1 ಅರಸುಗಳು 11:27 - ಪರಿಶುದ್ದ ಬೈಬಲ್27 ಯಾರೊಬ್ಬಾಮನು ರಾಜನ ವಿರುದ್ಧ ಏಕೆ ತಿರುಗಿ ಬಿದ್ದನೆಂಬ ಕಥೆಯು ಹೀಗಿದೆ: ಸೊಲೊಮೋನನು ಮಿಲ್ಲೋ ಕೋಟೆಯನ್ನು ಕಟ್ಟುತ್ತಿದ್ದನು ಮತ್ತು ತನ್ನ ತಂದೆಯಾದ ದಾವೀದನ ನಗರದ ಗೋಡೆಯನ್ನು ಭದ್ರಪಡಿಸುತ್ತಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಅವನು ತಿರುಗಿ ಬಿದ್ದದ್ದು ಹೇಗೆಂದರೆ, ಸೊಲೊಮೋನನು ಮಿಲ್ಲೋ ಕೋಟೆಯನ್ನು ಕಟ್ಟಿಸಿ ತನ್ನ ತಂದೆಯಾದ ದಾವೀದನ ಪಟ್ಟಣದ ದುರ್ಬಲ ಸ್ಥಳಗಳನ್ನು ಭದ್ರಪಡಿಸುತ್ತಿರುವಾಗ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಅವನು ದಂಗೆಯೆದ್ದ ವಿವರಣೆ ಹೀಗಿದೆ : ಸೊಲೊಮೋನನು ಮಿಲ್ಲೋಕೋಟೆಯನ್ನು ಕಟ್ಟಿಸಿ ತನ್ನ ತಂದೆ ದಾವೀದನ ಪಟ್ಟಣದ ದುರ್ಬಲ ಸ್ಥಳವನ್ನು ಭದ್ರಪಡಿಸುತ್ತಿರುವಾಗ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಅವನು ತಿರುಗಿ ಬಿದ್ದದ್ದು ಹೇಗಂದರೆ - ಸೊಲೊಮೋನನು ವಿುಲ್ಲೋ ಕೋಟೆಯನ್ನು ಕಟ್ಟಿಸಿ ತನ್ನ ತಂದೆಯಾದ ದಾವೀದನ ಪಟ್ಟಣದ ದುರ್ಬಲಸ್ಥಳವನ್ನು ಭದ್ರಪಡಿಸುತ್ತಿರುವಾಗ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಅವನು ಅರಸನಿಗೆ ವಿರೋಧವಾಗಿ ದಂಗೆಯೆದ್ದ ಕಾರಣವೇನೆಂದರೆ, ಸೊಲೊಮೋನನು ಮಿಲ್ಲೋ ಕೋಟೆಯನ್ನು ಕಟ್ಟಿಸಿ, ತನ್ನ ತಂದೆಯಾದ ದಾವೀದನ ಪಟ್ಟಣದಲ್ಲಿ ಬಿದ್ದುಹೋದವುಗಳನ್ನು ಕಟ್ಟಿಸುತ್ತಿರುವಾಗ, ಅಧ್ಯಾಯವನ್ನು ನೋಡಿ |
ರಾಜನಾದ ಸೊಲೊಮೋನನು ತಾನು ನಿರ್ಮಿಸಿದ್ದ ಆಲಯದ ಮತ್ತು ಅರಮನೆಯ ಕೆಲಸಗಳನ್ನು ಮಾಡಲು ಗುಲಾಮರನ್ನು ಬಲಾತ್ಕರಿಸಿದನು. ರಾಜನಾದ ಸೊಲೊಮೋನನು ಇತರ ಅನೇಕ ಕಟ್ಟಡಗಳ ನಿರ್ಮಾಣಕ್ಕೆ ಬಿಟ್ಟಿಕೆಲಸದವರನ್ನು ಉಪಯೋಗಿಸಿಕೊಂಡನು. ಅವನು ಮಿಲ್ಲೋ ಕೋಟೆಯನ್ನು ನಿರ್ಮಿಸಿದನು; ಜೆರುಸಲೇಮಿನ ಸುತ್ತಲೂ ನಗರದ ಗೋಡೆಯನ್ನು ಕಟ್ಟಿಸಿದನು; ಅಲ್ಲದೆ ಅವನು ಹಾಚೋರ್, ಮೆಗಿದ್ದೋ ಮತ್ತು ಗೆಜೆರ್ ನಗರಗಳನ್ನು ಕಟ್ಟಿಸಿದನು.
ದಾವೀದ ನಗರದ ಕೋಟೆಗೋಡೆಗಳಲ್ಲಿ ಬಿರುಕುಗಳು ಉಂಟಾಗುವವು. ಆ ಬಿರುಕುಗಳನ್ನು ನೀವು ಸ್ಪಷ್ಟವಾಗಿ ಕಾಣಬಹುದು. ಅದರೊಳಗಿರುವ ಮನೆಗಳನ್ನು ಲೆಕ್ಕ ಮಾಡಬಹುದು. ಆ ಮನೆಗಳ ಕಲ್ಲುಗಳನ್ನು ತೆಗೆದು ಬಿರುಕು ಮುಚ್ಚಲಾಗುವದು. ಎರಡು ಸಾಲು ಕೋಟೆಗೋಡೆಗಳ ಮಧ್ಯದಲ್ಲಿ ಹಳೆಯ ಕಾಲುವೆಯ ಮೂಲಕ ನೀರನ್ನು ತರಿಸಿ ಆ ನೀರನ್ನು ಉಳಿತಾಯ ಮಾಡುವಿರಿ. ಇವೆಲ್ಲವನ್ನು ನೀವು ನಿಮ್ಮನ್ನು ಸಂರಕ್ಷಿಸಿಕೊಳ್ಳುವದಕ್ಕೋಸ್ಕರ ಮಾಡುವಿರಿ. ಆದರೆ ಇವೆಲ್ಲವನ್ನು ನಿರ್ಮಿಸಿದ ದೇವರ ಮೇಲೆ ನೀವು ನಂಬಿಕೆ ಇಡುವದಿಲ್ಲ. ಇದನ್ನು ಬಹಳ ಕಾಲದ ಹಿಂದೆ ನಿರ್ಮಿಸಿದ ದೇವರನ್ನು ನೀವು ನೋಡುವದಿಲ್ಲ.
ಆದರೆ ಎಫ್ರಾಯೀಮ್ ಬೆಟ್ಟಪ್ರದೇಶದ ಒಬ್ಬ ಮನುಷ್ಯನಿದ್ದಾನೆ ಅವನನ್ನು ಶೆಬ ಎನ್ನುತ್ತಾರೆ. ಅವನು ಬಿಕ್ರೀಯನ ಮಗನು. ಅವನು ರಾಜನಾದ ದಾವೀದನ ವಿರುದ್ಧ ದಂಗೆ ಎದ್ದಿದ್ದಾನೆ. ನೀನು ಅವನನ್ನು ನನ್ನ ಬಳಿಗೆ ತಂದು ಒಪ್ಪಿಸಿದರೆ, ನಾನು ಈ ನಗರವನ್ನು ಬಿಟ್ಟುಹೋಗುತ್ತೇನೆ” ಎಂದು ಉತ್ತರಿಸಿದನು. ಅವಳು ಯೋವಾಬನಿಗೆ, “ಸರಿ, ಅವನ ತಲೆಯನ್ನು ಗೋಡೆಯ ಮೇಲಿನಿಂದ ನಿನ್ನ ಕಡೆಗೆ ಎಸೆಯಲಾಗುವುದು” ಎಂದು ಹೇಳಿದಳು.