1 ಅರಸುಗಳು 1:2 - ಪರಿಶುದ್ದ ಬೈಬಲ್2 ಆದ್ದರಿಂದ ಅವನ ಸೇವಕರು ಅವನಿಗೆ, “ನಾವು ನಿನ್ನ ಆರೈಕೆಗಾಗಿ ಒಬ್ಬ ಯುವಕನ್ನಿಕೆಯನ್ನು ಹುಡುಕುವೆವು. ಅವಳು ನಿನ್ನನ್ನು ಒತ್ತರಿಸಿಕೊಂಡು ಮಲಗಿ ಬೆಚ್ಚಗಿಡುತ್ತಾಳೆ” ಎಂದು ಹೇಳಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಆದುದರಿಂದ ಅವನ ಸೇವಕರು ಅವನಿಗೆ, “ನಮ್ಮ ಒಡೆಯನಾದ ಅರಸನಿಗೋಸ್ಕರ ಒಬ್ಬ ಕನ್ಯೆಯನ್ನು ಹುಡುಕಿತರುವೆವು. ಆಕೆಯು ಅರಸನ ಸನ್ನಿಧಿಯಲ್ಲಿದ್ದುಕೊಂಡು ನಿನ್ನನ್ನು ಪರಾಂಬರಿಸಬೇಕು. ಆಕೆಯು ನಮ್ಮ ಒಡೆಯನಾದ ಅರಸನ ಪಕ್ಕದಲ್ಲಿ ಮಲಗುವುದರಿಂದ ನಿಮಗೆ ಬೆಚ್ಚಗಾಗುವುದು” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಆದುದರಿಂದ ಅವನ ಸೇವಕರು, “ಒಡೆಯರೇ, ಅರಸರೇ, ತಮ್ಮ ಸನ್ನಿಧಿಯಲ್ಲಿದ್ದುಕೊಂಡು ತಮಗೆ ಶುಶ್ರೂಷೆಮಾಡಲು ಒಬ್ಬ ಕನ್ನಿಕೆಯನ್ನು ಹುಡುಕಬೇಕಾಗಿದೆ. ಆಕೆ ನಮ್ಮ ಒಡೆಯರೂ ಅರಸರೂ ಆದ ತಮ್ಮ ಮಗ್ಗುಲಲ್ಲೇ ಮಲಗಿ ತಮ್ಮನ್ನು ಬೆಚ್ಚಗಿರಿಸುವಳು,” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಆದದರಿಂದ ಅವನ ಸೇವಕರು ಅವನಿಗೆ - ನಮ್ಮ ಒಡೆಯನಾದ ಅರಸನಿಗೋಸ್ಕರ ಒಬ್ಬ ಕನ್ಯೆಯನ್ನು ಹುಡುಕತಕ್ಕದ್ದು; ಆಕೆಯು ಅರಸನ ಸನ್ನಿಧಿಯಲ್ಲಿದ್ದುಕೊಂಡು ಅವನನ್ನು ಪರಾಂಬರಿಸಬೇಕು. ಆಕೆಯು ನಮ್ಮ ಒಡೆಯನಾದ ಅರಸನ ಮಗ್ಗುಲಲ್ಲಿ ಮಲಗುವದಾದರೆ ಅವನಿಗೆ ಬೆಚ್ಚಗಾಗುವದು ಎಂದು ಹೇಳಿ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಆದ್ದರಿಂದ ಅವನ ಸೇವಕರು ಅವನಿಗೆ, “ಅರಸ, ನಮ್ಮ ಒಡೆಯನಿಗೋಸ್ಕರ ಕನ್ನಿಕೆಯನ್ನು ಹುಡುಕುವೆವು. ಅವಳು ಅರಸನ ಬಳಿಯಲ್ಲಿ ನಿಂತು, ಅವನನ್ನು ಜೋಪಾನ ಮಾಡಲಿ. ಅರಸನಾದ ನಮ್ಮ ಒಡೆಯನಿಗೆ ಬೆಚ್ಚಗೆ ಆಗುವ ಹಾಗೆ, ಅವನ ಮಗ್ಗುಲಲ್ಲಿ ಅವಳು ಮಲಗಲಿ,” ಎಂದರು. ಅಧ್ಯಾಯವನ್ನು ನೋಡಿ |
ಆದರೆ ಬಡವನ ಹತ್ತಿರ ಅವನೇ ತಂದ ಒಂದು ಕುರಿಮರಿಯ ಹೊರತಾಗಿ ಬೇರೇನೂ ಇರಲಿಲ್ಲ. ಆ ಕುರಿಮರಿಯನ್ನು ಬಹು ಪ್ರೀತಿಯಿಂದ ಆ ಬಡವನು ಸಾಕಿದನು. ಅವನ ಮಕ್ಕಳೊಂದಿಗೆ ಈ ಕುರಿಮರಿಯೂ ಬೆಳೆಯಿತು. ಆ ಕುರಿಮರಿಯು ಬಡವನ ಊಟವನ್ನೇ ತಿನ್ನುತ್ತಿತ್ತು. ಅವನ ಬಟ್ಟಲಿನಲ್ಲಿಯೇ ಅದು ನೀರನ್ನು ಕುಡಿಯುತ್ತಿತ್ತು. ಅವನ ಎದೆಯ ಮೇಲೆಯೇ ಆ ಕುರಿಮರಿಯು ಮಲಗುತ್ತಿತ್ತು. ಆ ಕುರಿಮರಿಯು ಬಡವನಿಗೆ ಮಗಳಂತೆಯೇ ಇತ್ತು.
“ನಿಮ್ಮ ಹತ್ತಿರದ ಸಂಬಂಧಿಕರಲ್ಲಿ ಯಾರಾದರೂ ಇತರ ದೇವರುಗಳನ್ನು ಅನುಸರಿಸಲು ನಿಮ್ಮನ್ನು ಗುಪ್ತವಾಗಿ ಒತ್ತಾಯ ಮಾಡಬಹುದು. ಅವರು ನಿಮ್ಮ ಸ್ವಂತ ಸಹೋದರನಾಗಿರಬಹುದು, ನಿಮ್ಮ ಮಕ್ಕಳಾಗಿರಬಹುದು, ನಿಮ್ಮ ಹೆಂಡತಿಯಾಗಿರಬಹುದು, ಅಥವಾ ಆಪ್ತಗೆಳೆಯನಾಗಿರಬಹುದು. ಅವರು ಬಂದು, ‘ಬಾ, ನಾವು ಬೇರೆ ದೇವರನ್ನು ಹಿಂಬಾಲಿಸೋಣ’ (ಈ ದೇವರನ್ನು ನೀವಾಗಲಿ ನಿಮ್ಮ ಪೂರ್ವಿಕರಾಗಲಿ ತಿಳಿದಿರಲಿಲ್ಲ.