Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 11:1 - ಪರಿಶುದ್ದ ಬೈಬಲ್‌

1 ರಾಜನಾದ ಸೊಲೊಮೋನನು ಸ್ತ್ರೀಯರನ್ನು ಪ್ರೀತಿಸಿದನು! ಅವನು ಇಸ್ರೇಲರಲ್ಲದ ಅನೇಕ ಸ್ತ್ರೀಯರನ್ನು ಪ್ರೀತಿಸಿದನು. ಇವರಲ್ಲಿ ಫರೋಹನ ಮಗಳು, ಮೋವಾಬ್ಯ, ಅಮ್ಮೋನಿಯ, ಎದೋಮ್ಯ ಚೀದೋನ್ಯ ಮತ್ತು ಹಿತ್ತಿಯ ಸ್ತ್ರೀಯರು ಸೇರಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಅರಸನಾದ ಸೊಲೊಮೋನನು ಫರೋಹನ ಮಗಳನ್ನಲ್ಲದೆ ಮೋವಾಬ್ಯರು, ಅಮ್ಮೋನಿಯರು, ಎದೋಮ್ಯರು, ಚೀದೋನ್ಯರು ಮತ್ತು ಹಿತ್ತಿಯರು ಎಂಬ ಜನಾಂಗಗಳ ಸ್ತ್ರೀಯರನ್ನು ಮೋಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಅರಸ ಸೊಲೊಮೋನನು ಫರೋಹನ ಮಗಳನ್ನಲ್ಲದೆ, ಮೋವಾಬ್ಯರು, ಅಮ್ಮೋನಿಯರು, ಎದೋಮ್ಯರು, ಚೀದೋನ್ಯರು, ಹಿತ್ತಿಯರು ಎಂಬೀ ಜನಾಂಗಗಳ ಮಹಿಳೆಯರನ್ನೂ ಮೋಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಅರಸನಾದ ಸೊಲೊಮೋನನು ಫರೋಹನ ಮಗಳಲ್ಲದೆ ಮೋವಾಬ್ಯರು, ಅಮ್ಮೋನಿಯರು, ಎದೋಮ್ಯರು, ಚೀದೋನ್ಯರು, ಹಿತ್ತಿಯರು ಎಂಬೀ ಜನಾಂಗಗಳ ಸ್ತ್ರೀಯರನ್ನೂ ಮೋಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಅರಸನಾದ ಸೊಲೊಮೋನನು ಫರೋಹನ ಮಗಳನ್ನಲ್ಲದೆ ಮೋವಾಬ್ಯರ, ಅಮ್ಮೋನ್ಯರ, ಎದೋಮ್ಯರ, ಸೀದೋನ್ಯರ, ಹಿತ್ತಿಯರ ಸ್ತ್ರೀಯರನ್ನೂ ಪ್ರೀತಿಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 11:1
20 ತಿಳಿವುಗಳ ಹೋಲಿಕೆ  

ಅರಸನಿಗೆ ಮಿತಿಮೀರಿ ಪತ್ನಿಯರು ಇರಬಾರದು. ಯಾಕೆಂದರೆ ಅವರು ಅರಸನನ್ನು ಯೆಹೋವನ ಮಾರ್ಗದಲ್ಲಿ ನಡೆಯದಂತೆ ಮಾಡಿ ಬೇರೆ ಕಡೆಗೆ ತಿರುಗಿಸುವರು. ರಾಜನು ಬೆಳ್ಳಿಬಂಗಾರಗಳನ್ನು ಶೇಖರಿಸಿ ತನ್ನನ್ನು ಐಶ್ವರ್ಯವಂತನನ್ನಾಗಿ ಮಾಡಿಕೊಳ್ಳಬಾರದು.


ಅವು ನಿನ್ನನ್ನು ಕೆಟ್ಟ ಹೆಂಗಸಿನ ಬಳಿಗೆ ಹೋಗದಂತೆ ತಡೆಯುತ್ತವೆ; ಗಂಡನನ್ನು ಬಿಟ್ಟಂಥ ಹೆಂಗಸಿನ ನಯವಾದ ನುಡಿಗಳಿಂದ ತಪ್ಪಿಸಿ ಕಾಪಾಡುತ್ತವೆ.


ಆಗ ಅವು ನಿನ್ನನ್ನು ಬೇರೆ ಹೆಂಗಸರಿಂದ ತಪ್ಪಿಸಿ ಕಾಪಾಡುತ್ತವೆ; ನಿನ್ನನ್ನು ಪಾಪಕ್ಕೆ ನಡೆಸುವಂಥ ಅವರ ಸವಿ ಮಾತುಗಳಿಂದ ತಪ್ಪಿಸಿ ಕಾಪಾಡುತ್ತವೆ.


ವ್ಯಭಿಚಾರಿಣಿಯು ನಿನ್ನೊಡನೆ ಸವಿಮಾತುಗಳನ್ನಾಡಿ ತನ್ನೊಡನೆ ಪಾಪ ಮಾಡುವಂತೆ ನಿನ್ನನ್ನು ಒತ್ತಾಯಿಸಬಹುದು.


ಸೊಲೊಮೋನನು ಅನ್ಯದೇಶಗಳ ತನ್ನ ಪತ್ನಿಯರಿಗೆಲ್ಲ ಇದೇ ರೀತಿ ಮಾಡಿದನು. ಅವನ ಪತ್ನಿಯರು ತಮ್ಮ ದೇವರುಗಳಿಗೆ ಧೂಪಹಾಕಿದರು ಮತ್ತು ಯಜ್ಞಗಳನ್ನು ಅರ್ಪಿಸಿದರು.


ಕಾಮುಕಿಯ ಬಾಯಿ ಆಳವಾದ ಗುಂಡಿಯಂತಿದೆ. ಯೆಹೋವನಿಂದ ಶಪಿಸಲ್ಪಟ್ಟವರು ಆ ಗುಂಡಿಯೊಳಗೆ ಬೀಳುವರು.


ಸೊಲೊಮೋನನು ಈಜಿಪ್ಟಿನ ರಾಜನಾದ ಫರೋಹನ ಮಗಳನ್ನು ಮದುವೆಯಾಗಿ ಅವನೊಂದಿಗೆ ಒಂದು ಒಪ್ಪಂದವನ್ನು ಮಾಡಿಕೊಂಡನು. ಸೊಲೊಮೋನನು ಅವಳನ್ನು ದಾವೀದನಗರಕ್ಕೆ ಕರೆದು ತಂದನು. ಸೊಲೊಮೋನನು ಆ ಸಮಯದಲ್ಲಿ ತನ್ನ ಅರಮನೆಯನ್ನು ಮತ್ತು ಯೆಹೋವನ ದೇವಾಲಯಗಳನ್ನು ನಿರ್ಮಿಸುತ್ತಿದ್ದನು. ಜೆರುಸಲೇಮಿನ ಸುತ್ತಲೂ ಒಂದು ಗೋಡೆಯನ್ನು ಸಹ ಸೊಲೊಮೋನನು ನಿರ್ಮಿಸುತ್ತಿದ್ದನು.


ಮದ್ಯವು ನಿನಗೆ ವಿಚಿತ್ರವಾದವುಗಳನ್ನು ಕಾಣಮಾಡುತ್ತದೆ. ನಿನ್ನ ಮನಸ್ಸನ್ನು ಗಲಿಬಿಲಿ ಮಾಡುತ್ತದೆ.


“ಹೆಂಡತಿ ಇನ್ನೂ ಜೀವದಿಂದಿರುವಾಗ, ಆಕೆಯ ಸಹೋದರಿಯನ್ನು ಹೆಂಡತಿಯನ್ನಾಗಿ ತೆಗೆದುಕೊಳ್ಳಬಾರದು. ಇಲ್ಲವಾದರೆ ಆ ಇಬ್ಬರು ಸಹೋದರಿಯರು ಒಬ್ಬರಿಗೊಬ್ಬರು ವೈರಿಗಳಾಗುವರು. ಹೆಂಡತಿಯ ಸಹೋದರಿಯೊಂದಿಗೆ ಲೈಂಗಿಕ ಸಂಬಂಧ ಮಾಡಬಾರದು.


ನೀವು ಅವರ ಪುತ್ರಿಯರಲ್ಲಿ ಕೆಲವರನ್ನು ನಿಮ್ಮ ಪುತ್ರರಿಗೆ ಹೆಂಡತಿಯರಾಗುವುದಕ್ಕೆ ಆರಿಸಿಕೊಳ್ಳುವಿರಿ. ಅವರ ಪುತ್ರಿಯರು ಸುಳ್ಳುದೇವರುಗಳ ಸೇವೆ ಮಾಡುತ್ತಾರೆ. ನಿಮ್ಮ ಪುತ್ರರನ್ನೂ ಅವರು ಅದೇ ಸೇವೆಗೆ ನಡೆಸುತ್ತಾರೆ.


ನೆಬಾಟನ ಮಗನಾದ ಯಾರೊಬ್ಬಾಮನು ಮಾಡಿದಂತಹ ಪಾಪಗಳನ್ನೇ ಅಹಾಬನು ಮಾಡಿದರೂ ಅವು ಅವನಿಗೆ ಸಾಕಾಗಲಿಲ್ಲ. ಆದ್ದರಿಂದ ಅಹಾಬನು ಎತ್ಬಾಳನ ಮಗಳಾದ ಈಜೆಬೆಲಳನ್ನು ಮದುವೆಯಾದನು. ಎತ್ಬಾಳನು ಚೀದೋನ್ಯರ ರಾಜನಾಗಿದ್ದನು. ನಂತರ ಅಹಾಬನು ಬಾಳ್ ದೇವರನ್ನು ಪೂಜಿಸಿ ಅದರ ಸೇವೆ ಮಾಡಲಾರಂಭಿಸಿದನು.


ಇವರೆಲ್ಲಾ ಅನ್ಯಸ್ತ್ರೀಯರನ್ನು ಮದುವೆಯಾದವರು. ಕೆಲವರಿಗೆ ಆ ಸ್ತ್ರೀಯರಲ್ಲಿ ಮಕ್ಕಳೂ ಹುಟ್ಟಿದ್ದರು.


ನಿನ್ನ ಶಕ್ತಿಯನ್ನು ಹೆಂಗಸರಲ್ಲಿ ವ್ಯರ್ಥಮಾಡಿಕೊಳ್ಳಬೇಡ. ರಾಜನನ್ನು ನಾಶಮಾಡುವವರು ಹೆಂಗಸರುಗಳೇ. ನಿನ್ನನ್ನು ಅವರಲ್ಲಿ ಹಾಳುಮಾಡಿಕೊಳ್ಳಬೇಡ.


ಆ ಕಾಲದಲ್ಲಿ ಸೊಲೊಮೋನನ ಮಗನಾದ ರೆಹಬ್ಬಾಮನು ಯೆಹೂದದ ರಾಜನಾಗಿದ್ದನು. ಅವನು ರಾಜನಾದಾಗ ಅವನಿಗೆ ನಲವತ್ತೊಂದು ವರ್ಷ ವಯಸ್ಸಾಗಿತ್ತು. ರೆಹಬ್ಬಾಮನು ಜೆರುಸಲೇಮ್ ನಗರದಲ್ಲಿ ಹದಿನೇಳು ವರ್ಷ ಆಳಿದನು. ಈ ನಗರದಲ್ಲಿ ತಾನು ಸನ್ಮಾನಿಸಲ್ಪಡಬೇಕೆಂದು ಯೆಹೋವನು ಈ ನಗರವನ್ನು ಆರಿಸಿಕೊಂಡಿದ್ದನು. ಇಸ್ರೇಲಿನ ಎಲ್ಲಾ ನಗರಗಳಲ್ಲಿ ಈ ನಗರವನ್ನು ಆತನು ಆರಿಸಿಕೊಂಡಿದ್ದನು. ಅಮ್ಮೋನಿಯಳಾದ ನಯಮಾ ಎಂಬವಳು ರೆಹಬ್ಬಾಮನ ತಾಯಿ.


ರೆಹಬ್ಬಾಮನು ಸತ್ತುಹೋದನು. ಅವನನ್ನು ಅವನ ಪೂರ್ವಿಕನಾದ ದಾವೀದನಗರದಲ್ಲಿ ಸಮಾಧಿಮಾಡಿದರು. (ಅಮ್ಮೋನಿಯಾದ ನಯಮಾಳು ಅವನ ತಾಯಿ) ಅವನ ನಂತರ ಅವನ ಮಗ ಅಬೀಯಾಮನು ರಾಜನಾದನು.


ಇವೆಲ್ಲಾ ಆದ ಬಳಿಕ ಇಸ್ರೇಲರ ಪ್ರಧಾನರು ನನ್ನ ಬಳಿಗೆ ಬಂದು, “ಎಜ್ರನೇ, ಇಸ್ರೇಲ್ ಜನರು ಸುತ್ತಲೂ ವಾಸಿಸುವ ಅನ್ಯಜನರಿಂದ ತಮ್ಮನ್ನು ಪ್ರತ್ಯೇಕಿಸಿಕೊಳ್ಳಲಿಲ್ಲ. ಯಾಜಕರಾಗಲಿ ಲೇವಿಯರಾಗಲಿ ತಮ್ಮನ್ನು ಪ್ರತ್ಯೇಕಿಸಿಕೊಳ್ಳಲಿಲ್ಲ. ದೇಶದಲ್ಲಿ ವಾಸವಾಗಿರುವ ಕಾನಾನ್ಯರ, ಹಿತ್ತಿಯರ, ಪೆರಿಜ್ಜೀಯರ, ಯೆಬೂಸಿಯರ, ಅಮ್ಮೋನಿಯರ, ಮೋವಾಬ್ಯರ, ಅಮೋರಿಯರ, ಈಜಿಪ್ಟಿನವರ ಕೆಟ್ಟ ಜೀವಿತವು ಇಸ್ರೇಲರ ಮೇಲೆ ಪ್ರಭಾವಬೀರಿದೆ.


ಇಸ್ರೇಲ್ ಜನರು ತಮ್ಮ ಸುತ್ತಲು ವಾಸಿಸುವ ಜನರೊಂದಿಗೆ ಮದುವೆಯಾಗಿದ್ದಾರೆ. ಇಸ್ರೇಲ್ ಜನರು ದೇವರ ವಿಶೇಷ ಜನರಾಗಿದ್ದಾರೆ. ಆದರೆ ಈಗ ಅನ್ಯರೊಂದಿಗೆ ಬೆರೆತು ಹೋಗಿದ್ದಾರೆ. ಇಸ್ರೇಲರ ಪ್ರಧಾನರು, ಮುಖ್ಯಾಧಿಕಾರಿಗಳು ಈ ರೀತಿಯಾಗಿ ಮಾಡಿ ಜನರಿಗೆ ಕೆಟ್ಟ ಮಾದರಿಯಾಗಿ ಜೀವಿಸುತ್ತಿದ್ದಾರೆ” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು