1 ಅರಸುಗಳು 1:45 - ಪರಿಶುದ್ದ ಬೈಬಲ್45 ನಂತರ ಯಾಜಕನಾದ ಚಾದೋಕನು ಮತ್ತು ಪ್ರವಾದಿಯಾದ ನಾತಾನನು ಗೀಹೋನ್ ಬುಗ್ಗೆಯ ಹತ್ತಿರ ಸೊಲೊಮೋನನನ್ನು ಅಭಿಷೇಕಿಸಿದರು. ಅನಂತರ ಅವರು ನಗರಕ್ಕೆ ಹೋದರು. ಅವರನ್ನು ಜನರು ಹಿಂಬಾಲಿಸಿದರು. ಈಗ ನಗರದ ಜನರು ತುಂಬಾ ಸಂತೋಷದಿಂದ ಇದ್ದಾರೆ. ಆ ಶಬ್ದವನ್ನೇ ನೀವು ಕೇಳುತ್ತಿರುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201945 ಯಾಜಕನಾದ ಚಾದೋಕನೂ, ಪ್ರವಾದಿಯಾದ ನಾತಾನನೂ ಗೀಹೋನಿನ ಬಳಿಯಲ್ಲಿ ಅವನಿಗೆ ರಾಜ್ಯಾಭಿಷೇಕ ಮಾಡಿದರು. ಅಲ್ಲಿಂದ ಅವರು ಮಹಾ ಸಂತೋಷದಿಂದ ಜಯಘೋಷ ಮಾಡುತ್ತಾ ಪಟ್ಟಣಕ್ಕೆ ಬಂದಿದ್ದಾರೆ. ಇದರಿಂದಲೇ ಪಟ್ಟಣದಲ್ಲಿ ಗದ್ದಲವುಂಟಾಗಿದೆ. ನೀವು ಕೇಳಿದ ಶಬ್ದವು ಇದೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)45 ಯಾಜಕ ಚಾದೋಕನೂ ಪ್ರವಾದಿ ನಾತಾನನೂ ಗೀಹೋನಿನ ಬಳಿಯಲ್ಲಿ ಅವನಿಗೆ ರಾಜಾಭಿಷೇಕ ಮಾಡಿದ್ದಾರೆ. ಅಲ್ಲಿಂದ ಅವರು ಹರ್ಷಾನಂದದಿಂದ ಆರ್ಭಟಿಸುತ್ತಾ ಪಟ್ಟಣಕ್ಕೆ ಬಂದಿದ್ದಾರೆ. ಇದರಿಂದಲೇ ಪಟ್ಟಣದಲ್ಲಿ ಗದ್ದಲವುಂಟಾಗಿದೆ; ನೀವು ಕೇಳಿದ ಆರ್ಭಟವು ಇದೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)45 ಯಾಜಕನಾದ ಚಾದೋಕನೂ ಪ್ರವಾದಿಯಾದ ನಾತಾನನೂ ಗೀಹೋನಿನ ಬಳಿಯಲ್ಲಿ ಅವನಿಗೆ ರಾಜ್ಯಾಭಿಷೇಕಮಾಡಿದರು. ಅಲ್ಲಿಂದ ಅವರು ಮಹಾಸಂತೋಷದಿಂದ ಆರ್ಭಟಿಸುತ್ತಾ ಪಟ್ಟಣಕ್ಕೆ ಬಂದಿದ್ದಾರೆ. ಇದರಿಂದಲೇ ಪಟ್ಟಣದಲ್ಲಿ ಗದ್ದಲವುಂಟಾಗಿದೆ; ನೀವು ಕೇಳಿದ ಆರ್ಭಟವು ಇದೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ45 ಯಾಜಕನಾದ ಚಾದೋಕನೂ, ಪ್ರವಾದಿಯಾದ ನಾತಾನನೂ ಸೊಲೊಮೋನನನ್ನು ಗೀಹೋನಿನಲ್ಲಿ ಅರಸನಾಗಿರಲು ಅಭಿಷೇಕಿಸಿದ್ದಾರೆ. ಅವರು ಸಂತೋಷಪಡುತ್ತಾ ಅಲ್ಲಿಂದ ಬಂದ ಕಾರಣ ಪಟ್ಟಣವು ಗದ್ದಲವಾಯಿತು. ನೀವು ಕೇಳುವ ಆರ್ಭಟವು ಇದೇ. ಅಧ್ಯಾಯವನ್ನು ನೋಡಿ |