುಚ್ಚಿಕೊಳ್ಳುತ್ತದೆ. ಏಕೆಂದರೆ ನಾವೂ, ನಮ್ಮ ಪೂರ್ವಜರೂ ನಮ್ಮ ಚಿಕ್ಕತನದಿಂದ ಇಂದಿನವರೆಗೂ ನಮ್ಮ ದೇವರಾದ ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿದ್ದೇವೆ. ನಮ್ಮ ಯೆಹೋವ ದೇವರ ಸ್ವರಕ್ಕೆ ಕಿವಿಗೊಡಲಿಲ್ಲ.”


ನಾನು ನಿನ್ನನ್ನು ಮರುಭೂಮಿಯಲ್ಲಿಯೂ, ಬಹು ಬಾಯಾರಿಕೆಯ ದೇಶದಲ್ಲಿಯೂ ತಿಳಿದುಕೊಂಡಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು