Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 1:25 - ಪರಿಶುದ್ದ ಬೈಬಲ್‌

25 ಈ ದಿನ ಅವನು ಅನೇಕ ಹೋರಿಗಳನ್ನು ಮತ್ತು ಕುರಿಗಳನ್ನು ಸಮಾಧಾನಯಜ್ಞವಾಗಿ ಅರ್ಪಿಸಿದನು. ಅವನು ನಿನ್ನ ಇತರ ಗಂಡುಮಕ್ಕಳನ್ನು, ಸೇನಾಧಿಪತಿಗಳನ್ನು ಮತ್ತು ಯಾಜಕನಾದ ಎಬ್ಯಾತಾರನನ್ನು ಆಹ್ವಾನಿಸಿದ್ದನು. ಅವರು ಈಗ ಅವನೊಡನೆ ತಿನ್ನುತ್ತಾ ಕುಡಿಯುತ್ತಾ ಇದ್ದಾರೆ. ‘ರಾಜನಾದ ಅದೋನೀಯನು ಚಿರಾಯುವಾಗಿರಲಿ’ ಎಂದು ಅವರು ಹೇಳುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಅವನು ಗಟ್ಟಾ ಇಳಿದು ಹೋಗಿ ಹೋರಿ, ಕುರಿ ಮುಂತಾದ ಹಲವು ಕೊಬ್ಬಿದ ಪಶುಗಳನ್ನು ಯಜ್ಞಮಾಡಿಸಿ, ಎಲ್ಲಾ ರಾಜಪುತ್ರರನ್ನೂ, ಸೇನಾಧಿಪತಿಗಳನ್ನೂ, ಯಾಜಕನಾದ ಎಬ್ಯಾತಾರನನ್ನೂ ಔತಣಕ್ಕೆ ಕರೆದಿದ್ದಾನೆ. ಅವರು ಅವನ ಪಂಕ್ತಿಯಲ್ಲಿ ಅನ್ನಪಾನಗಳನ್ನು ತೆಗೆದುಕೊಂಡು, ‘ಅರಸನಾದ‍ ಅದೋನೀಯನು ಚಿರಂಜೀವಿಯಾಗಿರಲಿ’ ಎಂದು ಕೂಗುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಅವನು ಇಲ್ಲಿಂದ ಇಳಿದುಹೋಗಿ ಹೋರಿ, ಕುರಿ ಮುಂತಾದ ಹಲವು ಕೊಬ್ಬಿದ ಪಶುಗಳನ್ನು ಬಲಿಯಾಗಿ ಅರ್ಪಿಸಿದ್ದಾನೆ. ರಾಜಪುತ್ರರೆಲ್ಲರನ್ನು, ಸೇನಾಪತಿಗಳನ್ನು ಹಾಗು ಯಾಜಕ ಎಬ್ಯಾತಾರನನ್ನು ಔತಣಕ್ಕೆ ಕರೆದಿದ್ದಾನೆ. ಅವರು ಅವನ ಪಂಕ್ತಿಯಲ್ಲೇ ಅನ್ನಪಾನಗಳನ್ನು ತೆಗೆದುಕೊಂಡು ಅರಸನಾದ ಅದೋನೀಯನು ಚಿರಂಜೀವಿಯಾಗಿ ಇರಲಿ!’ ಎಂದು ಕೂಗುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಅವನು ಗಟ್ಟಾ ಇಳಿದು ಹೋಗಿ ಹೋರಿಕುರಿ ಮುಂತಾದ ಹಲವು ಕೊಬ್ಬಿದ ಪಶುಗಳನ್ನು ಯಜ್ಞಮಾಡಿಸಿ ಎಲ್ಲಾ ರಾಜಪುತ್ರರನ್ನೂ ಸೇನಾಪತಿಗಳನ್ನೂ ಯಾಜಕನಾದ ಎಬ್ಯಾತಾರನನ್ನೂ ಔತಣಕ್ಕೆ ಕರೆದಿದ್ದಾನೆ. ಅವರು ಅವನ ಪಂಕ್ತಿಯಲ್ಲಿ ಅನ್ನಪಾನಗಳನ್ನು ತೆಗೆದುಕೊಂಡು ಅರಸನಾದ ಅದೋನೀಯನು ಚಿರಂಜೀವಿಯಾಗಿರಲಿ ಎಂದು ಕೂಗುತ್ತಿರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಏಕೆಂದರೆ ಈ ಹೊತ್ತು ಅವನು ಇಳಿದು ಹೋಗಿ, ಎತ್ತುಗಳನ್ನೂ, ಕೊಬ್ಬಿದ ಪಶುಗಳನ್ನೂ, ಕುರಿಗಳನ್ನೂ ಕೊಲ್ಲಿಸಿ, ಅರಸನ ಮಕ್ಕಳೆಲ್ಲರನ್ನೂ, ಸೈನ್ಯಾಧಿಪತಿಗಳನ್ನೂ, ಯಾಜಕನಾದ ಅಬಿಯಾತರನನ್ನೂ ಕರೆದಿದ್ದಾನೆ. ಅವರು ಅವನ ಮುಂದೆ ತಿಂದು, ಕುಡಿದು, ‘ಅರಸನಾದ ಅದೋನೀಯನು ಚಿರಂಜೀವಿಯಾಗಿರಲಿ,’ ಎಂದು ಹೇಳುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 1:25
19 ತಿಳಿವುಗಳ ಹೋಲಿಕೆ  

ಸಮುವೇಲನು ಜನರೆಲ್ಲರಿಗೆ, “ಯೆಹೋವನು ಆರಿಸಿಕೊಂಡಿರುವ ಮನುಷ್ಯನನ್ನು ನೋಡಿದಿರಾ! ಸರ್ವಜನರಲ್ಲಿಯೂ ಸೌಲನಂತಹ ಮನುಷ್ಯನು ಇನ್ನೊಬ್ಬನಿಲ್ಲ!” ಎಂದು ಹೇಳಿದನು. ಆಗ ಜನರೆಲ್ಲ, “ರಾಜನು ಚಿರಂಜೀವಿಯಾಗಿರಲಿ” ಎಂದು ಆರ್ಭಟಿಸಿದರು.


ಅದೋನೀಯನು ಅನೇಕ ಹಸುಗಳನ್ನು, ಕೊಬ್ಬಿದ ಕರುಗಳನ್ನು ಮತ್ತು ಕುರಿಗಳನ್ನು ಸಮಾಧಾನಯಜ್ಞವಾಗಿ ಅರ್ಪಿಸಿದ್ದಾನೆ. ಅವನು ನಿನ್ನ ಎಲ್ಲಾ ಗಂಡುಮಕ್ಕಳನ್ನು ಆಹ್ವಾನಿಸಿದ್ದನು. ಅವನು ಯಾಜಕನಾದ ಎಬ್ಯಾತಾರನನ್ನು ಮತ್ತು ನಿನ್ನ ಸೇನಾಧಿಪತಿಯಾದ ಯೋವಾಬನನ್ನು ಆಹ್ವಾನಿಸಿದ್ದನು. ಆದರೆ ಅವನು ನಿನ್ನ ಸೇವೆಮಾಡುವ ನಿನ್ನ ಮಗನಾದ ಸೊಲೊಮೋನನನ್ನು ಆಹ್ವಾನಿಸಲಿಲ್ಲ.


ಒಂದು ದಿನ, ಅದೋನೀಯನು ಎನ್‌ರೋಗೆಲಿನ ಹತ್ತಿರದ ಚೋಹೆಲೆತ್ ಎಂಬ ಬಂಡೆಯ ಬಳಿ ಕೆಲವು ಕುರಿಗಳನ್ನು, ಹಸುಗಳನ್ನು ಮತ್ತು ಕೊಬ್ಬಿದ ಕರುಗಳನ್ನು ಸಮಾಧಾನಯಜ್ಞವಾಗಿ ಅರ್ಪಿಸಿದನು. ಅದೋನೀಯನು ತನ್ನ ಸಹೋದರರನ್ನು (ರಾಜನ ಇತರ ಗಂಡುಮಕ್ಕಳನ್ನು) ಮತ್ತು ಯೆಹೂದದ ಅಧಿಕಾರಿಗಳನ್ನು ಆಹ್ವಾನಿಸಿದನು.


ಅವರು, “‘ಪ್ರಭುವಿನ ಹೆಸರಿನಲ್ಲಿ ಬರುವ ಅರಸನಿಗೆ ಆಶೀರ್ವಾದವಾಗಲಿ!’ ಪರಲೋಕದಲ್ಲಿ ಸಮಾಧಾನವಾಗಲಿ; ದೇವರಿಗೆ ಮಹಿಮೆಯಾಗಲಿ” ಎಂದು ಆರ್ಭಟಿಸಿದರು.


ಕೆಲವರು ಯೇಸುವಿನ ಮುಂದೆ ನಡೆದು ಹೋಗುತ್ತಿದ್ದರು. ಕೆಲವರು ಯೇಸುವಿನ ಹಿಂದೆ ನಡೆದು ಬರುತ್ತಿದ್ದರು. ಜನರೆಲ್ಲರೂ ಹೀಗೆ ಆರ್ಭಟಿಸಿದರು: “ದಾವೀದನ ಕುಮಾರನನ್ನು ಕೊಂಡಾಡಿರಿ! ‘ಪ್ರಭುವಿನ ಹೆಸರಿನಲ್ಲಿ ಬರುವವನನ್ನು ದೇವರು ಆಶೀರ್ವದಿಸಲಿ!’ ಪರಲೋಕದ ದೇವರನ್ನು ಕೊಂಡಾಡಿರಿ!”


ಅವರು ರಾಜಕುಮಾರನನ್ನು ಹೊರತಂದು ಅವನ ತಲೆಯ ಮೇಲೆ ಕಿರೀಟವನ್ನಿಟ್ಟರು. ಅವನ ಕೈಗೆ ಧರ್ಮಶಾಸ್ತ್ರದ ಪ್ರತಿಯನ್ನು ಕೊಟ್ಟು ಅವನನ್ನು ತಮ್ಮ ರಾಜನನ್ನಾಗಿ ಮಾಡಿದರು. ಯೆಹೋಯಾದನೂ ಅವನ ಗಂಡುಮಕ್ಕಳೂ ಯೆಹೋವಾಷನನ್ನು ಅಭಿಷೇಕಿಸಿದರು. “ಅರಸನು ಚಿರಂಜೀವಿಯಾಗಿರಲಿ” ಎಂದು ಹರಸಿದರು.


ಮರುದಿವಸ ಜನರು ಯೆಹೋವನಿಗೆ ಯಜ್ಞಗಳನ್ನೂ ಸರ್ವಾಂಗಹೋಮಗಳನ್ನೂ ಅರ್ಪಿಸಿದರು. ಒಂದು ಸಾವಿರ ಹೋರಿಗಳು, ಒಂದುಸಾವಿರ ಟಗರುಗಳು, ಒಂದುಸಾವಿರ ಆಡುಗಳು ಮತ್ತು ಪಾನದ್ರವ್ಯಗಳನ್ನು ಅರ್ಪಿಸಿದರು. ಇಡೀ ಇಸ್ರೇಲ್ ಜನಾಂಗಕ್ಕಾಗಿ ಯಜ್ಞವನ್ನರ್ಪಿಸಿದರು.


ನಮ್ಮ ದೇವರೇ, ನಿನಗೆ ನಾವು ಕೃತಜ್ಞತೆಯನ್ನು ಸಲ್ಲಿಸುತ್ತೇವೆ. ನಿನ್ನ ಪ್ರಭಾವವುಳ್ಳ ನಾಮವನ್ನು ಸ್ತುತಿಸುತ್ತೇವೆ.


ಈ ಜನರು ಯೆಹೋವಾಷಾನನ್ನು ಹೊರಗೆ ತಂದರು. ಅವರು ಯೆಹೋವಾಷನ ಮೇಲೆ ಕಿರೀಟವನ್ನಿಟ್ಟು ಕೈಯಲ್ಲಿ ಧರ್ಮಶಾಸ್ತ್ರವನ್ನು ಕೊಟ್ಟರು. ನಂತರ ಅವರು ಅವನನ್ನು ಅಭಿಷೇಕಿಸಿ, ನೂತನ ರಾಜನನ್ನಾಗಿ ಮಾಡಿದರು. ಅವರು ಚಪ್ಪಾಳೆ ತಟ್ಟುತ್ತಾ “ರಾಜನು ಚಿರಂಜೀವಿಯಾಗಿರಲಿ!” ಎಂದು ಆರ್ಭಟಿಸಿದರು.


ಅಲ್ಲಿ ಯಾಜಕನಾದ ಚಾದೋಕನು ಮತ್ತು ಪ್ರವಾದಿಯಾದ ನಾತಾನನು ಅವನನ್ನು ಇಸ್ರೇಲಿನ ನೂತನ ರಾಜನನ್ನಾಗಿ ಅಭಿಷೇಕಿಸಲಿ. ಅನಂತರ ತುತ್ತೂರಿಯನ್ನು ಊದಿರಿ; ಎಲ್ಲರೂ ‘ರಾಜನಾದ ಸೊಲೊಮೋನನು ಚಿರಂಜೀವಿಯಾಗಿರಲಿ’ ಎಂದು ಆರ್ಭಟಿಸಲಿ.


ದಾವೀದನ ಸ್ನೇಹಿತನೂ ಅರ್ಕೀಯನೂ ಆದ ಹೂಷೈಯು ಅಬ್ಷಾಲೋಮನ ಬಳಿಗೆ ಬಂದನು. ಹೂಷೈಯು, “ರಾಜನು ಚಿರಾಯುವಾಗಿರಲಿ, ರಾಜನು ಚಿರಾಯುವಾಗಿರಲಿ” ಎಂದು ಅಬ್ಷಾಲೋಮನಿಗೆ ಹೇಳಿದನು.


“ಆಮೇಲೆ ರಾಜನು ಇನ್ನೂ ಕೆಲವು ಸೇವಕರನ್ನು ಕರೆದು, ‘ಈ ಜನರನ್ನು ನಾನು ಆಗಲೇ ಆಹ್ವಾನಿಸಿದ್ದೇನೆ. ಆದ್ದರಿಂದ ಈಗ ಔತಣವು ಸಿದ್ಧವಾಗಿದೆ. ಅಡಿಗೆಗಾಗಿ ಕೊಬ್ಬಿದ ಎತ್ತುಗಳನ್ನು ಮತ್ತು ಕರುಗಳನ್ನು ಕೊಯ್ಸಿದ್ದೇನೆ. ಎಲ್ಲವೂ ಸಿದ್ಧವಾಗಿದೆ. ಮದುವೆ ಔತಣಕ್ಕೆ ಬನ್ನಿ ಎಂದು ಅವರಿಗೆ ತಿಳಿಸಿ’ ಎಂದು ಹೇಳಿ ಕಳುಹಿಸಿದನು.


ಆಗ ನಾತಾನನು, “ನನ್ನ ರಾಜನೇ, ನನ್ನ ಒಡೆಯನೇ, ನಿನ್ನ ನಂತರ ಅದೋನೀಯನು ನೂತನ ರಾಜನಾಗಿ ಜನರನ್ನು ಆಳಲೆಂದು ನೀನು ತೀರ್ಮಾನಿಸಿ ಪ್ರಕಟಿಸಿರುವೆಯಾ?


ಯಾಜಕನಾದ ಚಾದೋಕನು ಪವಿತ್ರಗುಡಾರದಿಂದ ಎಣ್ಣೆಯನ್ನು ತೆಗೆದುಕೊಂಡು ಬಂದನು. ಸೊಲೊಮೋನನು ರಾಜನೆಂದು ತೋರಿಸಲು ಅವನ ತಲೆಯ ಮೇಲೆ ಚಾದೋಕನು ಎಣ್ಣೆಯನ್ನು ಸುರಿದನು. ದಾವೀದನ ಜನರು ತುತ್ತೂರಿಯನ್ನು ಊದಿದರು. ಆಗ ಎಲ್ಲಾ ಜನರೂ, “ರಾಜನಾದ ಸೊಲೊಮೋನನು ಚಿರಂಜೀವಿಯಾಗಿರಲಿ” ಎಂದು ಆರ್ಭಟಿಸಿದರು.


ಅದೋನೀಯನು, “ಒಂದು ಕಾಲದಲ್ಲಿ ರಾಜ್ಯಾಧಿಕಾರವು ನನ್ನದಾಗಿತ್ತೆಂಬುದು ನಿನ್ನ ನೆನಪಿನಲ್ಲಿದೆ. ಇಸ್ರೇಲಿನ ಜನರೆಲ್ಲರೂ ನಾನೇ ಅವರ ರಾಜನೆಂದು ತಿಳಿದಿದ್ದರು. ಆದರೆ ಸಂಗತಿಗಳು ಬದಲಾದವು. ಈಗ ನನ್ನ ಸೋದರನೇ ರಾಜನು. ಯೆಹೋವನು ಅವನನ್ನು ರಾಜನನ್ನಾಗಿ ಆರಿಸಿದನು.


ಆಗ ಪ್ರತಿಯೊಬ್ಬ ಅಧಿಕಾರಿಯೂ ತಮ್ಮತಮ್ಮ ನಿಲುವಂಗಿಗಳನ್ನು ತೆಗೆದು, ಅವುಗಳನ್ನು ಮೆಟ್ಟಿಲುಗಳ ಮೇಲೆ, ಯೇಹುವಿನ ಮುಂದೆ ಇಟ್ಟರು. ಅನಂತರ ಅವರು ತುತ್ತೂರಿಯನ್ನೂದಿ, “ಯೇಹು ರಾಜನು!” ಎಂದು ಘೋಷಿಸಿದರು.


ರಾಜನು ಪದ್ಧತಿಯಂತೆ ಸ್ತಂಭದ ಬಳಿ ನಿಂತಿರುವುದನ್ನೂ ಜನರು ಮತ್ತು ನಾಯಕರು ರಾಜನಿಗಾಗಿ ತುತ್ತೂರಿ ಊದುತ್ತಿರುವುದನ್ನೂ ಜನರೆಲ್ಲರೂ ಬಹಳ ಸಂತೋಷದಿಂದಿರುವುದನ್ನೂ ಅವಳು ನೋಡಿ ದುಃಖದಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡು “ದ್ರೋಹ, ದ್ರೋಹ!” ಎಂದು ಕೂಗಿಕೊಂಡಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು