Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 11:4 - ಪರಿಶುದ್ದ ಬೈಬಲ್‌

4 ಸೊಲೊಮೋನನು ವೃದ್ಧನಾದಾಗ, ತನ್ನ ಪತ್ನಿಯರ ದೆಸೆಯಿಂದಾಗಿ ಅನ್ಯದೇವತೆಗಳನ್ನು ಅನುಸರಿಸಿದನು. ತನ್ನ ತಂದೆಯಾದ ದಾವೀದನು ಯೆಹೋವನನ್ನು ಅನುಸರಿಸಿದಂತೆ ಸೊಲೊಮೋನನು ಪೂರ್ಣಮನಸ್ಸಿನಿಂದ ಯೆಹೋವನನ್ನು ಅನುಸರಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅವನು ವೃದ್ಧನಾದಾಗ ಇವರು ಅವನ ಹೃದಯವನ್ನು ಅನ್ಯದೇವತೆಗಳ ಕಡೆಗೆ ತಿರುಗಿಸಿದರು. ಈ ಕಾರಣದಿಂದ ಅವನು ತನ್ನ ದೇವರಾದ ಯೆಹೋವನಲ್ಲಿಟ್ಟಿದ್ದ ಪ್ರಾಮಾಣಿಕವಾದ ಭಕ್ತಿಯನ್ನು ಕಳೆದುಕೊಂಡನು. ತನ್ನ ತಂದೆಯಾದ ದಾವೀದನಂತೆ ನಡೆಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಅವನು ವೃದ್ಧನಾದಾಗ ಇವರು ಅವನ ಹೃದಯವನ್ನು ಅನ್ಯದೇವತೆಗಳ ಕಡೆಗೆ ತಿರುಗಿಸಿದರು. ಈ ಕಾರಣ ಅವನು ತನ್ನ ದೇವರಾದ ಸರ್ವೇಶ್ವರನಲ್ಲಿಟ್ಟಿದ್ದ ಯಥಾರ್ಥ ಭಕ್ತಿಯನ್ನು ಕಳೆದುಕೊಂಡನು. ತನ್ನ ತಂದೆಯಾದ ದಾವೀದನಂತೆ ನಡೆಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅವನು ವೃದ್ಧನಾದಾಗ ಇವರು ಅವನ ಹೃದಯವನ್ನು ಅನ್ಯದೇವತೆಗಳ ಕಡೆಗೆ ತಿರುಗಿಸಿದರು. ಈ ಕಾರಣದಿಂದ ಅವನು ತನ್ನ ದೇವರಾದ ಯೆಹೋವನಲ್ಲಿಟ್ಟಿದ್ದ ಯಥಾರ್ಥಭಕ್ತಿಯನ್ನು ಕಳೆದುಕೊಂಡನು. ತನ್ನ ತಂದೆಯಾದ ದಾವೀದನಂತೆ ನಡಿಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಸೊಲೊಮೋನನು ಮುದುಕನಾದ ಕಾಲದಲ್ಲಿ ಅವನ ಪತ್ನಿಯರು ಅನ್ಯದೇವರುಗಳ ಕಡೆಗೆ ಅವನ ಹೃದಯವನ್ನು ತಿರುಗಿಸಿದರು. ಅವನ ಹೃದಯವು ತನ್ನ ತಂದೆ ದಾವೀದನ ಹೃದಯದ ಹಾಗೆ ತನ್ನ ದೇವರಾದ ಯೆಹೋವ ದೇವರ ಸಂಗಡ ಪರಿಪೂರ್ಣವಾಗಿ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 11:4
26 ತಿಳಿವುಗಳ ಹೋಲಿಕೆ  

ನಿನ್ನ ತಂದೆಯಾದ ದಾವೀದನು ಸೇವೆಮಾಡಿದಂತೆ ನೀನೂ ನನ್ನ ಸೇವೆಮಾಡಬೇಕು, ಅವನು ನ್ಯಾಯವಂತನಾಗಿದ್ದನು ಮತ್ತು ಯಥಾರ್ಥವಂತನಾಗಿದ್ದನು; ನೀನು ನನ್ನ ನಿಯಮಗಳಿಗೆ ವಿಧೇಯನಾಗಿರಬೇಕು ಮತ್ತು ನಾನು ನಿನಗೆ ಆಜ್ಞಾಪಿಸಿದವುಗಳನ್ನೆಲ್ಲ ಮಾಡಬೇಕು.


ನಮ್ಮ ದೇವರಾದ ಯೆಹೋವನಿಗೆ ನೀವು ಪೂರ್ಣ ಭಯಭಕ್ತಿಯುಳ್ಳವರಾಗಿದ್ದು ಆತನ ಕಟ್ಟಳೆಗಳನ್ನೂ ಆಜ್ಞೆಗಳನ್ನೂ ಸದಾ ಅನುಸರಿಸಿರಿ; ಅವುಗಳಿಗೆ ವಿಧೇಯರಾಗಿರಿ. ಈಗ ನೀವು ವಿಧೇಯರಾಗಿರುವಂತೆಯೇ ಇನ್ನು ಮುಂದೆಯೂ ಆತನಿಗೆ ವಿಧೇಯರಾಗಿರಿ” ಎಂದನು.


“ನನ್ನ ಮಗನಾದ ಸೊಲೊಮೋನನೇ, ನಿನ್ನ ತಂದೆಯ ದೇವರನ್ನು ನೀನು ಚೆನ್ನಾಗಿ ಅರಿತುಕೋ. ನೀನು ಪೂರ್ಣಹೃದಯದಿಂದಲೂ ಪೂರ್ಣಮನಸ್ಸಿನಿಂದಲೂ ನಿನ್ನ ದೇವರನ್ನು ಸೇವಿಸು. ದೇವರು ಪ್ರತಿಯೊಬ್ಬನ ಹೃದಯ ಮನಸ್ಸುಗಳನ್ನು ನೋಡುತ್ತಾನೆ. ನೀನು ದೇವರ ಸಹಾಯವನ್ನು ಕೇಳಿದರೆ ಆತನು ನಿನ್ನ ಪ್ರಾರ್ಥನೆಯನ್ನು ಲಾಲಿಸುವನು. ಆದರೆ ನೀನು ದೇವರನ್ನು ಬಿಟ್ಟರೆ ಆತನು ನಿನ್ನನ್ನು ಬಿಟ್ಟುಹೋಗುವನು.


ಹೀಗೆ ಸೊಲೊಮೋನನು ಯೆಹೋವನ ದೃಷ್ಟಿಯಲ್ಲಿ ಕೆಟ್ಟದಾಗಿದ್ದ ಕಾರ್ಯಗಳನ್ನು ಮಾಡಿದನು; ತನ್ನ ತಂದೆಯಾದ ದಾವೀದನು ಪೂರ್ಣಮನಸ್ಸಿನಿಂದ ಯೆಹೋವನನ್ನು ಅನುಸರಿಸಿದಂತೆ ಅನುಸರಿಸಲಿಲ್ಲ.


ಯೋಷೀಯನು ಯೆಹೋವನಿಗೆ ಮೆಚ್ಚಿಕೆಯಾದ ಕಾರ್ಯಗಳನ್ನೇ ಮಾಡಿದನು. ಅವನು ತನ್ನ ಪೂರ್ವಿಕನಾದ ದಾವೀದನಂತೆ ದೇವರ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದನು. ಅವನು ಒಳ್ಳೆಯ ಕಾರ್ಯಗಳನ್ನು ಮಾಡುವುದನ್ನು ಬಿಟ್ಟುಬಿಡಲಿಲ್ಲ.


ಯೆಹೋವನು ಯೆಹೋಷಾಫಾಟನೊಂದಿಗೆ ಇದ್ದನು; ಯಾಕೆಂದರೆ ಯೆಹೋಷಾಫಾಟನು ತನ್ನ ಯೌವನ ಕಾಲದಲ್ಲಿಯೇ ತನ್ನ ಪೂರ್ವಿಕನಾದ ದಾವೀದನಂತೆ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿ ಜೀವಿಸಿದನು. ಅವನು ಬಾಳನ ಪೂಜೆಯನ್ನು ಮಾಡಲಿಲ್ಲ.


ಯೆಹೋವನು ಮೊದಲೇ ಇಸ್ರೇಲಿನ ಜನರಿಗೆ, “ಅನ್ಯದೇಶದ ಸ್ತ್ರೀಯರನ್ನು ನೀವು ಮದುವೆಯಾಗಲೇಬಾರದು. ನೀವು ಅವರನ್ನು ಮದುವೆಯಾದರೆ, ತಮ್ಮ ದೇವರುಗಳನ್ನು ಅನುಸರಿಸುವಂತೆ ಅವರು ನಿಮ್ಮನ್ನು ಪ್ರೇರೇಪಿಸುತ್ತಾರೆ” ಎಂದು ಹೇಳಿದ್ದನು. ಆದರೆ ಸೊಲೊಮೋನನು ಈ ಸ್ತ್ರೀಯರನ್ನು ಪ್ರೀತಿಸತೊಡಗಿದನು.


ಅರಸನಿಗೆ ಮಿತಿಮೀರಿ ಪತ್ನಿಯರು ಇರಬಾರದು. ಯಾಕೆಂದರೆ ಅವರು ಅರಸನನ್ನು ಯೆಹೋವನ ಮಾರ್ಗದಲ್ಲಿ ನಡೆಯದಂತೆ ಮಾಡಿ ಬೇರೆ ಕಡೆಗೆ ತಿರುಗಿಸುವರು. ರಾಜನು ಬೆಳ್ಳಿಬಂಗಾರಗಳನ್ನು ಶೇಖರಿಸಿ ತನ್ನನ್ನು ಐಶ್ವರ್ಯವಂತನನ್ನಾಗಿ ಮಾಡಿಕೊಳ್ಳಬಾರದು.


ದೇವರ ದೃಷ್ಟಿಯಲ್ಲಿ ಯೋಗ್ಯವಾದದ್ದನ್ನು ಅಮಚ್ಯನು ಮಾಡಿದರೂ ಹೃದಯ ಪೂರ್ವಕವಾಗಿ ಮಾಡಲಿಲ್ಲ.


ನನ್ನ ಮಗನಾದ ಸೊಲೊಮೋನನೂ ನಿನಗೆ ನಂಬಿಗಸ್ತನಾಗಿರುವಂತೆ ಸಹಾಯಮಾಡು. ನಿನ್ನ ಆಜ್ಞೆ, ಕಟ್ಟಳೆ ಮತ್ತು ನಿಯಮಗಳನ್ನು ಅನುಸರಿಸಲು ಸಹಾಯಮಾಡು. ನಿನ್ನ ಮಂದಿರಕ್ಕಾಗಿ ನಾನು ಇಷ್ಟೆಲ್ಲವನ್ನು ಸಿದ್ಧಮಾಡಿರುವೆನಲ್ಲಾ, ಅವನು ಅದನ್ನು ಕಟ್ಟಿ ಪೂರ್ಣಗೊಳಿಸಲು ಸಹಾಯಮಾಡು.”


“ಯೆಹೋವನೇ, ನಾನು ಪೂರ್ಣಮನಸ್ಸಿನಿಂದ ನಿಜವಾಗಿಯೂ ನಿನ್ನ ಸೇವೆಮಾಡಿದ್ದೇನೆಂಬುದನ್ನು ನೆನಪುಮಾಡಿಕೊ. ನೀನು ಯೋಗ್ಯವೆಂದು ಹೇಳಿದವುಗಳನ್ನು ನಾನು ಮಾಡಿದೆನು” ಎಂದು ಹೇಳಿದನು. ನಂತರ ಹಿಜ್ಕೀಯನು ಬಹಳ ಜೋರಾಗಿ ಗೋಳಾಡಿದನು.


ಆಸನು ಎತ್ತರವಾದ ಸ್ಥಳಗಳನ್ನು ನಾಶಪಡಿಸಲಿಲ್ಲ. ಆದರೆ ಅವನು ತನ್ನ ಜೀವಮಾನವೆಲ್ಲಾ ಯೆಹೋವನಿಗೆ ನಂಬಿಗಸ್ಥನಾಗಿದ್ದನು.


ಅವನಿಗಿಂತಲೂ ಮುಂಚೆ ಅವನ ತಂದೆಯು ಮಾಡಿದ ಪಾಪಗಳನ್ನೇ ಅವನೂ ಮಾಡಿದನು. ಅವನ ಪಿತೃವಾದ ದಾವೀದನು ತನ್ನ ದೇವರಾದ ಯೆಹೋವನಿಗೆ ನಂಬಿಗಸ್ತನಾಗಿದ್ದಂತೆ ಅಬೀಯಾಮನು ನಂಬಿಗಸ್ತನಾಗಿರಲಿಲ್ಲ.


ಆ ಕಾಲದಲ್ಲಿ ಸೊಲೊಮೋನನ ಮಗನಾದ ರೆಹಬ್ಬಾಮನು ಯೆಹೂದದ ರಾಜನಾಗಿದ್ದನು. ಅವನು ರಾಜನಾದಾಗ ಅವನಿಗೆ ನಲವತ್ತೊಂದು ವರ್ಷ ವಯಸ್ಸಾಗಿತ್ತು. ರೆಹಬ್ಬಾಮನು ಜೆರುಸಲೇಮ್ ನಗರದಲ್ಲಿ ಹದಿನೇಳು ವರ್ಷ ಆಳಿದನು. ಈ ನಗರದಲ್ಲಿ ತಾನು ಸನ್ಮಾನಿಸಲ್ಪಡಬೇಕೆಂದು ಯೆಹೋವನು ಈ ನಗರವನ್ನು ಆರಿಸಿಕೊಂಡಿದ್ದನು. ಇಸ್ರೇಲಿನ ಎಲ್ಲಾ ನಗರಗಳಲ್ಲಿ ಈ ನಗರವನ್ನು ಆತನು ಆರಿಸಿಕೊಂಡಿದ್ದನು. ಅಮ್ಮೋನಿಯಳಾದ ನಯಮಾ ಎಂಬವಳು ರೆಹಬ್ಬಾಮನ ತಾಯಿ.


ಸಮಸ್ತ ಇಸ್ರೇಲನ್ನು ಸೊಲೊಮೋನನು ಜೆರುಸಲೇಮಿನಲ್ಲಿ ನಲವತ್ತು ವರ್ಷಗಳ ಕಾಲ ಆಳಿದನು.


ನೀನು ಸರಿಯಾದ ಮಾರ್ಗದಲ್ಲಿ ಜೀವಿಸುತ್ತಾ, ನನ್ನ ಆಜ್ಞೆಗಳನ್ನು ಅನುಸರಿಸಿದರೆ, ನಾನು ಈ ಕಾರ್ಯಗಳೆನ್ನೆಲ್ಲ ನಿನಗೆ ಮಾಡುವೆನು. ನನ್ನ ಕಟ್ಟಳೆಗಳನ್ನೂ ಆಜ್ಞೆಗಳನ್ನೂ ನೀನು ದಾವೀದನಂತೆ ಅನುಸರಿಸಿದರೆ ನಾನು ನಿನ್ನೊಂದಿಗೆ ಇರುತ್ತೇನೆ. ನಾನು ನಿನ್ನ ಕುಟುಂಬವನ್ನು ದಾವೀದನ ಕುಟುಂಬದಂತೆ ರಾಜರುಗಳ ಕುಟುಂಬವನ್ನಾಗಿ ಮಾಡುತ್ತೇನೆ. ನಾನು ನಿನಗೆ ಇಸ್ರೇಲನ್ನು ಕೊಡುತ್ತೇನೆ.


ಯೆಹೋವನ ಆಲಯವನ್ನು ಮತ್ತು ರಾಜನ ಅರಮನೆಯನ್ನು ಕಟ್ಟಲು ರಾಜನಾದ ಸೊಲೊಮೋನನಿಗೆ ಇಪ್ಪತ್ತು ವರ್ಷಗಳು ಹಿಡಿಯಿತು.


ಇಸ್ರೇಲಿನ ಜನರು ಈಜಿಪ್ಟನ್ನು ಬಿಟ್ಟ ನಾನೂರ ಎಂಭತ್ತನೆಯ ವರ್ಷದಲ್ಲಿ ಅಂದರೆ ರಾಜನಾದ ಸೊಲೊಮೋನನು ಇಸ್ರೇಲನ್ನು ಆಳಲಾರಂಭಿಸಿದ ನಾಲ್ಕನೆಯ ವರ್ಷದಲ್ಲಿ ದೇವಾಲಯದ ನಿರ್ಮಾಣವು ಆರಂಭಗೊಂಡಿತು. ಅದು ವರ್ಷದ ಎರಡನೆಯ ತಿಂಗಳಾದ ಜೀವ್ (ವೈಶಾಖ) ತಿಂಗಳಲ್ಲಿ ಆರಂಭಗೊಂಡಿತು.


ಯಾಕೆಂದರೆ, ನನ್ನನ್ನು ಹಿಂಬಾಲಿಸದಂತೆ ಅವರು ನಿಮ್ಮ ಮಕ್ಕಳನ್ನು ಮಾರ್ಪಡಿಸುವರು. ಆಗ ನಿಮ್ಮ ಮಕ್ಕಳು ಅನ್ಯದೇವರುಗಳ ಸೇವೆಮಾಡುವರು. ಆಗ ಯೆಹೋವನು ನಿಮ್ಮ ಮೇಲೆ ಬಹಳ ಕೋಪಗೊಂಡು ನಿಮ್ಮನ್ನು ಬೇಗನೆ ನಾಶಮಾಡುವನು.


ಸೊಲೊಮೋನನು ತನಗೆ ಯೆಹೋವನ ಮೇಲಿದ್ದ ಪ್ರೀತಿಯನ್ನು ತೋರ್ಪಡಿಸಿದನು. ಅವನ ತಂದೆಯಾದ ದಾವೀದನು ಅವನಿಗೆ ಮಾಡಬೇಕೆಂದು ಹೇಳಿದ್ದ ಎಲ್ಲ ಕಾರ್ಯಗಳನ್ನು ಮಾಡುವುದರ ಮೂಲಕ ವಿಧೇಯತೆಯನ್ನು ತೋರ್ಪಡಿಸಿದನು. ಆದರೆ ಸೊಲೊಮೋನನು ತನಗೆ ದಾವೀದನು ಹೇಳದೆ ಇದ್ದ ಕೆಲವು ಕಾರ್ಯಗಳನ್ನೂ ಮಾಡಿದನು. ಸೊಲೊಮೋನನು ಎತ್ತರವಾದ ಸ್ಥಳಗಳನ್ನು ಯಜ್ಞವನ್ನರ್ಪಿಸಲು ಮತ್ತು ಧೂಪಹಾಕಲು ಉಪಯೋಗಿಸುತ್ತಿದ್ದನು.


ಸೊಲೊಮೋನನು ಇಸ್ರೇಲಿನ ದೇವರಾದ ಯೆಹೋವನನ್ನು ಅನುಸರಿಸದೆ ಬೇರೆ ಕಡೆಗೆ ತಿರುಗಿಕೊಂಡನು. ಆದ್ದರಿಂದ ಯೆಹೋವನು ಸೊಲೊಮೋನನ ಮೇಲೆ ಕೋಪಗೊಂಡನು. ಯೆಹೋವನು ಎರಡು ಸಲ ಸೊಲೊಮೋನನಿಗೆ ದರ್ಶನವನ್ನು ನೀಡಿದ್ದನು.


“ನನ್ನನ್ನಲ್ಲದೆ ಬೇರೆ ಯಾವ ದೇವರುಗಳನ್ನೂ ನೀವು ಆರಾಧಿಸಬಾರದು.


ಸೊಲೊಮೋನನು ನನ್ನನ್ನು ಅನುಸರಿಸುವುದನ್ನು ನಿಲ್ಲಿಸಿದ ಕಾರಣ ನಾನು ಅವನ ರಾಜ್ಯವನ್ನು ಅವನಿಂದ ತೆಗೆದುಕೊಳ್ಳುವೆನು. ಅವನು ಚೀದೋನ್ಯರ ದೇವತೆಯಾದ ಅಷ್ಟೋರೆತಳನ್ನೂ ಮೋವಾಬ್ಯರ ದೇವರಾದ ಕೆಮೋಷನನ್ನೂ ಅಮ್ಮೋನಿಯರ ದೇವರಾದ ಮಿಲ್ಕೋಮನನ್ನೂ ಪೂಜಿಸಿದನು. ಸೊಲೊಮೋನನು ತಾನು ಮಾಡುತ್ತಿದ್ದ ಸರಿಯಾದ ಮತ್ತು ಉತ್ತಮವಾದ ಕಾರ್ಯಗಳನ್ನು ನಿಲ್ಲಿಸಿದನು. ಅವನು ನನ್ನ ಕಟ್ಟಳೆಗಳನ್ನು ಮತ್ತು ಆಜ್ಞೆಗಳನ್ನು ಅನುಸರಿಸಲಿಲ್ಲ. ತನ್ನ ತಂದೆಯಾದ ದಾವೀದನು ಜೀವಿಸಿದಂತೆ ಅವನು ಜೀವಿಸುತ್ತಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು