1 ಅರಸುಗಳು 1:27 - ಪರಿಶುದ್ದ ಬೈಬಲ್27 ನನ್ನ ಒಡೆಯನಾದ ರಾಜನೇ, ನಮಗೆ ಹೇಳದೆ ಇದನ್ನು ಮಾಡಿದೆಯಾ? ದಯವಿಟ್ಟು ಹೇಳು, ನಿನ್ನ ನಂತರ ರಾಜನಾಗುವವನು ಯಾರು?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಈ ಕಾರ್ಯವು ನನ್ನ ಒಡೆಯನೂ ಅರಸನೂ ಆದ ನಿನ್ನಿಂದಲೇ ನಡೆದಿರುವ ಪಕ್ಷದಲ್ಲಿ ನಿನ್ನ ತರುವಾಯ ಸಿಂಹಾಸನದ ಮೇಲೆ ಕುಳಿತುಕೊಳ್ಳತಕ್ಕವರು ಯಾರು ಎಂಬುವುದನ್ನು ನಿನ್ನ ಸೇವಕನಾದ ನನಗೆ ತಿಳಿಸಬಾರದಾಗಿತ್ತೇ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಈ ಕಾರ್ಯ ನಮ್ಮ ಒಡೆಯರೂ ಅರಸರೂ ಆದ ನಿಮ್ಮಿಂದಲೇ ನಡೆದಿರುವುದಾದರೆ, ನಿಮ್ಮ ತರುವಾಯ ಸಿಂಹಾಸನದ ಮೇಲೆ ಕುಳಿತುಕೊಳ್ಳತಕ್ಕವರು ಯಾರೆಂಬುದನ್ನು ನಿಮ್ಮ ಸೇವಕನಾದ ನನಗೆ ತಿಳಿಸಬಾರದಾಗಿತ್ತೇ?” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಈ ಕಾರ್ಯವು ನನ್ನ ಒಡೆಯನೂ ಅರಸನೂ ಆದ ನಿನ್ನಿಂದಲೇ ನಡೆದಿರುವ ಪಕ್ಷದಲ್ಲಿ ನಿನ್ನ ತರುವಾಯ ಸಿಂಹಾಸನದ ಮೇಲೆ ಕೂತುಕೊಳ್ಳತಕ್ಕವರಾರೆಂಬದನ್ನು ನಿನ್ನ ಸೇವಕನಾದ ನನಗೆ ತಿಳಿಸಬಾರದಾಗಿತ್ತೇ ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಅರಸನಾದ ನನ್ನ ಒಡೆಯನಿಂದ ಈ ಕಾರ್ಯವಾಯಿತೋ? ಅರಸನಾದ ನನ್ನ ಒಡೆಯನು, ತನ್ನ ತರುವಾಯ ತನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳುವವನು ಯಾರೆಂದು ನಿಮ್ಮ ಸೇವಕನಾದ ನನಗೆ ನೀವು ತಿಳಿಸದೆ ಹೋದಿರೋ?” ಎಂದನು. ಅಧ್ಯಾಯವನ್ನು ನೋಡಿ |
ಆದರೆ ಶೂನೇಮಿನ ಈ ಸ್ತ್ರೀಯು ದೇವಮನುಷ್ಯನಿದ್ದ ಬೆಟ್ಟದವರೆಗೆ ಹೋದಳು. ಅವಳು ನೆಲಕ್ಕೆ ಬಾಗಿ, ಎಲೀಷನ ಪಾದಗಳನ್ನು ಹಿಡಿದುಕೊಂಡಳು. ಶೂನೇಮಿನ ಆ ಸ್ತ್ರೀಯನ್ನು ತಳ್ಳಿಬಿಡಲು ಗೇಹಜಿಯು ಹತ್ತಿರಕ್ಕೆ ಬಂದನು. ಆದರೆ ದೇವಮನುಷ್ಯನು ಗೇಹಜಿಗೆ, “ಅವಳನ್ನು ತಡೆಯಬೇಡ! ಅವಳು ಬಹಳ ತಳಮಳಗೊಂಡಿದ್ದಾಳೆ. ಯೆಹೋವನು ನನಗೆ ಆಕೆಯ ದುಃಖವನ್ನು ಪ್ರಕಟಿಸಲಿಲ್ಲ; ನನಗೆ ಮರೆಮಾಡಿದ್ದಾನೆ” ಎಂದು ಹೇಳಿದನು.