Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 1:11 - ಪರಿಶುದ್ದ ಬೈಬಲ್‌

11 ನಾತಾನನಿಗೆ ಇದು ತಿಳಿದಾಗ, ಅವನು ಸೊಲೊಮೋನನ ತಾಯಿಯಾದ ಬತ್ಷೆಬೆಳ ಬಳಿಗೆ ಹೋಗಿ, “ಹಗ್ಗೀತಳ ಮಗನಾದ ಅದೋನೀಯನು ಮಾಡುತ್ತಿರುವುದನ್ನು ನೀನು ಕೇಳಿದೆಯಾ? ಅವನು ತನ್ನನ್ನು ತಾನೇ ರಾಜನನ್ನಾಗಿ ಮಾಡಿಕೊಂಡಿದ್ದಾನೆ ಮತ್ತು ನಮ್ಮ ಒಡೆಯನಾದ ರಾಜ ದಾವೀದನಿಗೆ ಇದು ತಿಳಿದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆಗ ನಾತಾನನು ಸೊಲೊಮೋನನ ತಾಯಿಯಾದ ಬತ್ಷೆಬೆಗೆ, “ಹಗ್ಗೀತಳ ಮಗನಾದ ಅದೋನೀಯನು ನಮ್ಮ ಒಡೆಯನಾದ ದಾವೀದನಿಗೆ ತಿಳಿಯದೇ ಅರಸನಾದನೆಂಬುದನ್ನು ನೀನು ಕೇಳಿದಿಯಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಆಗ ನಾತಾನನು ಸೊಲೊಮೋನನ ತಾಯಿಯಾದ ಬತ್ಷೆಬೆಗೆ, “ಹಗ್ಗೀತಳ ಮಗ ಅದೋನೀಯನು, ನಮ್ಮ ಒಡೆಯ ದಾವೀದರಿಗೆ ತಿಳಿಯದೆಯೇ ಅರಸನಾದನೆಂಬುದನ್ನು ನೀನು ಕೇಳಿರಬೇಕಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆಗ ನಾತಾನನು ಸೊಲೊಮೋನನ ತಾಯಿಯಾದ ಬತ್ಷೆಬೆಗೆ - ಹಗ್ಗೀತಳ ಮಗನಾದ ಅದೋನೀಯನು ನಮ್ಮ ಒಡೆಯನಾದ ದಾವೀದನಿಗೆ ತಿಳಿಯದೆ ಅರಸನಾದನೆಂಬದನ್ನು ನೀನು ಕೇಳಿದಿಯಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆಗ ನಾತಾನನು ಸೊಲೊಮೋನನ ತಾಯಿ ಬತ್ಷೆಬೆಳಿಗೆ, “ನಮ್ಮ ಒಡೆಯ ದಾವೀದನು ಅರಿಯದಿರುವಾಗ, ಹಗ್ಗೀತಳ ಮಗ ಅದೋನೀಯನು ಅರಸನಾಗಿದ್ದಾನೆ, ಎಂದು ನೀನು ಕೇಳಲಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 1:11
9 ತಿಳಿವುಗಳ ಹೋಲಿಕೆ  

ಅದೋನೀಯನು ನಾಲ್ಕನೆಯ ಮಗ. ಹಗ್ಗೀತಳು ಅದೋನೀಯನ ತಾಯಿ. ಶೆಫಟ್ಯನು ಐದನೆಯ ಮಗ. ಅಬೀಟಲಳು ಶೆಫಟ್ಯನ ತಾಯಿ.


ನೆರೆದುಬಂದಿದ್ದ ಇಸ್ರೇಲರೆಲ್ಲರಿಗೆ ದಾವೀದನು, “ದೇವರು ನನ್ನ ಮಗನಾದ ಸೊಲೊಮೋನನನ್ನು ಆರಿಸಿಕೊಂಡಿರುತ್ತಾನೆ. ಅವನು ಇನ್ನೂ ಎಳೆಪ್ರಾಯದವನಾಗಿರುವದರಿಂದ ಈ ಕಾರ್ಯವನ್ನು ಮಾಡಿಸಬೇಕಾದ ಜ್ಞಾನವು ಅವನಲ್ಲಿಲ್ಲ. ಆದರೆ ಕೆಲಸವು ಅತಿ ಘನವಾದದ್ದು. ಕಟ್ಟುವ ಆಲಯವು ಮನುಷ್ಯರಿಗಾಗಿಯಲ್ಲ. ದೇವರಾದ ಯೆಹೋವನಿಗಾಗಿಯಷ್ಟೇ.


ಆದರೆ ಅಬ್ಷಾಲೋಮನು ಇಸ್ರೇಲಿನ ಎಲ್ಲಾ ಕುಲಗಳಿಗೂ ಗೂಢಚಾರರನ್ನು ಕಳುಹಿಸಿದನು. ಈ ಗೂಢಚಾರರು ಜನರಿಗೆ, “ನೀವು ಕಹಳೆಯ ಧ್ವನಿಯನ್ನು ಕೇಳಿದಾಗ, ‘ಅಬ್ಷಾಲೋಮನು ಹೆಬ್ರೋನಿನಲ್ಲಿ ರಾಜನಾದ’ನೆಂದು ಹೇಳಿ” ಎಂಬುದಾಗಿ ತಿಳಿಸಿದರು.


ಆದರೆ ಅದೋನೀಯನು ಪ್ರವಾದಿಯಾದ ನಾತಾನನನ್ನಾಗಲಿ ಬೆನಾಯನನ್ನಾಗಲಿ ಅವನ ತಂದೆಯ ವಿಶೇಷ ಅಂಗರಕ್ಷಕರನ್ನಾಗಲಿ ಅವನ ಸೋದರ ಸೊಲೊಮೋನನನ್ನಾಗಲಿ ಆಹ್ವಾನಿಸಲಿಲ್ಲ.


ಆ ಸಮಯದಲ್ಲಿ ಹಗ್ಗೀತಳ ಮಗನಾದ ಅದೋನೀಯನು ಸೊಲೊಮೋನನ ತಾಯಿಯಾದ ಬತ್ಷೆಬೆಳ ಹತ್ತಿರಕ್ಕೆ ಹೋದನು. ಬತ್ಷೆಬೆಳು, “ನೀನು ಸಮಾಧಾನದಿಂದ ಬಂದೆಯಾ?” ಎಂದು ಅವನನ್ನು ಕೇಳಿದಳು. ಅದೋನೀಯನು, “ಹೌದು, ಇದು ಸಮಾಧಾನದ ಭೇಟಿಯಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು