1 ಅರಸುಗಳು 1:9 - ಪರಿಶುದ್ದ ಬೈಬಲ್9 ಒಂದು ದಿನ, ಅದೋನೀಯನು ಎನ್‌ರೋಗೆಲಿನ ಹತ್ತಿರದ ಚೋಹೆಲೆತ್ ಎಂಬ ಬಂಡೆಯ ಬಳಿ ಕೆಲವು ಕುರಿಗಳನ್ನು, ಹಸುಗಳನ್ನು ಮತ್ತು ಕೊಬ್ಬಿದ ಕರುಗಳನ್ನು ಸಮಾಧಾನಯಜ್ಞವಾಗಿ ಅರ್ಪಿಸಿದನು. ಅದೋನೀಯನು ತನ್ನ ಸಹೋದರರನ್ನು (ರಾಜನ ಇತರ ಗಂಡುಮಕ್ಕಳನ್ನು) ಮತ್ತು ಯೆಹೂದದ ಅಧಿಕಾರಿಗಳನ್ನು ಆಹ್ವಾನಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಅದೋನೀಯನು ರೋಗೆಲ್ ಬುಗ್ಗೆಯ ಬಳಿಯಲ್ಲಿರುವ ಚೋಹೆಲೆತ್ ಬಂಡೆಯ ಮೇಲೆ ಕುರಿ, ಹೋರಿ ಮೊದಲಾದ ಕೊಬ್ಬಿದ ಪಶುಗಳನ್ನು ಯಜ್ಞಮಾಡಿಸಿ, ರಾಜಪುತ್ರರಾದ ತನ್ನ ಉಳಿದ ಸಹೋದರರನ್ನೂ ಅರಸನ ಅಧಿಕಾರಿಗಳಾದ ಎಲ್ಲಾ ಯೆಹೂದ್ಯರನ್ನೂ ಔತಣಕ್ಕೆ ಆಮಂತ್ರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಒಮ್ಮೆ ಅದೋನೀಯನು ರೋಗೆಲ್ ಬುಗ್ಗೆಯ ಬಳಿಯಿರುವ ಜೋಹೆಲೆತ್ ಬಂಡೆಯ ಮೇಲೆ ಕುರಿ, ಹೋರಿ ಮೊದಲಾದ ಕೊಬ್ಬಿದ ಪಶುಗಳನ್ನು ಬಲಿದಾನ ಮಾಡಿಸಿದನು; ಅರಸುಕುಮಾರರಾದ ತನ್ನ ಸಹೋದರರನ್ನು ಹಾಗು ಆಸ್ಥಾನದ ಎಲ್ಲ ಯೆಹೂದ್ಯ ಅಧಿಕಾರಿಗಳನ್ನು ಔತಣಕ್ಕೆ ಆಮಂತ್ರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಅದೋನೀಯನು ರೋಗೆಲ್ ಬುಗ್ಗೆಯ ಬಳಿಯಲ್ಲಿರುವ ಚೋಹೆಲೆತ್ ಬಂಡೆಯ ಮೇಲೆ ಕುರಿ, ಹೋರಿ ಮೊದಲಾದ ಕೊಬ್ಬಿದ ಪಶುಗಳನ್ನು ಯಜ್ಞಮಾಡಿಸಿ ಪ್ರವಾದಿಯಾದ ನಾತಾನ್, ಬೆನಾಯ, ಯುದ್ಧಭಟರು, ತಮ್ಮನಾದ ಸೊಲೊಮೋನ್ ಇವರನ್ನು ಬಿಟ್ಟು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಅದೋನೀಯನು ಏನ್ ರೋಗೆಲಿನ ಬಳಿಯಲ್ಲಿರುವ ಚೋಹೆಲೆತ್ ಎಂಬ ಕಲ್ಲಿನ ಹತ್ತಿರ ಕುರಿಗಳನ್ನೂ, ಎತ್ತುಗಳನ್ನೂ, ಕೊಬ್ಬಿದ ಪಶುಗಳನ್ನೂ ಕೊಲ್ಲಿಸಿ, ಅರಸನ ಮಕ್ಕಳಾದ ತನ್ನ ಸಮಸ್ತ ಸಹೋದರರನ್ನೂ, ಅರಸನ ಸೇವಕರಾದ ಸಮಸ್ತ ಯೆಹೂದದ ಜನರನ್ನೂ ಔತಣಕ್ಕೆ ಕರೆದನು. ಅಧ್ಯಾಯವನ್ನು ನೋಡಿ |