1 ಅರಸುಗಳು 10:24 - ಪರಿಶುದ್ದ ಬೈಬಲ್24 ಭೂಲೋಕದವರೆಲ್ಲರೂ ರಾಜನಾದ ಸೊಲೊಮೋನನನ್ನು ನೋಡುವುದಕ್ಕೂ ದೇವರು ಸೊಲೊಮೋನನಿಗೆ ದಯಪಾಲಿಸಿರುವ ಜ್ಞಾನವಾಕ್ಯಗಳನ್ನು ಕೇಳುವುದಕ್ಕೂ ಅಪೇಕ್ಷಿಸುತ್ತಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಭೂಲೋಕದವರೆಲ್ಲರೂ ದೇವರು ಅವನಿಗೆ ಅನುಗ್ರಹಿಸಿದ ಜ್ಞಾನವಾಕ್ಯಗಳನ್ನು ಕೇಳುವುದಕ್ಕೋಸ್ಕರ ಅವನ ದರ್ಶನಕ್ಕೆ ಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಭೂಲೋಕದವರೆಲ್ಲರೂ, ದೇವರು ಅವನಿಗೆ ಅನುಗ್ರಹಿಸಿದ್ದ ಜ್ಞಾನವಾಕ್ಯಗಳನ್ನು ಕೇಳುವುದಕ್ಕಾಗಿ ಅವನ ದರ್ಶನಕ್ಕೆ ಬರುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಭೂಲೋಕದವರೆಲ್ಲರೂ ದೇವರು ಅವನಿಗೆ ಅನುಗ್ರಹಿಸಿದ ಜ್ಞಾನವಾಕ್ಯಗಳನ್ನು ಕೇಳುವದಕ್ಕೋಸ್ಕರ ಅವನ ದರ್ಶನಕ್ಕೆ ಬಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ದೇವರು ಸೊಲೊಮೋನನ ಹೃದಯದಲ್ಲಿ ಕೊಟ್ಟಿದ್ದ ಜ್ಞಾನವನ್ನು ಕೇಳುವುದಕ್ಕಾಗಿ ಭೂಲೋಕದಲ್ಲಿರುವ ಸಮಸ್ತರೂ ಅವನ ದರ್ಶನವನ್ನು ಬಯಸಿದರು. ಅಧ್ಯಾಯವನ್ನು ನೋಡಿ |
ಪರಿಶುದ್ಧ ದೇವರುಗಳ ಆತ್ಮವು ನೆಲೆಸಿರುವ ಒಬ್ಬನು ನಿನ್ನ ರಾಜ್ಯದಲ್ಲಿ ಇದ್ದಾನೆ. ದೇವರ ಜ್ಞಾನಕ್ಕೆ ಸಮಾನವಾದ ಜ್ಞಾನವೂ ಬುದ್ಧಿಯೂ ರಹಸ್ಯವನ್ನು ತಿಳಿದುಕೊಳ್ಳುವ ಶಕ್ತಿಯೂ ತನಗಿರುವುದಾಗಿ ಅವನು ನಿನ್ನ ತಂದೆಯ ಕಾಲದಲ್ಲಿಯೇ ತೋರಿಸಿಕೊಟ್ಟಿದ್ದಾನೆ. ನಿನ್ನ ತಂದೆಯಾದ ನೆಬೂಕದ್ನೆಚ್ಚರನು ಈ ಮನುಷ್ಯನನ್ನು ಎಲ್ಲ ವಿದ್ವಾಂಸರ ಅಧ್ಯಕ್ಷನನ್ನಾಗಿ ನೇಮಿಸಿದ್ದನು. ಎಲ್ಲ ಜೋಯಿಸರಿಗೆ, ಮಂತ್ರವಾದಿಗಳಿಗೆ, ಶಾಕುನಿಕರಿಗೆ ಮತ್ತು ಪಂಡಿತರಿಗೆ ಇವನು ಮುಖ್ಯಸ್ಥನಾಗಿದ್ದನು.
ಆಗ ದೇವರು ಸೊಲೊಮೋನನಿಗೆ, “ನಿನ್ನ ಕೋರಿಕೆ ಒಳ್ಳೆಯದಾಗಿದೆ. ನೀನು ಐಶ್ವರ್ಯವನ್ನಾಗಲಿ ಗೌರವವನ್ನಾಗಲಿ ಬೆಳ್ಳಿಬಂಗಾರಗಳನ್ನಾಗಲಿ ಕೇಳಲಿಲ್ಲ. ನಿನ್ನ ವೈರಿಗಳನ್ನು ನಿರ್ಮೂಲ ಮಾಡುವಂತಾಗಲಿ ಅಥವಾ ನಿನಗೆ ದೀರ್ಘಾಯುಷ್ಯವನ್ನು ಕೊಡು ಎಂದಾಗಲಿ ನೀನು ಕೇಳಿಕೊಳ್ಳದೆ ರಾಜ್ಯವನ್ನು ನ್ಯಾಯವಾಗಿ ಆಳಲು ಬೇಕಾದ ಜ್ಞಾನವಿವೇಕಗಳನ್ನು ಕೇಳಿಕೊಂಡೆ. ನಾನು ಆರಿಸಿಕೊಂಡಿರುವ ಜನಾಂಗದ ಮೇಲೆ ಆಡಳಿತ ನಡಿಸುವಾಗ ಯೋಗ್ಯವಾದ ಸಲಹೆ ಕೊಡುವಂತೆ ಜ್ಞಾನವನ್ನು ಕೇಳಿರುತ್ತೀ.