Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 1:38 - ಪರಿಶುದ್ದ ಬೈಬಲ್‌

38 ಚಾದೋಕನು, ನಾತಾನನು, ಬೆನಾಯನು ಮತ್ತು ರಾಜನ ಅಧಿಕಾರಿಗಳು ರಾಜನಾದ ದಾವೀದನಿಗೆ ವಿಧೇಯರಾದರು. ಅವರು ಸೊಲೊಮೋನನನ್ನು ರಾಜನಾದ ದಾವೀದನ ಹೇಸರಕತ್ತೆಯ ಮೇಲೆ ಕುಳ್ಳಿರಿಸಿ, ಅವನೊಂದಿಗೆ ಗೀಹೋನಿಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ಆಗ ಯಾಜಕನಾದ ಚಾದೋಕ್, ಪ್ರವಾದಿಯಾದ ನಾತಾನ್, ಯೆಹೋಯಾದಾವನ ಮಗನಾದ ಬೆನಾಯ ಎಂಬುವರು ಕೆರೇತ್ಯ ಮತ್ತು ಪೆಲೇತ್ಯ ಎಂಬ ಕಾವಲುದಂಡುಗಳನ್ನು ತೆಗೆದುಕೊಂಡು ಸೊಲೊಮೋನನನ್ನು ಅರಸನಾದ ದಾವೀದನ ಹೇಸರಗತ್ತೆಯ ಮೇಲೆ ಕುಳ್ಳಿರಿಸಿ, ಗೀಹೋನಿಗೆ ಕರೆದುಕೊಂಡು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

38 ಆಗ ಯಾಜಕ ಚಾದೋಕ್, ಪ್ರವಾದಿ ನಾತಾನ್ ಹಾಗು ಯೆಹೋಯಾದಾವನ ಮಗ ಬೆನಾಯ ಎಂಬವರು ‘ಕೆರೇತ್ಯ’, ‘ಪೆಲೇತ್ಯ’ ಎಂಬ ಕಾವಲುದಂಡುಗಳನ್ನು ತೆಗೆದುಕೊಂಡು, ಸೊಲೊಮೋನನನ್ನು ಅರಸ ದಾವೀದನ ಹೇಸರಗತ್ತೆಯ ಮೇಲೆ ಕುಳ್ಳಿರಿಸಿ, ಗೀಹೋನಿಗೆ ಕರೆದುಕೊಂಡು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

38 ಆಗ ಯಾಜಕನಾದ ಚಾದೋಕ್, ಪ್ರವಾದಿಯಾದ ನಾತಾನ್, ಯೆಹೋಯಾದಾವನ ಮಗನಾದ ಬೆನಾಯ ಎಂಬವರು ಕೆರೇತ್ಯ ಪೆಲೇತ್ಯ ಎಂಬ ಕಾವಲುದಂಡುಗಳನ್ನು ತೆಗೆದುಕೊಂಡು ಸೊಲೊಮೋನನನ್ನು ಅರಸನಾದ ದಾವೀದನ ಹೇಸರಕತ್ತೆಯ ಮೇಲೆ ಕುಳ್ಳಿರಿಸಿ ಗೀಹೋನಿಗೆ ಕರಕೊಂಡು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

38 ಆಗ ಯಾಜಕನಾದ ಚಾದೋಕನೂ, ಪ್ರವಾದಿಯಾದ ನಾತಾನನೂ, ಯೆಹೋಯಾದಾವನ ಮಗ ಬೆನಾಯನೂ, ಕೆರೇತ್ಯರೂ, ಪೆಲೇತ್ಯರೂ ಹೋಗಿ, ಸೊಲೊಮೋನನನ್ನು ಅರಸನಾದ ದಾವೀದನ ಹೇಸರಕತ್ತೆಯ ಮೇಲೆ ಕುಳ್ಳಿರಿಸಿಕೊಂಡು ಗೀಹೋನಿಗೆ ಕರೆತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 1:38
14 ತಿಳಿವುಗಳ ಹೋಲಿಕೆ  

ಯೆಹೋಯಾದಾವನ ಮಗ ಬೆನಾಯನು ಕೆರೇತ್ಯರು ಮತ್ತು ಪೆಲೇತ್ಯರು ಎಂಬ ಕಾವಲು ದಂಡುಗಳ ಅಧಿಪತಿಯಾಗಿದ್ದನು. ದಾವೀದನ ಮಕ್ಕಳೆಲ್ಲರೂ ಮುಖ್ಯಾಧಿಕಾರಿಗಳಾಗಿದ್ದರು.


ಆದರೆ ಅದೋನೀಯನ ಕಾರ್ಯವನ್ನು ಒಪ್ಪದ ಅನೇಕರು ದಾವೀದನಿಗೆ ನಂಬಿಗಸ್ತರಾಗಿದ್ದರು. ಇವರು ಯಾರೆಂದರೆ: ಯಾಜಕನಾದ ಚಾದೋಕ, ಯೆಹೋಯಾದಾವನ ಮಗನಾದ ಬೆನಾಯ, ಪ್ರವಾದಿಯಾದ ನಾತಾನ್, ಶಿಮ್ಮೀ, ರೇಗೀ ಮತ್ತು ರಾಜನಾದ ದಾವೀದನ ವಿಶೇಷ ಅಂಗರಕ್ಷಕರು. ಇವರಲ್ಲಿ ಯಾರೂ ಅದೋನೀಯನ ಸಂಗಡ ಸೇರಲಿಲ್ಲ.


ಫಿಲಿಷ್ಟಿಯ ಜನರೇ, ಕರಾವಳಿ ಪ್ರದೇಶದಲ್ಲಿ ವಾಸಿಸುವ ಜನರೇ, ಯೆಹೋವನಿಂದ ಬಂದ ಸಂದೇಶ ನಿಮಗಾಗಿಯೇ. ಕಾನಾನ್ ದೇಶವೇ, ಪಾಲೆಸ್ತೀನ್ ದೇಶವೇ, ನೀವು ನಾಶಗೊಳ್ಳುವಿರಿ. ನಿಮ್ಮಲ್ಲಿ ಯಾರೂ ವಾಸಿಸರು.


ಕೆರೇತ್ಯ ಮತ್ತು ಪೆಲೇತ್ಯ ಎಂಬ ಕಾವಲುದಂಡುಗಳಿಗೆ ಬೆನಾಯನು ಅಧಿಕಾರಿಯಾಗಿದ್ದನು. ಬೆನಾಯನು ಯೆಹೋಯಾದನ ಮಗ. ದಾವೀದನ ಗಂಡುಮಕ್ಕಳು ಮುಖ್ಯ ಸ್ಥಾನಗಳಲ್ಲಿದ್ದು ದಾವೀದನ ಸೇವೆಮಾಡುತ್ತಿದ್ದರು.


ಆಗ ರಾಜನು ಅವರಿಗೆ, “ನನ್ನ ಸೇವಕರನ್ನು ಕರೆದುಕೊಂಡು ನನ್ನ ಮಗನಾದ ಸೊಲೊಮೋನನನ್ನು ನನ್ನ ಸ್ವಂತ ಹೇಸರಕತ್ತೆಯ ಮೇಲೆ ಕುಳ್ಳಿರಿಸಿಕೊಂಡು ಗೀಹೋನ್ ಬುಗ್ಗೆಗೆ ಹೋಗಿರಿ.


ಆದರೆ ಅವನು ನನ್ನನ್ನಾಗಲಿ ಯಾಜಕನಾದ ಚಾದೋಕನನ್ನಾಗಲಿ ಯೆಹೋಯಾದಾವನ ಮಗನಾದ ಬೆನಾಯನನ್ನಾಗಲಿ ನಿನ್ನ ಮಗನಾದ ಸೊಲೊಮೋನನನ್ನಾಗಲಿ ಆಹ್ವಾನಿಸಲಿಲ್ಲ.


ಅವನ ಸೇವಕರೆಲ್ಲ ರಾಜನನ್ನು ದಾಟಿ ಮುಂದೆ ಹೋದರು. ಕೆರೇತ್ಯರು, ಪೆಲೇತ್ಯರು ಮತ್ತು ಗಿತ್ತೀಯರು (ಗತ್‌ನ ಆರುನೂರು ಜನರು) ರಾಜನನ್ನು ದಾಟಿಹೋದರು.


ಕೆರೇತ್ಯರು ವಾಸಿಸುವ ನೆಗೆವ್ ಮೇಲೆ ನಾವು ಆಕ್ರಮಣ ಮಾಡಿದೆವು. ನಾವು ಯೆಹೂದ ದೇಶದ ಮೇಲೆ ಮತ್ತು ಕಾಲೇಬ್ಯರು ವಾಸಿಸುವ ನೆಗೆವ್ ಪ್ರಾಂತ್ಯಗಳ ಮೇಲೆ ಆಕ್ರಮಣ ಮಾಡಿದೆವು. ನಾವು ಚಿಕ್ಲಗನ್ನು ಸುಟ್ಟುಹಾಕಿದೆವು” ಎಂದು ಹೇಳಿದನು.


ಅಬ್ಷಾಲೋಮನ ಸೇವಕರು ಅವನ ಆಜ್ಞೆಯಂತೆ ಅಮ್ನೋನನನ್ನು ಕೊಂದುಬಿಟ್ಟರು. ಆದರೆ ದಾವೀದನ ಇತರ ಗಂಡುಮಕ್ಕಳೆಲ್ಲರೂ ತಮ್ಮತಮ್ಮ ಹೇಸರಕತ್ತೆಗಳನ್ನೇರಿ ತಪ್ಪಿಸಿಕೊಂಡರು.


ಆದ್ದರಿಂದ ಯೋವಾಬನು ಕೆರೇತ್ಯರ ಪೆಲೇತ್ಯರ ಮತ್ತು ಸೈನಿಕರೆಲ್ಲರ ಸಮೇತವಾಗಿ ಜೆರುಸಲೇಮಿನಿಂದ ಹೊರಟು ಬಿಕ್ರೀಯ ಮಗನಾದ ಶೆಬನನ್ನು ಅಟ್ಟಿಸಿಕೊಂಡು ಹೋದರು.


ಅದೋನೀಯನು, “ಒಂದು ಕಾಲದಲ್ಲಿ ರಾಜ್ಯಾಧಿಕಾರವು ನನ್ನದಾಗಿತ್ತೆಂಬುದು ನಿನ್ನ ನೆನಪಿನಲ್ಲಿದೆ. ಇಸ್ರೇಲಿನ ಜನರೆಲ್ಲರೂ ನಾನೇ ಅವರ ರಾಜನೆಂದು ತಿಳಿದಿದ್ದರು. ಆದರೆ ಸಂಗತಿಗಳು ಬದಲಾದವು. ಈಗ ನನ್ನ ಸೋದರನೇ ರಾಜನು. ಯೆಹೋವನು ಅವನನ್ನು ರಾಜನನ್ನಾಗಿ ಆರಿಸಿದನು.


ಆಗ ಯೆಹೋಯಾದಾವನ ಮಗನಾದ ಬೆನಾಯನನ್ನು ಯೋವಾಬನ ಸ್ಥಾನದಲ್ಲಿ ಸೇನಾಧಿಪತಿಯನ್ನಾಗಿ ಸೊಲೊಮೋನನು ನೇಮಿಸಿದನು. ಎಬ್ಯಾತಾರನ ಸ್ಥಾನದಲ್ಲಿ ಚಾದೋಕನನ್ನು ನೂತನ ಪ್ರಧಾನಯಾಜಕನನ್ನಾಗಿ ನೇಮಿಸಿದನು.


ಚೀಯೋನ್ ನಗರಿಯೇ, ಹರ್ಷಿಸು! ಜೆರುಸಲೇಮ್ ಜನರೇ, ಸಂತೋಷದಿಂದ ಆರ್ಭಟಿಸಿರಿ. ನಿಮ್ಮ ಅರಸನು ನಿಮ್ಮ ಬಳಿಗೆ ಬರುತ್ತಿದ್ದಾನೆ! ಆತನು ವಿಜಯಶಾಲಿಯಾದ ನೀತಿವಂತನಾಗಿದ್ದಾನೆ. ಆದರೆ ದೀನನಂತೆ ಕತ್ತೆಯ ಮೇಲೆ, ಹೌದು, ಕತ್ತೆಯ ಮರಿಯ ಮೇಲೆ ಸವಾರಿ ಮಾಡಿಕೊಂಡು ಬರುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು