1 ಅರಸುಗಳು 11:23 - ಪರಿಶುದ್ದ ಬೈಬಲ್23 ಸೊಲೊಮೋನನಿಗೆ ವಿರುದ್ಧವಾಗಿ ಶತ್ರುವಾಗುವಂತೆ ಇನ್ನೊಬ್ಬ ಮನುಷ್ಯನನ್ನೂ ದೇವರು ಪ್ರೇರೇಪಿಸಿದನು. ಈ ಮನುಷ್ಯನು ಎಲ್ಯಾದಾವನ ಮಗನಾದ ರೆಜೋನ್ ಎಂಬವನು. ರೆಜೋನನು ತನ್ನ ಒಡೆಯನ ಹತ್ತಿರದಿಂದ ಓಡಿಹೋಗಿದ್ದನು. ಚೋಬದ ರಾಜನಾದ ಹದದೆಜೆರನು ಅವನ ಒಡೆಯ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ದೇವರು ಸೊಲೊಮೋನನಿಗೆ ವಿರೋಧವಾಗಿ ಎಬ್ಬಿಸಿದ ಎರಡನೆಯ ವೈರಿಯು ಎಲ್ಯಾದಾವನ ಮಗನಾದ ರೆಜೋನ್ ಎಂಬುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಸೊಲೊಮೋನನಿಗೆ ವಿರುದ್ಧ ದೇವರು ಎಬ್ಬಿಸಿದ ಎರಡನೆಯ ವೈರಿ ಎಲ್ಯಾದಾವನ ಮಗ ರೆಜೋನ್ ಎಂಬವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ದೇವರು ಸೊಲೊಮೋನನಿಗೆ ವಿರೋಧವಾಗಿ ಎಬ್ಬಿಸಿದ ಎರಡನೆಯ ವೈರಿಯು ಎಲ್ಯಾದಾವನ ಮಗನಾದ ರೆಜೋನ್ ಎಂಬವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಇದಲ್ಲದೆ ದೇವರು ಮತ್ತೊಬ್ಬ ಶತ್ರುವನ್ನು ಸೊಲೊಮೋನನ ಮೇಲೆ ಎಬ್ಬಿಸಿದರು. ಅವನು ಚೋಬದ ಅರಸನಾದ ತನ್ನ ಯಜಮಾನನಾಗಿರುವ ಹದದೆಜೆರನನ್ನು ಬಿಟ್ಟು ಓಡಿ ಹೋದ ಎಲ್ಯಾದಾವನ ಮಗನಾದ ರೆಜೋನನು. ಅಧ್ಯಾಯವನ್ನು ನೋಡಿ |
ನನ್ನ ಜನರಾದ ಇಸ್ರೇಲಿನವರೊಂದಿಗೆ ಯುದ್ಧಕ್ಕೆ ಬರುವಿರಿ. ನೀವು ಕರೀ ಮೋಡದಂತೆ ದೇಶವನ್ನು ಕವಿಯುವಿರಿ. ಆ ಸಮಯ ಬಂದಾಗ ನನ್ನ ದೇಶಕ್ಕೆ ವಿರುದ್ಧವಾಗಿ ಯುದ್ಧ ಮಾಡಲು ನಿಮ್ಮನ್ನು ತರಿಸುವೆನು. ಆಗ ಗೋಗ್ ಮತ್ತು ಅವನೊಂದಿಗಿರುವ ರಾಜ್ಯಗಳು ನಾನು ಎಷ್ಟು ಸಾಮರ್ಥ್ಯಶಾಲಿ ಎಂದು ತಿಳಿದುಕೊಳ್ಳುವರು. ಅವರು ನನ್ನನ್ನು ಗೌರವಿಸಲು ಕಲಿಯುವರು. ನಾನು ಪವಿತ್ರನು ಎಂದು ತಿಳಿಯುವರು. ನಾನು ನಿನಗೇನು ಮಾಡಬೇಕಿದ್ದೇನೆಂದು ಅವರು ಕಾದು ನೋಡುವರು.’”