15 ರಾಜನು ಜನರ ಅಪೇಕ್ಷೆಯನ್ನು ನೆರವೇರಿಸಲಿಲ್ಲ. ನೆಬಾಟನ ಮಗನಾದ ಯಾರೊಬ್ಬಾಮನಿಗೆ ತಾನು ಮಾಡಿದ್ದ ವಾಗ್ದಾನವನ್ನು ಈಡೇರಿಸಲು ಯೆಹೋವನೇ ಹೀಗೆ ಮಾಡಿದನು. ಯೆಹೋವನು ಪ್ರವಾದಿಯಾದ ಅಹೀಯನ ಮೂಲಕ ಈ ವಾಗ್ದಾನವನ್ನು ಮಾಡಿದ್ದನು. ಅಹೀಯನು ಶೀಲೋವಿನವನು.
15 ಅರಸನು ಜನರ ಮಾತನ್ನು ಕೇಳದೆಹೋದದ್ದು ಯೆಹೋವ ದೇವರಿಂದಲೇ. ಹೀಗೆ ಯೆಹೋವ ದೇವರು ಶೀಲೋವಿನವನಾದ ಅಹೀಯನ ಮುಖಾಂತರವಾಗಿ ನೆಬಾಟನ ಮಗನಾದ ಯಾರೊಬ್ಬಾಮನಿಗೆ ಹೇಳಿಸಿದ ಮಾತು ಈಡೇರುವುದಕ್ಕೆ ಕಾರಣವಾಯಿತು.
ನೀನು ಅವರಿಗೆ, ‘ನಿಮ್ಮ ಸೋದರರಾದ ಇಸ್ರೇಲರ ವಿರುದ್ಧ ನೀವು ಯುದ್ಧಕ್ಕೆ ಹೋಗಲೇಬಾರದೆಂದು ಯೆಹೋವನು ಹೇಳುತ್ತಾನೆ. ನಿಮ್ಮಲ್ಲಿ ಪ್ರತಿಯೊಬ್ಬನು ಮನೆಗೆ ಹೋಗಬೇಕು. ಈ ಸಂಗತಿಗಳೆಲ್ಲ ಸಂಭವಿಸುವಂತೆ ನಾನೇ ಮಾಡಿದೆನು’ ಎಂದು ಹೇಳು” ಎಂಬುದಾಗಿ ತಿಳಿಸಿದನು. ಆದ್ದರಿಂದ ರೆಹಬ್ಬಾಮನ ಸೈನ್ಯದಲ್ಲಿನ ಜನರೆಲ್ಲರೂ ಯೆಹೋವನ ಆಜ್ಞೆಯನ್ನು ಅನುಸರಿಸಿದರು. ಅವರು ತಮ್ಮ ಮನೆಗಳಿಗೆ ಹೋದರು.
ಇದು ಯೆಹೋವನ ಚಿತ್ತವೆಂಬುದು ಸಂಸೋನನ ತಂದೆತಾಯಿಗಳಿಗೆ ತಿಳಿದಿರಲಿಲ್ಲ. ಫಿಲಿಷ್ಟಿಯರಿಗೆ ಕೇಡುಮಾಡಲು ಯೆಹೋವನು ತಕ್ಕಮಾರ್ಗವನ್ನು ಹುಡುಕುತ್ತಿದ್ದನು. ಆ ಸಮಯದಲ್ಲಿ ಫಿಲಿಷ್ಟಿಯರು ಇಸ್ರೇಲರ ಮೇಲೆ ಆಳ್ವಿಕೆ ಮಾಡುತ್ತಿದ್ದರು.
“ಆದರೆ ಸೀಹೋನನು ನಮಗೆ ದಾಟಿಹೋಗಲು ಬಿಡಲಿಲ್ಲ. ನಮ್ಮ ದೇವರಾದ ಯೆಹೋವನು ಅವನ ಹೃದಯವನ್ನು ಕಠಿಣಗೊಳಿಸಿದನು. ನಾವು ಅವನನ್ನು ಸೋಲಿಸಿ ಅವನ ರಾಜ್ಯವನ್ನು ವಶಪಡಿಸಿಕೊಳ್ಳಬೇಕೆಂದು ಯೆಹೋವನು ಹಾಗೆ ಮಾಡಿದನು. ಆ ರಾಜ್ಯವು ಇಂದಿಗೂ ನಮ್ಮ ವಶದಲ್ಲಿದೆ.
ಅಮಚ್ಯನು ಅವನ ಮಾತಿಗೆ ಲಕ್ಷ್ಯಕೊಡಲಿಲ್ಲ. ಇದು ದೇವರಿಂದಲೇ ಆಯಿತು. ಇಸ್ರೇಲ್ ಯೆಹೂದವನ್ನು ಸೋಲಿಸಬೇಕೆಂದು ದೇವರ ಇಚ್ಛೆಯಾಗಿತ್ತು. ಯಾಕೆಂದರೆ ಯೆಹೂದದ ಜನರು ಎದೋಮ್ಯರ ದೇವರುಗಳನ್ನು ಆರಾಧಿಸುತ್ತಿದ್ದರು.
ಹೀಗೆ ರೆಹಬ್ಬಾಮನು ಜನರ ಬೇಡಿಕೆಯನ್ನು ಕೇಳಲಿಲ್ಲ. ಯಾಕೆಂದರೆ ಇದು ದೇವರ ಚಿತ್ತವಾಗಿತ್ತು. ದೇವರು ಅಹೀಯನ ಮುಖಾಂತರ ಯಾರೊಬ್ಬಾಮನಿಗೆ ಹೇಳಿದ ಮಾತು ನೆರವೇರುವಂತೆ ಹೀಗಾಯಿತು. ಅಹೀಯನು ಶೀಲೋವಿನವನಾಗಿದ್ದನು. ಯಾರೊಬ್ಬಾಮನು ನೆಬಾಟನ ಮಗನಾಗಿದ್ದನು.
ಆದ್ದರಿಂದ ಯೆಹೋವನು ಸೊಲೊಮೋನನಿಗೆ, “ನಮ್ಮಿಬ್ಬರ ನಡುವೆಯಿದ್ದ ಒಡಂಬಡಿಕೆಯನ್ನು ಮೀರಿಬಿಟ್ಟೆ. ನೀನು ನನ್ನ ಆಜ್ಞೆಗಳನ್ನು ಅನುಸರಿಸಲಿಲ್ಲ. ಆದ್ದರಿಂದ ನಿನ್ನ ರಾಜ್ಯವನ್ನು ನಿನ್ನಿಂದ ಕಿತ್ತುಕೊಂಡು ನಿನ್ನ ಸೇವಕರಲ್ಲಿ ಒಬ್ಬನಿಗೆ ಅದನ್ನು ಕೊಡುವುದಾಗಿ ನಾನು ಪ್ರಮಾಣ ಮಾಡುತ್ತೇನೆ.
ಯೇಸುವನ್ನು ನಿಮಗೆ ಒಪ್ಪಿಸಲಾಯಿತು. ನೀವು ಕೆಟ್ಟಜನರ ಸಹಾಯದಿಂದ ಆತನನ್ನು ಶಿಲುಬೆಗೇರಿಸಿದಿರಿ. ಆದರೆ ಇವುಗಳೆಲ್ಲಾ ಸಂಭವಿಸುತ್ತವೆಯೆಂದು ದೇವರಿಗೆ ಗೊತ್ತಿತ್ತು. ಇದು ದೇವರ ಯೋಜನೆ. ದೇವರು ಬಹು ಕಾಲದ ಹಿಂದೆಯೇ ಈ ಯೋಜನೆಯನ್ನು ಮಾಡಿದನು.
ಆ ಪ್ರವಾದಿಯು ಈ ಮಾತುಗಳನ್ನು ಹೇಳಿದಾಗ ಅಮಚ್ಯನು, “ನಾವು ನಿನ್ನನ್ನು ಅರಸನ ಸಲಹೆಗಾರನನ್ನಾಗಿ ಮಾಡಲಿಲ್ಲವಲ್ಲಾ. ಆದ್ದರಿಂದ ಬಾಯಿಮುಚ್ಚಿಕೊಂಡು ಸುಮ್ಮನಿರು. ಇಲ್ಲದಿದ್ದರೆ ನೀನು ಸಾಯುವೆ” ಅಂದನು. ಆದರೆ ಅವನು, “ದೇವರು ನಿನ್ನನ್ನು ನಾಶಮಾಡಲು ನಿರ್ಧರಿಸಿದ್ದಾನೆ; ಯಾಕೆಂದರೆ ನೀನು ನನ್ನ ಸಲಹೆಯನ್ನು ಕೇಳದೆ ದುಷ್ಟತನ ಮಾಡುತ್ತಿರುವೆ?” ಎಂದು ಹೇಳಿದನು.
ಯೆಹೋವನು ಹೇಳಿದ್ದೆಲ್ಲವೂ ಸಂಭವಿಸುತ್ತದೆ ಎಂಬುದನ್ನು ನೀವು ತಿಳಿದಿರಬೇಕು. ಅಹಾಬನ ಕುಟುಂಬಕ್ಕೆ ಇವುಗಳು ಸಂಭವಿಸುತ್ತವೆಯೆಂದು ಯೆಹೋವನು ಎಲೀಯನ ಮೂಲಕ ತಿಳಿಸಿದ್ದನು. ಅಂತೆಯೇ ಆತನು ಮಾಡಿದ್ದಾನೆ” ಅಂದನು.
ಜನರು ಹಿಂದಿರುಗಿ ಬಂದು ಯೇಹುವಿಗೆ ಅದನ್ನು ಹೇಳಿದರು. ಯೇಹುವು, “ಯೆಹೋವನು ತನ್ನ ಸೇವಕನೂ ತಿಷ್ಬೀಯನೂ ಆದ ಎಲೀಯನಿಗೆ ಈ ರೀತಿ ಸಂದೇಶ ನೀಡಲು ಹೇಳಿದ್ದನು. ಎಲೀಯನು ಹೇಳಿದ್ದೇನೆಂದರೆ: ಇಜ್ರೇಲ್ ಪ್ರದೇಶದಲ್ಲಿ ಈಜೆಬೆಲಳ ದೇಹವನ್ನು ನಾಯಿಗಳು ತಿನ್ನುತ್ತವೆ.
ಮೀಕಾಯೆಹು ಹೀಗೆ ಹೇಳಿದ ಮೇಲೆ, “ಇಲ್ಲಿ ನಡೆದದ್ದೂ ಇದೇ. ನಿನ್ನ ಪ್ರವಾದಿಗಳೇ ನಿನಗೆ ಸುಳ್ಳುಹೇಳುವಂತೆ ಯೆಹೋವನು ಮಾಡಿದ್ದಾನೆ. ನಿನಗೆ ಮಹಾಕೇಡು ಬರಲೆಂದು ಯೆಹೋವನು ತಾನೇ ತೀರ್ಮಾನಿಸಿದ್ದಾನೆ” ಎಂದು ಹೇಳಿದನು.
ಅಬ್ಷಾಲೋಮನು ಮತ್ತು ಇಸ್ರೇಲರೆಲ್ಲ, “ಅರ್ಕೀಯನಾದ ಹೂಷೈಯನ ಸಲಹೆಯು ಅಹೀತೋಫೆಲನ ಸಲಹೆಗಿಂತ ಉತ್ತಮವಾಗಿದೆ” ಎಂದು ಹೇಳಿದರು. ಇದು ಯೆಹೋವನ ಯೋಜನೆಯಾಗಿದ್ದ ಕಾರಣ ಅವರು ಹಾಗೆ ಹೇಳಿದರು. ಅಹೀತೋಫೆಲನ ಒಳ್ಳೆಯ ಸಲಹೆಯನ್ನು ನಾಶಗೊಳಿಸಲು ಯೆಹೋವನು ಈ ಯೋಜನೆಯನ್ನು ಮಾಡಿದ್ದನು. ಹೀಗೆ ಯೆಹೋವನು ಅಬ್ಷಾಲೋಮನನ್ನು ದಂಡಿಸಲಿದ್ದನು.