Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 11:24 - ಪರಿಶುದ್ದ ಬೈಬಲ್‌

24 ದಾವೀದನು ಚೋಬದ ಸೈನ್ಯವನ್ನು ಸೋಲಿಸಿದ ಬಳಿಕ, ರೆಜೋನನು ಕೆಲವು ಜನರನ್ನು ಒಟ್ಟುಗೂಡಿಸಿಕೊಂಡು, ಆ ಕಿರುಸೇನೆಗೆ ತಾನೇ ನಾಯಕನಾದನು. ರೆಜೋನನು ದಮಸ್ಕಕ್ಕೆ ಹೋಗಿ ಅಲ್ಲಿಯೇ ನೆಲೆಸಿದನು. ರೆಜೋನನು ದಮಸ್ಕದ ರಾಜನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ದಾವೀದನು ಚೋಬದವರನ್ನು ಸಂಹರಿಸಿದಾಗ ಅವನು ಚೋಬದ ಅರಸನೂ ಒಡೆಯನೂ ಆದ ಹದದೆಜೆರನನ್ನು ಬಿಟ್ಟು ಓಡಿಹೋಗಿ ಕೆಲವು ಜನರನ್ನು ಕೂಡಿಸಿಕೊಂಡು ತಾನು ಅವರ ನಾಯಕನಾಗಿ ಅವರೊಡನೆ ದಮಸ್ಕಕ್ಕೆ ಬಂದು ಅಲ್ಲಿ ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ದಾವೀದನು ಚೋಬದವರನ್ನು ಸಂಹರಿಸಿದಾಗ ಈ ರೆಜೋನನು ಚೋಬದ ಅರಸನೂ ತನ್ನ ಒಡೆಯನೂ ಆದ ಹದದೆಜೆರನನ್ನು ಬಿಟ್ಟು ಓಡಿಹೋಗಿ, ಕೆಲವು ಮಂದಿಯನ್ನು ಕೂಡಿಸಿಕೊಂಡು, ತಾನು ಅವರ ನಾಯಕನಾಗಿ, ಅವರೊಡನೆ ದಮಸ್ಕಕ್ಕೆ ಬಂದು ಅಲ್ಲಿ ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ದಾವೀದನು ಚೋಬದವರನ್ನು ಸಂಹರಿಸಿದಾಗ ಇವನು ಚೋಬದ ಅರಸನೂ ತನ್ನ ಒಡೆಯನೂ ಆದ ಹದದೆಜೆರನನ್ನು ಬಿಟ್ಟು ಓಡಿಹೋಗಿ ಕೆಲವು ಮಂದಿಯನ್ನು ಕೂಡಿಸಿಕೊಂಡು ತಾನು ಅವರ ನಾಯಕನಾಗಿ ಅವರೊಡನೆ ದಮಸ್ಕಕ್ಕೆ ಬಂದು ಅಲ್ಲಿ ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ದಾವೀದನು ಚೋಬದ ಜನರನ್ನು ಸಂಹರಿಸುವಾಗ ಇವನು ಜನರನ್ನು ತನ್ನ ಬಳಿಯಲ್ಲಿ ಕೂಡಿಸಿಕೊಂಡು ಒಂದು ಗುಂಪಿಗೆ ಅಧಿಪತಿಯಾಗಿ ಅವರ ಸಂಗಡ ದಮಸ್ಕಕ್ಕೆ ಹೋಗಿ ಅಲ್ಲಿ ವಾಸಿಸಿ, ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 11:24
12 ತಿಳಿವುಗಳ ಹೋಲಿಕೆ  

ಆದರೆ ದಾವೀದನು ಅರಾಮ್ಯರನ್ನು ಸೋಲಿಸಿದನು. ಅರಾಮ್ಯರು ಇಸ್ರೇಲರನ್ನು ಬಿಟ್ಟು ಓಡಿಹೋದರು. ದಾವೀದನು ಅರಾಮ್ಯರ ಏಳು ನೂರು ಮಂದಿ ರಥದ ಸಾರಥಿಯರನ್ನೂ ನಲವತ್ತು ಸಾವಿರ ಮಂದಿ ರಾಹುತರನ್ನೂ ಕೊಂದುಹಾಕಿದನು. ಅರಾಮ್ಯರ ಸೇನಾಪತಿಯಾದ ಶೋಬಕನನ್ನು ಸಹ ದಾವೀದನು ಕೊಂದುಹಾಕಿದನು.


ಅಮ್ಮೋನಿಯರು ಹೊರಗೆ ಬಂದು ಯುದ್ಧಕ್ಕೆ ಸಿದ್ಧರಾದರು. ಅವರು ನಗರದ ಬಾಗಿಲಿನಲ್ಲಿ ನಿಂತರು. ಚೋಬಾ ಮತ್ತು ರೆಹೋಬ್‌ಗಳ ಅರಾಮ್ಯರು, ಟೋಬ್ ಮತ್ತು ಮಾಕಾದ ಜನರು ಯುದ್ಧರಂಗದಲ್ಲಿ ಅಮ್ಮೋನಿಯರ ಜೊತೆಯಲ್ಲಿ ಒಟ್ಟಾಗಿ ನಿಲ್ಲಲಿಲ್ಲ.


ದಮಸ್ಕದಲ್ಲಿ ಕ್ರಿಸ್ತನ ಮಾರ್ಗವನ್ನು ಅನುಸರಿಸುವವರನ್ನು ಕಂಡುಹಿಡಿದು, ಸ್ತ್ರೀಯರು, ಪುರುಷರು ಎನ್ನದೆ ಅವರನ್ನು ಬಂಧಿಸಿ ಜೆರುಸಲೇಮಿಗೆ ಎಳೆದುಕೊಂಡು ಬರಲು ತನಗೆ ಅಧಿಕಾರ ಕೊಟ್ಟಿರುವುದಾಗಿ ದಮಸ್ಕ ಪಟ್ಟಣದ ಸಭಾಮಂದಿರಗಳಿಗೆ ಪತ್ರಬರೆಯಬೇಕೆಂದು ಕೇಳಿಕೊಂಡನು.


ಬೆನ್ಹದದನು ಅವನಿಗೆ, “ಅಹಾಬನೇ, ನನ್ನ ತಂದೆಯು ನಿನ್ನ ತಂದೆಯಿಂದ ವಶಪಡಿಸಿಕೊಂಡಿರುವ ಪಟ್ಟಣಗಳನ್ನು ನಿನಗೇ ಬಿಟ್ಟುಬಿಡುತ್ತೇನೆ. ನನ್ನ ತಂದೆಯು ಸಮಾರ್ಯದಲ್ಲಿ ಮಾಡಿದಂತೆ ನೀನೂ ದಮಸ್ಕದಲ್ಲಿ ಅಂಗಡಿಗಳನ್ನು ಹಾಕಬಹುದು” ಎಂದನು. ಅಹಾಬನು, “ನೀನು ಇದಕ್ಕೆ ಒಪ್ಪಿಕೊಂಡರೆ, ನಾನು ನಿನ್ನನ್ನು ಸ್ವತಂತ್ರವಾಗಿ ಹೋಗಲು ಬಿಡುತ್ತೇನೆ” ಎಂದನು. ಆ ಇಬ್ಬರು ರಾಜರುಗಳು ಶಾಂತಿಸಂಧಾನವನ್ನು ಮಾಡಿಕೊಂಡರು. ರಾಜನಾದ ಅಹಾಬನು ಬೆನ್ಹದದನಿಗೆ ಸ್ವತಂತ್ರವನ್ನು ಕೊಟ್ಟು ಕಳುಹಿಸಿದನು.


ಯೆಹೋವನು, “ನೀನು ಬಂದ ದಾರಿಯಿಂದ ಹಿಂತಿರುಗಿ ದಮಸ್ಕದ ಅರಣ್ಯಕ್ಕೆ ಹೋಗು. ಅಲ್ಲಿಂದ ದಮಸ್ಕಕ್ಕೆ ಹೋಗಿ, ಹಜಾಯೇಲನನ್ನು ಅರಾಮ್ಯರ ರಾಜನನ್ನಾಗಿ ಅಭಿಷೇಕಿಸು.


ಆ ರಾತ್ರಿ ಅವನು ಮತ್ತು ಅವನ ಸೇವಕರು ಹಠಾತ್ತನೆ ಶತ್ರುಗಳನ್ನು ಎದುರಿಸಿ ಸೋಲಿಸಿದರು; ದಮಸ್ಕಕ್ಕೆ ಉತ್ತರದಲ್ಲಿರುವ ಹೋಬಾದವರೆಗೂ ಹಿಂದಟ್ಟಿದರು.


ರೆಜೋನನು ಅರಾಮನ್ನು ಆಳಿದನು. ರೆಜೋನನು ಇಸ್ರೇಲಿನ ದ್ವೇಷಿಯಾದ್ದರಿಂದ, ಸೊಲೊಮೋನನ ಜೀವಮಾನದಲ್ಲೆಲ್ಲಾ ಅವನು ಇಸ್ರೇಲಿನ ಶತ್ರುವಾಗಿಯೇ ಮುಂದುವರಿದನು. ರೆಜೋನ್ ಮತ್ತು ಹದದನು ಇಸ್ರೇಲಿಗೆ ಹೆಚ್ಚು ತೊಂದರೆಯನ್ನು ಉಂಟುಮಾಡಿದರು.


ಆದ್ದರಿಂದ ಆಸನು ಯೆಹೋವನ ಆಲಯದ ಮತ್ತು ರಾಜನ ಅರಮನೆಯ ಭಂಡಾರದಲ್ಲಿ ಉಳಿದಿದ್ದ ಎಲ್ಲಾ ಬೆಳ್ಳಿಬಂಗಾರಗಳನ್ನು ತೆಗೆದುಕೊಂಡನು. ಅವನು ತನ್ನ ಸೇವಕರಿಗೆ ಬೆಳ್ಳಿಬಂಗಾರಗಳನ್ನು ಕೊಟ್ಟು, ಅವರನ್ನು ಅರಾಮ್ಯರ ರಾಜನಾದ ಬೆನ್ಹದದನ ಬಳಿಗೆ ಕಳುಹಿಸಿದನು. (ಬೆನ್ಹದದನು ಟಬ್ರಿಮ್ಮೋನನ ಮಗ. ಟಬ್ರಿಮ್ಮೋನನು ಹಜ್ಯೋನನ ಮಗ.) ದಮಸ್ಕ ನಗರವು ಅವನ ರಾಜಧಾನಿಯಾಗಿತ್ತು.


ಎಲೀಷನು ದಮಸ್ಕಕ್ಕೆ ಹೋದನು. ಅರಾಮ್ಯರ ರಾಜನಾದ ಬೆನ್ಹದದನಿಗೆ ಕಾಯಿಲೆಯಾಗಿತ್ತು. ಬೆನ್ಹದದನಿಗೆ ಒಬ್ಬನು, “ದೇವಮನುಷ್ಯನು ಇಲ್ಲಿಗೆ ಬಂದಿದ್ದಾನೆ” ಎಂದು ಹೇಳಿದನು.


“ಇಸ್ರೇಲಿನ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಯಾರೊಬ್ಬಾಮನು ಮಾಡಿದ ಇತರ ಮಹಾಕಾರ್ಯಗಳ ಬಗ್ಗೆ ಬರೆಯಲಾಗಿದೆ. ಯಾರೊಬ್ಬಾಮನು ಇಸ್ರೇಲಿಗಾಗಿ ದಮಸ್ಕವನ್ನು ಮತ್ತು ಹಮಾತನ್ನು ವಶಪಡಿಸಿಕೊಂಡದ್ದನ್ನು ಇದು ಒಳಗೊಂಡಿದೆ. (ಈ ನಗರಗಳು ಯೆಹೂದಕ್ಕೆ ಸೇರಿದ್ದವು.)


ಹದದೆಜೆರನು ರೆಹೋಬನ ಮಗ ಹಾಗೂ ಚೋಬದ ರಾಜ. ದಾವೀದನು ಯೂಫ್ರೇಟೀಸ್ ನದಿಯ ಸುತ್ತಲಿನ ಪ್ರದೇಶವನ್ನು ತನ್ನ ಸ್ವಾಧೀನಕ್ಕೆ ತೆಗೆದುಕೊಳ್ಳಲು ಪ್ರಯತ್ನಿಸುತ್ತಿದ್ದಾಗ, ಹದದೆಜೆರನನ್ನು ಸೋಲಿಸಿದನು.


ಅಮ್ಮೋನಿಯರು ತಾವು ದಾವೀದನಿಗೆ ಶತ್ರುಗಳಾಗಿರುವುದಾಗಿ ತಿಳಿದುಕೊಂಡರು. ಆದ್ದರಿಂದ ಅಮ್ಮೋನಿಯರು ಹಣಕೊಟ್ಟು ಬೇತ್‌ರೆಹೋಬ್ ಮತ್ತು ಚೋಬಾಗಳಿಂದ ಅರಾಮ್ಯರ ಇಪ್ಪತ್ತುಸಾವಿರ ಮಂದಿ ಭೂದಳವನ್ನು ಬರಮಾಡಿಕೊಂಡರು. ಅಮ್ಮೋನಿಯರು ಮಾಕಾದ ರಾಜನನ್ನು ಮತ್ತು ಅವನ ಒಂದು ಸಾವಿರ ಸೈನಿಕರನ್ನು ಹಾಗೂ ಟೋಬ್‌ನಿಂದ ಹನ್ನೆರಡು ಸಾವಿರ ಮಂದಿ ಸೈನಿಕರನ್ನು ಬರಮಾಡಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು