Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 1:39 - ಪರಿಶುದ್ದ ಬೈಬಲ್‌

39 ಯಾಜಕನಾದ ಚಾದೋಕನು ಪವಿತ್ರಗುಡಾರದಿಂದ ಎಣ್ಣೆಯನ್ನು ತೆಗೆದುಕೊಂಡು ಬಂದನು. ಸೊಲೊಮೋನನು ರಾಜನೆಂದು ತೋರಿಸಲು ಅವನ ತಲೆಯ ಮೇಲೆ ಚಾದೋಕನು ಎಣ್ಣೆಯನ್ನು ಸುರಿದನು. ದಾವೀದನ ಜನರು ತುತ್ತೂರಿಯನ್ನು ಊದಿದರು. ಆಗ ಎಲ್ಲಾ ಜನರೂ, “ರಾಜನಾದ ಸೊಲೊಮೋನನು ಚಿರಂಜೀವಿಯಾಗಿರಲಿ” ಎಂದು ಆರ್ಭಟಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ಯಾಜಕನಾದ ಚಾದೋಕನು ದೇವದರ್ಶನದ ಗುಡಾರದಲ್ಲಿ ಎಣ್ಣೆಯ ಕೊಂಬನ್ನು ತೆಗೆದುಕೊಂಡು ಸೊಲೊಮೋನನನ್ನು ಅಭಿಷೇಕಿಸಿದನು. ಕೂಡಲೇ ಕೊಂಬನ್ನೂದಿ ಎಲ್ಲಾ ಜನರು “ಅರಸನಾದ ಸೊಲೊಮೋನನು ಚಿರಂಜೀವಿಯಾಗಿರಲಿ” ಎಂದು ಆರ್ಭಟಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

39 ಯಾಜಕ ಚಾದೋಕನು ದೇವದರ್ಶನದ ಗುಡಾರದಲ್ಲಿದ್ದ ಎಣ್ಣೆಯ ಕೊಂಬನ್ನು ತೆಗೆದುಕೊಂಡು ಸೊಲೊಮೋನನನ್ನು ಅಭಿಷೇಕಿಸಿದನು. ಕೂಡಲೆ ಕೊಂಬನ್ನೂದುತ್ತಾ ಜನರೆಲ್ಲರು, “ಅರಸನಾದ ಸೊಲೊಮೋನನು ಚಿರಂಜೀವಿಯಾಗಿರಲಿ!” ಎಂದು ಘೋಷಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ಯಾಜಕನಾದ ಚಾದೋಕನು ದೇವದರ್ಶನದ ಗುಡಾರದಲ್ಲಿರುವ ಎಣ್ಣೆಯ ಕೊಂಬನ್ನು ತೆಗೆದುಕೊಂಡು ಸೊಲೊಮೋನನನ್ನು ಅಭಿಷೇಕಿಸಿದನು. ಕೂಡಲೆ ಕೊಂಬನ್ನೂದಿ ಎಲ್ಲಾ ಜನರು - ಅರಸನಾದ ಸೊಲೊಮೋನನು ಚಿರಂಜೀವಿಯಾಗಿರಲಿ ಎಂದು ಆರ್ಭಟಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 ಆಗ ಯಾಜಕನಾದ ಚಾದೋಕನು ಗುಡಾರದೊಳಗಿಂದ ತೈಲದ ಕೊಂಬನ್ನು ತಂದು ಸೊಲೊಮೋನನನ್ನು ಅಭಿಷೇಕಿಸಿದನು. ಅವರು ತುತೂರಿಯನ್ನು ಊದಿದರು. ಆಗ ಜನರೆಲ್ಲರು, “ಅರಸನಾದ ಸೊಲೊಮೋನನು ಚಿರಂಜೀವಿಯಾಗಿರಲಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 1:39
16 ತಿಳಿವುಗಳ ಹೋಲಿಕೆ  

ನನ್ನ ಸೇವಕನಾದ ದಾವೀದನನ್ನು ಕಂಡುಕೊಂಡೆ. ನನ್ನ ವಿಶೇಷವಾದ ಎಣ್ಣೆಯಿಂದ ಅವನನ್ನು ಅಭಿಷೇಕಿಸಿದೆ.


ಆ ದಿವಸ ಸೇರಿಬಂದ ಜನರು ಯೆಹೋವನ ಸನ್ನಿಧಿಯಲ್ಲಿ ಅನ್ನಪಾನಗಳನ್ನು ತೆಗೆದುಕೊಂಡು ಉಲ್ಲಾಸಿಸಿದರು. ಅವರು ದಾವೀದನ ಮಗನಾದ ಸೊಲೊಮೋನನನ್ನು ತಿರಿಗಿ ಅರಸನನ್ನಾಗಿಯೂ ಚಾದೋಕನನ್ನು ಮಹಾಯಾಜಕನನ್ನಾಗಿಯೂ ಯೆಹೋವನ ಸನ್ನಿಧಿಯಲ್ಲಿ ಅಭಿಷೇಕಿಸಿದರು.


ಅಲ್ಲಿ ಯಾಜಕನಾದ ಚಾದೋಕನು ಮತ್ತು ಪ್ರವಾದಿಯಾದ ನಾತಾನನು ಅವನನ್ನು ಇಸ್ರೇಲಿನ ನೂತನ ರಾಜನನ್ನಾಗಿ ಅಭಿಷೇಕಿಸಲಿ. ಅನಂತರ ತುತ್ತೂರಿಯನ್ನು ಊದಿರಿ; ಎಲ್ಲರೂ ‘ರಾಜನಾದ ಸೊಲೊಮೋನನು ಚಿರಂಜೀವಿಯಾಗಿರಲಿ’ ಎಂದು ಆರ್ಭಟಿಸಲಿ.


ಸಮುವೇಲನು ಜನರೆಲ್ಲರಿಗೆ, “ಯೆಹೋವನು ಆರಿಸಿಕೊಂಡಿರುವ ಮನುಷ್ಯನನ್ನು ನೋಡಿದಿರಾ! ಸರ್ವಜನರಲ್ಲಿಯೂ ಸೌಲನಂತಹ ಮನುಷ್ಯನು ಇನ್ನೊಬ್ಬನಿಲ್ಲ!” ಎಂದು ಹೇಳಿದನು. ಆಗ ಜನರೆಲ್ಲ, “ರಾಜನು ಚಿರಂಜೀವಿಯಾಗಿರಲಿ” ಎಂದು ಆರ್ಭಟಿಸಿದರು.


ಅವನು ಮುಂಭಾಗದ ಪ್ರವೇಶ ದ್ವಾರದಲ್ಲಿದ್ದ ರಾಜಸ್ತಂಭದ ಬಳಿ ನಿಂತಿದ್ದನು. ಸೇನಾಧಿಪತಿಗಳೂ ಅವರ ಜನರೂ ತುತ್ತೂರಿಯನ್ನು ಊದಿ ರಾಜನ ಬಳಿಯಲ್ಲಿಯೇ ನಿಂತಿದ್ದರು. ದೇಶದ ಪ್ರಜೆಗಳು ಸಂತೋಷದಿಂದ ತುತ್ತೂರಿಯನ್ನೂದಿದರು. ಗಾಯಕರು ವಾದ್ಯಗಳನ್ನು ಬಾರಿಸುತ್ತಿದ್ದರು. ಅವರು ಜನರನ್ನು ಸ್ತೋತ್ರಗೀತೆಯಲ್ಲಿ ನಡಿಸುತ್ತಿದ್ದರು. ಇದೆಲ್ಲವನ್ನು ಅತಲ್ಯಳು ನೋಡಿ ತನ್ನ ಬಟ್ಟೆಯನ್ನು ಹರಿದು, “ದ್ರೋಹ, ದ್ರೋಹ” ಎಂದು ಕಿರುಚಿದಳು.


ಅವರು ರಾಜಕುಮಾರನನ್ನು ಹೊರತಂದು ಅವನ ತಲೆಯ ಮೇಲೆ ಕಿರೀಟವನ್ನಿಟ್ಟರು. ಅವನ ಕೈಗೆ ಧರ್ಮಶಾಸ್ತ್ರದ ಪ್ರತಿಯನ್ನು ಕೊಟ್ಟು ಅವನನ್ನು ತಮ್ಮ ರಾಜನನ್ನಾಗಿ ಮಾಡಿದರು. ಯೆಹೋಯಾದನೂ ಅವನ ಗಂಡುಮಕ್ಕಳೂ ಯೆಹೋವಾಷನನ್ನು ಅಭಿಷೇಕಿಸಿದರು. “ಅರಸನು ಚಿರಂಜೀವಿಯಾಗಿರಲಿ” ಎಂದು ಹರಸಿದರು.


ಈ ಜನರು ಯೆಹೋವಾಷಾನನ್ನು ಹೊರಗೆ ತಂದರು. ಅವರು ಯೆಹೋವಾಷನ ಮೇಲೆ ಕಿರೀಟವನ್ನಿಟ್ಟು ಕೈಯಲ್ಲಿ ಧರ್ಮಶಾಸ್ತ್ರವನ್ನು ಕೊಟ್ಟರು. ನಂತರ ಅವರು ಅವನನ್ನು ಅಭಿಷೇಕಿಸಿ, ನೂತನ ರಾಜನನ್ನಾಗಿ ಮಾಡಿದರು. ಅವರು ಚಪ್ಪಾಳೆ ತಟ್ಟುತ್ತಾ “ರಾಜನು ಚಿರಂಜೀವಿಯಾಗಿರಲಿ!” ಎಂದು ಆರ್ಭಟಿಸಿದರು.


ಈ ದಿನ ಅವನು ಅನೇಕ ಹೋರಿಗಳನ್ನು ಮತ್ತು ಕುರಿಗಳನ್ನು ಸಮಾಧಾನಯಜ್ಞವಾಗಿ ಅರ್ಪಿಸಿದನು. ಅವನು ನಿನ್ನ ಇತರ ಗಂಡುಮಕ್ಕಳನ್ನು, ಸೇನಾಧಿಪತಿಗಳನ್ನು ಮತ್ತು ಯಾಜಕನಾದ ಎಬ್ಯಾತಾರನನ್ನು ಆಹ್ವಾನಿಸಿದ್ದನು. ಅವರು ಈಗ ಅವನೊಡನೆ ತಿನ್ನುತ್ತಾ ಕುಡಿಯುತ್ತಾ ಇದ್ದಾರೆ. ‘ರಾಜನಾದ ಅದೋನೀಯನು ಚಿರಾಯುವಾಗಿರಲಿ’ ಎಂದು ಅವರು ಹೇಳುತ್ತಿದ್ದಾರೆ.


ಸಮುವೇಲನು ಎಣ್ಣೆಯಿದ್ದ ಕೊಂಬನ್ನು ತೆಗೆದುಕೊಂಡು, ಅದರಲ್ಲಿದ್ದ ವಿಶೇಷವಾದ ಎಣ್ಣೆಯನ್ನು ಇಷಯನ ಕಿರಿಮಗನ ಮೇಲೆ, ಅವನ ಸೋದರರ ಎದುರಿನಲ್ಲೇ ಸುರಿದನು. ಆ ದಿನದಿಂದ ಯೆಹೋವನ ಆತ್ಮವು ಮಹಾಶಕ್ತಿಯೊಡನೆ ದಾವೀದನಲ್ಲಿ ನೆಲೆಸಿತು. ಅನಂತರ ಸಮುವೇಲನು ರಾಮಕ್ಕೆ ಹಿಂದಿರುಗಿದನು.


ಜನರೆಲ್ಲರೂ ಸೊಲೊಮೋನನನ್ನು ಹಿಂಬಾಲಿಸುತ್ತಾ ನಗರಕ್ಕೆ ಬಂದರು. ಅವರು ಕೊಳಲುಗಳನ್ನು ಊದುತ್ತಾ ಸಂತಸದಿಂದ ಕೂಗಾಡುತ್ತಾ ಬಂದರು. ಅವರು ಮಾಡಿದ ಶಬ್ದವು ಭೂಮಿಯನ್ನೇ ನಡುಗಿಸುವಂತಿತ್ತು.


ಪ್ರವಾದಿಯಾದ ಎಲೀಷನು ಪ್ರವಾದಿಗಳ ಗುಂಪಿನಿಂದ ಒಬ್ಬನನ್ನು ಕರೆದು ಅವನಿಗೆ, “ಎಣ್ಣೆಯಿರುವ ಈ ಸಣ್ಣ ಸೀಸೆಯನ್ನು ನಿನ್ನ ಕೈಗಳಲ್ಲಿ ತೆಗೆದುಕೊಂಡು ರಾಮೋತ್‌ಗಿಲ್ಯಾದಿಗೆ ಹೋಗು.


ಆಗ ಪ್ರತಿಯೊಬ್ಬ ಅಧಿಕಾರಿಯೂ ತಮ್ಮತಮ್ಮ ನಿಲುವಂಗಿಗಳನ್ನು ತೆಗೆದು, ಅವುಗಳನ್ನು ಮೆಟ್ಟಿಲುಗಳ ಮೇಲೆ, ಯೇಹುವಿನ ಮುಂದೆ ಇಟ್ಟರು. ಅನಂತರ ಅವರು ತುತ್ತೂರಿಯನ್ನೂದಿ, “ಯೇಹು ರಾಜನು!” ಎಂದು ಘೋಷಿಸಿದರು.


ರಾಜನು ಪದ್ಧತಿಯಂತೆ ಸ್ತಂಭದ ಬಳಿ ನಿಂತಿರುವುದನ್ನೂ ಜನರು ಮತ್ತು ನಾಯಕರು ರಾಜನಿಗಾಗಿ ತುತ್ತೂರಿ ಊದುತ್ತಿರುವುದನ್ನೂ ಜನರೆಲ್ಲರೂ ಬಹಳ ಸಂತೋಷದಿಂದಿರುವುದನ್ನೂ ಅವಳು ನೋಡಿ ದುಃಖದಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡು “ದ್ರೋಹ, ದ್ರೋಹ!” ಎಂದು ಕೂಗಿಕೊಂಡಳು.


ಸುವಾಸನೆಯುಳ್ಳ ಧೂಪವನ್ನು ಮಾಡುವುದಕ್ಕೆ ಈ ಸುಗಂಧ ದ್ರವ್ಯಗಳನ್ನು ಒಟ್ಟಾಗಿ ಬೆರೆಸು. ಸುಗಂಧದ್ರವ್ಯಕಾರನು ಮಾಡುವ ಪ್ರಕಾರವೇ ಇದನ್ನು ಮಾಡು. ಈ ಧೂಪಕ್ಕೆ ಉಪ್ಪನ್ನು ಬೆರೆಸು. ಉಪ್ಪು ಅದನ್ನು ಶುದ್ಧಗೊಳಿಸುವುದು.


ಅದೋನೀಯನು, “ಒಂದು ಕಾಲದಲ್ಲಿ ರಾಜ್ಯಾಧಿಕಾರವು ನನ್ನದಾಗಿತ್ತೆಂಬುದು ನಿನ್ನ ನೆನಪಿನಲ್ಲಿದೆ. ಇಸ್ರೇಲಿನ ಜನರೆಲ್ಲರೂ ನಾನೇ ಅವರ ರಾಜನೆಂದು ತಿಳಿದಿದ್ದರು. ಆದರೆ ಸಂಗತಿಗಳು ಬದಲಾದವು. ಈಗ ನನ್ನ ಸೋದರನೇ ರಾಜನು. ಯೆಹೋವನು ಅವನನ್ನು ರಾಜನನ್ನಾಗಿ ಆರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು