1 ಅರಸುಗಳು 12:20 - ಪರಿಶುದ್ದ ಬೈಬಲ್20 ಯಾರೊಬ್ಬಾಮನು ಹಿಂದಿರುಗಿ ಬಂದಿದ್ದಾನೆ ಎಂಬುದು ಇಸ್ರೇಲಿನ ಜನರೆಲ್ಲರಿಗೂ ತಿಳಿಯಿತು. ಅವರು ಅವನನ್ನು ಒಂದು ಸಭೆಗೆ ಕರೆಸಿ, ಅವನನ್ನು ಇಸ್ರೇಲಿನ ರಾಜನನ್ನಾಗಿ ನೇಮಿಸಿದರು. ಯೆಹೂದಕುಲವೊಂದು ಮಾತ್ರ ದಾವೀದನ ಕುಟುಂಬವನ್ನು ಅನುಸರಿಸಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಯಾರೊಬ್ಬಾಮನು ಹಿಂತಿರುಗಿ ಬಂದಿದ್ದಾನೆಂಬ ವರ್ತಮಾನವು ಇಸ್ರಾಯೇಲರಿಗೆ ತಿಳಿದಾಗ ಅವರೆಲ್ಲರೂ ಅವನನ್ನು ನೆರೆದ ಸಭೆಯ ಮುಂದೆ ಕರೆಯಿಸಿ ತಮ್ಮ ಅರಸನನ್ನಾಗಿ ನೇಮಿಸಿಕೊಂಡರು. ದಾವೀದನ ಕುಟುಂಬದವರನ್ನು ಯೆಹೂದ ಕುಲವೇ ಹೊರತು ಬೇರೆ ಯಾವ ಕುಲವೂ ಹಿಂಬಾಲಿಸಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಯಾರೊಬ್ಬಾಮನು ಹಿಂದಿರುಗಿ ಬಂದು ಇದ್ದಾನೆಂಬ ಸಮಾಚಾರ ಇಸ್ರಯೇಲರಿಗೆ ಗೊತ್ತಾದಾಗ ಅವರೆಲ್ಲರೂ ಅವನನ್ನು ನೆರೆದ ಸಭೆಯ ಮುಂದೆ ಕರೆಸಿ ತಮ್ಮ ಅರಸನನ್ನಾಗಿ ನೇಮಿಸಿಕೊಂಡರು. ದಾವೀದನ ಕುಟುಂಬದವರನ್ನು ಯೆಹೂದಕುಲವೇ ಹೊರತು ಬೇರೆ ಯಾವ ಕುಲವೂ ಹಿಂಬಾಲಿಸಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಯಾರೊಬ್ಬಾಮನು ಹಿಂದಿರುಗಿ ಬಂದಿದ್ದಾನೆಂಬ ವರ್ತಮಾನವು ಇಸ್ರಾಯೇಲ್ಯರಿಗೆ ಗೊತ್ತಾದಾಗ ಅವರೆಲ್ಲರೂ ಅವನನ್ನು ನೆರೆದ ಸಭೆಯ ಮುಂದೆ ಕರಿಸಿ ತಮ್ಮ ಅರಸನನ್ನಾಗಿ ನೇವಿುಸಿಕೊಂಡರು. ದಾವೀದನ ಕುಟುಂಬದವರನ್ನು ಯೆಹೂದ ಕುಲವೇ ಹೊರತು ಬೇರೆ ಯಾವ ಕುಲವೂ ಹಿಂಬಾಲಿಸಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಇಸ್ರಾಯೇಲರು ಯಾರೊಬ್ಬಾಮನು ತಿರುಗಿ ಬಂದಿದ್ದಾನೆಂದು ಕೇಳಿದಾಗ, ಅವರು ಸಭೆಗೆ ಅವನನ್ನು ಕರೆಕಳುಹಿಸಿ, ಸಮಸ್ತ ಇಸ್ರಾಯೇಲಿನ ಮೇಲೆ ಅವನನ್ನು ಅರಸನನ್ನಾಗಿ ಮಾಡಿದರು. ಯೆಹೂದನ ಗೋತ್ರ ಹೊರತಾಗಿ ದಾವೀದನ ಮನೆಯನ್ನು ಹಿಂಬಾಲಿಸುವವರು ಯಾರೂ ಇರಲಿಲ್ಲ. ಅಧ್ಯಾಯವನ್ನು ನೋಡಿ |