Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 1:23 - ಪರಿಶುದ್ದ ಬೈಬಲ್‌

23 ಸೇವಕರು ರಾಜನಿಗೆ, “ಪ್ರವಾದಿಯಾದ ನಾತಾನನು ಬಂದಿರುವನು” ಎಂದು ಹೇಳಿದರು. ಆಗ ನಾತಾನನು ಪ್ರವೇಶಿಸಿ, ರಾಜನಿಗೆ ಸಾಷ್ಟಾಂಗನಮಸ್ಕಾರ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಸೇವಕರು ನಾತಾನನು ಬಂದಿರುವ ಸಂಗತಿಯನ್ನು ಅರಸನಿಗೆ ತಿಳಿಸಿದರು. ಪ್ರವಾದಿಯಾದ ನಾತಾನನು ಅರಸನ ಮುಂದೆ ಹೋಗಿ ಸಾಷ್ಟಾಂಗನಮಸ್ಕಾರಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಸೇವಕರು ನಾತಾನನು ಬಂದಿರುವ ಸಂಗತಿಯನ್ನು ಅರಸನಿಗೆ ತಿಳಿಸಿದರು. ನಾತಾನನು ಅರಸನ ಮುಂದೆ ಹೋಗಿ ಸಾಷ್ಟಾಂಗ ನಮಸ್ಕಾರ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಸೇವಕರು ನಾತಾನನು ಬಂದಿರುವ ಸಂಗತಿಯನ್ನು ಅರಸನಿಗೆ ತಿಳಿಸಿದರು. ನಾತಾನನು ಅರಸನ ಮುಂದೆ ಹೋಗಿ ಸಾಷ್ಟಾಂಗನಮಸ್ಕಾರಮಾಡಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಆಗ ಅರಸನಿಗೆ, “ಪ್ರವಾದಿಯಾದ ನಾತಾನನು,” ಎಂದರು. ಅವನು ಒಳಗೆ ಅರಸನ ಮುಂದೆ ಬಂದಾಗ, ಮೋರೆ ಕೆಳಗಾಗಿ ನೆಲಕ್ಕೆ ಅಡ್ಡಬಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 1:23
6 ತಿಳಿವುಗಳ ಹೋಲಿಕೆ  

ಜನರೆಲ್ಲರಿಗೂ ಗೌರವವನ್ನು ತೋರಿಸಿರಿ. ದೇವರ ಕುಟುಂಬದ ಸಹೋದರ ಸಹೋದರಿಯರೆಲ್ಲರನ್ನು ಪ್ರೀತಿಸಿರಿ. ದೇವರಿಗೆ ಭಯಪಡಿರಿ ಮತ್ತು ರಾಜನನ್ನು ಗೌರವಿಸಿರಿ.


ನೀವು ಯಾರ್ಯಾರಿಗೆ ಏನೇನು ಕೊಡಬೇಕೋ ಅದನ್ನೆಲ್ಲಾ ಅವರಿಗೆ ಕೊಡಿರಿ. ಯಾವ ತೆರಿಗೆಯನ್ನಾದರೂ ಕೊಡಬೇಕಿದ್ದರೆ ಅದನ್ನು ಕೊಟ್ಟುಬಿಡಿರಿ. ಯಾರಿಗೆ ಗೌರವ ಕೊಡಬೇಕೋ ಅವರಿಗೆ ಗೌರವ ಕೊಡಿರಿ. ಯಾರಿಗೆ ಮರ್ಯಾದೆ ತೋರಿಸಬೇಕೊ ಅವರಿಗೆ ಮರ್ಯಾದೆಯನ್ನು ತೋರಿಸಿರಿ.


ರಾಜನ ಎದುರಿನಲ್ಲಿ ಬತ್ಷೆಬೆಳು ಬಾಗಿ ನಮಸ್ಕರಿಸಿದಳು. ರಾಜನು, “ನಾನು ನಿನಗಾಗಿ ಏನು ಮಾಡಬೇಕು?” ಎಂದು ಕೇಳಿದನು.


ರಾಜನೊಡನೆ ಬತ್ಷೆಬೆಳು ಮಾತಾಡುತ್ತಿರುವಷ್ಟರಲ್ಲಿ ಪ್ರವಾದಿಯಾದ ನಾತಾನನು ಅವನನ್ನು ನೋಡಲು ಬಂದನು.


ಆಗ ನಾತಾನನು, “ನನ್ನ ರಾಜನೇ, ನನ್ನ ಒಡೆಯನೇ, ನಿನ್ನ ನಂತರ ಅದೋನೀಯನು ನೂತನ ರಾಜನಾಗಿ ಜನರನ್ನು ಆಳಲೆಂದು ನೀನು ತೀರ್ಮಾನಿಸಿ ಪ್ರಕಟಿಸಿರುವೆಯಾ?


ಬಾಲಕನು ಹೊರಟುಹೋದನು. ದಾವೀದನು ತಾನು ಅಡಗಿದ್ದ ಬೆಟ್ಟದ ಮತ್ತೊಂದು ಕಡೆಯ ಸ್ಥಳದಿಂದ ಹೊರಬಂದನು. ದಾವೀದನು ಯೋನಾತಾನನ ಮುಂದೆ ಬಂದು ಮೂರು ಸಲ ತನ್ನ ಮುಖವನ್ನು ನೆಲದವರೆಗೂ ಬಗ್ಗಿಸಿ ನಮಸ್ಕರಿಸಿದನು. ನಂತರ ದಾವೀದ ಮತ್ತು ಯೋನಾತಾನರು ಪರಸ್ಪರ ಮುದ್ದಿಟ್ಟರು, ಅವರಿಬ್ಬರೂ ಒಟ್ಟಾಗಿ ಅತ್ತರು. ದಾವೀದನು ಯೋನಾತಾನನಿಗಿಂತ ಹೆಚ್ಚು ಅತ್ತನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು