1 ಅರಸುಗಳು 13:1 - ಪರಿಶುದ್ದ ಬೈಬಲ್1 ಯೆಹೂದ ದೇಶದವನಾದ ಒಬ್ಬ ದೇವಮನುಷ್ಯನು ಯೆಹೋವನ ಆಜ್ಞೆಯಂತೆ ಬೇತೇಲಿಗೆ ಬಂದನು. ಆಗ ಯಾರೊಬ್ಬಾಮನು ಧೂಪವನ್ನು ಅರ್ಪಿಸುತ್ತಾ, ಯಜ್ಞವೇದಿಕೆಯ ಹತ್ತಿರ ನಿಂತಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಆಗ ಯೆಹೂದ ದೇಶದವನಾದ ಒಬ್ಬ ದೇವರ ಮನುಷ್ಯನು ಯೆಹೋವನಿಂದ ಕಳುಹಿಸಲ್ಪಟ್ಟವನಾಗಿ ಬೇತೇಲಿಗೆ ಬಂದನು. ಯಾರೊಬ್ಬಾಮನು ಧೂಪಹಾಕುವುದಕ್ಕಾಗಿ ಯಜ್ಞವೇದಿಯ ಹತ್ತಿರ ನಿಂತುಕೊಂಡಿದ್ದನು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಜುದೇಯ ನಾಡಿನವನಾದ ಒಬ್ಬ ದೈವಭಕ್ತನು ಸರ್ವೇಶ್ವರನಿಂದ ಕಳುಹಿಸಲ್ಪಟ್ಟವನಾಗಿ ಬೇತೇಲಿಗೆ ಬಂದನು. ಯಾರೊಬ್ಬಾಮನು ಧೂಪಾರತಿ ಎತ್ತಲು ಪೀಠದ ಹತ್ತಿರ ನಿಂತುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಯೆಹೂದ ದೇಶದವನಾದ ಒಬ್ಬ ದೇವರ ಮನುಷ್ಯನು ಯೆಹೋವನಿಂದ ಕಳುಹಿಸಲ್ಪಟ್ಟವನಾಗಿ ಬೇತೇಲಿಗೆ ಬಂದನು. ಯಾರೊಬ್ಬಾಮನು ಧೂಪ ಸುಡುವದಕ್ಕಾಗಿ ವೇದಿಯ ಹತ್ತಿರ ನಿಂತುಕೊಳ್ಳಲು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಯಾರೊಬ್ಬಾಮನು ಧೂಪವನ್ನರ್ಪಿಸಲು ಬಲಿಪೀಠದ ಬಳಿಯಲ್ಲಿ ನಿಂತಿರುವಾಗ, ಯೆಹೂದದಿಂದ ಬೇತೇಲಿಗೆ ಯೆಹೋವ ದೇವರ ಮಾತಿನಂತೆ ಒಬ್ಬ ದೇವರ ಮನುಷ್ಯ ಬಂದನು. ಅಧ್ಯಾಯವನ್ನು ನೋಡಿ |
ಬಾಬಿಲೋನಿನ ಸೈನ್ಯವು ಈಗಾಗಲೇ ಜೆರುಸಲೇಮ್ ನಗರದ ಮೇಲೆ ಧಾಳಿ ಮಾಡುತ್ತಿದೆ. ಸೈನಿಕರು ಬೇಗನೆ ನಗರವನ್ನು ಪ್ರವೇಶಿಸಿ ಅದಕ್ಕೆ ಬೆಂಕಿಹಚ್ಚಿ ಸುಟ್ಟುಹಾಕುವರು. ಜೆರುಸಲೇಮಿನ ಜನರು ತಮ್ಮ ಮನೆಯ ಮಾಳಿಗೆಯ ಮೇಲೆ ಸುಳ್ಳುದೇವರಾದ ಬಾಳನಿಗೆ ನೈವೇದ್ಯವನ್ನು ಅರ್ಪಿಸಿ ನಾನು ಕೋಪಿಸಿಕೊಳ್ಳುವಂತೆ ಮಾಡಿದ ಕೆಲವು ಮನೆಗಳು ಈ ನಗರದಲ್ಲಿವೆ. ಅದಲ್ಲದೆ ಕೆಲವು ಜನರು ಅನ್ಯದೇವತೆಗಳಿಗೆ ಪಾನನೈವೇದ್ಯವನ್ನು ಅರ್ಪಿಸಿರುವರು. ಬಾಬಿಲೋನಿನ ಸೈನ್ಯವು ಆ ಮನೆಗಳನ್ನು ಸುಟ್ಟುಹಾಕುವುದು.
“ಉಜ್ಜೀಯನೇ, ಯೆಹೋವನಿಗೆ ಧೂಪ ಹಾಕುವದು ನಿನ್ನ ಕೆಲಸವಲ್ಲ. ನೀನು ಹೀಗೆ ಮಾಡುವದು ಸರಿಯಲ್ಲ. ಆರೋನನ ಸಂತತಿಯವರಾದ ಯಾಜಕರೇ ಧೂಪ ಹಾಕಬೇಕಾದದ್ದು. ಅವರು ಪವಿತ್ರ ಸೇವೆಗೆ ನೇಮಿಸಲ್ಪಟ್ಟಿದ್ದಾರೆ. ನೀನು ಈ ಮಹಾ ಪವಿತ್ರಸ್ಥಾನದಿಂದ ಹೊರಗೆ ಹೋಗು. ನೀನು ದೇವರಾದ ಯೆಹೋವನಿಗೆ ವಿಧೇಯನಾಗಿಲ್ಲ. ಈ ಕಾರ್ಯವನ್ನು ಮಾಡಿದ್ದರಿಂದ ದೇವರು ನಿನ್ನನ್ನು ಮೆಚ್ಚುವದಿಲ್ಲ” ಎಂದು ಹೇಳಿದರು.
ಯೋಷೀಯನು ಬೇತೇಲಿನ ಉನ್ನತಸ್ಥಳವನ್ನು ಮತ್ತು ಯಜ್ಞವೇದಿಕೆಯನ್ನು ಕೆಡವಿಬಿಟ್ಟನು. ನೆಬಾಟನ ಮಗನಾದ ಯಾರೊಬ್ಬಾಮನು ಈ ಯಜ್ಞವೇದಿಕೆಯನ್ನು ನಿರ್ಮಿಸಿದ್ದನು. ಇಸ್ರೇಲರು ಪಾಪಮಾಡುವಂತೆ ಯಾರೊಬ್ಬಾಮನು ಪ್ರೇರೇಪಿಸಿದ್ದನು. ಯೋಷೀಯನು ಯಜ್ಞವೇದಿಕೆಯನ್ನು ಮತ್ತು ಉನ್ನತಸ್ಥಳವನ್ನು ಕೆಡವಿಬಿಟ್ಟನು. ಯೋಷೀಯನು ಯಜ್ಞವೇದಿಕೆಯ ಕಲ್ಲುಗಳನ್ನು ಪುಡಿಪುಡಿಮಾಡಿ ಧೂಳಿನಲ್ಲಿ ಬೆರಸಿದನು. ಅವನು ಅಶೇರಸ್ತಂಭವನ್ನು ಸುಟ್ಟುಹಾಕಿದನು.