Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 1:40 - ಪರಿಶುದ್ದ ಬೈಬಲ್‌

40 ಜನರೆಲ್ಲರೂ ಸೊಲೊಮೋನನನ್ನು ಹಿಂಬಾಲಿಸುತ್ತಾ ನಗರಕ್ಕೆ ಬಂದರು. ಅವರು ಕೊಳಲುಗಳನ್ನು ಊದುತ್ತಾ ಸಂತಸದಿಂದ ಕೂಗಾಡುತ್ತಾ ಬಂದರು. ಅವರು ಮಾಡಿದ ಶಬ್ದವು ಭೂಮಿಯನ್ನೇ ನಡುಗಿಸುವಂತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 ತರುವಾಯ ಅವರೆಲ್ಲರೂ ಅವನನ್ನು ಹಿಂಬಾಲಿಸಿ ಕೊಳಲೂದುತ್ತಾ, ಬಹುಸಂತೋಷದಿಂದ ಜಯಘೋಷಮಾಡುತ್ತಾ ಹಿಂತಿರುಗಿ ಬಂದರು. ಅವರ ಕೂಗಿನಿಂದ ಭೂಮಿಯು ನಡುಗಿತೋ ಎಂಬಂತೆ ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

40 ತರುವಾಯ ಅವರೆಲ್ಲರು ಅವನನ್ನು ಹಿಂಬಾಲಿಸಿ, ಕೊಳಲೂದುತ್ತಾ ಹರ್ಷಾನಂದದಿಂದ ಆರ್ಭಟಿಸುತ್ತಾ, ಹಿಂದಿರುಗಿ ಬಂದರು. ಅವರ ಜಯಕಾರದ ಕೂಗು ಭೂಮಿಯನ್ನೇ ನಡುಗಿಸುವಂತಿತ್ತು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

40 ತರುವಾಯ ಅವರೆಲ್ಲರೂ ಅವನನ್ನು ಹಿಂಬಾಲಿಸಿ ಕೊಳಲೂದುತ್ತಾ ಬಹುಸಂತೋಷದಿಂದ ಆರ್ಭಟಿಸುತ್ತಾ ತಿರಿಗಿ ಬಂದರು. ಅವರ ಕೂಗಿನಿಂದ ಭೂವಿುಯು ಸೀಳಿಹೋಗುತ್ತದೋ ಎಂಬಂತೆ ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

40 ಇದಲ್ಲದೆ ಜನರೆಲ್ಲರೂ ಅವನನ್ನು ಹಿಂಬಾಲಿಸಿದರು. ಜನರು ಕೊಳಲು ಊದಿ ಮಹಾ ಆನಂದದಿಂದ ಸಂತೋಷಿಸಿದರು. ಅವರ ಶಬ್ದದಿಂದ ಭೂಮಿಯು ಕಂಪಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 1:40
13 ತಿಳಿವುಗಳ ಹೋಲಿಕೆ  

ಯೇಸು ಜೆರುಸಲೇಮಿಗೆ ಸಮೀಪಿಸಿ ಆಲಿವ್ ಮರಗಳ ಗುಡ್ಡದ ಬಳಿಗೆ ಬಂದನು. ಆತನನ್ನು ಹಿಂಬಾಲಿಸುತ್ತಿದ್ದ ಶಿಷ್ಯ ಸಮೂಹದಲ್ಲಿದ್ದವರೆಲ್ಲರೂ ಸಂತೋಷಪಡುತ್ತಾ ತಾವು ನೋಡಿದ ಎಲ್ಲಾ ಮಹತ್ಕಾರ್ಯಗಳಿಗಾಗಿ ದೇವರನ್ನು ಸ್ತುತಿಸಿದರು.


ಚೀಯೋನ್ ನಗರಿಯೇ, ಹರ್ಷಿಸು! ಜೆರುಸಲೇಮ್ ಜನರೇ, ಸಂತೋಷದಿಂದ ಆರ್ಭಟಿಸಿರಿ. ನಿಮ್ಮ ಅರಸನು ನಿಮ್ಮ ಬಳಿಗೆ ಬರುತ್ತಿದ್ದಾನೆ! ಆತನು ವಿಜಯಶಾಲಿಯಾದ ನೀತಿವಂತನಾಗಿದ್ದಾನೆ. ಆದರೆ ದೀನನಂತೆ ಕತ್ತೆಯ ಮೇಲೆ, ಹೌದು, ಕತ್ತೆಯ ಮರಿಯ ಮೇಲೆ ಸವಾರಿ ಮಾಡಿಕೊಂಡು ಬರುವನು.


ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೇ ನೀವು ಅಡ್ಡಬೀಳಬೇಕು. ಇದು ರಾಜಾಜ್ಞೆ. ತುತ್ತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ, ವಾಲಗ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ನೀವು ಬಂಗಾರದ ವಿಗ್ರಹವನ್ನು ಪೂಜಿಸಬೇಕು. ಅರಸನಾದ ನೆಬೂಕದ್ನೆಚ್ಚರನು ಈ ವಿಗ್ರಹವನ್ನು ನಿಲ್ಲಿಸಿದ್ದಾನೆ.


ಯೆಹೋವನು ಆಳುತ್ತಿರುವನು! ಭೂಮಿಯು ಸಂತೋಷಿಸಲಿ. ದೂರ ದೇಶಗಳೆಲ್ಲಾ ಹರ್ಷಿಸಲಿ.


ಜನರೆಲ್ಲರೂ ಬಹಳ ಹರ್ಷಗೊಂಡರು. ನಗರದಲ್ಲಿ ಸಮಾಧಾನವಿತ್ತು. ರಾಜನ ಅರಮನೆಯ ಹತ್ತಿರ ರಾಣಿಯಾದ ಅತಲ್ಯಳನ್ನು ಖಡ್ಗದಿಂದ ಕೊಂದಿದ್ದರು.


ರಾಜನು ಪದ್ಧತಿಯಂತೆ ಸ್ತಂಭದ ಬಳಿ ನಿಂತಿರುವುದನ್ನೂ ಜನರು ಮತ್ತು ನಾಯಕರು ರಾಜನಿಗಾಗಿ ತುತ್ತೂರಿ ಊದುತ್ತಿರುವುದನ್ನೂ ಜನರೆಲ್ಲರೂ ಬಹಳ ಸಂತೋಷದಿಂದಿರುವುದನ್ನೂ ಅವಳು ನೋಡಿ ದುಃಖದಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡು “ದ್ರೋಹ, ದ್ರೋಹ!” ಎಂದು ಕೂಗಿಕೊಂಡಳು.


ಜನರೆಲ್ಲ ಗಿಲ್ಗಾಲಿಗೆ ಹೋದರು. ಅಲ್ಲಿ ಯೆಹೋವನ ಸಮ್ಮುಖದಲ್ಲಿ ಜನರೆಲ್ಲ ಸೌಲನನ್ನು ರಾಜನನ್ನಾಗಿ ಮಾಡಿದರು. ಅವರೆಲ್ಲರು ಯೆಹೋವನಿಗೆ ಸಮಾಧಾನಯಜ್ಞಗಳನ್ನು ಅರ್ಪಿಸಿದರು. ಸೌಲನು ಮತ್ತು ಇಸ್ರೇಲರೆಲ್ಲಾ ಒಂದು ದೊಡ್ಡ ಉತ್ಸವವನ್ನೇ ಮಾಡಿದರು.


ಯಾಜಕನಾದ ಚಾದೋಕನು ಪವಿತ್ರಗುಡಾರದಿಂದ ಎಣ್ಣೆಯನ್ನು ತೆಗೆದುಕೊಂಡು ಬಂದನು. ಸೊಲೊಮೋನನು ರಾಜನೆಂದು ತೋರಿಸಲು ಅವನ ತಲೆಯ ಮೇಲೆ ಚಾದೋಕನು ಎಣ್ಣೆಯನ್ನು ಸುರಿದನು. ದಾವೀದನ ಜನರು ತುತ್ತೂರಿಯನ್ನು ಊದಿದರು. ಆಗ ಎಲ್ಲಾ ಜನರೂ, “ರಾಜನಾದ ಸೊಲೊಮೋನನು ಚಿರಂಜೀವಿಯಾಗಿರಲಿ” ಎಂದು ಆರ್ಭಟಿಸಿದರು.


ಆ ಸಮಯಕ್ಕೆ ಅದೋನೀಯನು ಮತ್ತು ಅವನೊಂದಿಗಿದ್ದ ಅತಿಥಿಗಳು ಊಟವನ್ನು ಮುಗಿಸುತ್ತಿದ್ದರು. ಅವರಿಗೆ ತುತ್ತೂರಿಯ ಶಬ್ದವು ಕೇಳಿಸಿತು. ಯೋವಾಬನು, “ಆ ಶಬ್ದವು ಏನು? ನಗರದಲ್ಲಿ ಏನು ನಡೆಯುತ್ತಿದೆ?” ಎಂದು ಕೇಳಿದನು.


ನಂತರ ಯಾಜಕನಾದ ಚಾದೋಕನು ಮತ್ತು ಪ್ರವಾದಿಯಾದ ನಾತಾನನು ಗೀಹೋನ್ ಬುಗ್ಗೆಯ ಹತ್ತಿರ ಸೊಲೊಮೋನನನ್ನು ಅಭಿಷೇಕಿಸಿದರು. ಅನಂತರ ಅವರು ನಗರಕ್ಕೆ ಹೋದರು. ಅವರನ್ನು ಜನರು ಹಿಂಬಾಲಿಸಿದರು. ಈಗ ನಗರದ ಜನರು ತುಂಬಾ ಸಂತೋಷದಿಂದ ಇದ್ದಾರೆ. ಆ ಶಬ್ದವನ್ನೇ ನೀವು ಕೇಳುತ್ತಿರುವುದು.


ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯು ಪಾಳೆಯಕ್ಕೆ ಬಂದಾಗ ಇಸ್ರೇಲರೆಲ್ಲರು ಆರ್ಭಟಿಸಿದರು. ಅವರ ಆರ್ಭಟವು ನೆಲವನ್ನು ನಡುಗಿಸಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು