Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 1:19 - ಪರಿಶುದ್ದ ಬೈಬಲ್‌

19 ಅದೋನೀಯನು ಅನೇಕ ಹಸುಗಳನ್ನು, ಕೊಬ್ಬಿದ ಕರುಗಳನ್ನು ಮತ್ತು ಕುರಿಗಳನ್ನು ಸಮಾಧಾನಯಜ್ಞವಾಗಿ ಅರ್ಪಿಸಿದ್ದಾನೆ. ಅವನು ನಿನ್ನ ಎಲ್ಲಾ ಗಂಡುಮಕ್ಕಳನ್ನು ಆಹ್ವಾನಿಸಿದ್ದನು. ಅವನು ಯಾಜಕನಾದ ಎಬ್ಯಾತಾರನನ್ನು ಮತ್ತು ನಿನ್ನ ಸೇನಾಧಿಪತಿಯಾದ ಯೋವಾಬನನ್ನು ಆಹ್ವಾನಿಸಿದ್ದನು. ಆದರೆ ಅವನು ನಿನ್ನ ಸೇವೆಮಾಡುವ ನಿನ್ನ ಮಗನಾದ ಸೊಲೊಮೋನನನ್ನು ಆಹ್ವಾನಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಆತನು ಹೋರಿ, ಕುರಿ ಮೊದಲಾದ ಹಲವು ಕೊಬ್ಬಿದ ಪಶುಗಳನ್ನು ಯಜ್ಞಮಾಡಿಸಿ ನಿನ್ನ ಸೇವಕನಾದ ಸೊಲೊಮೋನನ ಹೊರತಾಗಿ ಎಲ್ಲಾ ರಾಜಪುತ್ರರನ್ನೂ, ಯಾಜಕನಾದ ಎಬ್ಯಾತಾರನನ್ನೂ, ಸೇನಾಧಿಪತಿಯಾದ ಯೋವಾಬನನ್ನೂ ಔತಣಕ್ಕೆ ಕರೆದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಹೋರಿ, ಕುರಿ ಮೊದಲಾದ ಹಲವು ಕೊಬ್ಬಿದ ಪಶುಗಳನ್ನು ಬಲಿಯಾಗಿ ಅರ್ಪಿಸಿದ್ದಾನೆ; ನಿಮ್ಮ ಸೇವಕ ಸೊಲೊಮೋನನನ್ನು ಬಿಟ್ಟು, ಎಲ್ಲಾ ರಾಜಪುತ್ರರನ್ನು, ಯಾಜಕ ಎಬ್ಯಾತಾರನನ್ನು ಹಾಗು ಸೇನಾಪತಿ ಯೋವಾಬನನ್ನು ಔತಣಕ್ಕೆ ಕರೆದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ರಾಜನಾಗಿ ಹೋರಿಕುರಿ ಮೊದಲಾದ ಹಲವು ಕೊಬ್ಬಿದ ಪಶುಗಳನ್ನು ಯಜ್ಞಮಾಡಿಸಿ ನಿನ್ನ ಸೇವಕನಾದ ಸೊಲೊಮೋನನ ಹೊರತಾಗಿ ಎಲ್ಲಾ ರಾಜಪುತ್ರರನ್ನೂ ಯಾಜಕನಾದ ಎಬ್ಯಾತಾರನನ್ನೂ ಸೇನಾಪತಿಯಾದ ಯೋವಾಬನನ್ನೂ ಔತಣಕ್ಕೆ ಕರೆದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಇದಲ್ಲದೆ ಅವನು ಎತ್ತುಗಳನ್ನೂ, ಕೊಬ್ಬಿದ ಪಶುಗಳನ್ನೂ, ಕುರಿಗಳನ್ನೂ ಬಲಿಯಾಗಿ ಅರ್ಪಿಸಿದ್ದಾನೆ, ಅರಸನ ಮಕ್ಕಳೆಲ್ಲರನ್ನೂ, ಯಾಜಕನಾದ ಅಬಿಯಾತರನನ್ನೂ, ಸೇನಾಧಿಪತಿ ಯೋವಾಬನನ್ನೂ ಔತಣಕ್ಕೆ ಕರೆದಿದ್ದಾನೆ. ಆದರೆ ನಿನ್ನ ಸೇವಕನಾದ ಸೊಲೊಮೋನನನ್ನು ಅವನು ಕರೆಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 1:19
5 ತಿಳಿವುಗಳ ಹೋಲಿಕೆ  

ಈ ದಿನ ಅವನು ಅನೇಕ ಹೋರಿಗಳನ್ನು ಮತ್ತು ಕುರಿಗಳನ್ನು ಸಮಾಧಾನಯಜ್ಞವಾಗಿ ಅರ್ಪಿಸಿದನು. ಅವನು ನಿನ್ನ ಇತರ ಗಂಡುಮಕ್ಕಳನ್ನು, ಸೇನಾಧಿಪತಿಗಳನ್ನು ಮತ್ತು ಯಾಜಕನಾದ ಎಬ್ಯಾತಾರನನ್ನು ಆಹ್ವಾನಿಸಿದ್ದನು. ಅವರು ಈಗ ಅವನೊಡನೆ ತಿನ್ನುತ್ತಾ ಕುಡಿಯುತ್ತಾ ಇದ್ದಾರೆ. ‘ರಾಜನಾದ ಅದೋನೀಯನು ಚಿರಾಯುವಾಗಿರಲಿ’ ಎಂದು ಅವರು ಹೇಳುತ್ತಿದ್ದಾರೆ.


“ಆಮೇಲೆ ರಾಜನು ಇನ್ನೂ ಕೆಲವು ಸೇವಕರನ್ನು ಕರೆದು, ‘ಈ ಜನರನ್ನು ನಾನು ಆಗಲೇ ಆಹ್ವಾನಿಸಿದ್ದೇನೆ. ಆದ್ದರಿಂದ ಈಗ ಔತಣವು ಸಿದ್ಧವಾಗಿದೆ. ಅಡಿಗೆಗಾಗಿ ಕೊಬ್ಬಿದ ಎತ್ತುಗಳನ್ನು ಮತ್ತು ಕರುಗಳನ್ನು ಕೊಯ್ಸಿದ್ದೇನೆ. ಎಲ್ಲವೂ ಸಿದ್ಧವಾಗಿದೆ. ಮದುವೆ ಔತಣಕ್ಕೆ ಬನ್ನಿ ಎಂದು ಅವರಿಗೆ ತಿಳಿಸಿ’ ಎಂದು ಹೇಳಿ ಕಳುಹಿಸಿದನು.


ಆದರೆ ಈಗ ಅದೋನೀಯನು ತನ್ನನ್ನು ರಾಜನಾಗಿ ಮಾಡಿಕೊಳ್ಳುತ್ತಿದ್ದಾನೆ. ಇದು ನಿನಗೆ ತಿಳಿದಿಲ್ಲ.


ನನ್ನ ಒಡೆಯನಾದ ರಾಜನೇ, ನಿನ್ನ ನಂತರ ಯಾರು ರಾಜನಾಗಬೇಕೆಂಬ ನಿನ್ನ ತೀರ್ಮಾನಕ್ಕಾಗಿ ಇಸ್ರೇಲರೆಲ್ಲರೂ ಕಾಯುತ್ತಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು