Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 9:13 - ಕನ್ನಡ ಸಮಕಾಲಿಕ ಅನುವಾದ

13 ಎಫ್ರಾಯೀಮ್ ಟೈರ್‌ನಂತಹ ಸುಂದರವಾದ ಸ್ಥಳದಲ್ಲಿ ನೆಡುವುದನ್ನು ನಾನು ಕಂಡೆನು. ಆದರೆ ಎಫ್ರಾಯೀಮ್ ತನ್ನ ಮಕ್ಕಳನ್ನು ಹತ್ಯಗೆ ಈಡಾಗುವಂತೆ ಕಳುಹಿಸುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ತೂರು ಹೇಗೆ ಕಾಣಿಸುತ್ತದೋ ಹಾಗೆಯೇ ಎಫ್ರಾಯೀಮು ಹುಲ್ಗಾವಲಿನಲ್ಲಿ ನೆಟ್ಟಿರುವುದಾಗಿ ಕಾಣಿಸುತ್ತದೆ; ಆದರೆ ಎಫ್ರಾಯೀಮು ತನ್ನ ಮಕ್ಕಳನ್ನು ಹತ್ಯಗೆ ಈಡಾಗುವಂತೆ ಕಳುಹಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಎಫ್ರಯಿಮಿನ ಮಕ್ಕಳು ಬೇಟೆಗೆ ಗುರಿ ಆದವರಂತೆ ಕಾಣಿಸುತ್ತಾರೆ. ಎಫ್ರಯಿಮ್ ತನ್ನ ಪುತ್ರರನ್ನು ವಧ್ಯಸ್ಥಾನಕ್ಕೆ ಕರೆದೊಯ್ಯಬೇಕಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ತೂರು ಹೇಗೆ ಕಾಣಿಸುತ್ತದೋ ಹಾಗೆಯೇ ಎಫ್ರಾಯೀಮು ಹುಲ್ಗಾವಲಿನಲ್ಲಿ ನಾಟಿರುವದಾಗಿ ಕಾಣಿಸುತ್ತದೆ; ಆದರೆ ಎಫ್ರಾಯೀಮು ತನ್ನ ಮಕ್ಕಳನ್ನು ಹತ್ಯಕ್ಕೆ ಈಡಾಗುವಂತೆ ಕಳುಹಿಸುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಎಫ್ರಾಯೀಮನು ತನ್ನ ಮಕ್ಕಳನ್ನು ಉರುಲಿನ ಕಡೆಗೆ ನಡೆಸುತ್ತಿರುವದನ್ನು ನಾನು ನೋಡುತ್ತಿದ್ದೇನೆ. ಕೊಲೆಗಡುಕನೆದುರು ಎಫ್ರಾಯೀಮನು ತನ್ನ ಮಕ್ಕಳನ್ನು ತರುತ್ತಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 9:13
13 ತಿಳಿವುಗಳ ಹೋಲಿಕೆ  

ಟೈರಿಗೆ ಹೇಳು, ಸಮುದ್ರದ ಪ್ರವೇಶದಲ್ಲಿ ವಾಸಿಸುವವಳೇ, ಬಹು ದ್ವೀಪಗಳ ಜನರ ನಡುವೆ ವ್ಯಾಪಾರವನ್ನು ನಡೆಸುವವಳೇ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ, “ ‘ಟೈರ್ ನಗರಿಯೇ, “ನಾನು ಪೂರ್ಣ ಸೌಂದರ್ಯವತಿ,” ಎಂದು ನೀನು ಅಂದುಕೊಂಡಿದ್ದೀಯಲ್ಲಾ!


ಆದ್ದರಿಂದ ಯೆಹೋವ ದೇವರು ಹೇಳುವುದೇನೆಂದರೆ: “ ‘ನಿನ್ನ ಹೆಂಡತಿ ಪಟ್ಟಣದಲ್ಲಿ ವ್ಯಭಿಚಾರಿಣಿಯಾಗುವಳು. ನಿನ್ನ ಪುತ್ರ ಪುತ್ರಿಯರೂ ಖಡ್ಗದಿಂದ ಬೀಳುವರು. ನಿನ್ನ ದೇಶವನ್ನು ಅಳೆಯಲಾಗುತ್ತದೆ ಮತ್ತು ವಿಭಾಗಿಸಲಾಗುತ್ತದೆ. ನೀನು ಅಪವಿತ್ರವಾದ ದೇಶದಲ್ಲಿ ಸಾಯುವಿ. ಇಸ್ರಾಯೇಲ್ ನಿಶ್ಚಯವಾಗಿ ತನ್ನ ದೇಶದಿಂದ ಸೆರೆಯಾಗಿ ಕರೆದೊಯ್ಯಲಾಗುವುದು.’ ”


ಸಮಾರ್ಯವು ತನ್ನ ದೇವರಿಗೆ ತಿರುಗಿಬಿದ್ದದರಿಂದ, ತನ್ನ ದೋಷಫಲವನ್ನು ಅನುಭವಿಸಲೇಬೇಕು. ಅದರ ಜನರು ಖಡ್ಗದಿಂದ ಹತರಾಗುವರು, ವೈರಿಗಳು ಅವಳ ಮಕ್ಕಳನ್ನು ಬಂಡೆಗೆ ಅಪ್ಪಳಿಸುವರು. ಗರ್ಭಿಣಿಯರ ಹೊಟ್ಟೆಯನ್ನು ಸೀಳುವರು.”


ನಾನು ಮರಿಯನ್ನು ಕಳೆದುಕೊಂಡ ಕರಡಿಯಂತೆ ಅವರನ್ನು ಎದುರುಗೊಳ್ಳುವೆನು. ಅವರ ಹೃದಯದ ಪೊರೆಯನ್ನು ಹರಿದುಬಿಡುವೆನು. ನಾನು ಸಿಂಹದ ಹಾಗೆ ಅವರನ್ನು ನುಂಗುವೆನು. ಕಾಡುಮೃಗವು ಅವರನ್ನು ಸೀಳಿ ಹಾಕುವುದು.


ಆದ್ದರಿಂದ ನಿನ್ನ ಜನರಲ್ಲಿ ಗಲಭೆ ಉಂಟಾಗುವುದು. ಶಲ್ಮಾನ ರಾಜನು ಬೇತ್ ಅರ್ಬೇಲನ್ನು ಯುದ್ಧದ ದಿನದಲ್ಲಿ ನಾಶಮಾಡಿದ ಪ್ರಕಾರ, ನಿನ್ನ ಕೋಟೆಗಳೆಲ್ಲಾ ನಾಶವಾಗುವವು. ತಾಯಿ, ತನ್ನ ಮಕ್ಕಳ ಸಹಿತ ಬಂಡೆಗೆ ಅಪ್ಪಳಿಸಿದ


ಎಫ್ರಾಯೀಮು ಹೊಡೆತಕ್ಕೆ ಒಳಗಾಗಿದೆ. ಅವರ ಬೇರು ಒಣಗಿಹೋಗಿದೆ, ಅವರು ಫಲವನ್ನು ಕೊಡುವುದಿಲ್ಲ, ಅವರು ಹೆತ್ತರೂ ಅವರ ಗರ್ಭದ ಪ್ರಿಯಕರವಾದ ಫಲವನ್ನು ಸಹ ನಾನು ಕೊಲ್ಲುವೆನು.


ಏಕೆಂದರೆ, ಮರಣವು ನಮ್ಮ ಕಿಟಕಿಗಳೊಳಗೆ ಏರಿ ಬಂತು. ನಮ್ಮ ಕೋಟೆಗಳಲ್ಲಿ ಸೇರಿತು. ಹೊರಗಡೆ ಮಕ್ಕಳನ್ನೂ, ಬೀದಿಗಳಲ್ಲಿ ಯೌವನಸ್ಥರನ್ನೂ ಕಡಿದು ಹಾಕುತ್ತದೆ.


ಆ ಸಮಯದಲ್ಲಿ ಮೆನಹೇಮನು ತಿರ್ಚದಿಂದ ತಿಪ್ಸಹು ಪಟ್ಟಣಕ್ಕೆ ಹೋದಾಗ ಅಲ್ಲಿಯವರು ತಮ್ಮ ಊರುಬಾಗಿಲುಗಳನ್ನು ತನಗೆ ತೆರೆಯದೆ ಇದ್ದುದರಿಂದ ಎಲ್ಲರನ್ನೂ, ಅದರ ಮೇರೆಗಳಲ್ಲಿದ್ದವರೆಲ್ಲರನ್ನೂ ಸಂಹರಿಸಿದನು. ತಿಪ್ಸಹವನ್ನು ಹಾಳು ಮಾಡಿ, ಎಲ್ಲಾ ಗರ್ಭಿಣಿಯರ ಹೊಟ್ಟೆಗಳನ್ನು ಸೀಳಿಸಿದನು.


ನಿಮ್ಮ ಸಹೋದರರೆಲ್ಲರನ್ನೂ, ಎಫ್ರಾಯೀಮಿನ ಎಲ್ಲಾ ಸಂತಾನವನ್ನೂ ಹೊರಗೆ ಹಾಕಿದ ಹಾಗೆ, ನಿಮ್ಮನ್ನು ನನ್ನ ಸಮ್ಮುಖದಿಂದ ಹೊರಗೆ ಹಾಕುವೆನು.’


ಅವರ ಮಕ್ಕಳು ಹೆಚ್ಚಿದರೂ ಖಡ್ಗಕ್ಕೆ ಗುರಿಯಾಗುವರು; ಅವರ ಸಂತತಿಯವರಿಗೆ ಆಹಾರದ ಕೊರತೆ ಇರುವುದು.


ಹಬ್ಬದ ದಿನಕ್ಕೆ ಕರೆಯುವಂತೆಯೇ ನನ್ನ ವಿರುದ್ಧವಾಗಿ ಪ್ರತಿಯೊಂದು ದಿಕ್ಕಿನಲ್ಲಿಯ ವಿರೋಧಿಗಳನ್ನು ಕರೆದಿದ್ದೀರಿ. ಯೆಹೋವ ದೇವರ ಕೋಪದ ದಿನದಲ್ಲಿ ಯಾರೂ ತಪ್ಪಿಸಿಕೊಳ್ಳಲಾರರು, ಉಳಿದುಕೊಳ್ಳಲಾರರು. ನಾನು ಬೆಳೆಸಿ ಸಾಕಿದವರನ್ನು ವೈರಿಯು ನಾಶಮಾಡಿದ್ದಾನೆ.


ಇಸ್ರಾಯೇಲೇ, ನಿನ್ನ ದೇವರಾದ ಯೆಹೋವ ದೇವರ ಕಡೆಗೆ ತಿರುಗಿಕೋ. ಏಕೆಂದರೆ ನಿನ್ನ ಪಾಪಗಳೇ, ನಿನ್ನ ಬೀಳುವಿಕೆಗೆ ಕಾರಣ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು