1 ಅರಸುಗಳು 12:14 - ಪರಿಶುದ್ದ ಬೈಬಲ್14 ತನ್ನ ಸ್ನೇಹಿತರು ತಿಳಿಸಿದಂತೆಯೇ ಅವನು ಮಾಡಿದನು. ರೆಹಬ್ಬಾಮನು, “ನನ್ನ ತಂದೆಯು ಕಷ್ಟದ ಕೆಲಸಗಳನ್ನು ಮಾಡಲು ನಿಮ್ಮನ್ನು ಬಲಾತ್ಕರಿಸಿದನು. ನಾನು ನಿಮಗೆ ಮತ್ತಷ್ಟು ಹೆಚ್ಚು ಕೆಲಸವನ್ನು ಕೊಡುತ್ತೇನೆ. ನನ್ನ ತಂದೆಯು ಬಾರುಕೋಲಿನಿಂದ ನಿಮ್ಮನ್ನು ಹೊಡೆಸಿದನು. ಆದರೆ ನಾನು ನಿಮ್ಮನ್ನು ಮತ್ತಷ್ಟು ಕಠಿಣವಾಗಿ ಮುಳ್ಳುಕೋಲುಗಳಿಂದ ಹೊಡೆಸುತ್ತೇನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 “ನನ್ನ ತಂದೆಯು ನಿಮ್ಮ ಮೇಲೆ ಭಾರವಾದ ನೊಗವನ್ನು ಹಾಕಿರುವುದು ನಿಜ. ಆದರೆ ನಾನು ಅದಕ್ಕೆ ಇನ್ನೂ ಹೆಚ್ಚಿನ ಭಾರವನ್ನು ಕೂಡಿಸುತ್ತೇನೆ, ಅವನು ನಿಮ್ಮನ್ನು ಬಾರುಕೋಲುಗಳಿಂದ ಹೊಡೆದದ್ದು ನಿಜ. ನಾನಾದರೋ ನಿಮ್ಮನ್ನು ಮುಳ್ಳು ಕೊರಡೆಗಳಿಂದ ದಂಡಿಸುವೆನು” ಎಂದು ನುಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 “ನನ್ನ ತಂದೆ ನಿಮ್ಮ ಮೇಲೆ ಭಾರವಾದ ನೊಗವನ್ನು ಹೇರಿರುವುದು ನಿಜ; ಆದರೆ ನಾನು ಅದಕ್ಕೆ ಇನ್ನೂ ಹೆಚ್ಚಿನ ಭಾರವನ್ನು ಕೂಡಿಸುವೆನು; ಅವರು ನಿಮ್ಮನ್ನು ಬಾರುಕೋಲುಗಳಿಂದ ಹೊಡೆದದ್ದು ನಿಜ; ನಾನಾದರೋ ಮುಳ್ಳುಕೊರಡೆಗಳಿಂದ ದಂಡಿಸುವೆನು,” ಎಂದು ನುಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಯೌವನಸ್ಥರ ಆಲೋಚನೆಗನುಸಾರವಾಗಿ ಜನರಿಗೆ - ನನ್ನ ತಂದೆಯು ನಿಮ್ಮ ಮೇಲೆ ಭಾರವಾದ ನೊಗವನ್ನು ಹೇರಿರುವದು ನಿಜ; ಆದರೆ ನಾನು ಅದಕ್ಕೆ ಇನ್ನೂ ಹೆಚ್ಚಿನ ಭಾರವನ್ನು ಕೂಡಿಸುವೆನು; ಅವನು ನಿಮ್ಮನ್ನು ಬಾರುಕೋಲುಗಳಿಂದ ಹೊಡೆದದ್ದು ನಿಜ; ನಾನಾದರೋ ಮುಳ್ಳುಕೊರಡೆಗಳಿಂದ ದಂಡಿಸುವೆನು ಎಂದು ನುಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಯುವಕರ ಆಲೋಚನೆಯ ಪ್ರಕಾರ ಅವರ ಸಂಗಡ ಮಾತನಾಡಿ ಅವರಿಗೆ, “ನನ್ನ ತಂದೆಯು ನಿಮ್ಮ ನೊಗವನ್ನು ಭಾರವಾಗಿ ಮಾಡಿದನು. ನಾನು ಅದನ್ನು ಇನ್ನೂ ಹೆಚ್ಚು ಭಾರ ಮಾಡುತ್ತೇನೆ. ನನ್ನ ತಂದೆಯು ನಿಮ್ಮನ್ನು ಬಾರುಕೋಲುಗಳಿಂದ ಶಿಕ್ಷಿಸಿದನು. ಆದರೆ ನಾನು ಮುಳ್ಳು ಕೊರಡೆಗಳಿಂದ ಶಿಕ್ಷಿಸುವೆನು,” ಎಂದನು. ಅಧ್ಯಾಯವನ್ನು ನೋಡಿ |
ರಾಜ್ಯದ ಸಕಲ ಮುಖ್ಯಾಧಿಕಾರಿಗಳು, ನಾಯಕರು, ದೇಶಾಧಿಪತಿಗಳು, ಮಂತ್ರಿಗಳು ಮತ್ತು ಸಂಸ್ಥಾನಾಧ್ಯಕ್ಷರು ಸೇರಿ ಒಂದು ಆಲೋಚನೆಯನ್ನು ಮಾಡಿದ್ದಾರೆ. ಈ ಸಂಬಂಧವಾಗಿ ಅರಸನು ಒಂದು ನಿಬಂಧನೆಯನ್ನು ಮಾಡಿ ರಾಜಾಜ್ಞೆಯನ್ನು ಹೊರಡಿಸಬೇಕೆಂದು ನಮ್ಮೆಲ್ಲರ ಅನಿಸಿಕೆ. ಎಲ್ಲರೂ ಆ ರಾಜಾಜ್ಞೆಯನ್ನು ಪಾಲಿಸಬೇಕು. ಆ ನಿಬಂಧನೆ ಹೀಗಿದೆ: ಬರಲಿರುವ ಮೂವತ್ತು ದಿನ ಯಾರೂ ಅರಸನಾದ ನಿನ್ನನ್ನು ಬಿಟ್ಟು ಬೇರೆ ಯಾವ ದೇವರನ್ನಾಗಲಿ ಮನುಷ್ಯನನ್ನಾಗಲಿ ಪ್ರಾರ್ಥಿಸಕೂಡದು. ಯಾರಾದರೂ ಹಾಗೆ ಮಾಡಿದರೆ ಅವರನ್ನು ಸಿಂಹಗಳ ಗುಹೆಯಲ್ಲಿ ಎಸೆಯಲಾಗುವುದು.