Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 11:2 - ಪರಿಶುದ್ದ ಬೈಬಲ್‌

2 ಯೆಹೋವನು ಮೊದಲೇ ಇಸ್ರೇಲಿನ ಜನರಿಗೆ, “ಅನ್ಯದೇಶದ ಸ್ತ್ರೀಯರನ್ನು ನೀವು ಮದುವೆಯಾಗಲೇಬಾರದು. ನೀವು ಅವರನ್ನು ಮದುವೆಯಾದರೆ, ತಮ್ಮ ದೇವರುಗಳನ್ನು ಅನುಸರಿಸುವಂತೆ ಅವರು ನಿಮ್ಮನ್ನು ಪ್ರೇರೇಪಿಸುತ್ತಾರೆ” ಎಂದು ಹೇಳಿದ್ದನು. ಆದರೆ ಸೊಲೊಮೋನನು ಈ ಸ್ತ್ರೀಯರನ್ನು ಪ್ರೀತಿಸತೊಡಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಯೆಹೋವನು ಈ ಜನಾಂಗಗಳ ವಿಷಯದಲ್ಲಿ ಇಸ್ರಾಯೇಲರಿಗೆ, “ನಿಮಗೂ ಅವರಿಗೂ ಕೊಡುವುದು ತೆಗೆದುಕೊಳ್ಳುವುದು ನಡೆಯಬಾರದು, ಅದು ನಡೆಯುವುದಾದರೆ ಅವರು ನಿಮ್ಮ ಮನಸ್ಸನ್ನು ತಮ್ಮ ದೇವತೆಗಳ ಕಡೆಗೆ ತಿರುಗಿಸಾರು” ಎಂದು ಆಜ್ಞಾಪಿಸಿದ್ದರೂ ಸೊಲೊಮೋನನು ಅವರ ಸ್ತ್ರೀಯರಲ್ಲಿ ಅನುರಕ್ತನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಸರ್ವೇಶ್ವರ ಈ ಜನಾಂಗಗಳ ವಿಷಯದಲ್ಲಿ ಇಸ್ರಯೇಲರಿಗೆ, “ನಿಮಗೂ ಅವರಿಗೂ ಕೊಟ್ಟುಕೊಳ್ಳುವ ಸಂಬಂಧ ಇರಕೂಡದು; ಹೀಗೆ ವಿವಾಹ ಸಂಬಂಧವಾಗುವುದಾದರೆ ಅವರು ನಿಮ್ಮ ಮನಸ್ಸನ್ನು ತಮ್ಮ ದೇವತೆಗಳ ಕಡೆಗೆ ತಿರುಗಿಸಬಹುದು,” ಎಂದು ಎಚ್ಚರಿಸಿದ್ದರು. ಆದರೂ ಸೊಲೊಮೋನನು ಅವರ ಮಹಿಳೆಯರಲ್ಲಿ ಅನುರಕ್ತನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಯೆಹೋವನು ಈ ಜನಾಂಗಗಳ ವಿಷಯದಲ್ಲಿ ಇಸ್ರಾಯೇಲ್ಯರಿಗೆ - ನಿಮಗೂ ಅವರಿಗೂ ಕೊಟ್ಟುಕೊಳ್ಳುವದು ನಡೆಯಬಾರದು; ಅದು ನಡೆಯುವದಾದರೆ ಅವರು ನಿಮ್ಮ ಮನಸ್ಸನ್ನು ತಮ್ಮ ದೇವತೆಗಳ ಕಡೆಗೆ ತಿರುಗಿಸಾರು ಎಂದು ಆಜ್ಞಾಪಿಸಿದ್ದರೂ ಸೊಲೊಮೋನನು ಅವರ ಸ್ತ್ರೀಯರಲ್ಲಿ ಅನುರಕ್ತನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಈ ಜನಾಂಗಗಳನ್ನು ಕುರಿತು ಯೆಹೋವ ದೇವರು ಇಸ್ರಾಯೇಲರಿಗೆ, “ನೀವು ಅವರ ಬಳಿಗೆ ಪ್ರವೇಶಿಸಬಾರದು. ಅವರು ನಿಶ್ಚಯವಾಗಿ ನಿಮ್ಮ ಹೃದಯವನ್ನು ತಮ್ಮ ದೇವರುಗಳ ಕಡೆಗೆ ತಿರುಗಿಸುವರು,” ಎಂದು ಹೇಳಿದ್ದರು. ಆದರೆ ಸೊಲೊಮೋನನು ಪ್ರೀತಿಯಲ್ಲಿ ಇವರನ್ನು ಅಂಟಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 11:2
24 ತಿಳಿವುಗಳ ಹೋಲಿಕೆ  

ನೀವು ಅವರ ಪುತ್ರಿಯರಲ್ಲಿ ಕೆಲವರನ್ನು ನಿಮ್ಮ ಪುತ್ರರಿಗೆ ಹೆಂಡತಿಯರಾಗುವುದಕ್ಕೆ ಆರಿಸಿಕೊಳ್ಳುವಿರಿ. ಅವರ ಪುತ್ರಿಯರು ಸುಳ್ಳುದೇವರುಗಳ ಸೇವೆ ಮಾಡುತ್ತಾರೆ. ನಿಮ್ಮ ಪುತ್ರರನ್ನೂ ಅವರು ಅದೇ ಸೇವೆಗೆ ನಡೆಸುತ್ತಾರೆ.


ಮೋಸ ಹೋಗಬೇಡಿರಿ. “ದುರ್ಜನರ ಸಹವಾಸ ಸದಾಚಾರದ ಭಂಗ.”


ನಿಮ್ಮ ಪ್ರೀತಿಯು ಯಥಾರ್ಥವಾಗಿರಲಿ. ದುಷ್ಕೃತ್ಯಗಳನ್ನು ದ್ವೇಷಿಸಿರಿ. ಒಳ್ಳೆಯ ಕಾರ್ಯಗಳನ್ನು ಮಾತ್ರ ಮಾಡಿರಿ.


“ಆದರೆ ನಿನ್ನ ವಿರುದ್ಧವಾಗಿ ನಾನು ಹೇಳುವುದೇನೆಂದರೆ: ನಿನ್ನ ಮೊದಲಿನ ಪ್ರೀತಿಯನ್ನು ತೊರೆದುಬಿಟ್ಟಿರುವೆ.


ಇಂಥವರಿಗೆ ಮರಣದಂಡನೆ ಆಗಬೇಕೆಂದು ದೇವರ ಧರ್ಮಶಾಸ್ತ್ರ ಹೇಳುತ್ತದೆ ಎಂಬುದು ಅವರಿಗೆ ಗೊತ್ತಿದೆ. ಆದರೂ ಅವರು ಇಂಥ ಕಾರ್ಯಗಳನ್ನು ಮಾಡುತ್ತಾರೆ ಮತ್ತು ಇಂಥ ಕಾರ್ಯಗಳನ್ನು ಮಾಡುವ ಜನರಿಗೆ ಪ್ರೋತ್ಸಾಹ ನೀಡುತ್ತಾರೆ.


ಯೆಹೂದದ ಜನರು ಬೇರೆ ಜನರಿಗೆ ಮೋಸ ಮಾಡಿದರು. ಜೆರುಸಲೇಮಿನಲ್ಲಿಯೂ ಇಸ್ರೇಲಿನಲ್ಲಿಯೂ ಇರುವ ಜನರು ಭಯಂಕರ ಕೃತ್ಯಗಳನ್ನು ಮಾಡಿದರು. ದೇವರು ತನ್ನ ಆಲಯವನ್ನು ಪ್ರೀತಿಸುತ್ತಾನೆ. ಆದರೆ ಯೆಹೂದದ ಜನರು ಗೊತ್ತಿಲ್ಲದ ದೇವತೆಗಳನ್ನು ಪೂಜಿಸಲು ಪ್ರಾರಂಭಿಸುತ್ತಾರೆ.


ಯೆಹೋವನೇ, ನಿನ್ನನ್ನು ದ್ವೇಷಿಸುವವರನ್ನು ನಾನೂ ದ್ವೇಷಿಸುವೆನು. ನಿನ್ನನ್ನು ವಿರೋಧಿಸುವವರನ್ನು ನಾನೂ ವಿರೋಧಿಸುವೆನು.


ಆದ್ದರಿಂದ ಇಸ್ರೇಲ್ ಜನರೇ, ನಿಮ್ಮ ಮಕ್ಕಳು ಅವರ ಮಕ್ಕಳನ್ನು ಮದುವೆಯಾಗಲು ಬಿಡಬೇಡಿ. ಅವರ ಸಹವಾಸ ಮಾಡಬೇಡಿರಿ. ಅವರ ವಸ್ತುಗಳನ್ನು ಆಶಿಸಬೇಡಿರಿ. ನನ್ನ ಕಟ್ಟಳೆಗಳನ್ನು ಪಾಲಿಸಿರಿ; ಆಗ ನೀವು ಬಲಶಾಲಿಗಳಾಗಿ ಈ ದೇಶವನ್ನು ಅನುಭವಿಸುವಿರಿ. ಈ ದೇಶವನ್ನು ನೀನು ಇಟ್ಟುಕೊಂಡವರಾಗಿ ನಿಮ್ಮ ಮಕ್ಕಳಿಗೆ ಸ್ವಾಸ್ತ್ಯವಾಗಿ ಕೊಡುವಿರಿ.’


ಅವನು ಇಸ್ರೇಲಿನ ರಾಜರುಗಳು ವರ್ತಿಸಿದ ರೀತಿಯಲ್ಲಿ ಜೀವಿಸಿದನು. ಅಹಾಬನ ಕುಟುಂಬದವರು ಹೇಗೆ ಜೀವಿಸಿದರೋ ಹಾಗೆಯೇ ಜೀವಿಸಿದನು. ಯಾಕೆಂದರೆ ಅವನು ಅಹಾಬನ ಮಗಳನ್ನು ಮದುವೆಯಾಗಿದ್ದನು. ಯೆಹೋರಾಮನು ಯೆಹೋವನ ದೃಷ್ಟಿಯಲ್ಲಿ ಕೆಟ್ಟವನಾಗಿ ಜೀವಿಸಿದನು.


ದೇವದರ್ಶಿಯಾದ ಯೇಹೂ ಅವನನ್ನು ಎದುರುಗೊಂಡನು. ಅವನು ಹನಾನೀಯನ ಮಗ. ರಾಜನಿಗೆ ಯೇಹುವು ಹೇಳಿದ್ದೇನೆಂದರೆ, “ನೀನು ದುಷ್ಟಜನರಿಗೆ ಸಹಾಯಮಾಡಿದ್ದೇಕೆ? ಯೆಹೋವನನ್ನು ದ್ವೇಷಿಸುವ ಜನರನ್ನು ನೀನು ಪ್ರೀತಿಸಿದ್ದೇಕೆ? ಆ ಕಾರಣಕ್ಕಾಗಿ ಯೆಹೋವನು ನಿನ್ನ ಮೇಲೆ ಕೋಪಗೊಂಡಿದ್ದಾನೆ.


ಶೆಕೆಮನಿಗೆ ದೀನಳ ಮೇಲೆ ಪ್ರೀತಿಯುಂಟಾಗಿ ಆಕೆಯನ್ನು ಮದುವೆ ಮಾಡಿಕೊಳ್ಳಲು ಇಷ್ಟಪಟ್ಟನು. ಅವನು ತನ್ನನ್ನು ಮದುವೆಯಾಗಬೇಕೆಂದು ಆಕೆಯ ಸಂಗಡ ಮನವೊಲಿಸುವ ಮಾತುಗಳನ್ನಾಡಿದನು.


ಆದ್ದರಿಂದ ಪುರುಷನು ತನ್ನ ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು. ಅವರಿಬ್ಬರೂ ಒಂದೇ ಶರೀರವಾಗುವರು.


“ಕೆಂಪುಸಮುದ್ರದಿಂದ ಯೂಫ್ರೇಟೀಸ್ ನದಿಯವರೆಗೆ ಇರುವ ಪ್ರದೇಶವನ್ನೆಲ್ಲಾ ಕೊಡುವೆನು. ಪಶ್ಚಿಮ ಗಡಿಯು ಫಿಲಿಷ್ಟಿಯ ಸಮುದ್ರವಾಗಿರುವುದು (ಮೆಡಿಟರೇನಿಯನ್ ಸಮುದ್ರ) ಮತ್ತು ಪೂರ್ವ ಗಡಿಯು ಅರೇಬಿಯಾ ಮರುಭೂಮಿಯಾಗಿರುವುದು. ನೀವು ಅಲ್ಲಿ ವಾಸಿಸುವ ಜನರನ್ನು ಸೋಲಿಸುವಂತೆ ನಾನು ಮಾಡುವೆನು; ಅವರೆಲ್ಲರನ್ನು ನೀವು ಬಲವಂತವಾಗಿ ಹೊರಗಟ್ಟುವಿರಿ.


ಎಚ್ಚರಿಕೆಯಾಗಿರಿ! ನೀವು ಹೋಗುತ್ತಿರುವ ದೇಶದಲ್ಲಿರುವ ಜನರೊಂದಿಗೆ ಯಾವ ಒಪ್ಪಂದವನ್ನೂ ಮಾಡಿಕೊಳ್ಳಬೇಡಿರಿ. ನೀವು ಆ ಜನರೊಂದಿಗೆ ಒಪ್ಪಂದ ಮಾಡಿಕೊಂಡರೆ, ಅದು ನಿಮಗೆ ಕೇಡನ್ನು ಬರಮಾಡುವುದು.


ಸೊಲೊಮೋನನು ಇಸ್ರೇಲಿನ ದೇವರಾದ ಯೆಹೋವನನ್ನು ಅನುಸರಿಸದೆ ಬೇರೆ ಕಡೆಗೆ ತಿರುಗಿಕೊಂಡನು. ಆದ್ದರಿಂದ ಯೆಹೋವನು ಸೊಲೊಮೋನನ ಮೇಲೆ ಕೋಪಗೊಂಡನು. ಯೆಹೋವನು ಎರಡು ಸಲ ಸೊಲೊಮೋನನಿಗೆ ದರ್ಶನವನ್ನು ನೀಡಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು