Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 1:41 - ಪರಿಶುದ್ದ ಬೈಬಲ್‌

41 ಆ ಸಮಯಕ್ಕೆ ಅದೋನೀಯನು ಮತ್ತು ಅವನೊಂದಿಗಿದ್ದ ಅತಿಥಿಗಳು ಊಟವನ್ನು ಮುಗಿಸುತ್ತಿದ್ದರು. ಅವರಿಗೆ ತುತ್ತೂರಿಯ ಶಬ್ದವು ಕೇಳಿಸಿತು. ಯೋವಾಬನು, “ಆ ಶಬ್ದವು ಏನು? ನಗರದಲ್ಲಿ ಏನು ನಡೆಯುತ್ತಿದೆ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

41 ಅದೋನೀಯನು ಅವನ ಸಂಗಡ ಇದ್ದ ಅತಿಥಿಗಳೂ ಭೋಜನವನ್ನು ಮುಗಿಸುವಷ್ಟರಲ್ಲೇ ಅವರಿಗೆ ಈ ಕೂಗು ಕೇಳಿಸಿತು. ಯೋವಾಬನು ಕೊಂಬಿನ ಧ್ವನಿಯನ್ನು ಕೇಳಿದಾಗ, “ಪಟ್ಟಣದಲ್ಲಿ ಇಂಥ ಗದ್ದಲವೇಕೆ?” ಎಂದು ವಿಚಾರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

41 ಅದೋನೀಯನೂ ಅವನ ಸಂಗಡ ಇದ್ದ ಅತಿಥಿಗಳೂ ಭೋಜನವನ್ನು ಮುಗಿಸುವಷ್ಟರಲ್ಲೇ ಅವರಿಗೆ ಈ ಆರ್ಭಟ ಕೇಳಿಸಿತು. ಕೊಂಬಿನ ಧ್ವನಿ ಕೇಳಿದಾಗ ಯೋವಾಬನು, “ಪಟ್ಟಣದಲ್ಲಿ ಇಂಥ ಗದ್ದಲವೇಕೆ?” ಎಂದು ವಿಚಾರಿಸುತ್ತಿರುವಾಗಲೇ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

41 ಅದೋನೀಯನೂ ಅವನ ಸಂಗಡ ಇದ್ದ ಅತಿಥಿಗಳೂ ಭೋಜನವನ್ನು ತೀರಿಸುವಷ್ಟರಲ್ಲೇ ಅವರಿಗೆ ಈ ಕೂಗು ಕೇಳಿಸಿತು. ಯೋವಾಬನು ಕೊಂಬಿನ ಧ್ವನಿಯನ್ನು ಕೇಳಿದಾಗ - ಪಟ್ಟಣದಲ್ಲಿ ಇಂಥ ಗದ್ದಲವೇಕೆ ಎಂದು ವಿಚಾರಿಸುವಾಗಲೇ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

41 ಆಗ ಅದೋನೀಯನೂ, ಅವನ ಸಂಗಡ ಕರೆಹೊಂದಿದವರೂ ತಿಂದು, ತೀರಿಸಿದಾಗ ಅದನ್ನು ಕೇಳಿದರು. ಯೋವಾಬನು ತುತೂರಿಯ ಶಬ್ದವನ್ನು ಕೇಳಿದಾಗ, “ಪಟ್ಟಣದಲ್ಲಿ ಗದ್ದಲದ ಶಬ್ದವೇಕೆ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 1:41
13 ತಿಳಿವುಗಳ ಹೋಲಿಕೆ  

ಅವರು ಪೌಲನನ್ನು ಕೊಲ್ಲಲು ಪ್ರಯತ್ನಿಸುತ್ತಿದ್ದಾಗ ಇಡೀ ಪಟ್ಟಣದಲ್ಲೇ ಗಲಭೆಯುಂಟಾಗಿದೆ ಎಂಬ ಸುದ್ದಿಯು ಜೆರುಸಲೇಮಿನಲ್ಲಿದ್ದ ರೋಮ್ ಸೇನಾಧಿಪತಿಗೆ ತಿಳಿಯಿತು.


ಮಹಾಯಾಜಕರು ಮತ್ತು ಧರ್ಮೋಪದೇಶಕರು ಇದನ್ನು ನೋಡಿದರು. ಯೇಸು ಮಹತ್ಕಾರ್ಯಗಳನ್ನು ಮಾಡುತ್ತಿರುವುದನ್ನು ಮತ್ತು ದೇವಾಲಯದಲ್ಲಿ ಚಿಕ್ಕಮಕ್ಕಳು ಯೇಸುವನ್ನು ಕೊಂಡಾಡುತ್ತಿರುವುದನ್ನು ಅವರು ಗಮನಿಸಿದರು. ಚಿಕ್ಕ ಮಕ್ಕಳು, “ದಾವೀದನ ಕುಮಾರನಿಗೆ ಸ್ತೋತ್ರವಾಗಲಿ” ಎಂದು ಕೂಗುತ್ತಿದ್ದರು. ಇವುಗಳಿಂದಾಗಿ ಯಾಜಕರು ಮತ್ತು ಧರ್ಮೋಪದೇಶಕರು ಕೋಪಗೊಂಡರು.


ಒಬ್ಬನು ನಗುತ್ತಿರುವಾಗಲೂ ವ್ಯಸನದಿಂದಿರಲು ಸಾಧ್ಯ. ಅಂತೆಯೇ ಆನಂದವೂ ದುಃಖದಲ್ಲಿ ಅಂತ್ಯವಾಗಬಹುದು.


ಇಸ್ರೇಲರ ಗದ್ದಲವನ್ನೂ ಕೂಗಾಟವನ್ನೂ ಯೆಹೋಶುವನು ಕೇಳಿ ಮೋಶೆಗೆ, “ಪಾಳೆಯದ ಕಡೆಯಿಂದ ಯುದ್ಧದ ಧ್ವನಿ ಕೇಳಿಬರುತ್ತಿದೆ” ಅಂದನು.


ಜನರೆಲ್ಲರೂ ಸೊಲೊಮೋನನನ್ನು ಹಿಂಬಾಲಿಸುತ್ತಾ ನಗರಕ್ಕೆ ಬಂದರು. ಅವರು ಕೊಳಲುಗಳನ್ನು ಊದುತ್ತಾ ಸಂತಸದಿಂದ ಕೂಗಾಡುತ್ತಾ ಬಂದರು. ಅವರು ಮಾಡಿದ ಶಬ್ದವು ಭೂಮಿಯನ್ನೇ ನಡುಗಿಸುವಂತಿತ್ತು.


ಯೋವಾಬನು ಮಾತನಾಡುತ್ತಿದ್ದಂತೆ, ಯಾಜಕನಾದ ಎಬ್ಯಾತಾರನ ಮಗನಾದ ಯೋನಾತಾನನು ಅಲ್ಲಿಗೆ ಬಂದನು. ಅದೋನೀಯನು, “ಇಲ್ಲಿಗೆ ಬಾ! ನೀನು ಒಬ್ಬ ಒಳ್ಳೆಯ ಮನುಷ್ಯ. ಆದ್ದರಿಂದ ನೀನು ನನಗೆ ಶುಭ ಸಮಾಚಾರವನ್ನೇ ತಂದಿರುವೆ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು