Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 11:34 - ಪರಿಶುದ್ದ ಬೈಬಲ್‌

34 ಆದ್ದರಿಂದ ನಾನು ಸೊಲೊಮೋನನ ಕುಟುಂಬದಿಂದ ರಾಜ್ಯವನ್ನು ತೆಗೆದುಕೊಳ್ಳುತ್ತೇನೆ. ಆದರೆ ಸೊಲೊಮೋನನು ತನ್ನ ಜೀವಮಾನವೆಲ್ಲಾ ಆಳುವಂತೆ ನಾನು ಅವನಿಗೆ ಅವಕಾಶ ಕೊಡುತ್ತೇನೆ. ನಾನು ನನ್ನ ಸೇವಕನಾದ ದಾವೀದನಿಗಾಗಿ ಇದನ್ನು ಮಾಡುತ್ತೇನೆ. ನಾನು ದಾವೀದನನ್ನು ಆರಿಸಿಕೊಂಡೆನು; ಏಕೆಂದರೆ ಅವನು ನನ್ನ ಕಟ್ಟಳೆಗಳನ್ನೂ ಆಜ್ಞೆಗಳನ್ನೂ ಅನುಸರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಆದರೂ ನಾನು ಸೊಲೊಮೋನನ ಕೈಯಿಂದ ರಾಜ್ಯವನ್ನೆಲ್ಲಾ ಕಿತ್ತುಕೊಳ್ಳುವುದಿಲ್ಲ. ನನ್ನ ಆಜ್ಞಾವಿಧಿಗಳನ್ನು ಕೈಕೊಂಡವನೂ, ನಾನು ಆರಿಸಿಕೊಂಡ ಸೇವಕನೂ ಆದ ದಾವೀದನ ನಿಮಿತ್ತವಾಗಿ ಅವನನ್ನು ಅವನ ಜೀವಮಾನದಲ್ಲೆಲ್ಲಾ ಅರಸನನ್ನಾಗಿಯೇ ಇರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಆದರೂ ನಾನು ಸೊಲೊಮೋನನಿಂದ ಸಾಮ್ರಾಜ್ಯವನ್ನೆಲ್ಲಾ ಕಿತ್ತುಕೊಳ್ಳುವುದಿಲ್ಲ; ನನ್ನ ಆಜ್ಞಾವಿಧಿಗಳನ್ನು ಕೈಕೊಂಡವನೂ ನಾನು ಆರಿಸಿಕೊಂಡ ದಾಸನೂ ಆದ ದಾವೀದನ ನಿಮಿತ್ತ ಅವನನ್ನು ಅವನ ಜೀವಮಾನದಲ್ಲೆಲ್ಲಾ ಅರಸನನ್ನಾಗಿಯೇ ಇರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಆದರೂ ನಾನು ಸೊಲೊಮೋನನ ಕೈಯಿಂದ ರಾಜ್ಯವನ್ನೆಲ್ಲಾ ಕಿತ್ತುಕೊಳ್ಳುವದಿಲ್ಲ; ನನ್ನ ಆಜ್ಞಾವಿಧಿಗಳನ್ನು ಕೈಕೊಂಡವನೂ ನಾನು ಆರಿಸಿಕೊಂಡ ಸೇವಕನೂ ಆದ ದಾವೀದನ ನಿವಿುತ್ತವಾಗಿ ಅವನನ್ನು ಅವನ ಜೀವಮಾನದಲ್ಲೆಲ್ಲಾ ಅರಸನನ್ನಾಗಿಯೇ ಇರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 “ ‘ಆದರೂ ನನ್ನ ಆಜ್ಞೆಗಳನ್ನೂ, ನನ್ನ ತೀರ್ಪುಗಳನ್ನೂ ಕೈಗೊಂಡದ್ದರಿಂದ, ನಾನು ಆಯ್ದು ತೆಗೆದುಕೊಂಡ ನನ್ನ ಸೇವಕನಾದ ದಾವೀದನಿಗೋಸ್ಕರ ನಾನು ಅವನ ಕೈಯಿಂದ ರಾಜ್ಯವನ್ನೆಲ್ಲಾ ತೆಗೆದುಕೊಳ್ಳದೆ, ಅವನ ಜೀವಮಾನದ ಸಕಲ ದಿವಸಗಳಲ್ಲಿ ಅವನನ್ನು ಪ್ರಭುವಾಗಿ ಇರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 11:34
11 ತಿಳಿವುಗಳ ಹೋಲಿಕೆ  

ಯೆಹೋವನೇ, ನಾನು ನಿನ್ನ ವಿಚಾರ ಕೇಳಿದೆನು. ಯೆಹೋವನೇ, ನೀನು ಹಿಂದಿನ ಕಾಲದಲ್ಲಿ ಮಾಡಿದ ಮಹತ್ಕಾರ್ಯಗಳು ನನ್ನನ್ನು ಚಕಿತಗೊಳಿಸಿವೆ. ನಮ್ಮ ಕಾಲದಲ್ಲಿಯೂ ಮಹತ್ಕಾರ್ಯಗಳನ್ನು ಮಾಡಬೇಕೆಂದು ಪ್ರಾರ್ಥಿಸುತ್ತೇನೆ. ದಯಮಾಡಿ, ಆ ಘಟನೆಗಳು ನಮ್ಮ ದಿವಸಗಳಲ್ಲೂ ನೆರವೇರುವಂತೆ ಮಾಡು. ಅದರ ಜೊತೆಯಲ್ಲಿ ನಮ್ಮ ಮೇಲೆ ಕರುಣೆ ತೋರಿಸಲು ಮರೆಯಬೇಡ.


ನಾನು ಹೇಳುವ ವಿಷಯಗಳಿಗೆ ಸರಿಯಾಗಿ ಕಿವಿಗೊಡಿರಿ. ನಿಮ್ಮ ಆತ್ಮಗಳು ಜೀವಿಸುವಂತೆ ನನ್ನ ಮಾತುಗಳನ್ನು ಕೇಳಿರಿ. ನನ್ನ ಬಳಿಗೆ ಬನ್ನಿರಿ, ನಾನು ನಿಮ್ಮೊಂದಿಗೆ ಶಾಶ್ವತವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು. ನಾನು ದಾವೀದನೊಂದಿಗೆ ಮಾಡಿಕೊಂಡ ಒಡಂಬಡಿಕೆಯಂತೆ ಅದಿರುವುದು. ನಾನು ದಾವೀದನಿಗೆ ಅವನನ್ನು ಪ್ರೀತಿಸುವೆನೆಂದೂ ಅವನಿಗೆ ಪ್ರಾಮಾಣಿಕನಾಗಿರುವೆನೆಂದೂ ವಾಗ್ದಾನ ಮಾಡಿದ್ದೆನು. ಆ ಒಡಂಬಡಿಕೆಯನ್ನು ನೀವು ಖಂಡಿತವಾಗಿ ನಂಬಬಹುದು.


ನಾವು ದೇವರಿಗೆ ವಿರೋಧವಾಗಿ ಪಾಪಮಾಡಿದೆವು. ಆದರೂ ತಕ್ಕ ದಂಡನೆಯನ್ನು ಆತನು ನಮಗೆ ಕೊಡಲಿಲ್ಲ.


ಆತನು ನಿನಗೆ ಜ್ಞಾನದ ರಹಸ್ಯಗಳನ್ನು ತಿಳಿಸಿ ಜ್ಞಾನಕ್ಕೆ ಎರಡು ಮುಖಗಳಿವೆ ಎಂದು ತೋರಿಸಿಕೊಟ್ಟರೆ ಎಷ್ಟೋ ಲೇಸು. ದೇವರು ನಿನಗೆ ತಕ್ಕ ದಂಡನೆಯನ್ನು ವಿಧಿಸಿಲ್ಲವೆಂಬುದು ನಿನಗೆ ತಿಳಿದಿರಲಿ.


ಬಳಿಕ ಅಹೀಯನು ಯಾರೊಬ್ಬಾಮನಿಗೆ, “ಈ ಅಂಗಿಯ ಹತ್ತು ತುಂಡುಗಳನ್ನು ನಿನಗೋಸ್ಕರವಾಗಿ ತೆಗೆದುಕೋ. ಇಸ್ರೇಲರ ದೇವರಾದ ಯೆಹೋವನು ಹೀಗೆನ್ನುತ್ತಾನೆ: ಸೊಲೊಮೋನನ ರಾಜ್ಯವನ್ನು ನಾನು ಹರಿದು ತುಂಡುಗಳನ್ನಾಗಿ ಮಾಡುತ್ತೇನೆ. ನಾನು ಹತ್ತು ಕುಲಗಳನ್ನು ನಿನಗೆ ಒಪ್ಪಿಸುತ್ತೇನೆ.


ನಾನು ಅವನಿಗೆ ತಂದೆಯಾಗಿರುವೆನು; ಅವನು ನನಗೆ ಮಗನಾಗಿರುವನು. ಅವನು ಪಾಪಗಳನ್ನು ಮಾಡಿದರೆ ಇತರ ಜನರ ಮೂಲಕ ನಾನು ಅವನನ್ನು ದಂಡಿಸುವೆನು. ಅವರೇ ನನ್ನ ಚಾವಟಿಗಳಾಗಿರುತ್ತಾರೆ.


ಸೊಲೊಮೋನನು ನನ್ನನ್ನು ಅನುಸರಿಸುವುದನ್ನು ನಿಲ್ಲಿಸಿದ ಕಾರಣ ನಾನು ಅವನ ರಾಜ್ಯವನ್ನು ಅವನಿಂದ ತೆಗೆದುಕೊಳ್ಳುವೆನು. ಅವನು ಚೀದೋನ್ಯರ ದೇವತೆಯಾದ ಅಷ್ಟೋರೆತಳನ್ನೂ ಮೋವಾಬ್ಯರ ದೇವರಾದ ಕೆಮೋಷನನ್ನೂ ಅಮ್ಮೋನಿಯರ ದೇವರಾದ ಮಿಲ್ಕೋಮನನ್ನೂ ಪೂಜಿಸಿದನು. ಸೊಲೊಮೋನನು ತಾನು ಮಾಡುತ್ತಿದ್ದ ಸರಿಯಾದ ಮತ್ತು ಉತ್ತಮವಾದ ಕಾರ್ಯಗಳನ್ನು ನಿಲ್ಲಿಸಿದನು. ಅವನು ನನ್ನ ಕಟ್ಟಳೆಗಳನ್ನು ಮತ್ತು ಆಜ್ಞೆಗಳನ್ನು ಅನುಸರಿಸಲಿಲ್ಲ. ತನ್ನ ತಂದೆಯಾದ ದಾವೀದನು ಜೀವಿಸಿದಂತೆ ಅವನು ಜೀವಿಸುತ್ತಿಲ್ಲ.


ಆದರೆ ನಾನು ರಾಜ್ಯವನ್ನು ಅವನ ಮಗನಿಂದ ಕಿತ್ತುಕೊಂಡು ನಿನಗೆ ಹತ್ತು ಕುಲಗಳನ್ನು ಕೊಡುತ್ತೇನೆ.


ನೀನು ನಿನ್ನ ಸದ್ಭಕ್ತರೊಂದಿಗೆ ದರ್ಶನದಲ್ಲಿ ಮಾತಾಡಿದ್ದೇನೆಂದರೆ: “ಯುದ್ಧವೀರನೊಬ್ಬನಿಗೆ ಬಲವನ್ನು ಅನುಗ್ರಹಿಸಿದೆ. ಜನಸಮೂಹದಿಂದ ಒಬ್ಬ ಯೌವನಸ್ಥನನ್ನು ಆರಿಸಿಕೊಂಡು ಗಣ್ಯವ್ಯಕ್ತಿಯನ್ನಾಗಿ ಮಾಡಿದೆ.


ನೀನು ನನ್ನ ಕಟ್ಟಳೆಗಳನ್ನು ಆಜ್ಞೆಗಳನ್ನು ಅನುಸರಿಸುವುದರ ಮೂಲಕ ನನಗೆ ವಿಧೇಯನಾಗಿರಬೇಕು ಎಂದು ಹೇಳುತ್ತೇನೆ. ನಿನ್ನ ತಂದೆಯಾದ ದಾವೀದನು ನಡೆದ ಮಾರ್ಗದಲ್ಲಿ ನೀನೂ ನಡೆ. ಆಗ ನಾನು ನಿನಗೆ ದೀರ್ಘಾಯುಷ್ಯವನ್ನು ಕೊಡುತ್ತೇನೆ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು