1 ಅರಸುಗಳು 11:14 - ಪರಿಶುದ್ದ ಬೈಬಲ್14 ಆ ಸಮಯದಲ್ಲಿ ಸೊಲೊಮೋನನಿಗೆ ಶತ್ರುವಾಗುವಂತೆ ಎದೋಮ್ಯನಾದ ಹದದನನ್ನು ಯೆಹೋವನು ಪ್ರೇರೇಪಿಸಿದನು. ಹದದನು ರಾಜನಾದ ಎದೋಮ್ಯನ ವಂಶದವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಯೆಹೋವನು ಎದೋಮ್ಯನೂ, ರಾಜಪುತ್ರನೂ ಆದ ಹದದನನ್ನು ಸೊಲೊಮೋನನಿಗೆ ವಿರುದ್ಧವಾಗಿ ಎಬ್ಬಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಎದೋಮ್ಯನೂ ರಾಜಪುತ್ರನೂ ಆದ ಹದದನನ್ನು ಸೊಲೊಮೋನನಿಗೆ ವಿರುದ್ಧ ದಂಗೆಯೇಳುವಂತೆ ಮಾಡಿದರು ಸರ್ವೇಶ್ವರ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಯೆಹೋವನು ಎದೋಮ್ಯನೂ ರಾಜಪುತ್ರನೂ ಆದ ಹದದನನ್ನು ಸೊಲೊಮೋನನಿಗೆ ವಿರೋಧವಾಗಿ ಏಳಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಆಗ ಯೆಹೋವ ದೇವರು ಎದೋಮ್ಯನಾದ ಹದದನನ್ನು ಸೊಲೊಮೋನನಿಗೆ ಎದುರಾಳಿಯಾಗಿ ಎಬ್ಬಿಸಿದರು. ಅಧ್ಯಾಯವನ್ನು ನೋಡಿ |
ಆ ಬಳಿಕ ಸರ್ವಶಕ್ತನಾದ ಯೆಹೋವನು ಕೊರಡೆಯಿಂದ ಅಶ್ಶೂರವನ್ನು ಹೊಡೆಯುವನು. ಹಿಂದಿನ ಕಾಲದಲ್ಲಿ ಓರೇಬ್ ಬಂಡೆಯ ಮೇಲೆ ಮಿದ್ಯಾನ್ಯರನ್ನು ಯೆಹೋವನು ಹೇಗೆ ಸೋಲಿಸಿದನೋ ಹಾಗೆಯೇ ಅಶ್ಶೂರವನ್ನು ಸೋಲಿಸುವನು. ಹಿಂದಿನ ಕಾಲದಲ್ಲಿ ಯೆಹೋವನು ಈಜಿಪ್ಟನ್ನು ಶಿಕ್ಷಿಸಿದನು. ಆತನು ಕೋಲನ್ನೆತ್ತಿ ಸಮುದ್ರ ಮಾರ್ಗವಾಗಿ ತನ್ನ ಜನರನ್ನು ಈಜಿಪ್ಟಿನಿಂದ ಹೊರನಡಿಸಿದನು. ಅದೇ ರೀತಿಯಲ್ಲಿ ಅಶ್ಶೂರದಿಂದ ಯೆಹೋವನು ತನ್ನ ಜನರನ್ನು ರಕ್ಷಿಸಿ ಬಿಡಿಸುವನು.
ಇಸ್ರೇಲರ ದೇವರು ಅಶ್ಯೂರದ ರಾಜನಾದ ಪೂಲ್ (ತಿಗ್ಲತ್ಪಿಲೆಸರ್) ಅವರ ಮೇಲೆ ಯುದ್ಧಕ್ಕೆ ಹೋಗುವಂತೆ ಮಾಡಿದನು. ಅವರು ಬಂದು ರೂಬೇನ್, ಗಾದ್ ಮತ್ತು ಮನಸ್ಸೆಯ ಅರ್ಧ ಕುಲದವರೊಂದಿಗೆ ಯುದ್ಧ ಮಾಡಿದರು. ಯುದ್ಧದಲ್ಲಿ ಅವರನ್ನು ಸೋಲಿಸಿ, ಸೆರೆಹಿಡಿದು ಹಲಹ, ಹಾಬೋರ್, ಹಾರ ಮತ್ತು ಗೋಜಾನ್ ನದಿಯ ಸಮೀಪದ ಸ್ಥಳಕ್ಕೆ ಕೈದಿಗಳನ್ನಾಗಿ ಕೊಂಡೊಯ್ದರು. ಅಂದಿನಿಂದ ಇಂದಿನ ತನಕವೂ ಇಸ್ರೇಲರು ಆ ಸ್ಥಳಗಳಲ್ಲಿ ವಾಸಮಾಡುತ್ತಿರುವರು.
ನನ್ನ ಒಡೆಯನೇ, ನನ್ನ ರಾಜನೇ, ನನ್ನ ಮಾತುಗಳನ್ನು ಆಲಿಸು! ನೀನು ನನ್ನ ಮೇಲೆ ಕೋಪಗೊಳ್ಳುವಂತೆ ಯೆಹೋವನು ಮಾಡಿರುವುದಾದರೆ ಆತನಿಗೆ ನೈವೇದ್ಯವನ್ನು ಅರ್ಪಿಸೋಣ. ಆದರೆ ನೀನು ನನ್ನ ಮೇಲೆ ಕೋಪಗೊಳ್ಳುವಂತೆ ಜನರು ಮಾಡಿದ್ದರೆ, ಅವರಿಗೆ ಯೆಹೋವನು ಕೇಡಾಗುವಂತೆ ಮಾಡಲಿ. ನನಗೆ ಯೆಹೋವನು ನೀಡಿದ ಭೂಮಿಯನ್ನು ನಾನು ಬಿಡುವಂತೆ ಜನರು ಬಲವಂತಪಡಿಸಿದರು. ‘ಹೋಗು, ಹೊರದೇಶೀಯರೊಂದಿಗೆ ನೆಲೆಸು. ಹೋಗು, ಇತರ ದೇವರುಗಳನ್ನು ಆರಾಧಿಸು’ ಎಂದು ಜನರು ನನಗೆ ಹೇಳಿದರು.