1 ಅರಸುಗಳು 11:11 - ಪರಿಶುದ್ದ ಬೈಬಲ್11 ಆದ್ದರಿಂದ ಯೆಹೋವನು ಸೊಲೊಮೋನನಿಗೆ, “ನಮ್ಮಿಬ್ಬರ ನಡುವೆಯಿದ್ದ ಒಡಂಬಡಿಕೆಯನ್ನು ಮೀರಿಬಿಟ್ಟೆ. ನೀನು ನನ್ನ ಆಜ್ಞೆಗಳನ್ನು ಅನುಸರಿಸಲಿಲ್ಲ. ಆದ್ದರಿಂದ ನಿನ್ನ ರಾಜ್ಯವನ್ನು ನಿನ್ನಿಂದ ಕಿತ್ತುಕೊಂಡು ನಿನ್ನ ಸೇವಕರಲ್ಲಿ ಒಬ್ಬನಿಗೆ ಅದನ್ನು ಕೊಡುವುದಾಗಿ ನಾನು ಪ್ರಮಾಣ ಮಾಡುತ್ತೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಯೆಹೋವನು ಅವನಿಗೆ, “ನೀನು ಈ ರೀತಿಯಾಗಿ ಮಾಡಿ ನನ್ನ ವಿಧಿನಿಬಂಧನೆಗಳನ್ನು ಮೀರಿದ್ದರಿಂದ ನಿನ್ನ ರಾಜ್ಯವನ್ನು ನಿನ್ನಿಂದ ಕಿತ್ತುಕೊಂಡು ನಿನ್ನ ಸೇವಕನಿಗೆ ಕೊಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಆದ್ದರಿಂದ ಸರ್ವೇಶ್ವರ ಅವನ ಮೇಲೆ ಕೋಪಗೊಂಡು, “ನೀನು ಹೀಗೆ ಮಾಡಿ ನನ್ನ ನಿಬಂಧನೆಗಳನ್ನು ಮೀರಿದ್ದರಿಂದ ನಿನ್ನ ರಾಜ್ಯವನ್ನು ಕಿತ್ತುಕೊಂಡು ನಿನ್ನ ದಾಸನಿಗೆ ಕೊಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಅವನಿಗೆ - ನೀನು ಈ ಪ್ರಕಾರ ಮಾಡಿ ನನ್ನ ವಿಧಿನಿಬಂಧನೆಗಳನ್ನು ಮೀರಿದ್ದರಿಂದ ನಿನ್ನ ರಾಜ್ಯವನ್ನು ನಿನ್ನಿಂದ ಕಿತ್ತುಕೊಂಡು ನಿನ್ನ ಸೇವಕನಿಗೆ ಕೊಡುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಆದಕಾರಣ ಯೆಹೋವ ದೇವರು ಸೊಲೊಮೋನನಿಗೆ, “ನೀನು ಹೀಗೆ ನಡೆದು ನಾನು ನಿನಗೆ ಆಜ್ಞಾಪಿಸಿದ ನನ್ನ ಒಡಂಬಡಿಕೆಯನ್ನೂ, ನನ್ನ ಕಟ್ಟಳೆಗಳನ್ನೂ ಕೈಗೊಳ್ಳದೆ ಹೋದುದರಿಂದ ನಿಶ್ಚಯವಾಗಿ ನಾನು ರಾಜ್ಯವನ್ನು ನಿನ್ನಿಂದ ಕಸಿದುಕೊಂಡು ಅದನ್ನು ನಿನ್ನ ಸೇವಕನಿಗೆ ಕೊಡುವೆನು. ಅಧ್ಯಾಯವನ್ನು ನೋಡಿ |
ಯೆಹೋವನು ಅವರ ಪೂರ್ವಿಕರೊಂದಿಗೆ ಮಾಡಿಕೊಂಡಿದ್ದ ಒಡಂಬಡಿಕೆಯನ್ನು ಮತ್ತು ಆತನ ನಿಯಮಗಳನ್ನು ಅವರು ಒಪ್ಪಲಿಲ್ಲ. ಅವರು ಯೆಹೋವನ ಎಚ್ಚರಿಕೆಗೆ ಗಮನವನ್ನೂ ನೀಡಲಿಲ್ಲ. ಅವರು ನಿರರ್ಥಕವಾದ ವಿಗ್ರಹಗಳನ್ನು ಅನುಸರಿಸಿ ನಿಷ್ಪ್ರಯೋಜಕರಾದರು, ಅವರು ತಮ್ಮ ಸುತ್ತಮುತ್ತಲಿನ ಜನಾಂಗಗಳನ್ನು ಅನುಸರಿಸಿದರು. ಯೆಹೋವನು ಇಸ್ರೇಲಿನ ಜನರಿಗೆ ಮಾಡಬಾರದೆಂದು ಎಚ್ಚರಿಸಿ ಹೇಳಿದ್ದನ್ನು ಈ ಜನಾಂಗಗಳು ಮಾಡಿದವು.