1 ಅರಸುಗಳು 11:5 - ಪರಿಶುದ್ದ ಬೈಬಲ್5 ಸೊಲೊಮೋನನು ಅಷ್ಟೋರೆತ್ ದೇವತೆಯನ್ನು ಪೂಜಿಸಿದನು. ಇದು ಚೀದೋನ್ಯರ ದೇವತೆ. ಸೊಲೊಮೋನನು ಮಿಲ್ಕೋಮನನ್ನು ಆರಾಧಿಸಿದನು. ಇದು ಅಮ್ಮೋನಿಯರ ಭಯಂಕರ ವಿಗ್ರಹ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಅವನು ಚೀದೋನ್ಯರ ಅಷ್ಟೋರೆತ್ ದೇವತೆಯನ್ನೂ, ಅಮ್ಮೋನಿಯರ ಮಿಲ್ಕೋಮ್ ಎಂಬ ಅಸಹ್ಯ ವಿಗ್ರಹವನ್ನು ಆರಾಧಿಸತೊಡಗಿ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಸಿದೋನ್ಯರ ಅಷ್ಟೋರೆತ್ ದೇವತೆಯನ್ನೂ ಅಮ್ಮೋನಿಯರ ಮಿಲ್ಕೋಮ್ ಎಂಬ ಅಸಹ್ಯ ವಿಗ್ರಹವನ್ನೂ ಆರಾಧಿಸತೊಡಗಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಅವನು ಚೀದೋನ್ಯರ ಅಷ್ಟೋರೆತ್ ದೇವತೆಯನ್ನೂ ಅಮ್ಮೋನಿಯರ ವಿುಲ್ಕೋಮ್ ಎಂಬ ಅಸಹ್ಯ ವಿಗ್ರಹವನ್ನೂ ಆರಾಧಿಸತೊಡಗಿ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಸೊಲೊಮೋನನು ಸೀದೋನ್ಯರ ದೇವತೆಯಾದ ಅಷ್ಟೋರೆತಳನ್ನೂ, ಅಮ್ಮೋನ್ಯರ ಅಸಹ್ಯಕರವಾದ ಮಿಲ್ಕೋಮನ್ನೂ ಹಿಂಬಾಲಿಸಿದನು. ಅಧ್ಯಾಯವನ್ನು ನೋಡಿ |
ಪೂರ್ವಕಾಲದಲ್ಲಿ, ರಾಜನಾದ ಸೊಲೊಮೋನನು ಜೆರುಸಲೇಮಿನ ಬಳಿಯಲ್ಲಿದ್ದ ವಿಘ್ನಪರ್ವತದ ಮೇಲೆ ಕೆಲವು ಉನ್ನತಸ್ಥಳಗಳನ್ನು ನಿರ್ಮಿಸಿದ್ದನು. ಆ ಉನ್ನತಸ್ಥಳಗಳು ಪರ್ವತದ ದಕ್ಷಿಣದಿಕ್ಕಿನ ಮೇಲಿದ್ದವು. ರಾಜನಾದ ಸೊಲೊಮೋನನು ಚೀದೋನ್ಯರ ಅಷ್ಟೋರೆತ್, ಮೋವಾಬ್ಯರ ಕೆಮೋಷ್, ಅಮ್ಮೋನಿಯರ ಮಿಲ್ಕೋಮ್ ಎಂಬ ಅಸಹ್ಯ ವಿಗ್ರಹಗಳಿಗಾಗಿ ಆ ಉನ್ನತಸ್ಥಳಗಳನ್ನು ನಿರ್ಮಿಸಿದ್ದನು. ಆದರೆ ರಾಜನಾದ ಯೋಷೀಯನು ಆ ಪೂಜಾಸ್ಥಳಗಳನ್ನೆಲ್ಲಾ ನಾಶಪಡಿಸಿದನು.
ಸೊಲೊಮೋನನು ನನ್ನನ್ನು ಅನುಸರಿಸುವುದನ್ನು ನಿಲ್ಲಿಸಿದ ಕಾರಣ ನಾನು ಅವನ ರಾಜ್ಯವನ್ನು ಅವನಿಂದ ತೆಗೆದುಕೊಳ್ಳುವೆನು. ಅವನು ಚೀದೋನ್ಯರ ದೇವತೆಯಾದ ಅಷ್ಟೋರೆತಳನ್ನೂ ಮೋವಾಬ್ಯರ ದೇವರಾದ ಕೆಮೋಷನನ್ನೂ ಅಮ್ಮೋನಿಯರ ದೇವರಾದ ಮಿಲ್ಕೋಮನನ್ನೂ ಪೂಜಿಸಿದನು. ಸೊಲೊಮೋನನು ತಾನು ಮಾಡುತ್ತಿದ್ದ ಸರಿಯಾದ ಮತ್ತು ಉತ್ತಮವಾದ ಕಾರ್ಯಗಳನ್ನು ನಿಲ್ಲಿಸಿದನು. ಅವನು ನನ್ನ ಕಟ್ಟಳೆಗಳನ್ನು ಮತ್ತು ಆಜ್ಞೆಗಳನ್ನು ಅನುಸರಿಸಲಿಲ್ಲ. ತನ್ನ ತಂದೆಯಾದ ದಾವೀದನು ಜೀವಿಸಿದಂತೆ ಅವನು ಜೀವಿಸುತ್ತಿಲ್ಲ.