1 ಅರಸುಗಳು 1:5 - ಪರಿಶುದ್ದ ಬೈಬಲ್5 ರಾಜನಾದ ದಾವೀದನ ಮಗನಾದ ಅದೋನೀಯನು ಬಹಳ ಗರ್ವಿಷ್ಠನಾದನು. ಅವನು, “ನಾನೇ ರಾಜನಾಗುತ್ತೇನೆ” ಎಂದು ಹೇಳಿಕೊಂಡನು. (ಅದೋನೀಯನ ತಾಯಿಯ ಹೆಸರು ಹಗ್ಗೀತ.) ಅದೋನೀಯನು ರಾಜನಾಗಬೇಕೆಂಬುದಾಗಿ ಬಹಳ ಆಸೆಪಟ್ಟನು. ಆದ್ದರಿಂದ ಅವನು ತನಗಾಗಿ ಒಂದು ರಥವನ್ನು, ಕುದುರೆಗಳನ್ನು ಮತ್ತು ರಥದ ಮುಂದೆ ಓಡುವಂತಹ ಐವತ್ತು ಜನರನ್ನು ಪಡೆದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಆನಂತರ ಹಗ್ಗೀತಳ ಮಗನಾದ ಅದೋನೀಯನು, “ನಾನೇ ಅರಸನಾಗತಕ್ಕವನು” ಎಂಬುದಾಗಿ ಹೇಳಿ ಉಬ್ಬಿಕೊಂಡು, ತನಗೋಸ್ಕರ ರಥರಥಾಶ್ವಗಳನ್ನೂ, ಮುಂದೆ ಓಡುವುದಕ್ಕಾಗಿ ಐವತ್ತು ಸಿಪಾಯಿಗಳನ್ನೂ ನೇಮಿಸಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5-6 ಈಗಾಗಲೇ ಅಬ್ಷಾಲೋಮನು ಸತ್ತುಹೋಗಿದ್ದನು. ದಾವೀದನಿಗೆ ಹಗ್ಗೀತಳಲ್ಲಿ ಹುಟ್ಟಿದ ಅದೋನಿಯನೇ ಜೀವದಿಂದ ಉಳಿದವರಲ್ಲಿ ಹಿರಿಯ ಮಗ. ಅವನು ಬಹಳ ಸುಂದರನು. ದಾವೀದನು ಯಾವುದೇ ವಿಷಯದಲ್ಲಿ ಅವನನ್ನು ಎಂದೂ ಗದರಿಸಿರಲಿಲ್ಲ. ತಾನೇ ರಾಜನಾಗಬೇಕೆಂಬ ಆಕಾಂಕ್ಷೆ ಅವನದು. ಎಂದೇ ತನಗೋಸ್ಕರ ರಥ, ರಥಾಶ್ವಗಳನ್ನು ಹಾಗು ಐವತ್ತು ಮಂದಿ ಬೆಂಗಾವಲಿಗರನ್ನು ನೇಮಿಸಿಕೊಂಡಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಹಗ್ಗೀತಳ ಮಗನಾದ ಅದೋನೀಯನು ನಾನೇ ಅರಸನಾಗತಕ್ಕವನು ಎಂಬದಾಗಿ ಉಬ್ಬಿಕೊಂಡು ತನಗೋಸ್ಕರ ರಥರಥಾಶ್ವಗಳನ್ನೂ ಮುಂದೆ ಓಡುವದಕ್ಕಾಗಿ ಐವತ್ತು ಮಂದಿ ಸಿಪಾಯಿಗಳನ್ನೂ ಇಟ್ಟುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಆಗ ಹಗ್ಗೀತಳ ಮಗನಾದ ಅದೋನೀಯನು ತನ್ನನ್ನು ಹೆಚ್ಚಿಸಿಕೊಂಡು, “ನಾನು ಅರಸನಾಗಿರಬೇಕು,” ಎಂದುಕೊಂಡು, ತನಗೋಸ್ಕರ ರಥಗಳನ್ನೂ, ಸಾರಥಿಯರನ್ನೂ, ತನ್ನ ಮುಂದೆ ಓಡುವುದಕ್ಕೆ ಐವತ್ತು ಮಂದಿ ಪುರುಷರನ್ನೂ ಸಿದ್ಧಮಾಡಿದನು. ಅಧ್ಯಾಯವನ್ನು ನೋಡಿ |