Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 10:7 - ಪರಿಶುದ್ದ ಬೈಬಲ್‌

7 ನಾನೇ ಬಂದು, ನನ್ನ ಸ್ವಂತ ಕಣ್ಣುಗಳಿಂದ ಆ ಸಂಗತಿಗಳನ್ನು ನೋಡುವವರೆಗೆ ನಾನು ನಂಬಲೇ ಇಲ್ಲ. ಆದರೆ ನಾನು ಕೇಳಿದುದಕ್ಕಿಂತಲೂ ಮಹತ್ವವಾದ ಸಂಗತಿಗಳನ್ನು ಈಗ ನೋಡುತ್ತಿದ್ದೇನೆ. ಜನರು ಹೇಳಿದುದಕ್ಕಿಂತ ಅತ್ಯಂತ ಹೆಚ್ಚಿನ ಜ್ಞಾನವೂ ಐಶ್ವರ್ಯವೂ ನಿನ್ನಲ್ಲಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನಾನಾಗಿ ಇಲ್ಲಿಗೆ ಬಂದು ಕಣ್ಣಾರೆ ನೋಡುವುದಕ್ಕಿಂತ ಮೊದಲು ಜನರು ಹೇಳಿದ ಸುದ್ದಿಯನ್ನು ನಂಬಿರಲಿಲ್ಲ. ಈಗ ಇಲ್ಲಿ ಬಂದು ನೋಡಿದರೆ ನಿನ್ನ ಜ್ಞಾನವೈಭವಗಳು ನಾನು ಕೇಳಿದ್ದಕ್ಕಿಂತ ಹೆಚ್ಚಾಗಿವೆ. ಜನರು ಇದರಲ್ಲಿ ಅರ್ಧವನ್ನಾದರೂ ಹೇಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ನಾನಾಗಿ ಇಲ್ಲಿಗೆ ಬಂದು ಕಣ್ಣಾರೆ ನೋಡುವುದಕ್ಕೆ ಮೊದಲು ಜನರು ಹೇಳಿದ ಸುದ್ದಿಯನ್ನು ನಂಬಲಿಲ್ಲ; ಈಗ ನೋಡಿದರೆ ನಿಮ್ಮ ಜ್ಞಾನವೈಭವಗಳು, ನಾನು ಕೇಳಿದ್ದಕ್ಕಿಂತ ಮಿಗಿಲಾಗಿವೆ. ಜನರು ನನಗೆ ಇದರಲ್ಲಿ ಅರ್ಧವನ್ನಾದರೂ ವರದಿ ಮಾಡಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನಾನಾಗಿ ಇಲ್ಲಿಗೆ ಬಂದು ಕಣ್ಣಾರೆ ನೋಡುವದಕ್ಕಿಂತ ಮೊದಲು ಜನರು ಹೇಳಿದ ಸುದ್ದಿಯನ್ನು ನಂಬಲಿಲ್ಲ; ಈಗ ನೋಡಿದರೆ ನಿನ್ನ ಜ್ಞಾನ ವೈಭವಗಳು ನಾನು ಕೇಳಿದ್ದಕ್ಕಿಂತ ಹೆಚ್ಚಾಗಿವೆ; ಜನರು ನನಗೆ ಇದರಲ್ಲಿ ಅರ್ಧವನ್ನಾದರೂ ಹೇಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆದರೆ ನಾನು ಬಂದು ನನ್ನ ಕಣ್ಣುಗಳಿಂದ ನೋಡುವವರೆಗೂ ಜನರ ಮಾತುಗಳನ್ನು ನಂಬದೆ ಹೋದೆನು. ಜನರು ನನಗೆ ಇದರಲ್ಲಿ ಅರ್ಧವನ್ನಾದರೂ ಹೇಳಲಿಲ್ಲ. ನಿನ್ನ ಜ್ಞಾನವೂ, ನಿನ್ನ ಸಂಪತ್ತೂ ನಾನು ಕೇಳಿದ್ದಕ್ಕಿಂತ ನಿನ್ನ ಕೀರ್ತಿ ಎಷ್ಟೋ ಅಧಿಕವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 10:7
9 ತಿಳಿವುಗಳ ಹೋಲಿಕೆ  

ಪವಿತ್ರಗ್ರಂಥದಲ್ಲಿ ಬರೆದಿರುವಂತೆಯೇ ಇದಾಯಿತು: “ದೇವರು ತನ್ನನ್ನು ಪ್ರೀತಿಸುವ ಜನರಿಗೆ ಸಿದ್ಧಪಡಿಸಿರುವುದನ್ನು ಯಾವ ಕಣ್ಣೂ ಕಾಣಲಿಲ್ಲ. ಯಾವ ಕಿವಿಯೂ ಕೇಳಲಿಲ್ಲ. ಯಾವ ವ್ಯಕ್ತಿಯೂ ಊಹಿಸಿಕೊಳ್ಳಲಿಲ್ಲ.”


ಪ್ರಿಯ ಸ್ನೇಹಿತರೇ, ಈಗ ನಾವು ದೇವರ ಮಕ್ಕಳಾಗಿದ್ದೇವೆ. ನಾವು ಮುಂದೆ ಏನಾಗುವೆವೆಂಬುದನ್ನು ನಮಗಿನ್ನೂ ತೋರ್ಪಡಿಸಿಲ್ಲ. ಆದರೆ ಕ್ರಿಸ್ತನು ಮರಳಿ ಬಂದಾಗ ಅದನ್ನು ತಿಳಿದುಕೊಳ್ಳುತ್ತೇವೆ. ನಾವು ಆತನಂತಾಗುವೆವು. ನಾವು ಆತನ ನಿಜಸ್ವರೂಪವನ್ನೇ ನೋಡುವೆವು.


ಯೇಸು ಬದುಕಿರುವುದಾಗಿಯೂ ತಾನು ಆತನನ್ನು ನೋಡಿದ್ದಾಗಿಯೂ ಮರಿಯಳು ತಿಳಿಸಿದಾಗ ಶಿಷ್ಯರು ಅವಳನ್ನು ನಂಬಲಿಲ್ಲ.


ಆಗ ಪ್ರತಿಯೊಂದು ಸುಂದರವೂ ರಮಣೀಯವೂ ಆಗಿರುವುದು. ಬೆಳೆಯು ಸುಭಿಕ್ಷವಾಗಿರುವುದು. ಆಹಾರ ಮತ್ತು ದ್ರಾಕ್ಷಾರಸ ಮಾತ್ರವೇ ಅಲ್ಲ, ಎಲ್ಲಾ ಯೌವನಸ್ಥರೂ ಯೌವನಸ್ಥೆಯರೂ ಹಾಗೆಯೇ ಇರುವರು.


ನಿನ್ನ ಜನರು ನಿನಗೆ ಕಿವಿಗೊಡಲಿಲ್ಲ. ನೀನು ಹೇಳಿದ್ದನ್ನು ನಿನ್ನ ಜನರು ನಿಜವಾಗಿಯೂ ಕೇಳಲಿಲ್ಲ. ನಿನ್ನಂಥ ದೇವರನ್ನು ಯಾರೂ ನೋಡಿಲ್ಲ. ನಿನ್ನ ಹೊರತು ಬೇರೆ ಯಾರೂ ದೇವರಿಲ್ಲ. ಜನರು ತಾಳ್ಮೆಯಿಂದಿದ್ದು ನಿನ್ನ ಸಹಾಯಕ್ಕಾಗಿ ಕಾದಿದ್ದರೆ ನೀನು ಅವರಿಗಾಗಿ ಮಹಾಕಾರ್ಯಗಳನ್ನು ಮಾಡುವೆ.


ಆದ್ದರಿಂದ ರಾಣಿಯು ರಾಜನಿಗೆ, “ನಿನ್ನ ಜ್ಞಾನದ ಬಗ್ಗೆ ಮತ್ತು ನೀನು ಮಾಡುವ ಕಾರ್ಯಗಳ ಬಗ್ಗೆ ಅನೇಕ ಸಂಗತಿಗಳನ್ನು ನಾನು ನನ್ನ ದೇಶದಲ್ಲಿ ಕೇಳಿದ್ದೇನೆ. ಆ ಸಂಗತಿಗಳೆಲ್ಲ ನಿಜ!


ನಿನ್ನ ಪತ್ನಿಯರೂ ಅಧಿಕಾರಿಗಳೂ ಧನ್ಯರೇ ಸರಿ! ಯಾಕೆಂದರೆ ಅವರು ನಿನ್ನ ಸೇವೆ ಮಾಡುತ್ತಾ ನಿನ್ನ ಜ್ಞಾನವಾಕ್ಯಗಳನ್ನು ಕೇಳಬಹುದು!


ದೇವರೇ, ನಿನ್ನ ಆಲಯದಲ್ಲಿ ನಿನ್ನ ಶಾಶ್ವತ ಪ್ರೀತಿಯ ಕುರಿತು ಧ್ಯಾನಿಸುವೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು