1 ಅರಸುಗಳು 11:38 - ಪರಿಶುದ್ದ ಬೈಬಲ್38 ನೀನು ಸರಿಯಾದ ಮಾರ್ಗದಲ್ಲಿ ಜೀವಿಸುತ್ತಾ, ನನ್ನ ಆಜ್ಞೆಗಳನ್ನು ಅನುಸರಿಸಿದರೆ, ನಾನು ಈ ಕಾರ್ಯಗಳೆನ್ನೆಲ್ಲ ನಿನಗೆ ಮಾಡುವೆನು. ನನ್ನ ಕಟ್ಟಳೆಗಳನ್ನೂ ಆಜ್ಞೆಗಳನ್ನೂ ನೀನು ದಾವೀದನಂತೆ ಅನುಸರಿಸಿದರೆ ನಾನು ನಿನ್ನೊಂದಿಗೆ ಇರುತ್ತೇನೆ. ನಾನು ನಿನ್ನ ಕುಟುಂಬವನ್ನು ದಾವೀದನ ಕುಟುಂಬದಂತೆ ರಾಜರುಗಳ ಕುಟುಂಬವನ್ನಾಗಿ ಮಾಡುತ್ತೇನೆ. ನಾನು ನಿನಗೆ ಇಸ್ರೇಲನ್ನು ಕೊಡುತ್ತೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201938 ನನ್ನ ಸೇವಕನಾದ ದಾವೀದನು ನನ್ನ ಆಜ್ಞಾವಿಧಿಗಳನ್ನು ಕೈಕೊಂಡಂತೆ ನೀನೂ ನನ್ನ ಆಜ್ಞೆಗಳನ್ನು ಕೈಕೊಂಡು ನನ್ನ ಮಾರ್ಗದಲ್ಲಿ ನಡೆದು ನನ್ನನ್ನು ಮೆಚ್ಚಿಸುವುದಾದರೆ ನಾನು ನಿನ್ನ ಸಂಗಡ ಇದ್ದು ದಾವೀದನ ಸಂತಾನದಂತೆ ನಿನ್ನ ಸಂತಾನವನ್ನೂ ಸ್ಥಿರಪಡಿಸುವೆನು. ಇಸ್ರಾಯೇಲ್ ರಾಜ್ಯವು ನಿನ್ನ ಪಾಲಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)38 ನನ್ನ ದಾಸ ದಾವೀದನು ನನ್ನ ಆಜ್ಞಾವಿಧಿಗಳನ್ನು ಕೈಕೊಂಡಂತೆ, ನೀನೂ ನನ್ನ ಆಜ್ಞೆಗಳನ್ನು ಕೈಗೊಂಡು, ನನ್ನ ಮಾರ್ಗದಲ್ಲಿ ನಡೆದು ನನ್ನನ್ನು ಮೆಚ್ಚಿಸಿದರೆ, ನಾನು ನಿನ್ನ ಸಂಗಡ ಇದ್ದು ದಾವೀದನ ಸಂತಾನದಂತೆ ನಿನ್ನ ಸಂತಾನವನ್ನೂ ಸ್ಥಿರಪಡಿಸುವೆನು; ಇಸ್ರಯೇಲ್ ರಾಜ್ಯ ನಿನ್ನ ಪಾಲಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)38 ನನ್ನ ಸೇವಕನಾದ ದಾವೀದನು ನನ್ನ ಆಜ್ಞಾವಿಧಿಗಳನ್ನು ಕೈಕೊಂಡಂತೆ ನೀನೂ ನನ್ನ ಆಜ್ಞೆಗಳನ್ನು ಕೈಕೊಂಡು ನನ್ನ ಮಾರ್ಗದಲ್ಲಿ ನಡೆದು ನನ್ನನ್ನು ಮೆಚ್ಚಿಸುವದಾದರೆ ನಾನು ನಿನ್ನ ಸಂಗಡ ಇದ್ದು ದಾವೀದನ ಸಂತಾನದಂತೆ ನಿನ್ನ ಸಂತಾನವನ್ನೂ ಸ್ಥಿರಪಡಿಸುವೆನು; ಇಸ್ರಾಯೇಲ್‍ರಾಜ್ಯವು ನಿನ್ನ ಪಾಲಾಗುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ38 ನಾನು ನಿನಗೆ ಆಜ್ಞಾಪಿಸಿದ್ದೆಲ್ಲಾ ನೀನು ಕೇಳಿ, ನನ್ನ ಮಾರ್ಗಗಳಲ್ಲಿ ನಡೆದು, ನನ್ನ ಸೇವಕನಾದ ದಾವೀದನು ಮಾಡಿದ ಹಾಗೆ, ನನ್ನ ತೀರ್ಪುಗಳನ್ನೂ, ನನ್ನ ಆಜ್ಞೆಗಳನ್ನೂ ಕೈಗೊಂಡು, ನನ್ನ ದೃಷ್ಟಿಗೆ ಯಥಾರ್ಥವಾದದ್ದನ್ನು ಮಾಡಿದರೆ, ನಾನು ನಿನ್ನ ಸಂಗಡ ಇದ್ದು ದಾವೀದನ ಸಂತಾನದಂತೆ ನಿನ್ನ ಸಂತಾನವನ್ನೂ ಸ್ಥಿರಪಡಿಸಿ, ಇಸ್ರಾಯೇಲನ್ನು ನಿನಗೆ ಕೊಡುವೆನು. ಅಧ್ಯಾಯವನ್ನು ನೋಡಿ |