Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 10:11 - ಪರಿಶುದ್ದ ಬೈಬಲ್‌

11 ಹೀರಾಮನ ಹಡಗುಗಳು ಓಫೀರಿನಿಂದ ಬಂಗಾರವನ್ನು ತೆಗೆದುಕೊಂಡು ಬಂದವು. ಆ ಹಡಗುಗಳು ಮರಗಳನ್ನು ಮತ್ತು ರತ್ನಗಳನ್ನು ರಾಶಿರಾಶಿಯಾಗಿ ತಂದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಹೀರಾಮನ ಹಡಗುಗಳು ಓಫೀರ್ ದೇಶದಿಂದ ಬಂಗಾರದ ಹೊರತಾಗಿ ಸುಗಂಧದ ಮರವನ್ನೂ ಮತ್ತು ರತ್ನಗಳನ್ನೂ ರಾಶಿ ರಾಶಿಯಾಗಿ ತಂದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಹೀರಾಮನ ಹಡಗುಗಳು ಓಫೀರ್ ದೇಶದಿಂದ ಬಂಗಾರ ಮಾತ್ರವಲ್ಲ ಸುಗಂಧದ ಮರವನ್ನೂ ರತ್ನಗಳನ್ನೂ ರಾಶಿರಾಶಿಯಾಗಿ ತಂದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಹೀರಾಮನ ಹಡಗುಗಳು ಓಫೀರ್‍ದೇಶದಿಂದ ಬಂಗಾರದ ಹೊರತಾಗಿ ಸುಗಂಧದ ಮರವನ್ನೂ ರತ್ನಗಳನ್ನೂ ರಾಶಿ ರಾಶಿಯಾಗಿ ತಂದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಹೀರಾಮನ ಹಡಗುಗಳು ಓಫೀರನಿಂದ ಬಂಗಾರ ಮಾತ್ರವಲ್ಲದೆ ಅನೇಕ ಸುಗಂಧದ ಮರಗಳನ್ನೂ, ಅಮೂಲ್ಯವಾದ ರತ್ನಗಳನ್ನೂ ತಂದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 10:11
9 ತಿಳಿವುಗಳ ಹೋಲಿಕೆ  

ನಿನ್ನ ಸ್ತ್ರೀಪರಿವಾರದಲ್ಲಿರುವವರು ರಾಜಕುಮಾರಿಯರೇ, ನಿನ್ನ ಪಟ್ಟದರಾಣಿಯು ಓಫೀರ್ ದೇಶದ ಬಂಗಾರದಿಂದ ಮಾಡಿದ ಕಿರೀಟವನ್ನು ಧರಿಸಿಕೊಂಡು ನಿನ್ನ ಬಲಗಡೆಯಲ್ಲಿ ನಿಂತಿರುವಳು.


ಹೂರಾಮನು ಸೊಲೊಮೋನನಿಗೋಸ್ಕರ ಹಡಗುಗಳನ್ನು ಕಳುಹಿಸಿದನು. ಅವನ ಜನರೇ ಅದನ್ನು ನಡೆಸಿದರು. ಅವರು ಒಳ್ಳೆಯ ನುರಿತ ನಾವಿಕರಾಗಿದ್ದರು. ಹೂರಾಮನ ನಾವಿಕರು ಸೊಲೊಮೋನನ ಸೇವಕರೊಂದಿಗೆ ಓಫೀರ್ ದೇಶಕ್ಕೆ ಹೋಗಿ ಅಲ್ಲಿಂದ ಹದಿನೇಳು ಟನ್ ಬಂಗಾರವನ್ನು ಸೊಲೊಮೋನನಿಗೆ ತಂದುಕೊಟ್ಟರು.


ಅಲ್ಲದೆ ನನಗೆ ಲೆಬನೋನಿನಿಂದ ದೇವದಾರು, ತುರಾಯಿ ಮತ್ತು ಸುಗಂಧಮರಗಳನ್ನು ಕಳುಹಿಸಿಕೊಡು. ನಿನ್ನ ಸೇವಕರು ಲೆಬನೋನಿನ ಮರಗಳನ್ನು ಕತ್ತರಿಸುವುದರಲ್ಲಿ ನಿಪುಣರೆಂಬುದು ನನಗೆ ಗೊತ್ತಿದೆ. ನಿನ್ನ ಅನುಭವಸ್ಥ ಸೇವಕರಿಗೆ ಸಹಾಯ ಮಾಡಲು ನನ್ನ ಸೇವಕರೂ ಬರುವರು.


ಸೊಲೊಮೋನನು ಮರವನ್ನು ಆಲಯದ ಮತ್ತು ಅರಮನೆಯ ಆಧಾರಕಂಬಗಳಿಗಾಗಿ ಬಳಸಿದನು. ಅವನು ಹಾಡುಗಾರರಿಗೆ ಬೇಕಾದ ಹಾರ್ಪ್ ವಾದ್ಯಗಳನ್ನು ಮತ್ತು ಲೈರ್ ವಾದ್ಯಗಳನ್ನು ತಯಾರಿಸಲು ಆ ಮರವನ್ನು ಉಪಯೋಗಿಸಿದನು. ಹಿಂದೆಂದೂ ಯಾವ ವ್ಯಕ್ತಿಯೂ ಅಂತಹ ಮರವನ್ನು ಇಸ್ರೇಲಿಗೆ ತಂದಿರಲಿಲ್ಲ ಮತ್ತು ಅಲ್ಲಿಯವರೆಗೆ ಇಸ್ರೇಲಿನ ಯಾವ ವ್ಯಕ್ತಿಯೂ ಅಂತಹ ಮರವನ್ನು ನೋಡಿರಲಿಲ್ಲ.


ನೀನು ಚಿನ್ನವನ್ನು ಧೂಳೆಂದು ಪರಿಗಣಿಸಬೇಕು. ನೀನು ಓಫೀರ್ ದೇಶದ ಚಿನ್ನವನ್ನು ನದಿಗಳ ದಂಡೆಯ ಮೇಲಿರುವ ಕಲ್ಲುಗಳಂತೆ ಪರಿಗಣಿಸಬೇಕು.


“ಚಿನ್ನ, ಬೆಳ್ಳಿ, ತಾಮ್ರ, ಕಬ್ಬಿಣ ಇವುಗಳ ಕೆಲಸಗಳಲ್ಲಿ ಪಳಗಿರುವ ಒಬ್ಬ ಕುಶಲಕರ್ಮಿಯನ್ನು ನೀನು ಕಳುಹಿಸಿಕೊಡಬೇಕು. ಅವನಿಗೆ ನೀಲಿ, ಕೆಂಪು, ನೇರಳೆ ವರ್ಣಗಳ ಬಟ್ಟೆಗಳನ್ನು ನೇಯುವುದೂ ಗೊತ್ತಿರಬೇಕು. ನನ್ನ ತಂದೆ ಆರಿಸಿಕೊಂಡಿರುವ ಕುಶಲಕರ್ಮಿಗಳ ಜೊತೆಯಲ್ಲಿ ಅವನು ಜೆರುಸಲೇಮಿನಲ್ಲಿಯೂ ಯೆಹೂದದಲ್ಲಿಯೂ ಕೆಲಸ ಮಾಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು