1 ಅರಸುಗಳು 1:32 - ಪರಿಶುದ್ದ ಬೈಬಲ್32 ಆಗ ರಾಜನಾದ ದಾವೀದನು, “ಯಾಜಕನಾದ ಚಾದೋಕನಿಗೆ, ಪ್ರವಾದಿಯಾದ ನಾತಾನನಿಗೆ ಮತ್ತು ಯೆಹೋಯಾದಾವನ ಮಗನಾದ ಬೆನಾಯನಿಗೆ ಇಲ್ಲಿಗೆ ಬರಲು ಹೇಳು” ಎಂದು ಹೇಳಿದನು. ಈ ಮೂವರು ರಾಜನ ಬಳಿಗೆ ಬಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಅನಂತರ ಅರಸನಾದ ದಾವೀದನು ತನ್ನ ಸೇವಕರಿಗೆ, “ಯಾಜಕನಾದ ಚಾದೋಕ್, ಪ್ರವಾದಿಯಾದ ನಾತಾನ, ಯೆಹೋಯಾದಾವನ ಮಗನಾದ ಬೆನಾಯ ಎಂಬುವರನ್ನು ಕರೆಯಿರಿ” ಎಂದು ಆಜ್ಞಾಪಿಸಿದನು. ಅವರು ಅರಸನ ಸನ್ನಿಧಿಗೆ ಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ಅನಂತರ ಅರಸ ದಾವೀದನು ತನ್ನ ಸೇವಕರಿಗೆ, “ಯಾಜಕ ಚಾದೋಕ್, ಪ್ರವಾದಿ ನಾತಾನ್ ಹಾಗು ಯೆಹೋಯಾದಾವನ ಮಗ ಬೆನಾಯ ಇವರನ್ನು ಕರೆಯಿರಿ,” ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ಅನಂತರ ಅರಸನಾದ ದಾವೀದನು ತನ್ನ ಸೇವಕರಿಗೆ - ಯಾಜಕನಾದ ಚಾದೋಕ್, ಪ್ರವಾದಿಯಾದ ನಾತಾನ್, ಯೆಹೋಯಾದಾವನ ಮಗನಾದ ಬೆನಾಯ ಎಂಬವರನ್ನು ಕರೆಯಿರಿ ಎಂದು ಆಜ್ಞಾಪಿಸಿದನು; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ಆಗ ಅರಸನಾದ ದಾವೀದನು, “ಯಾಜಕನಾದ ಚಾದೋಕನನ್ನೂ, ಪ್ರವಾದಿಯಾದ ನಾತಾನನನ್ನೂ, ಯೆಹೋಯಾದಾವನ ಮಗ ಬೆನಾಯನನ್ನೂ ನನ್ನ ಬಳಿಗೆ ಕರೆಯಿರಿ,” ಎಂದನು. ಅವರು ಅರಸನ ಸಮ್ಮುಖಕ್ಕೆ ಬಂದರು. ಅಧ್ಯಾಯವನ್ನು ನೋಡಿ |