Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 1:26 - ಪರಿಶುದ್ದ ಬೈಬಲ್‌

26 ಆದರೆ ಅವನು ನನ್ನನ್ನಾಗಲಿ ಯಾಜಕನಾದ ಚಾದೋಕನನ್ನಾಗಲಿ ಯೆಹೋಯಾದಾವನ ಮಗನಾದ ಬೆನಾಯನನ್ನಾಗಲಿ ನಿನ್ನ ಮಗನಾದ ಸೊಲೊಮೋನನನ್ನಾಗಲಿ ಆಹ್ವಾನಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಆದರೆ ಅವನು ನಿನ್ನ ಸೇವಕನಾದ ನನ್ನನ್ನೂ, ಯಾಜಕನಾದ ಚಾದೋಕ್, ಯೆಹೋಯಾದಾವನ ಮಗನಾದ ಬೆನಾಯ ಎಂಬುವರನ್ನೂ ನಿನ್ನ ಮಗನೂ, ಸೇವಕನೂ ಸೊಲೊಮೋನನನ್ನೂ ಔತಣಕ್ಕೆ ಕರೆಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಆದರೆ ಅವನು ನಿಮ್ಮ ಸೇವಕನಾದ ನನ್ನನ್ನು, ಯಾಜಕ ಚಾದೋಕ್, ಯೆಹೋಯಾದಾವನ ಮಗ ಬೆನಾಯ ಎಂಬವರನ್ನು ಹಾಗು ನಿಮ್ಮ ಸೇವಕ ಸೊಲೊಮೋನನನ್ನು ಔತಣಕ್ಕೆ ಕರೆಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಆದರೆ ಅವನು ನಿನ್ನ ಸೇವಕನಾದ ನನ್ನನ್ನೂ ಯಾಜಕನಾದ ಚಾದೋಕ್, ಯೆಹೋಯಾದಾವನ ಮಗನಾದ ಬೆನಾಯ ಎಂಬವರನ್ನೂ ನಿನ್ನ ಸೇವಕನಾದ ಸೊಲೊಮೋನನನ್ನೂ ಔತಣಕ್ಕೆ ಕರೆಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಆದರೆ ನಿನ್ನ ಸೇವಕನಾದ ನನ್ನನ್ನೂ, ಯಾಜಕನಾದ ಚಾದೋಕನನ್ನೂ, ಯೆಹೋಯಾದಾವನ ಮಗ ಬೆನಾಯನನ್ನೂ, ನಿಮ್ಮ ಸೇವಕನಾದ ಸೊಲೊಮೋನನನ್ನೂ, ಅವನು ಕರೆಯಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 1:26
10 ತಿಳಿವುಗಳ ಹೋಲಿಕೆ  

ಆದರೆ ಅದೋನೀಯನ ಕಾರ್ಯವನ್ನು ಒಪ್ಪದ ಅನೇಕರು ದಾವೀದನಿಗೆ ನಂಬಿಗಸ್ತರಾಗಿದ್ದರು. ಇವರು ಯಾರೆಂದರೆ: ಯಾಜಕನಾದ ಚಾದೋಕ, ಯೆಹೋಯಾದಾವನ ಮಗನಾದ ಬೆನಾಯ, ಪ್ರವಾದಿಯಾದ ನಾತಾನ್, ಶಿಮ್ಮೀ, ರೇಗೀ ಮತ್ತು ರಾಜನಾದ ದಾವೀದನ ವಿಶೇಷ ಅಂಗರಕ್ಷಕರು. ಇವರಲ್ಲಿ ಯಾರೂ ಅದೋನೀಯನ ಸಂಗಡ ಸೇರಲಿಲ್ಲ.


ಆದರೆ ಅದೋನೀಯನು ಪ್ರವಾದಿಯಾದ ನಾತಾನನನ್ನಾಗಲಿ ಬೆನಾಯನನ್ನಾಗಲಿ ಅವನ ತಂದೆಯ ವಿಶೇಷ ಅಂಗರಕ್ಷಕರನ್ನಾಗಲಿ ಅವನ ಸೋದರ ಸೊಲೊಮೋನನನ್ನಾಗಲಿ ಆಹ್ವಾನಿಸಲಿಲ್ಲ.


ಅದೋನೀಯನು ಅನೇಕ ಹಸುಗಳನ್ನು, ಕೊಬ್ಬಿದ ಕರುಗಳನ್ನು ಮತ್ತು ಕುರಿಗಳನ್ನು ಸಮಾಧಾನಯಜ್ಞವಾಗಿ ಅರ್ಪಿಸಿದ್ದಾನೆ. ಅವನು ನಿನ್ನ ಎಲ್ಲಾ ಗಂಡುಮಕ್ಕಳನ್ನು ಆಹ್ವಾನಿಸಿದ್ದನು. ಅವನು ಯಾಜಕನಾದ ಎಬ್ಯಾತಾರನನ್ನು ಮತ್ತು ನಿನ್ನ ಸೇನಾಧಿಪತಿಯಾದ ಯೋವಾಬನನ್ನು ಆಹ್ವಾನಿಸಿದ್ದನು. ಆದರೆ ಅವನು ನಿನ್ನ ಸೇವೆಮಾಡುವ ನಿನ್ನ ಮಗನಾದ ಸೊಲೊಮೋನನನ್ನು ಆಹ್ವಾನಿಸಲಿಲ್ಲ.


ಯೆಹೋವನು ಪ್ರವಾದಿಯಾದ ನಾತಾನನ ಮೂಲಕವಾಗಿ ಸಂದೇಶವನ್ನು ಕಳುಹಿಸಿದನು. ಯೆಹೋವನು ಆಜ್ಞಾಪಿಸಿದಂತೆ ನಾತಾನನು ಸೊಲೊಮೋನನಿಗೆ ಯೆದೀದ್ಯನೆಂದು ಹೆಸರಿಟ್ಟನು.


ಆಗ ರಾಜನಾದ ದಾವೀದನು ಪ್ರವಾದಿಯಾದ ನಾತಾನನಿಗೆ, “ನೋಡು, ನಾನು ದೇವದಾರು ಮರದಿಂದ ನಿರ್ಮಿಸಿದ ವೈಭವದ ಮನೆಯಲ್ಲಿ ವಾಸವಾಗಿದ್ದೇನೆ; ಆದರೆ ದೇವರ ಪವಿತ್ರ ಪೆಟ್ಟಿಗೆಯನ್ನು ಇನ್ನೂ ಗುಡಾರದಲ್ಲಿಯೇ ಇಟ್ಟಿದ್ದೇನೆ. ಅದಕ್ಕಾಗಿ ಒಂದು ಆಲಯವನ್ನು ಕಟ್ಟಬೇಕು” ಎಂದು ಹೇಳಿದನು.


ಯೆಹೋಯಾದಾವನ ಮಗ ಬೆನಾಯನು ಕೆರೇತ್ಯರು ಮತ್ತು ಪೆಲೇತ್ಯರು ಎಂಬ ಕಾವಲು ದಂಡುಗಳ ಅಧಿಪತಿಯಾಗಿದ್ದನು. ದಾವೀದನ ಮಕ್ಕಳೆಲ್ಲರೂ ಮುಖ್ಯಾಧಿಕಾರಿಗಳಾಗಿದ್ದರು.


ನನ್ನ ಒಡೆಯನಾದ ರಾಜನೇ, ನಮಗೆ ಹೇಳದೆ ಇದನ್ನು ಮಾಡಿದೆಯಾ? ದಯವಿಟ್ಟು ಹೇಳು, ನಿನ್ನ ನಂತರ ರಾಜನಾಗುವವನು ಯಾರು?” ಎಂದು ಕೇಳಿದನು.


ಅಹೀಟೂಬನ ಮಗನಾದ ಚಾದೋಕನೂ ಎಬ್ಯಾತಾರನ ಮಗನಾದ ಅಹೀಮೆಲೆಕನೂ ಯಾಜಕರಾಗಿದ್ದರು. ಸೆರಾಯನು ಕಾರ್ಯದರ್ಶಿಯಾಗಿದ್ದನು.


ಆಗ ಯೆಹೋಯಾದಾವನ ಮಗನಾದ ಬೆನಾಯನನ್ನು ಯೋವಾಬನ ಸ್ಥಾನದಲ್ಲಿ ಸೇನಾಧಿಪತಿಯನ್ನಾಗಿ ಸೊಲೊಮೋನನು ನೇಮಿಸಿದನು. ಎಬ್ಯಾತಾರನ ಸ್ಥಾನದಲ್ಲಿ ಚಾದೋಕನನ್ನು ನೂತನ ಪ್ರಧಾನಯಾಜಕನನ್ನಾಗಿ ನೇಮಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು