Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 10:26 - ಪರಿಶುದ್ದ ಬೈಬಲ್‌

26 ಆದ್ದರಿಂದ ಅಸಂಖ್ಯವಾದ ರಥಗಳೂ ಕುದುರೆಗಳೂ ಸೊಲೊಮೋನನಲ್ಲಿದ್ದವು. ಅವನಲ್ಲಿ ಒಂದು ಸಾವಿರದ ನಾನೂರು ರಥಗಳು ಮತ್ತು ಹನ್ನೆರಡು ಸಾವಿರ ಕುದುರೆಗಳಿದ್ದವು. ಸೊಲೊಮೋನನು ಈ ರಥಗಳಿಗಾಗಿ ವಿಶೇಷವಾದ ನಗರಗಳನ್ನು ಕಟ್ಟಿಸಿದನು. ಆ ನಗರಗಳಲ್ಲಿ ರಥಗಳನ್ನು ಇರಿಸಿದನು. ರಾಜನಾದ ಸೊಲೊಮೋನನು ಕೆಲವು ರಥಗಳನ್ನು ಜೆರುಸಲೇಮಿನಲ್ಲಿ ತನ್ನ ಹತ್ತಿರ ಇಟ್ಟುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಸೊಲೊಮೋನನು ರಥಗಳನ್ನೂ ಮತ್ತು ರಾಹುತರನ್ನೂ ಸಂಗ್ರಹಿಸಿದನು. ಅವನ ರಥಗಳು ಸಾವಿರದ ನಾನೂರು. ರಾಹುತರು ಹನ್ನೆರಡು ಸಾವಿರ. ಇವುಗಳಲ್ಲಿ ಕೆಲವನ್ನು ಯೆರೂಸಲೇಮಿನಲ್ಲಿ ತನ್ನ ಬಳಿಯಲ್ಲಿಯೂ, ಉಳಿದವುಗಳನ್ನು ರಥಗಳಿಗೋಸ್ಕರ ನೇಮಿಸಿದ ಪಟ್ಟಣಗಳಲ್ಲಿಯೂ ಇರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಸೊಲೊಮೋನನು ರಥಗಳನ್ನೂ ರಾಹುತರನ್ನೂ ಸಂಗ್ರಹಿಸುತ್ತಿದ್ದನು. ಅವನ ರಥಗಳು ಸಾವಿರದ ನಾನೂರು; ರಾಹುತರು ಹನ್ನೆರಡು ಸಾವಿರ. ಇವುಗಳಲ್ಲಿ ಕೆಲವನ್ನು ಜೆರುಸಲೇಮಿನಲ್ಲಿ ತನ್ನ ಬಳಿಯಲ್ಲೇ ಇರಿಸಿದ್ದನು; ಉಳಿದವುಗಳನ್ನು ರಥಗಳಿಗಾಗಿಯೇ ನೇಮಿಸಿದ್ದ ಪಟ್ಟಣಗಳಲ್ಲಿ ಇರಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಸೊಲೊಮೋನನು ರಥಗಳನ್ನೂ ರಾಹುತರನ್ನೂ ಸಂಗ್ರಹಿಸಿದನು. ಅವನ ರಥಗಳು ಸಾವಿರದ ನಾನೂರು; ರಾಹುತರು ಹನ್ನೆರಡು ಸಾವಿರ. ಇವುಗಳಲ್ಲಿ ಕೆಲವನ್ನು ಯೆರೂಸಲೇವಿುನಲ್ಲಿ ತನ್ನ ಬಳಿಯಲ್ಲಿಯೂ ಉಳಿದವುಗಳನ್ನು ರಥಗಳಿಗೋಸ್ಕರ ನೇವಿುಸಿದ ಪಟ್ಟಣಗಳಲ್ಲಿಯೂ ಇರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಇದಲ್ಲದೆ ಸೊಲೊಮೋನನು ರಥಗಳನ್ನೂ, ರಾಹುತರನ್ನೂ ಕೂಡಿಸಿದನು. ಸಾವಿರದ ನಾನೂರು ರಥಗಳು, ಹನ್ನೆರಡು ಸಾವಿರ ಕುದುರೆಯ ರಾಹುತರು ಇದ್ದರು. ಇವುಗಳಲ್ಲಿ ಕೆಲವನ್ನು ಯೆರೂಸಲೇಮಿನಲ್ಲಿ ತನ್ನ ಬಳಿಯಲ್ಲಿಯೇ ಇರಿಸಿದನು, ಉಳಿದವುಗಳನ್ನು ರಥಗಳ ಪಟ್ಟಣಗಳಲ್ಲಿಯೂ ಇರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 10:26
7 ತಿಳಿವುಗಳ ಹೋಲಿಕೆ  

ಸೊಲೊಮೋನನ ರಥಗಳಿಗೂ ರಥಾಶ್ವಗಳಿಗೂ ನಾಲ್ಕು ಸಾವಿರ ಲಾಯಗಳಿದ್ದವು. ಅವನ ಬಳಿಯಲ್ಲಿ ಹನ್ನೆರಡು ಸಾವಿರ ರಾಹುತರು ಇದ್ದರು. ಅವರನ್ನು ಪ್ರತ್ಯೇಕವಾದ ಪಟ್ಟಣಗಳಲ್ಲಿಯೂ ಜೆರುಸಲೇಮಿನಲ್ಲಿಯೂ ಇರಿಸಿದನು.


ಸೊಲೊಮೋನನು ತನ್ನ ರಥಗಳಿಗೆ ಬೇಕಾಗಿದ್ದ ನಾಲ್ಕು ಸಾವಿರ ಕುದುರೆಗಳಿಗೆ ಬೇಕಾಗುವಷ್ಟು ಸ್ಥಳ ಪಡೆದಿದ್ದನು. ಅವನಲ್ಲಿ ಹನ್ನೆರಡು ಸಾವಿರ ರಾಹುತರಿದ್ದರು.


ಧಾನ್ಯಗಳನ್ನು ಮತ್ತು ಇತರ ವಸ್ತುಗಳನ್ನು ಸಂಗ್ರಹಿಸುವ ಉಗ್ರಾಣನಗರಗಳನ್ನು ಸಹ ಕಟ್ಟಿಸಿದನು; ತನ್ನ ರಥಗಳಿಗೆ ಮತ್ತು ಕುದುರೆಗಳಿಗೆ ತಾಣವಾದ ಸ್ಥಳಗಳನ್ನೂ ಕಟ್ಟಿಸಿದನು; ತಾನು ಆಳುತ್ತಿದ್ದ ಜೆರುಸಲೇಮಿನಲ್ಲಿ, ಲೆಬನೋನಿನಲ್ಲಿ, ಮತ್ತಿತರ ಎಲ್ಲಾ ಸ್ಥಳಗಳಲ್ಲಿ ತಾನು ಅಪೇಕ್ಷಿಸಿದ ಕಟ್ಟಡಗಳನ್ನೆಲ್ಲ ಕಟ್ಟಿಸಿದನು.


ಅರಸನು ತನ್ನ ಉಪಯೋಗಕ್ಕಾಗಿ ಹೆಚ್ಚೆಚ್ಚಾಗಿ ಕುದುರೆಗಳನ್ನು ಖರೀದಿಸಬಾರದು; ಜನರನ್ನು ಈಜಿಪ್ಟಿಗೆ ಕಳುಹಿಸಿ ಅಲ್ಲಿಂದ ಹೆಚ್ಚುಹೆಚ್ಚು ಕುದುರೆಗಳನ್ನು ತರಿಸಬಾರದು; ಯಾಕೆಂದರೆ, ‘ನೀವು ಆ ಮಾರ್ಗದಲ್ಲಿ ಹಿಂದಕ್ಕೆ ಹೋಗಲೇಬಾರದು’ ಎಂದು ಯೆಹೋವನು ಹೇಳಿದ್ದಾನೆ.


ನಿಮ್ಮ ದೇಶವು ಬೆಳ್ಳಿಬಂಗಾರಗಳಿಂದಲೂ ಮಿತಿಯಿಲ್ಲದ ನಿಕ್ಷೇಪಗಳಿಂದಲೂ ಕುದುರೆಗಳಿಂದಲೂ ಅಸಂಖ್ಯಾತವಾದ ರಥಗಳಿಂದಲೂ ತುಂಬಿಹೋಯಿತು.


ಆದ್ದರಿಂದ ನಿನ್ನ ಸಹಾಯವು ನನಗೆ ಬೇಕಾಗಿದೆ. ನಿನ್ನ ಜನರನ್ನು ಲೆಬನೋನಿಗೆ ಕಳುಹಿಸು. ಅಲ್ಲಿ ಅವರು ನನಗಾಗಿ ದೇವದಾರುಮರಗಳನ್ನು ಕಡಿದು ಬೀಳಿಸಲಿ. ನನ್ನ ಸೇವಕರೂ ನಿನ್ನವರೊಂದಿಗೆ ಕೆಲಸಮಾಡುತ್ತಾರೆ. ನಿನ್ನ ಸೇವಕರಿಗೆ ಗೊತ್ತುಪಡಿಸಿದ ವೇತನವನ್ನು ನಾನು ಕೊಡುತ್ತೇನೆ. ಆದರೆ ನಿನ್ನ ಸಹಾಯ ನನಗೆ ಬೇಕು. ನಮ್ಮ ಬಡಗಿಗಳು ಚೀದೋನ್ಯರ ಬಡಗಿಗಳಂತೆ ಕುಶಲಕರ್ಮಿಗಳಲ್ಲ” ಎಂದು ಹೇಳಿ ಕಳುಹಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು