Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 10:5 - ಪರಿಶುದ್ದ ಬೈಬಲ್‌

5 ರಾಜನ ಮೇಜಿನ ಮೇಲಿದ್ದ ಆಹಾರವನ್ನೂ ಒಟ್ಟಾಗಿ ಸೇರಿಬರುತ್ತಿದ್ದ ಅವನ ಅಧಿಕಾರಿಗಳನ್ನೂ ಅರಮನೆಯಲ್ಲಿದ್ದ ಸೇವಕರನ್ನೂ ಮತ್ತು ಅವರು ಧರಿಸಿದ್ದ ಉತ್ತಮ ಬಟ್ಟೆಗಳನ್ನೂ ಅವಳು ನೋಡಿದಳು. ಅವನ ಔತಣಕೂಟಗಳನ್ನೂ ಅವನು ಆಲಯದಲ್ಲಿ ಅರ್ಪಿಸುತ್ತಿದ್ದ ಯಜ್ಞಗಳನ್ನೂ ಅವಳು ನೋಡಿದಳು. ಇವುಗಳಿಂದ ಅವಳಿಗೆ ನಿಜವಾಗಿಯೂ “ಉಸಿರುಕಟ್ಟಿಸುವಂತಹ” ವಿಸ್ಮಯವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅವನ ಭೋಜನಪೀಠದ ಆಹಾರ, ಆ ಪೀಠದ ಸುತ್ತಲಿರುವ ಉದ್ಯೋಗಸ್ಥರ ಆಸನಗಳು, ಅವನ ಪರಿಚಾರಕರ ಸೇವಾಕ್ರಮ, ಅವರ ಉಡುಪುಗಳು, ಅವನ ಪಾನಕಗಳು ಇವುಗಳನ್ನೂ ಮತ್ತು ಅವನು ಯೆಹೋವನ ಆಲಯದಲ್ಲಿ ಸಮರ್ಪಿಸುತ್ತಿದ್ದ ಸರ್ವಾಂಗಹೋಮಗಳನ್ನೂ ನೋಡಿದಾಗ ವಿಸ್ಮಿತಳಾಗಿ ಹೋದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಅವನು ಕಟ್ಟಿಸಿದ ಅರಮನೆ, ಅವನ ಭೋಜನಪೀಠದ ಆಹಾರ, ಆ ಪೀಠದ ಸುತ್ತಲಿರುವ ಉದ್ಯೋಗಸ್ಥರ ಆಸನಗಳು, ಅವನ ಪರಿಚಾರಕರ ಸೇವಾಕ್ರಮ, ಅವರ ಉಡುಪುಗಳು, ಅವನ ಪಾನಕಗಳು ಇವುಗಳನ್ನು ಮತ್ತು ಸರ್ವೇಶ್ವರನ ಆಲಯದಲ್ಲಿ ಅವನು ಸಮರ್ಪಿಸುತ್ತಿದ್ದ ದಹನಬಲಿಗಳನ್ನು ನೋಡಿದಳು. ಇವುಗಳಿಂದ ಆಶ್ಚರ್ಯಚಕಿತಳಾಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅವನ ಭೋಜನಪೀಠದ ಆಹಾರ, ಆ ಪೀಠದ ಸುತ್ತಲಿರುವ ಉದ್ಯೋಗಸ್ಥರ ಆಸನಗಳು, ಅವನ ಪರಿಚಾರಕರ ಸೇವಾಕ್ರಮ, ಅವರ ಉಡುಪುಗಳು, ಅವನ ಪಾನಕಗಳು ಇವುಗಳನ್ನೂ ಅವನು ಯೆಹೋವನ ಆಲಯದಲ್ಲಿ ಸಮರ್ಪಿಸುತ್ತಿದ್ದ ಸರ್ವಾಂಗಹೋಮಗಳನ್ನೂ ನೋಡಿದಾಗ ವಿಸ್ಮಿತಳಾಗಿ ಅರಸನಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅವನ ಮೇಜಿನ ಭೋಜನವನ್ನೂ, ಅವನ ಅಧಿಪತಿಗಳು ಕುಳಿತಿರುವ ರೀತಿಯನ್ನೂ, ಅವನ ಸೇವಕರು ನಿಂತಿರುವುದನ್ನೂ, ಅವರ ವಸ್ತ್ರಗಳನ್ನೂ, ಅವನ ಪಾನದಾಯಕರನ್ನೂ, ಅವನು ಯೆಹೋವ ದೇವರ ಆಲಯದಲ್ಲಿ ಅರ್ಪಿಸಿದ ದಹನಬಲಿಗಳನ್ನೂ ಕಂಡಾಗ ಅವಳು ವಿಸ್ಮಯಗೊಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 10:5
12 ತಿಳಿವುಗಳ ಹೋಲಿಕೆ  

ಶುಪ್ಪೀಮ್ ಮತ್ತು ಹೋಸ ಎಂಬವರಿಗೆ ಪಶ್ಚಿಮದ ಬಾಗಿಲನ್ನು ಮತ್ತು ಮೇಲ್ದಾರಿಯಲ್ಲಿದ್ದ ಶೆಲ್ಲೆಕೆತ್ ಬಾಗಿಲನ್ನು ಕಾಯುವ ಕೆಲಸ ದೊರೆಯಿತು. ಕಾವಲುಗಾರರು ಪಕ್ಕಪಕ್ಕದಲ್ಲಿಯೇ ನಿಂತುಕೊಳ್ಳುತ್ತಿದ್ದರು.


ಅಧಿಪತಿಯು ಆ ದ್ವಾರದ ಕೈಸಾಲೆಯೊಳಗೆ ಪ್ರವೇಶಿಸಿ ಅದರ ನಿಲುವು ಕಂಬದ ಬಳಿಯಲ್ಲಿ ನಿಲ್ಲುವನು. ಅಧಿಪತಿಯು ಕೊಡುವ ಸರ್ವಾಂಗಹೋಮವನ್ನು ಮತ್ತು ಸಮಾಧಾನಯಜ್ಞವನ್ನು ಆಗ ಯಾಜಕರು ಸಮರ್ಪಿಸುವರು. ಅಧಿಪತಿಯು ಆ ದ್ವಾರದ ಮುಂಭಾಗದಲ್ಲಿ ಆರಾಧಿಸುವನು. ಅನಂತರ ಅವನು ಹೊರಗೆ ಹೋಗುವನು. ಆ ದ್ವಾರದ ಕದಗಳು ಸಾಯಂಕಾಲದ ತನಕ ತೆರೆದೇ ಇರುವವು.


ಜನರ ಅಧಿಪತಿಯು ಯೆಹೋವನ ಸನ್ನಿಧಿಯಲ್ಲಿ ಊಟಮಾಡಲು ಬರುವಾಗ ಅವನು ಮಾತ್ರ ಈ ದ್ವಾರದ ಬಳಿ ಕುಳಿತುಕೊಳ್ಳಬಹುದು. ಅಧಿಪತಿಯು ದ್ವಾರದ ಮಂಟಪದ ಮೂಲಕ ಪ್ರವೇಶಿಸಬೇಕು ಮತ್ತು ಅದೇ ಮಾರ್ಗದಲ್ಲಿ ಹೊರ ಬರಬೇಕು.”


ಅವನು ಮುಂಭಾಗದ ಪ್ರವೇಶ ದ್ವಾರದಲ್ಲಿದ್ದ ರಾಜಸ್ತಂಭದ ಬಳಿ ನಿಂತಿದ್ದನು. ಸೇನಾಧಿಪತಿಗಳೂ ಅವರ ಜನರೂ ತುತ್ತೂರಿಯನ್ನು ಊದಿ ರಾಜನ ಬಳಿಯಲ್ಲಿಯೇ ನಿಂತಿದ್ದರು. ದೇಶದ ಪ್ರಜೆಗಳು ಸಂತೋಷದಿಂದ ತುತ್ತೂರಿಯನ್ನೂದಿದರು. ಗಾಯಕರು ವಾದ್ಯಗಳನ್ನು ಬಾರಿಸುತ್ತಿದ್ದರು. ಅವರು ಜನರನ್ನು ಸ್ತೋತ್ರಗೀತೆಯಲ್ಲಿ ನಡಿಸುತ್ತಿದ್ದರು. ಇದೆಲ್ಲವನ್ನು ಅತಲ್ಯಳು ನೋಡಿ ತನ್ನ ಬಟ್ಟೆಯನ್ನು ಹರಿದು, “ದ್ರೋಹ, ದ್ರೋಹ” ಎಂದು ಕಿರುಚಿದಳು.


ಸೊಲೊಮೋನನ ಮೇಜಿನ ಮೇಲೆ ಇಟ್ಟಿರುವ ಆಹಾರವನ್ನು ನೋಡಿದಳು. ಅವನ ಸೇವಕರು ಮಾಡುವ ಸೇವೆಯ ರೀತಿಯನ್ನು ಪರಿಶೀಲಿಸಿದಳು. ಅವರು ಧರಿಸುವ ಉಡುಪು, ಸಮವಸ್ತ್ರಗಳು, ದೇವಾಲಯಕ್ಕೆ ಹೋಗುವಾಗ ಮಾಡುವ ಮೆರವಣಿಗೆಗಳನ್ನು ಮತ್ತು ಯಜ್ಞಗಳನ್ನು ನೋಡಿದಳು. ಪ್ರತಿಯೊಂದು ವಿಷಯವನ್ನು ಆಕೆ ಗಮನಿಸಿದಾಗ ಅಚ್ಚರಿಗೊಂಡಳು.


ಇವರೆಲ್ಲರೂ ಪೂರ್ವದಿಕ್ಕಿನಲ್ಲಿರುವ ರಾಜನ ಹೆಬ್ಬಾಗಿಲನ್ನು ಕಾಯುತ್ತಿರುತ್ತಾರೆ. ಇವರೆಲ್ಲಾ ಲೇವಿ ಕುಲಕ್ಕೆ ಸೇರಿದವರು.


ಅಹಾಜನು ಸಬ್ಬತ್ ದಿನಕ್ಕಾಗಿ ಕಟ್ಟಿದ ಮಂಟಪವನ್ನು ಬದಲಾಯಿಸಿದನು. ಕೆಲಸಗಾರರು ಆಲಯದ ಒಳಗೆ ಇದನ್ನು ನಿರ್ಮಿಸಿದ್ದರು. ಅಹಾಜನು ರಾಜನಿಗಾಗಿ ಇದ್ದ ಹೊರಭಾಗದ ಬಾಗಿಲನ್ನು ಬದಲಾಯಿಸಿದನು. ಅಹಾಜನು ದೇವಾಲಯದಿಂದ ಇವುಗಳನ್ನೆಲ್ಲಾ ಅಶ್ಶೂರದ ರಾಜನ ದೆಸೆಯಿಂದ ಬದಲಾಯಿಸಿದನು.


ಇಸ್ರೇಲರು ಜೋರ್ಡನ್ ನದಿಯನ್ನು ದಾಟುವವರೆಗೆ ಯೆಹೋವನು ಆ ನದಿಯನ್ನು ಬತ್ತಿಸಿದನು. ಜೋರ್ಡನ್ ನದಿಯ ಪಶ್ಚಿಮ ದಿಕ್ಕಿನಲ್ಲಿರುವ ಅಮೋರಿಯರ ಅರಸರು ಮತ್ತು ಭೂಮಧ್ಯ ಸಾಗರದ ಹತ್ತಿರವಿರುವ ಕಾನಾನ್ಯರ ಅರಸರು ಈ ಸಂಗತಿಯನ್ನು ಕೇಳಿ ಭಯಗ್ರಸ್ತರಾದರು; ಇಸ್ರೇಲರ ವಿರುದ್ಧವಾಗಿ ಹೋರಾಡುವಷ್ಟು ಧೈರ್ಯವಿಲ್ಲದವರಾದರು.


“ಒಮ್ಮೆ ಒಬ್ಬ ಫರಿಸಾಯನು ಮತ್ತು ಒಬ್ಬ ಸುಂಕವಸೂಲಿಗಾರನು ಪ್ರಾರ್ಥಿಸಲು ದೇವಾಲಯಕ್ಕೆ ಹೋದರು.


ಸೊಲೊಮೋನನು ಬಹು ಜ್ಞಾನಿಯೆಂಬುದು ಶೆಬದ ರಾಣಿಗೆ ತಿಳಿಯಿತು. ಅವನು ನಿರ್ಮಿಸಿದ್ದ ಸುಂದರವಾದ ಅರಮನೆಯನ್ನೂ


ಆದ್ದರಿಂದ ರಾಣಿಯು ರಾಜನಿಗೆ, “ನಿನ್ನ ಜ್ಞಾನದ ಬಗ್ಗೆ ಮತ್ತು ನೀನು ಮಾಡುವ ಕಾರ್ಯಗಳ ಬಗ್ಗೆ ಅನೇಕ ಸಂಗತಿಗಳನ್ನು ನಾನು ನನ್ನ ದೇಶದಲ್ಲಿ ಕೇಳಿದ್ದೇನೆ. ಆ ಸಂಗತಿಗಳೆಲ್ಲ ನಿಜ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು