1 ಅರಸುಗಳು 1:29 - ಪರಿಶುದ್ದ ಬೈಬಲ್29 ಆಗ ರಾಜನು ಈ ಪ್ರಮಾಣವನ್ನು ಮಾಡಿದನು: “ದೇವರಾದ ಯೆಹೋವನು ನನ್ನನ್ನು ಎಲ್ಲಾ ತೊಂದರೆಗಳಿಂದ ರಕ್ಷಿಸಿದನು. ದೇವರಾಣೆಯಾಗಿಯೂ ನಾನು ನಿನಗೆ ಈ ಪ್ರಮಾಣವನ್ನು ಮಾಡುತ್ತೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಅರಸನು ಆಕೆಗೆ, “ನನ್ನ ಪ್ರಾಣವನ್ನು ಎಲ್ಲಾ ಇಕ್ಕಟ್ಟುಗಳಿಂದ ಬಿಡಿಸಿ ಕಾಪಾಡಿದ ಯೆಹೋವನಾಣೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 “ನನ್ನ ಪ್ರಾಣವನ್ನು ಎಲ್ಲಾ ಇಕ್ಕಟ್ಟುಗಳಿಂದ ಬಿಡಿಸಿ ಕಾಪಾಡಿದ ಸರ್ವೇಶ್ವರನಾಣೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ನನ್ನ ಪ್ರಾಣವನ್ನು ಎಲ್ಲಾ ಇಕ್ಕಟ್ಟುಗಳಿಂದ ಬಿಡಿಸಿ ಕಾಪಾಡಿದ ಯೆಹೋವನಾಣೆ, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಅರಸನು ಆಕೆಗೆ, “ನಿಶ್ಚಯವಾಗಿ, ನಿನ್ನ ಮಗ ಸೊಲೊಮೋನನು ನನ್ನ ತರುವಾಯ ಆಳುವನೆಂದೂ, ಅಧ್ಯಾಯವನ್ನು ನೋಡಿ |
ನಂತರ ಆ ಬಾಣಗಳನ್ನು ಹುಡುಕಿಕೊಂಡು ಬರಲು ಹುಡುಗನನ್ನು ಕಳುಹಿಸುತ್ತೇನೆ. ಎಲ್ಲವೂ ಒಳಿತಾಗಿದ್ದರೆ ನಾನು ಆ ಹುಡುಗನಿಗೆ, ‘ನೀನು ಬಹು ದೂರ ಹೋಗಿರುವೆ! ಬಾಣಗಳು ನನ್ನ ಹತ್ತಿರದಲ್ಲೇ ಇವೆ. ಹಿಂತಿರುಗಿಬಂದು ಅವುಗಳನ್ನು ತೆಗೆದುಕೋ’ ಎಂದು ಹೇಳುತ್ತೇನೆ. ನಾನು ಆ ರೀತಿ ಹೇಳಿದರೆ, ನೀನು ಅಡಗಿದ್ದ ಸ್ಥಳದಿಂದ ಹೊರಗೆ ಬಾ. ಯೆಹೋವನಾಣೆ, ನೀನು ಸುರಕ್ಷಿತನಾಗಿರುವೆ. ನಿನಗೆ ಯಾವ ಅಪಾಯವೂ ಇಲ್ಲ.
ಆದರೆ ಸೈನಿಕರು ಸೌಲನಿಗೆ, “ಈ ದಿನ ಇಸ್ರೇಲರನ್ನು ಮುನ್ನಡೆಸಿ ಮಹಾವಿಜಯವನ್ನು ಉಂಟುಮಾಡಿದ ಯೋನಾತಾನನು ಸಾಯಬೇಕೋ? ಇಲ್ಲ! ಜೀವಸ್ವರೂಪನಾದ ಯೆಹೋವನಾಣೆ, ಯೋನಾತಾನನ ತಲೆಕೂದಲುಗಳಲ್ಲಿ ಒಂದಾದರೂ ನೆಲಕ್ಕೆ ಬೀಳಲು ನಾವು ಬಿಡುವುದಿಲ್ಲ. ಇಂದು ಫಿಲಿಷ್ಟಿಯರ ವಿರುದ್ಧ ಹೋರಾಡಲು ದೇವರು ಯೋನಾತಾನನಿಗೆ ಸಹಾಯಮಾಡಿದ್ದಾನೆ” ಎಂದು ಹೇಳಿದರು. ಹೀಗೆ ಜನರು ಯೋನಾತಾನನನ್ನು ರಕ್ಷಿಸಿದರು. ಅವನನ್ನು ಸಾಯಿಸಲಿಲ್ಲ.
ನನ್ನನ್ನು ಎಲ್ಲಾ ತೊಂದರೆಗಳಿಂದ ಕಾಪಾಡಿದ ದೂತನೇ ಆತನು. ಈ ಹುಡುಗರನ್ನು ಆಶೀರ್ವದಿಸಬೇಕೆಂದು ನಾನು ಆತನಲ್ಲಿ ಪ್ರಾರ್ಥಿಸುವೆನು. ಇಂದಿನಿಂದ ಈ ಮಕ್ಕಳು ನನ್ನ ಹೆಸರನ್ನೇ ಹೊಂದಿಕೊಳ್ಳುವರು. ನನ್ನ ಪೂರ್ವಿಕರಾದ ಅಬ್ರಹಾಮ್ ಮತ್ತು ಇಸಾಕರ ಹೆಸರನ್ನು ಇವರು ಹೊಂದಿಕೊಳ್ಳುವರು. ಇವರು ಭೂಮಿಯ ಮೇಲೆ ಬೆಳೆದು ದೊಡ್ಡ ಕುಟುಂಬಗಳಾಗುವಂತೆಯೂ ದೊಡ್ಡ ಜನಾಂಗಗಳಾಗುವಂತೆಯೂ ನಾನು ಪ್ರಾರ್ಥಿಸುವೆನು.”