52 ಆದ್ದರಿಂದ ಸೊಲೊಮೋನನು, “ಅದೋನೀಯನು ತಾನು ಒಳ್ಳೆಯ ಮನುಷ್ಯನೆಂದು ನಿರೂಪಿಸಿದರೆ ಅವನ ತಲೆಯ ಒಂದು ಕೂದಲಿಗೂ ತೊಂದರೆಯಾಗುವುದಿಲ್ಲವೆಂದು ನಾನು ಪ್ರಮಾಣ ಮಾಡುತ್ತೇನೆ. ಆದರೆ ಅವನೇನಾದರೂ ಕೇಡನ್ನು ಮಾಡಿದರೆ ಸಾಯುವನು” ಎಂದು ಹೇಳಿದನು.
52 ಅವನು, “ಅದೋನೀಯನು ಯೋಗ್ಯತೆಯುಳ್ಳವನಾಗಿ ನಡೆಯುವುದಾದರೆ ಅವನ ಕೂದಲುಗಳಲ್ಲಿ ಒಂದನ್ನೂ ನೆಲಕ್ಕೆ ಬೀಳಗೊಡಿಸುವುದಿಲ್ಲ. ಆದರೆ ಅವನಲ್ಲಿ ಕೆಟ್ಟತನವು ಕಂಡುಬರುವುದಾದರೆ ಅವನು ಸಾಯುವನು” ಎಂದು ಹೇಳಿ ಆಳುಗಳನ್ನು ಕಳುಹಿಸಿ ಅವನನ್ನು ಯಜ್ಞವೇದಿಯ ಬಳಿಯಿಂದ ಕರೆಯಿಸಿದನು.
52 ಆಗ ಸೊಲೊಮೋನನು, “ಅದೋನೀಯನು ಸತ್ಪುರುಷನಾಗಿ ನಡೆಯುವುದಾದರೆ ಅವನ ಕೂದಲುಗಳಲ್ಲಿ ಒಂದನ್ನೂ ನೆಲಕ್ಕೆ ಬೀಳಗೊಡಿಸುವುದಿಲ್ಲ; ಆದರೆ ಅವನಲ್ಲಿ ಕೆಟ್ಟತನ ಕಂಡುಬರುವುದಾದರೆ, ಅವನು ಖಂಡಿತವಾಗಿ ಸಾಯುವನು,” ಎಂದು ಹೇಳಿದನು.
ಆದರೆ ಸೈನಿಕರು ಸೌಲನಿಗೆ, “ಈ ದಿನ ಇಸ್ರೇಲರನ್ನು ಮುನ್ನಡೆಸಿ ಮಹಾವಿಜಯವನ್ನು ಉಂಟುಮಾಡಿದ ಯೋನಾತಾನನು ಸಾಯಬೇಕೋ? ಇಲ್ಲ! ಜೀವಸ್ವರೂಪನಾದ ಯೆಹೋವನಾಣೆ, ಯೋನಾತಾನನ ತಲೆಕೂದಲುಗಳಲ್ಲಿ ಒಂದಾದರೂ ನೆಲಕ್ಕೆ ಬೀಳಲು ನಾವು ಬಿಡುವುದಿಲ್ಲ. ಇಂದು ಫಿಲಿಷ್ಟಿಯರ ವಿರುದ್ಧ ಹೋರಾಡಲು ದೇವರು ಯೋನಾತಾನನಿಗೆ ಸಹಾಯಮಾಡಿದ್ದಾನೆ” ಎಂದು ಹೇಳಿದರು. ಹೀಗೆ ಜನರು ಯೋನಾತಾನನನ್ನು ರಕ್ಷಿಸಿದರು. ಅವನನ್ನು ಸಾಯಿಸಲಿಲ್ಲ.
ಆ ಸ್ತ್ರೀಯು, “ಅವರು ನನಗೆ ತೊಂದರೆ ಕೊಡದಂತೆ ನೀನು ನೋಡಿಕೊಳ್ಳುವುದಾಗಿ ನಿನ್ನ ದೇವರಾದ ಯೆಹೋವನ ಮೇಲೆ ದಯವಿಟ್ಟು ಪ್ರಮಾಣ ಮಾಡು. ಆಗ ಕೊಲೆಗಾರರನ್ನು ದಂಡಿಸಲು ಇಚ್ಛಿಸುವ ಈ ಜನರು, ನನ್ನ ಮಗನನ್ನು ದಂಡಿಸುವುದಿಲ್ಲ” ಎಂದು ಹೇಳಿದಳು. ದಾವೀದನು, “ಯೆಹೋವನಾಣೆ, ನಿನ್ನ ಮಗನನ್ನು ಯಾವ ವ್ಯಕ್ತಿಯೂ ತೊಂದರೆಗೊಳಿಸುವುದಿಲ್ಲ. ನಿನ್ನ ಮಗನ ತಲೆಯ ಮೇಲಿನ ಕೂದಲುಗಳಲ್ಲಿ ಒಂದಾದರೂ ನೆಲಕ್ಕೆ ಬೀಳುವುದಿಲ್ಲ” ಎಂದನು.
ಈಗ ನೀವು ಸ್ವಲ್ಪವಾದರೂ ತಿನ್ನುವಂತೆ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ನೀವು ಜೀವಂತವಾಗಿ ಉಳಿಯಬೇಕಾದರೆ ನಿಮಗೆ ಊಟ ಅವಶ್ಯಕವಾಗಿದೆ. ನಿಮ್ಮಲ್ಲಿರುವ ಯಾರೂ ನಿಮ್ಮ ತಲೆಕೂದಲುಗಳಲ್ಲಿ ಒಂದನ್ನಾದರೂ ಕಳೆದುಕೊಳ್ಳುವುದಿಲ್ಲ” ಎಂದು ಹೇಳಿದನು.
ಆಗ ಯಾರೋ ಒಬ್ಬರು ಸೊಲೊಮೋನನಿಗೆ, “ಅದೋನೀಯನು ನಿನಗೆ ಬಹಳವಾಗಿ ಹೆದರಿಕೊಂಡು ಪವಿತ್ರಗುಡಾರದ ಯಜ್ಞವೇದಿಕೆಯ ಬಳಿಗೆ ಹೋಗಿ ಯಜ್ಞವೇದಿಕೆಯ ಕೊಂಬುಗಳನ್ನು ಬಿಡದೆ ಹಿಡಿದುಕೊಂಡೇ ಇದ್ದಾನೆ, ‘ನನ್ನನ್ನು ಕೊಲ್ಲುವುದಿಲ್ಲವೆಂದು ಪ್ರಮಾಣ ಮಾಡುವಂತೆ ರಾಜನಾದ ಸೊಲೊಮೋನನಿಗೆ ತಿಳಿಸಿ’ ಎಂಬುದಾಗಿ ಅದೋನೀಯನು ಕೇಳಿಕೊಳ್ಳುತ್ತಿದ್ದಾನೆ” ಎಂದು ಹೇಳಿದನು.
ರಾಜನಾದ ಸೊಲೊಮೋನನು ಅದೋನೀಯನನ್ನು ಕರೆತರಲು ಕೆಲವು ಜನರನ್ನು ಕಳುಹಿಸಿದನು. ಅವರು ಅದೋನೀಯನನ್ನು ರಾಜನಾದ ಸೊಲೊಮೋನನ ಬಳಿಗೆ ಕರೆದುತಂದರು. ಅದೋನೀಯನು ರಾಜನಾದ ಸೊಲೊಮೋನನ ಬಳಿಗೆ ಬಂದು, ಸಾಷ್ಟಾಂಗನಮಸ್ಕಾರ ಮಾಡಿದನು. ಸೊಲೊಮೋನನು ಅವನಿಗೆ, “ಮನೆಗೆ ಹೋಗು” ಎಂದನು.