ಇಸ್ರೇಲರು, “ದಾವೀದನಲ್ಲಿ ನಾವು ಹತ್ತುಪಾಲನ್ನು ಹೊಂದಿದ್ದೇವೆ. ಆದ್ದರಿಂದ ದಾವೀದನ ಮೇಲೆ ನಿಮಗಿಂತಲೂ ನಮಗೆ ಹೆಚ್ಚಿನ ಹಕ್ಕಿದೆ. ಆದರೆ ನೀವು ನಮ್ಮನ್ನು ಕಡೆಗಣಿಸಿದ್ದೇಕೆ? ರಾಜನನ್ನು ಹಿಂದಕ್ಕೆ ಕರೆತರಲು ಮಾತಾನಾಡಿದವರಲ್ಲಿ ನಾವೇ ಮೊದಲಿಗರು” ಎಂದು ಉತ್ತರಿಸಿದರು. ಆದರೆ ಯೆಹೂದದ ಜನರು ಇಸ್ರೇಲರಿಗೆ ಕಟುವಾಗಿ ಉತ್ತರಿಸಿದರು. ಯೆಹೂದ ಜನರ ಮಾತುಗಳು ಇಸ್ರೇಲರ ಮಾತುಗಳಿಗಿಂತ ಹೆಚ್ಚು ಕಟುವಾಗಿದ್ದವು.