1 ಅರಸುಗಳು 10:21 - ಪರಿಶುದ್ದ ಬೈಬಲ್21 ಸೊಲೊಮೋನನ ಬಟ್ಟಲುಗಳು ಮತ್ತು ಲೋಟಗಳು ಬಂಗಾರದಿಂದ ತಯಾರಿಸಲಾಗಿದ್ದವು. “ಲೆಬನೋನಿನ ಅರಣ್ಯ” ಎಂದು ಕರೆಯುವ ಕಟ್ಟಡದಲ್ಲಿದ್ದ ಎಲ್ಲಾ ಆಯುಧಗಳನ್ನು ಅಪ್ಪಟ ಚಿನ್ನದಿಂದ ಮಾಡಿದ್ದರು. ಅರಮನೆಯ ಯಾವ ವಸ್ತುವನ್ನೂ ಬೆಳ್ಳಿಯಿಂದ ಮಾಡಿರಲಿಲ್ಲ. ಜನರು ಬೆಳ್ಳಿಯನ್ನು ಅಮೂಲ್ಯವೆಂದು ಯೋಚಿಸದಷ್ಟು ಬಂಗಾರವು ಸೊಲೊಮೋನನ ಕಾಲದಲ್ಲಿತ್ತು! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಅರಸನಾದ ಸೊಲೊಮೋನನ ಪಾನಪಾತ್ರೆಗಳು, ಲೆಬನೋನಿನ ತೋಪು ಎನಿಸಿಕೊಳ್ಳುವ ಮಂದಿರದಲ್ಲಿದ್ದ ಎಲ್ಲಾ ಪಾನಪಾತ್ರೆಗಳು ಬಂಗಾರದವುಗಳು. ಸೊಲೊಮೋನನ ಕಾಲದಲ್ಲಿ ಬೆಳ್ಳಿಗೆ ಬೆಲೆ ಇರಲಿಲ್ಲವಾದುದರಿಂದ ಅವನಲ್ಲಿ ಬೆಳ್ಳಿಯ ಸಾಮಾನು ಒಂದಾದರೂ ಕಾಣಿಸಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಅರಸ ಸೊಲೊಮೋನನ ಎಲ್ಲಾ ಪಾನಪಾತ್ರೆಗಳು ಬಂಗಾರದವುಗಳು; ‘ಲೆಬನೋನಿನ ತೋಪು’ ಎನಿಸಿಕೊಳ್ಳುವ ಮಂದಿರದ ಸಾಮಾನುಗಳು ಚೊಕ್ಕ ಬಂಗಾರದವುಗಳು. ಸೊಲೊಮೋನನ ಕಾಲದಲ್ಲಿ ಬೆಳ್ಳಿಗೆ ಬೆಲೆಯಿರಲಿಲ್ಲ. ಆದುದರಿಂದ ಅವನಲ್ಲಿ ಬೆಳ್ಳಿಯ ಸಾಮಾನು ಒಂದಾದರೂ ಕಾಣಿಸಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಅರಸನಾದ ಸೊಲೊಮೋನನ ಎಲ್ಲಾ ಪಾನಪಾತ್ರೆಗಳು ಬಂಗಾರದವುಗಳು. ಲೆಬನೋನಿನ ತೋಪು ಎನಿಸಿಕೊಳ್ಳುವ ಮಂದಿರದ ಸಾಮಾನುಗಳು ಚೊಕ್ಕ ಬಂಗಾರದವುಗಳು. ಸೊಲೊಮೋನನ ಕಾಲದಲ್ಲಿ ಬೆಳ್ಳಿಗೆ ಬೆಲೆಯಿರಲಿಲ್ಲವಾದದರಿಂದ ಅವನಲ್ಲಿ ಬೆಳ್ಳಿಯ ಸಾಮಾನು ಒಂದಾದರೂ ಕಾಣಿಸಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಇದಲ್ಲದೆ ಅರಸನಾದ ಸೊಲೊಮೋನನು ಕುಡಿಯುವ ಪಾತ್ರೆಗಳೆಲ್ಲಾ ಬಂಗಾರದವುಗಳಾಗಿದ್ದವು. ಲೆಬನೋನಿನ ಅಡವಿಯ ಮನೆಯ ಎಲ್ಲಾ ಸಾಮಗ್ರಿಗಳು ಚೊಕ್ಕ ಬಂಗಾರದವುಗಳು. ಸೊಲೊಮೋನನ ದಿವಸಗಳಲ್ಲಿ ಬೆಳ್ಳಿಗೆ ಬೆಲೆಯೇ ಇರಲಿಲ್ಲ, ಆದುದರಿಂದ ಅವನಲ್ಲಿ ಬೆಳ್ಳಿಯ ವಸ್ತು ಒಂದಾದರೂ ಕಾಣಿಸಲಿಲ್ಲ. ಅಧ್ಯಾಯವನ್ನು ನೋಡಿ |