4 “ನಿನ್ನ ತಂದೆಯು ನಮ್ಮನ್ನು ಹೆಚ್ಚು ಕಷ್ಟದ ಕೆಲಸ ಮಾಡಲು ಬಲಾತ್ಕರಿಸಿದನು. ಈಗ ನೀನು ನಮಗೆ ಅದನ್ನು ಕಡಿಮೆಗೊಳಿಸು, ನಿನ್ನ ತಂದೆಯು ನಮ್ಮನ್ನು ಬಲಾತ್ಕರಿಸಿ ಮಾಡಿಸುತ್ತಿದ್ದ ಹೆಚ್ಚು ಕೆಲಸಗಳನ್ನು ನಿಲ್ಲಿಸು. ಆಗ ನಾವು ನಿನ್ನ ಸೇವೆಯನ್ನು ಮಾಡುವೆವು” ಎಂದು ಹೇಳಿದರು.
4 ಅವನಿಗೆ, “ನಿನ್ನ ತಂದೆಯು ನಮ್ಮ ಮೇಲೆ ಭಾರವಾದ ನೊಗವನ್ನು ಹೇರಿದನು. ನಿನ್ನ ತಂದೆಯು ನೇಮಿಸಿದ ಬಿಟ್ಟೀಕೆಲಸವನ್ನು ನೀನು ಕಡಿಮೆ ಮಾಡಿ ನಮ್ಮ ಮೇಲಿರುವ ಭಾರವಾದ ನೊಗವನ್ನು ಹಗುರ ಮಾಡುವುದಾದರೆ ನಾವು ನಿನಗೆ ಸೇವೆಮಾಡುತ್ತೇವೆ” ಎಂದು ಹೇಳಿದರು.
4 “ನಿಮ್ಮ ತಂದೆ ನಮ್ಮ ಮೇಲೆ ಭಾರವಾದ ನೊಗವನ್ನು ಹೇರಿದ್ದರು; ಅವರು ನೇಮಿಸಿದ್ದ ಬಿಟ್ಟೀ ಕೆಲಸವನ್ನು ನೀನು ಕಡಿಮೆಮಾಡಿ, ನಮ್ಮ ಮೇಲಿರುವ ಭಾರವನ್ನು ಹಗುರಮಾಡುವುದಾದರೆ ನಾವು ನಿನಗೆ ಸೇವೆಮಾಡುತ್ತೇವೆ,” ಎಂದನು.
4 ನಿನ್ನ ತಂದೆಯು ನಮ್ಮ ಮೇಲೆ ಭಾರವಾದ ನೊಗವನ್ನು ಹೇರಿದನು; ನಿನ್ನ ತಂದೆಯು ನೇವಿುಸಿದ ಬಿಟ್ಟೀಕೆಲಸವನ್ನು ನೀನು ಕಡಿಮೆಮಾಡಿ ನಮ್ಮ ಮೇಲಿರುವ ಭಾರವಾದ ನೊಗವನ್ನು ಹಗುರ ಮಾಡುವದಾದರೆ ನಾವು ನಿನ್ನನ್ನು ಸೇವಿಸುವೆವು ಎಂದು ಹೇಳಲು ಅವನು -
4 “ನಿನ್ನ ತಂದೆಯು ನಮ್ಮ ನೊಗವನ್ನು ಭಾರವಾಗಿ ಮಾಡಿದನು. ಈಗ ನೀನು ನಿನ್ನ ತಂದೆಯ ಕಠಿಣವಾದ ಸೇವೆಯನ್ನೂ, ಅವನು ನಮ್ಮ ಮೇಲೆ ಹಾಕಿದ ಅವನ ಭಾರವಾದ ನೊಗವನ್ನೂ ಹಗುರಮಾಡಿದರೆ, ನಾವು ನಿನಗೆ ಸೇವೆಮಾಡುತ್ತೇವೆ,” ಎಂದರು.
ಇಸ್ರೇಲರನ್ನು ಹನ್ನೆರಡು ವಿಭಾಗ ಮಾಡಿ ಅವುಗಳನ್ನು ಜಿಲ್ಲೆಗಳೆಂದು ಕರೆದರು. ಪ್ರತಿಯೊಂದು ಜಿಲ್ಲೆಯನ್ನು ಆಳಲು ಸೊಲೊಮೋನನು ರಾಜ್ಯಪಾಲರನ್ನು ನೇಮಿಸಿದನು. ಈ ರಾಜ್ಯಪಾಲರು ತಮ್ಮ ಜಿಲ್ಲೆಗಳಿಂದ ಆಹಾರಪದಾರ್ಥಗಳನ್ನು ಸಂಗ್ರಹಿಸಿ ರಾಜನಿಗೂ ಅವನ ಕುಟುಂಬಕ್ಕೂ ಕೊಡಬೇಕೆಂದು ಆಜ್ಞಾಪಿಸಿದನು. ಪ್ರತಿಯೊಬ್ಬ ರಾಜ್ಯಪಾಲನು ವರ್ಷಕ್ಕೆ ಒಂದು ತಿಂಗಳು ರಾಜನಿಗೆ ಆಹಾರಪದಾರ್ಥಗಳನ್ನು ಕೊಡುವ ಜವಾಬ್ದಾರಿಯನ್ನು ಹೊಂದಿದ್ದನು.
ರಾಜನಾದ ಸೊಲೊಮೋನನು ತಾನು ನಿರ್ಮಿಸಿದ್ದ ಆಲಯದ ಮತ್ತು ಅರಮನೆಯ ಕೆಲಸಗಳನ್ನು ಮಾಡಲು ಗುಲಾಮರನ್ನು ಬಲಾತ್ಕರಿಸಿದನು. ರಾಜನಾದ ಸೊಲೊಮೋನನು ಇತರ ಅನೇಕ ಕಟ್ಟಡಗಳ ನಿರ್ಮಾಣಕ್ಕೆ ಬಿಟ್ಟಿಕೆಲಸದವರನ್ನು ಉಪಯೋಗಿಸಿಕೊಂಡನು. ಅವನು ಮಿಲ್ಲೋ ಕೋಟೆಯನ್ನು ನಿರ್ಮಿಸಿದನು; ಜೆರುಸಲೇಮಿನ ಸುತ್ತಲೂ ನಗರದ ಗೋಡೆಯನ್ನು ಕಟ್ಟಿಸಿದನು; ಅಲ್ಲದೆ ಅವನು ಹಾಚೋರ್, ಮೆಗಿದ್ದೋ ಮತ್ತು ಗೆಜೆರ್ ನಗರಗಳನ್ನು ಕಟ್ಟಿಸಿದನು.