1 ಅರಸುಗಳು 10:25 - ಪರಿಶುದ್ದ ಬೈಬಲ್25 ಪ್ರತಿವರ್ಷವೂ ರಾಜನನ್ನು ನೋಡಲು ಜನರು ಬರುತ್ತಿದ್ದರು. ಪ್ರತಿಯೊಬ್ಬನೂ ಕಾಣಿಕೆಯನ್ನು ತರುತ್ತಿದ್ದನು. ಅವರು ಬೆಳ್ಳಿಬಂಗಾರದಿಂದ ಮಾಡಿದ ವಸ್ತುಗಳನ್ನು, ಆಯುಧಗಳನ್ನು, ಉಡುಪುಗಳನ್ನು, ಸಾಂಬಾರ ಪದಾರ್ಥಗಳನ್ನು, ಕುದುರೆಗಳನ್ನು ಮತ್ತು ಹೇಸರಕತ್ತೆಗಳನ್ನು ತರುತ್ತಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಅವರೆಲ್ಲರೂ ಅವನಿಗೆ ವರ್ಷ ವರ್ಷ ಬೆಳ್ಳಿಬಂಗಾರದ ಸಾಮಾನು, ಉಡುಪು, ಯುದ್ಧಕ್ಕೆ ಬೇಕಾದ ಆಯುಧಗಳು, ಸುಗಂಧದ್ರವ್ಯ, ಕುದುರೆ ಮತ್ತು ಹೇಸರಗತ್ತೆ ಇವುಗಳನ್ನು ಕಾಣಿಕೆಯಾಗಿ ಕೊಡುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಅವರೆಲ್ಲರೂ ಅವನಿಗೆ ವರ್ಷ ವರ್ಷ ಬೆಳ್ಳಿ ಬಂಗಾರದ ಸಾಮಾನು, ಉಡುಪು, ಯುದ್ಧಾಯುಧ, ಸುಗಂಧದ್ರವ್ಯ, ಕುದುರೆ, ಹೇಸರಗತ್ತೆ ಇವುಗಳನ್ನು ಕಾಣಿಕೆಯಾಗಿ ಕೊಡುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಅವರೆಲ್ಲರೂ ಅವನಿಗೆ ವರುಷ ವರುಷ ಬೆಳ್ಳಿಬಂಗಾರದ ಸಾಮಾನು, ಉಡುಪು, ಯುದ್ಧಾಯುಧ, ಸುಗಂದದ್ರವ್ಯ, ಕುದುರೆ, ಹೇಸರಕತ್ತೆ ಇವುಗಳನ್ನು ಕಾಣಿಕೆಯಾಗಿ ಕೊಡುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಅವರೆಲ್ಲರೂ ಕಾಣಿಕೆಯಾಗಿ ಬೆಳ್ಳಿಯ ಪಾತ್ರೆಗಳನ್ನೂ, ಬಂಗಾರದ ಪಾತ್ರೆಗಳನ್ನೂ, ವಸ್ತ್ರಗಳನ್ನೂ, ಆಯುಧಗಳನ್ನೂ, ಸುಗಂಧಗಳನ್ನೂ, ಕುದುರೆಗಳನ್ನೂ, ಹೇಸರಗತ್ತೆಗಳನ್ನೂ, ವರುಷ ವರುಷವೂ ನೇಮಕವಾದ ಪ್ರಕಾರ ತರುತ್ತಿದ್ದರು. ಅಧ್ಯಾಯವನ್ನು ನೋಡಿ |
“‘ಹಿಜ್ಕೀಯನ ಮಾತುಗಳನ್ನು ಕೇಳಬೇಡಿ. ಅಶ್ಶೂರದ ಅರಸನ ಮಾತುಗಳಿಗೆ ಕಿವಿಗೊಡಿರಿ. ಅವನು ಹೇಳುವುದೇನೆಂದರೆ: “ನೀವು ನನ್ನೊಡನೆ ಒಪ್ಪಂದ ಮಾಡಿಕೊಂಡು ನಿಮ್ಮ ನಗರದಿಂದ ಹೊರಗೆ ಬಂದು ನನ್ನನ್ನು ಸಂಧಿಸಬೇಕು. ಆಗ ನೀವೆಲ್ಲರೂ ನಿಮ್ಮ ಮನೆಗಳಿಗೆ ಹೋಗಬಹುದು; ನಿಮ್ಮ ಸ್ವಂತ ದ್ರಾಕ್ಷಿತೋಟದ ದ್ರಾಕ್ಷಿಹಣ್ಣುಗಳನ್ನು ತಿನ್ನಬಹುದು; ಅಂಜೂರದ ಮರದ ಹಣ್ಣನ್ನು ತಿನ್ನಬಹುದು ನೀವೆಲ್ಲರೂ ನಿಮ್ಮ ಬಾವಿಯ ನೀರನ್ನು ಕುಡಿಯಬಹುದು.
ಹೋಶೇಯನು ಈಜಿಪ್ಟಿನ ರಾಜನಲ್ಲಿಗೆ ಸಂದೇಶಕರನ್ನು ಕಳುಹಿಸಿದ್ದನು. ಈಜಿಪ್ಟಿನ ರಾಜನಿಗೆ ಸೋ ಎಂಬ ಹೆಸರಿತ್ತು. ಹೋಶೇಯನು ಅಶ್ಶೂರದ ರಾಜನಿಗೆ ಪ್ರತಿವರ್ಷ ಕಪ್ಪಕಾಣಿಕಯನ್ನು ಕೊಡುತ್ತಿದ್ದನು, ಆದರೆ ಆ ವರ್ಷ ಕೊಡಲಿಲ್ಲ. ಆದರೆ ಅಶ್ಶೂರದ ರಾಜನಿಗೆ ಹೋಶೇಯನು ತನ್ನ ವಿರುದ್ಧ ಮಾಡಿರುವ ಒಳಸಂಚು ತಿಳಿದುಬಂದಿತು. ಆದ್ದರಿಂದ ಅಶ್ಶೂರದ ರಾಜನು ಹೋಶೇಯನನ್ನು ಬಂಧಿಸಿ, ಸೆರೆಯಲ್ಲಿಟ್ಟನು.
ಆಗ ತೋವಿಯು ತನ್ನ ಮಗನಾದ ಯೋರಾಮನನ್ನು ರಾಜನಾದ ದಾವೀದನ ಬಳಿಗೆ ಕಳುಹಿಸಿದನು. ದಾವೀದನು ಹದದೆಜೆರನ ವಿರುದ್ಧ ಹೋರಾಡಿ ಅವನನ್ನು ಸೋಲಿಸಿದ್ದಕ್ಕಾಗಿ ಯೋರಾಮನು ದಾವೀದನನ್ನು ಅಭಿನಂದಿಸಿದನು ಮತ್ತು ಆಶೀರ್ವದಿಸಿದನು. (ಈ ಮೊದಲು ಹದದೆಜೆರನು ತೋವಿಗೆ ವಿರುದ್ಧವಾಗಿ ಯುದ್ಧವನ್ನು ಮಾಡಿದನು.) ಯೋರಾಮನು ಚಿನ್ನ, ಬೆಳ್ಳಿ ಮತ್ತು ಹಿತ್ತಾಳೆಯಿಂದ ಮಾಡಿದ ವಸ್ತುಗಳನ್ನು ತಂದಿದ್ದನು.
ಆದರೆ ಕೆಲವು ಕಿರುಕುಳಕಾರರು, “ಈ ಮನುಷ್ಯನು ಹೇಗೆ ತಾನೆ ನಮ್ಮನ್ನು ರಕ್ಷಿಸುವನು?” ಎಂದು ಹೇಳಿದರು. ಅವರು ಸೌಲನ ಬಗ್ಗೆ ಕೆಟ್ಟಮಾತುಗಳನ್ನು ಆಡಿದರು; ಅವನನ್ನು ತಿರಸ್ಕರಿಸಿ, ಕಾಣಿಕೆಗಳನ್ನು ತಂದುಕೊಡಲಿಲ್ಲ. ಆದರೆ ಸೌಲನು ಏನೂ ಮಾತನಾಡಲಿಲ್ಲ. ಅಮ್ಮೋನಿಯರ ರಾಜನಾದ ನಾಹಾಷನು, ಗಾದ್ ಮತ್ತು ರೂಬೆನ್ ಕುಲದವರಿಗೆ ಕಿರುಕುಳಕೊಡುತ್ತಿದ್ದನು. ನಾಹಾಷನು ಪ್ರತಿ ಮನುಷ್ಯನ ಬಲಗಣ್ಣನ್ನು ಕಿತ್ತುಹಾಕುತ್ತಿದ್ದನು. ನಾಹಾಷನು ಅವರಿಗೆ ಸಹಾಯಮಾಡಲು ಯಾರಿಗೂ ಅವಕಾಶಕೊಡುತ್ತಿರಲಿಲ್ಲ. ಅಮ್ಮೋನಿಯರ ರಾಜನಾದ ನಾಹಾಷನು ಜೋರ್ಡನ್ ನದಿಯ ಪೂರ್ವ ಪ್ರದೇಶದಲ್ಲಿ ವಾಸವಾಗಿದ್ದ ಎಲ್ಲ ಇಸ್ರೇಲರ ಬಲಗಣ್ಣನ್ನು ಕಿತ್ತುಹಾಕುತ್ತಿದ್ದನು. ಆದ್ದರಿಂದ ಅಮ್ಮೋನಿಯರಿಂದ ಏಳು ಸಾವಿರ ಮಂದಿ ಇಸ್ರೇಲರು ಯಾಬೇಷ್ ಗಿಲ್ಯಾದಿಗೆ ಓಡಿಹೋದರು.