Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 1:10 - ಪರಿಶುದ್ದ ಬೈಬಲ್‌

10 ಆದರೆ ಅದೋನೀಯನು ಪ್ರವಾದಿಯಾದ ನಾತಾನನನ್ನಾಗಲಿ ಬೆನಾಯನನ್ನಾಗಲಿ ಅವನ ತಂದೆಯ ವಿಶೇಷ ಅಂಗರಕ್ಷಕರನ್ನಾಗಲಿ ಅವನ ಸೋದರ ಸೊಲೊಮೋನನನ್ನಾಗಲಿ ಆಹ್ವಾನಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆದರೆ ಪ್ರವಾದಿಯಾದ ನಾತಾನ್, ಬೆನಾಯ, ದಾವೀದನ ವಿಶೇಷ ಕಾವಲಿನವರು ತಮ್ಮನಾದ ಸೊಲೊಮೋನ್ ಇವರನ್ನು ಮಾತ್ರ ಆಮಂತ್ರಿಸಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಆದರೆ, ಪ್ರವಾದಿ ನಾತಾನನನ್ನಾಗಲಿ, ಬೆನಾಯನನ್ನಾಗಲಿ, ವಿಶೇಷ ಕಾವಲಾಳುಗಳನ್ನಾಗಲಿ, ತಮ್ಮನಾದ ಸೊಲೊಮೋನನನ್ನಾಗಲಿ ಕರೆಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ರಾಜಪುತ್ರರಾದ ತನ್ನ ಉಳಿದ ಸಹೋದರರನ್ನೂ ಅರಸನ ಉದ್ಯೋಗಸ್ಥರಾದ ಎಲ್ಲಾ ಯೆಹೂದ್ಯರನ್ನೂ ಔತಣಕ್ಕೆ ಕರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆದರೆ ಪ್ರವಾದಿಯಾದ ನಾತಾನನನ್ನೂ, ಬೆನಾಯನನ್ನೂ, ಪರಾಕ್ರಮಶಾಲಿಗಳನ್ನೂ, ತನ್ನ ಸಹೋದರನಾದ ಸೊಲೊಮೋನನನ್ನೂ ಕರೆಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 1:10
8 ತಿಳಿವುಗಳ ಹೋಲಿಕೆ  

ನಂತರ ದಾವೀದನು ತನ್ನ ಪತ್ನಿಯಾದ ಬತ್ಷೆಬೆಳನ್ನು ಸಂತೈಸಿ ಅವಳೊಂದಿಗೆ ಮಲಗಿಕೊಂಡನು. ಬತ್ಷೆಬೆಳು ಮತ್ತೆ ಗರ್ಭಿಣಿಯಾದಳು. ಅವಳಿಗೆ ಮತ್ತೊಂದು ಗಂಡು ಮಗುವಾಯಿತು. ಆ ಮಗುವಿಗೆ ಸೊಲೊಮೋನ್ ಎಂದು ದಾವೀದನು ಹೆಸರಿಟ್ಟನು. ಯೆಹೋವನು ಸೊಲೊಮೋನನನ್ನು ಪ್ರೀತಿಸಿದನು.


ಅದೋನೀಯನು ಅನೇಕ ಹಸುಗಳನ್ನು, ಕೊಬ್ಬಿದ ಕರುಗಳನ್ನು ಮತ್ತು ಕುರಿಗಳನ್ನು ಸಮಾಧಾನಯಜ್ಞವಾಗಿ ಅರ್ಪಿಸಿದ್ದಾನೆ. ಅವನು ನಿನ್ನ ಎಲ್ಲಾ ಗಂಡುಮಕ್ಕಳನ್ನು ಆಹ್ವಾನಿಸಿದ್ದನು. ಅವನು ಯಾಜಕನಾದ ಎಬ್ಯಾತಾರನನ್ನು ಮತ್ತು ನಿನ್ನ ಸೇನಾಧಿಪತಿಯಾದ ಯೋವಾಬನನ್ನು ಆಹ್ವಾನಿಸಿದ್ದನು. ಆದರೆ ಅವನು ನಿನ್ನ ಸೇವೆಮಾಡುವ ನಿನ್ನ ಮಗನಾದ ಸೊಲೊಮೋನನನ್ನು ಆಹ್ವಾನಿಸಲಿಲ್ಲ.


ಆದರೆ ಅದೋನೀಯನ ಕಾರ್ಯವನ್ನು ಒಪ್ಪದ ಅನೇಕರು ದಾವೀದನಿಗೆ ನಂಬಿಗಸ್ತರಾಗಿದ್ದರು. ಇವರು ಯಾರೆಂದರೆ: ಯಾಜಕನಾದ ಚಾದೋಕ, ಯೆಹೋಯಾದಾವನ ಮಗನಾದ ಬೆನಾಯ, ಪ್ರವಾದಿಯಾದ ನಾತಾನ್, ಶಿಮ್ಮೀ, ರೇಗೀ ಮತ್ತು ರಾಜನಾದ ದಾವೀದನ ವಿಶೇಷ ಅಂಗರಕ್ಷಕರು. ಇವರಲ್ಲಿ ಯಾರೂ ಅದೋನೀಯನ ಸಂಗಡ ಸೇರಲಿಲ್ಲ.


ಆದರೆ ಅವನು ನನ್ನನ್ನಾಗಲಿ ಯಾಜಕನಾದ ಚಾದೋಕನನ್ನಾಗಲಿ ಯೆಹೋಯಾದಾವನ ಮಗನಾದ ಬೆನಾಯನನ್ನಾಗಲಿ ನಿನ್ನ ಮಗನಾದ ಸೊಲೊಮೋನನನ್ನಾಗಲಿ ಆಹ್ವಾನಿಸಲಿಲ್ಲ.


ನಾತಾನನಿಗೆ ಇದು ತಿಳಿದಾಗ, ಅವನು ಸೊಲೊಮೋನನ ತಾಯಿಯಾದ ಬತ್ಷೆಬೆಳ ಬಳಿಗೆ ಹೋಗಿ, “ಹಗ್ಗೀತಳ ಮಗನಾದ ಅದೋನೀಯನು ಮಾಡುತ್ತಿರುವುದನ್ನು ನೀನು ಕೇಳಿದೆಯಾ? ಅವನು ತನ್ನನ್ನು ತಾನೇ ರಾಜನನ್ನಾಗಿ ಮಾಡಿಕೊಂಡಿದ್ದಾನೆ ಮತ್ತು ನಮ್ಮ ಒಡೆಯನಾದ ರಾಜ ದಾವೀದನಿಗೆ ಇದು ತಿಳಿದಿಲ್ಲ.


ಆ ಸಮಯದಲ್ಲಿ ಹಗ್ಗೀತಳ ಮಗನಾದ ಅದೋನೀಯನು ಸೊಲೊಮೋನನ ತಾಯಿಯಾದ ಬತ್ಷೆಬೆಳ ಹತ್ತಿರಕ್ಕೆ ಹೋದನು. ಬತ್ಷೆಬೆಳು, “ನೀನು ಸಮಾಧಾನದಿಂದ ಬಂದೆಯಾ?” ಎಂದು ಅವನನ್ನು ಕೇಳಿದಳು. ಅದೋನೀಯನು, “ಹೌದು, ಇದು ಸಮಾಧಾನದ ಭೇಟಿಯಾಗಿದೆ.


ನಾತಾನನ ಮಗನಾದ ಅಜರ್ಯ; ಅಜರ್ಯನು ಜಿಲ್ಲಾ ಅಧಿಕಾರಿಗಳ ಮೇಲ್ವಿಚಾರಕನಾಗಿದ್ದನು. ನಾತಾನನ ಮಗನಾದ ಚಾಬೂದ; ಚಾಬೂದನು ರಾಜನಾದ ಸೊಲೊಮೋನನಿಗೆ ಯಾಜಕನೂ ಸಲಹೆಗಾರನೂ ಆಗಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು