1 ಅರಸುಗಳು 10:10 - ಪರಿಶುದ್ದ ಬೈಬಲ್10 ನಂತರ ಶೆಬದ ರಾಣಿಯು ರಾಜನಿಗೆ ನಾಲ್ಕು ಸಾವಿರದ ಎಂಭತ್ತು ಕಿಲೋಗ್ರಾಂ ಬಂಗಾರವನ್ನು ಕೊಟ್ಟಳು. ಅವಳು ಅವನಿಗೆ ಅನೇಕ ಸಾಂಬಾರ ಪದಾರ್ಥಗಳನ್ನು ಮತ್ತು ರತ್ನಗಳನ್ನು ಕೊಟ್ಟಳು. ಹಿಂದೆಂದೂ ಯಾರೂ ಇಸ್ರೇಲಿಗೆ ತೆಗೆದುಕೊಂಡು ಬಂದಿಲ್ಲದಷ್ಟು ಸಾಂಬಾರ ಪದಾರ್ಥಗಳನ್ನು ಶೆಬದ ರಾಣಿಯು ಸೊಲೊಮೋನನಿಗೆ ಕೊಟ್ಟಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಆಕೆಯು ಅರಸನಿಗೆ ನೂರಿಪ್ಪತ್ತು ತಲಾಂತು ಬಂಗಾರವನ್ನೂ, ಅಪರಿಮಿತ ಸುಗಂಧದ್ರವ್ಯವನ್ನೂ ಮತ್ತು ರತ್ನಗಳನ್ನೂ ಕೊಟ್ಟಳು. ಶೆಬೆದ ರಾಣಿಯು ಅರಸನಾದ ಸೊಲೊಮೋನನಿಗೆ ಕೊಟ್ಟಷ್ಟು ಸುಗಂಧದ್ರವ್ಯವನ್ನು ಅವನಿಗೆ ಪುನಃ ಯಾರು ಕೊಡಲಿಲ್ಲ. ಬರಲೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಆಕೆ ಅರಸನಿಗೆ ನಾಲ್ಕು ಸಾವಿರ ಕಿಲೋಗ್ರಾಂಗೂ ಹೆಚ್ಚು ಬಂಗಾರವನ್ನು, ಅಪರಿಮಿತ ಸುಗಂಧದ್ರವ್ಯವನ್ನು ಹಾಗು ರತ್ನಗಳನ್ನು ಕೊಟ್ಟಳು. ಶೆಬದ ರಾಣಿ ಅರಸ ಸೊಲೊಮೋನನಿಗೆ ಕೊಟ್ಟಷ್ಟು ಸುಗಂಧದ್ರವ್ಯವನ್ನು ಬೇರೆ ಯಾರೂ ಈ ನಾಡಿಗೆ ಕೊಟ್ಟಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಆಕೆಯು ಅರಸನಿಗೆ ನೂರಿಪ್ಪತ್ತು ತಲಾಂತು ಬಂಗಾರವನ್ನೂ ಅಪರಿವಿುತ ಸುಗಂಧದ್ರವ್ಯವನ್ನೂ ರತ್ನಗಳನ್ನೂ ಕೊಟ್ಟಳು. ಶೆಬದ ರಾಣಿಯು ಅರಸನಾದ ಸೊಲೊಮೋನನಿಗೆ ಕೊಟ್ಟಷ್ಟು ಸುಗಂಧದ್ರವ್ಯವು ದೇಶಕ್ಕೆ ತಿರಿಗಿ ಬರಲೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಅವಳು ಅರಸನಿಗೆ ನಾಲ್ಕು ಸಾವಿರ ಕಿಲೋಗ್ರಾಂ ತೂಕ ಬಂಗಾರವನ್ನೂ, ಬಹು ಸಮೃದ್ಧಿಯಾದ ಸುಗಂಧದ್ರವ್ಯಗಳನ್ನೂ, ಅಮೂಲ್ಯವಾದ ರತ್ನಗಳನ್ನೂ ಕೊಟ್ಟಳು. ಶೆಬದ ರಾಣಿಯು ಅರಸನಾದ ಸೊಲೊಮೋನನಿಗೆ ಕೊಟ್ಟ ಅಪರಿಮಿತವಾದ ಸುಗಂಧದ್ರವ್ಯಗಳ ಹಾಗೆ ಬೇರೆ ಯಾರೂ ಕೊಟ್ಟಿರಲಿಲ್ಲ. ಅಧ್ಯಾಯವನ್ನು ನೋಡಿ |