Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 1:46 - ಪರಿಶುದ್ದ ಬೈಬಲ್‌

46-47 ಸೊಲೊಮೋನನು ಈಗ ರಾಜನ ಸಿಂಹಾಸನದ ಮೇಲೆ ಕುಳಿತಿದ್ದಾನೆ. ರಾಜನಾದ ದಾವೀದನು ಒಳ್ಳೆಯ ಕಾರ್ಯಮಾಡಿದನೆಂದು ಹೇಳಲು ರಾಜನ ಸೇವಕರೆಲ್ಲರೂ ಬಂದಿದ್ದಾರೆ. ‘ನಿನ್ನ ದೇವರು ಸೊಲೊಮೋನನನ್ನು ನಿನಗಿಂತಲೂ ಪ್ರಖ್ಯಾತನನ್ನಾಗಿ ಮಾಡಲಿ. ದೇವರು ಸೊಲೊಮೋನನ ರಾಜ್ಯವನ್ನು ನಿನ್ನ ರಾಜ್ಯಕ್ಕಿಂತಲೂ ಹೆಚ್ಚು ಬಲಿಷ್ಠಗೊಳಿಸಲಿ. ಅವನು ನಿನಗಿಂತಲೂ ಉತ್ತಮನಾಗಲಿ!’ ಎಂದು ಅವರು ಹೇಳುತ್ತಿದ್ದಾರೆ. ರಾಜನಾದ ದಾವೀದನೂ ಅಲ್ಲಿದ್ದನು. ಅವನು ತನ್ನ ಹಾಸಿಗೆಯಲ್ಲಿ ತಲೆಬಾಗಿಸಿಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

46 ಇದಲ್ಲದೆ ಸೊಲೊಮೋನನು ರಾಜಸಿಂಹಾಸನದ ಮೇಲೆ ಕುಳಿತುಕೊಂಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

46 ಇದಲ್ಲದೆ, ಸೊಲೊಮೋನನು ರಾಜಸಿಂಹಾಸನದ ಮೇಲೆ ಕುಳಿತುಕೊಂಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

46 ಇದಲ್ಲದೆ ಸೊಲೊಮೋನನು ರಾಜಸಿಂಹಾಸನದ ಮೇಲೆ ಕೂತುಕೊಂಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

46 ಇದಲ್ಲದೆ ಸೊಲೊಮೋನನು ರಾಜ್ಯ ಸಿಂಹಾಸನದ ಮೇಲೆ ಕುಳಿತುಕೊಂಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 1:46
6 ತಿಳಿವುಗಳ ಹೋಲಿಕೆ  

ಆ ಬಳಿಕ ಸೊಲೊಮೋನನು ತನ್ನ ತಂದೆಯ ಬದಲಾಗಿ ರಾಜನಾಗಿ ಪ್ರಭುವಿನ ಸಿಂಹಾಸನದ ಮೇಲೆ ಕುಳಿತುಕೊಂಡನು. ಸೊಲೊಮೋನನನ್ನು ಎಲ್ಲಾ ಇಸ್ರೇಲರು ಗೌರವಿಸಿದರು ಮತ್ತು ವಿಧೇಯರಾದರು.


ಯೆಹೋವನು ದಾವೀದನಿಗೆ ಸ್ಥಿರವಾದ ವಾಗ್ದಾನವನ್ನು ಮಾಡಿದನು. ಆತನು ಅದನ್ನು ಬದಲಾಯಿಸುವುದೇ ಇಲ್ಲ. “ನಿನ್ನ ಸಂತಾನದವರನ್ನು ನಿನ್ನ ಸಿಂಹಾಸನದ ಮೇಲೆ ಕುಳ್ಳಿರಿಸುವೆನು.


ನಾನು ಅನೇಕ ಅರಸರನ್ನೂ ದೇಶಗಳನ್ನೂ ಕೆಡವಿಹಾಕುವೆನು; ಆ ಅನ್ಯ ಜನರ ಬಲಿಷ್ಠ ಸಾಮ್ರಾಜ್ಯಗಳನ್ನು ನಾಶಮಾಡುವೆನು. ಅವರ ರಥಗಳನ್ನೂ ರಾಹುತರನ್ನೂ ನಾಶಮಾಡುವೆನು. ಅವರ ಯುದ್ಧದ ಕುದುರೆಗಳನ್ನೂ ಸವಾರರನ್ನೂ ಸೋಲಿಸುವೆನು. ಆ ಸೈನ್ಯಗಳವರು ಈಗ ಸ್ನೇಹಿತರಾಗಿದ್ದರೂ ಒಬ್ಬರಿಗೊಬ್ಬರು ವೈರಿಗಳಾಗಿ ಒಬ್ಬರನ್ನೊಬ್ಬರು ಖಡ್ಗಗಳಿಂದ ಕೊಲ್ಲುವರು.”


ರಾಜನಾದ ದಾವೀದನ ಬಳಿಗೆ ಹೋಗಿ ಅವನಿಗೆ, ‘ನನ್ನ ಒಡೆಯನಾದ ರಾಜನೇ, ನನ್ನ ಮಗನಾದ ಸೊಲೊಮೋನನು ನಿನ್ನ ನಂತರದ ರಾಜನೆಂದು ನೀನು ನನಗೆ ವಾಗ್ದಾನ ಮಾಡಿದ್ದೆ. ಹೀಗಿರುವಾಗ ಅದೋನೀಯನು ನೂತನ ರಾಜನಾದದ್ದು ಏಕೆ?’ ಎಂದು ಹೇಳು.


ಅವನ ರಾಜ್ಯದ ರಾಜಧಾನಿ ನಗರವಾಗಿದ್ದ ಶೂಷನ್‌ನಲ್ಲಿಯ ಸಿಂಹಾಸನದಿಂದ ಅರಸನು ರಾಜ್ಯವಾಳುತ್ತಿದ್ದನು.


ಯೆಹೋವನು ನನ್ನನ್ನು ಇಸ್ರೇಲಿನ ರಾಜನನ್ನಾಗಿ ಮಾಡಿದನು. ನನ್ನ ತಂದೆಯಾದ ದಾವೀದನ ಸಿಂಹಾಸನವನ್ನು ಆತನು ನನಗೆ ದಯಪಾಲಿಸಿದನು. ಯೆಹೋವನು ತನ್ನ ವಾಗ್ದಾನದಂತೆ, ನನಗೆ ಮತ್ತು ನನ್ನ ವಂಶಿಕರಿಗೆ ರಾಜ್ಯಾಧಿಕಾರವನ್ನು ನೀಡಿದನು. ಅದೋನೀಯನು ಈ ದಿನವೇ ಸಾಯಬೇಕು ಎಂದು ನಾನು ಈ ಎಲ್ಲಾ ಕಾರ್ಯಗಳನ್ನು ನೆರವೇರಿಸಿದ ದೇವರ ಸನ್ನಿಧಿಯಲ್ಲಿ ಪ್ರಮಾಣ ಮಾಡುತ್ತೇನೆ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು