Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 11:18 - ಪರಿಶುದ್ದ ಬೈಬಲ್‌

18 ಅವರು ಮಿದ್ಯಾನನ್ನು ಬಿಟ್ಟು ಪಾರಾನಿಗೆ ಹೋದರು. ಇತರ ಕೆಲವು ಜನರು ಪಾರಾನಿನಲ್ಲಿ ಅವರೊಂದಿಗೆ ಸೇರಿಕೊಂಡರು. ನಂತರ ಇವರೆಲ್ಲಾ ಒಟ್ಟಿಗೆ ಈಜಿಪ್ಟಿಗೆ ಹೋದರು. ಅವರು ಈಜಿಪ್ಟಿನ ರಾಜನಾದ ಫರೋಹನ ಬಳಿಗೆ ಹೋಗಿ, ಅವನ ಸಹಾಯವನ್ನು ಕೇಳಿದರು. ಫರೋಹನು ಹದದನಿಗೆ ಒಂದು ಮನೆಯನ್ನು ಮತ್ತು ಸ್ವಲ್ಪ ಭೂಮಿಯನ್ನು ಕೊಟ್ಟನು. ಫರೋಹನು ಅವನ ಊಟಕ್ಕಾಗಿ ಪ್ರತಿ ತಿಂಗಳು ಆಹಾರವನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅವರು ಮೊದಲು ಮಿದ್ಯಾನಿಗೂ, ಆ ಮೇಲೆ ಪಾರಾನಿಗೂ ಬಂದರು. ಅಲ್ಲಿಂದ ಕೆಲವು ಜನರು ಪಾರಾನಿನ ಜನರನ್ನು ತಮ್ಮ ಜೊತೆಯಲ್ಲಿ ಕರೆದುಕೊಂಡು ಐಗುಪ್ತದ ಅರಸನಾದ ಫರೋಹನ ಬಳಿಗೆ ಬಂದರು. ಫರೋಹನು ಹದದನಿಗೆ ಆಹಾರವನ್ನು, ಮನೆಯನ್ನೂ ಮತ್ತು ಭೂಮಿಯನ್ನೂ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಅವರು ಮೊದಲು ಮಿದ್ಯಾನಿಗೂ ಆಮೇಲೆ ಪಾರಾನಿಗೂ ಬಂದರು. ಅಲ್ಲಿಂದ ಕೆಲವುಮಂದಿ ಪಾರಾನಿನ ಜನರನ್ನು ತಮ್ಮ ಜೊತೆಯಲ್ಲಿ ಕರೆದುಕೊಂಡು ಈಜಿಪ್ಟಿನ ಅರಸ ಫರೋಹನ ಬಳಿಗೆ ಬಂದರು. ಫರೋಹನು ಹದದನಿಗೆ ಆಹಾರವನ್ನು, ಮನೆಯನ್ನು ಹಾಗು ಭೂಮಿಯನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಅವರು ಮೊದಲು ವಿುದ್ಯಾನಿಗೂ ಆಮೇಲೆ ಪಾರಾನಿಗೂ ಬಂದರು. ಅಲ್ಲಿಂದ ಕೆಲವು ಮಂದಿ ಪಾರಾನಿನ ಜನರನ್ನು ತಮ್ಮ ಜೊತೆಯಲ್ಲಿ ಕರಕೊಂಡು ಐಗುಪ್ತದ ಅರಸನಾದ ಫರೋಹನ ಬಳಿಗೆ ಬಂದರು. ಫರೋಹನು ಹದದನಿಗೆ ಅಶನವನ್ನು ನೇವಿುಸಿ ಮನೆಯನ್ನೂ ಭೂವಿುಯನ್ನೂ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಮಿದ್ಯಾನನ್ನು ಬಿಟ್ಟು ಪಾರಾನಿಗೆ ಬಂದು ಅಲ್ಲಿಂದ ಮನುಷ್ಯರನ್ನು ತೆಗೆದುಕೊಂಡು ಈಜಿಪ್ಟಿನಲ್ಲಿ ಪ್ರವೇಶಿಸಿ ಈಜಿಪ್ಟಿನ ಅರಸನಾದ ಫರೋಹನ ಬಳಿಗೆ ಬಂದರು. ಫರೋಹನು ಹದದನಿಗೆ ಮನೆಯನ್ನು, ಆಹಾರವನ್ನು ಮತ್ತು ಭೂಮಿಯನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 11:18
15 ತಿಳಿವುಗಳ ಹೋಲಿಕೆ  

ಆದ್ದರಿಂದ, ಇಸ್ರೇಲರು ತಮ್ಮ ಪ್ರಯಾಣವನ್ನು ಪ್ರಾರಂಭಿಸಿದರು. ಅವರು ಸೀನಾಯಿ ಮರುಭೂಮಿಯನ್ನು ಬಿಟ್ಟು ಮೇಘವು ಪಾರಾನ್ ಮರುಭೂಮಿಯಲ್ಲಿ ನಿಲ್ಲುವವರೆಗೆ ಪ್ರಯಾಣ ಮಾಡಿದರು.


ಮೋಶೆಯು ಹೇಳಿದ್ದೇನೆಂದರೆ: “ಸೇಯೀರ್‌ನಲ್ಲಿ ಮುಂಜಾನೆಯ ಬೆಳಕು ಪ್ರಕಾಶಿಸುವಂತೆ ಪಾರಾನ್ ಬೆಟ್ಟಗಳ ಮೇಲಿನಿಂದ ಬೆಳಕು ಪ್ರಕಾಶಿಸುವಂತೆ ಯೆಹೋವನು ಸೀನಾಯಿ ಬೆಟ್ಟದಿಂದ ಬಂದನು. ಆತನು ಹತ್ತು ಸಾವಿರ ಪರಿಶುದ್ಧರೊಂದಿಗೆ ಬಂದನು. ಆತನ ಬಲಶಾಲಿಗಳಾದ ಸೈನಿಕರು ಆತನೊಂದಿಗಿದ್ದರು.


ಇಸ್ರೇಲರಿಗೆ ಮೋಶೆಯು ಈ ಆಜ್ಞೆಗಳನ್ನು ಕೊಟ್ಟನು. ಆಗ ಅವರು ಜೋರ್ಡನ್ ನದಿಯ ಪೂರ್ವದಿಕ್ಕಿನಲ್ಲಿರುವ ಅಡವಿಯಲ್ಲಿ ಪಾಳೆಯ ಮಾಡಿಕೊಂಡಿದ್ದರು. ಇದು ಸೂಫಿಗೆ ಎದುರಾಗಿ, ಪಾರಾನಿನ ಮರುಭೂಮಿಗೂ ತೋಫೆಲ್, ಲಾಬಾನ್, ಹಚೇರೋತ್ ಮತ್ತು ದೀಜಾಹಾಬ್ ಪಟ್ಟಣಗಳ ನಡುವೆ ಇತ್ತು.


ತೇಮಾನಿನಿಂದ ಯೆಹೋವನು ಬರುತ್ತಿದ್ದಾನೆ. ಪರಿಶುದ್ಧನಾದವನು ಪಾರಾನ್ ಪರ್ವತದಿಂದ ಬರುತ್ತಿದ್ದಾನೆ. ಯೆಹೋವನ ಮಹಿಮೆಯು ಆಕಾಶಮಂಡಲವನ್ನು ಮುಚ್ಚುತ್ತದೆ. ಅವನ ಸ್ತೋತ್ರವು ಭೂಲೋಕವನ್ನು ತುಂಬುತ್ತದೆ.


ಯಾಕೆಂದರೆ ಅವರು ನಿಮ್ಮನ್ನು ವೈರಿಗಳೆಂದು ಪರಿಗಣಿಸಿ ಪೆಗೋರನ ಘಟನೆಯಲ್ಲಿ ನಿಮ್ಮನ್ನು ಮೋಸಗೊಳಿಸಿದರು. ಮಿದ್ಯಾನಿನ ನಾಯಕನೊಬ್ಬನ ಮಗಳೂ ತಮ್ಮ ರಕ್ತಸಂಬಂಧಿಯೂ ಆಗಿದ್ದ ಕೊಜ್ಬೀಯ ವಿಷಯದಲ್ಲಿಯೂ ಅವರು ನಿಮ್ಮನ್ನು ಮೋಸಗೊಳಿಸಿದರು. ಪೆಗೋರಿನ ಘಟನೆಯಿಂದ ಇಸ್ರೇಲರಿಗೆ ಕಾಯಿಲೆ ಉಂಟಾದಾಗ ಆ ಸ್ತ್ರೀಯೂ ಸತ್ತಳು.”


ಆ ಮಿದ್ಯಾನ್ ಸ್ತ್ರೀಯೊಡನೆ ಕೊಲ್ಲಲ್ಪಟ್ಟವನು ಸಿಮೆಯೋನ್ ಕುಲದವರಲ್ಲಿ ಗೋತ್ರಪ್ರಧಾನನಾಗಿದ್ದ ಜಿಮ್ರೀ. ಇವನು ಸಾಲೂ ಎಂಬವನ ಮಗ.


ಆಗ ಮೋಶೆ ಮತ್ತು ಇಡೀ ಇಸ್ರೇಲ್ ಸಮುದಾಯವು ಒಟ್ಟಾಗಿ ಸೇರಿಬಂದು ದೇವದರ್ಶನಗುಡಾರದ ಬಾಗಿಲಲ್ಲಿ ಅಳುತ್ತಿದ್ದರು. ಅಷ್ಟರಲ್ಲಿ ಇಸ್ರೇಲ್ ಮನುಷ್ಯನೊಬ್ಬನು ಮಿದ್ಯಾನ್ ಸ್ತ್ರೀಯೊಬ್ಬಳನ್ನು ತನ್ನ ಸಂಬಂಧಿಕರ ಬಳಿಗೆ ಕರೆದುಕೊಂಡು ಬಂದನು. ಮೋಶೆಯ ಮತ್ತು ಎಲ್ಲಾ ಜನರ ಕಣ್ಣೆದುರಿನಲ್ಲೇ ಅವನು ಹೀಗೆ ಮಾಡಿದನು.


ಮೋವಾಬ್ಯರು ಮಿದ್ಯಾನ್ಯರ ಹಿರಿಯರಿಗೆ, “ಈ ಜನಸಮೂಹವು ನಮ್ಮನ್ನೂ ನಮ್ಮ ಸುತ್ತಲಿರುವ ಎಲ್ಲವನ್ನೂ ಹೋರಿಯಂತೆ ನಾಶಮಾಡುವುದು” ಎಂದು ಹೇಳಿದರು. ಮೋವಾಬ್ಯರ ಅರಸನೂ ಚಿಪ್ಪೋರನ ಮಗನೂ ಆದ ಬಾಲಾಕನು,


ಮಿದ್ಯಾನನ ಗಂಡುಮಕ್ಕಳು: ಗೇಫಾ, ಗೇಫೆರ್, ಹನೋಕ್, ಅಬೀದಾ ಮತ್ತು ಎಲ್ದಾಗ. ಇವರೆಲ್ಲರೂ ಕೆಟೂರಳ ಸಂತತಿಯವರು.


ಆಕೆ ಅವನಿಗೆ; ಜಿಮ್ರಾನ್, ಯೊಕ್ಷಾನ್, ಮೆದಾನ್, ಮಿದ್ಯಾನ್, ಇಷ್ಬಾಕ್, ಶೂಹ ಎಂಬವರನ್ನು ಹೆತ್ತಳು.


ಅವನ ತಾಯಿಯು ಅವನಿಗೆ ಈಜಿಪ್ಟಿನ ಹುಡುಗಿಯನ್ನು ತಂದು ಮದುವೆ ಮಾಡಿಸಿದಳು. ಅವರು ಪಾರಾನ್ ಕಾಡಿನಲ್ಲಿ ತಮ್ಮ ವಾಸವನ್ನು ಮುಂದುವರಿಸಿದರು.


ಇದಲ್ಲದೆ ಅವರು ಹೋರಿಯರನ್ನು ಬೆಟ್ಟದ ಸೀಮೆಯಿಂದ ಮರುಭೂಮಿಯ ಸಮೀಪದಲ್ಲಿರುವ ಎಲ್ಪಾರಾನಿನವರೆಗೂ ಹಿಂದಟ್ಟಿದರು.


ಆದರೆ ಆ ಕಾಲಕ್ಕೆ ಹದದನಿನ್ನೂ ಚಿಕ್ಕ ಬಾಲಕನಾಗಿದ್ದನು. ಆದ್ದರಿಂದ ಹದದನು ಈಜಿಪ್ಟಿಗೆ ಓಡಿಹೋದನು. ಅವನ ತಂದೆಯ ಕೆಲವು ಜನ ಸೇವಕರೂ ಅವನೊಡನೆ ಹೋದರು.


ಫರೋಹನು ಹದದನನ್ನು ಬಹಳವಾಗಿ ಮೆಚ್ಚಿಕೊಂಡನು. ಫರೋಹನು ತನ್ನ ನಾದಿನಿಯನ್ನೇ ಹದದನಿಗೆ ಪತ್ನಿಯನ್ನಾಗಿ ಕೊಟ್ಟನು. (ರಾಣಿಯಾದ ತಖ್ಪೆನೇಸಳು ಫರೋಹನ ಪತ್ನಿ.)


ಮೋಶೆಯು ಮಾಡಿದ್ದು ಫರೋಹನಿಗೂ ತಿಳಿಯಿತು. ಆದ್ದರಿಂದ ಮೋಶೆಯನ್ನು ಕೊಲ್ಲಿಸಲು ಅವನು ತೀರ್ಮಾನಿಸಿದನು. ಆದರೆ ಮೋಶೆ ಫರೋಹನ ಬಳಿಯಿಂದ ಮಿದ್ಯಾನ್ ದೇಶಕ್ಕೆ ಓಡಿಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು