1 ಅರಸುಗಳು 13:18 - ಪರಿಶುದ್ದ ಬೈಬಲ್18 ಆಗ ಆ ಪ್ರವಾದಿಯು, “ಆದರೆ ನಾನೂ ನಿನ್ನಂತೆಯೇ ಒಬ್ಬ ಪ್ರವಾದಿ” ಎಂದು ಹೇಳಿದನು. ನಂತರ ವಯಸ್ಸಾದ ಪ್ರವಾದಿಯು ಅವನಿಗೆ “ಯೆಹೋವನಿಂದ ಒಬ್ಬ ದೇವದೂತನು ನನ್ನ ಬಳಿಗೆ ಬಂದಿದ್ದನು. ಆ ದೂತನು ನಿನ್ನನ್ನು ನನ್ನ ಮನೆಗೆ ಕರೆತರಲು ನಿನ್ನೊಂದಿಗೆ ಅನ್ನಪಾನಗಳನ್ನು ತೆಗೆದುಕೊಳ್ಳಲು ನನಗೆ ತಿಳಿಸಿದನು” ಎಂದು ಸುಳ್ಳು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಆಗ ಆ ಮುದುಕನು, “ನಾನು ನಿನ್ನಂತೆ ಪ್ರವಾದಿಯಾಗಿದ್ದೇನೆ. ಒಬ್ಬ ದೇವದೂತನು ನನಗೆ ಕಾಣಿಸಿಕೊಂಡು, ನಿನ್ನನ್ನು ಕರೆದುಕೊಂಡು ಬರಬೇಕೆಂದೂ ನಿನಗೆ ಅನ್ನಪಾನಗಳನ್ನು ಕೊಡಬೇಕೆಂದೂ ಯೆಹೋವನ ಹೆಸರಿನಲ್ಲಿ ಆಜ್ಞಾಪಿಸಿದ್ದಾನೆ” ಎಂದು ಹೇಳಿದನು. ಆದರೆ ದೇವರ ಮನುಷ್ಯನಿಗೆ ಪ್ರವಾದಿ ಹೇಳಿದ ಮಾತು ಸುಳ್ಳಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಆಗ ಆ ಮುದುಕನು, “ನಾನೂ ನಿನ್ನಂತೆ ಪ್ರವಾದಿಯಾಗಿದ್ದೇನೆ; ಒಬ್ಬ ದೇವದೂತನು ನನಗೆ ಕಾಣಿಸಿಕೊಂಡು ನಿನ್ನನ್ನು ಕರೆದುಕೊಂಡು ಬರಬೇಕೆಂದು ಸರ್ವೆಶ್ವರನ ಹೆಸರಿನಲ್ಲಿ ಆಜ್ಞಾಪಿಸಿದ್ದಾನೆ,” ಎಂದು ಹೇಳಿದನು. ಆದರೆ ಈ ಮಾತು ಸುಳ್ಳಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಆಗ ಮುದುಕನು - ನಾನೂ ನಿನ್ನಂತೆ ಪ್ರವಾದಿಯಾಗಿದ್ದೇನೆ; ಒಬ್ಬ ದೇವದೂತನು ನನಗೆ ಕಾಣಿಸಿಕೊಂಡು ನಿನ್ನನ್ನು ಕರಕೊಂಡು ಬರಬೇಕೆಂದೂ ನಿನಗೆ ಅನ್ನಪಾನಗಳನ್ನು ಕೊಡಬೇಕೆಂದೂ ಯೆಹೋವನ ಹೆಸರಿನಲ್ಲಿ ಆಜ್ಞಾಪಿಸಿದ್ದಾನೆ ಎಂದು ಹೇಳಿದನು; ಆದರೆ ಈ ಮಾತು ಸುಳ್ಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಆಗ ವೃದ್ಧನು, “ನಾನು ನಿನ್ನ ಹಾಗೆಯೇ ಪ್ರವಾದಿಯಾಗಿದ್ದೇನೆ. ಒಬ್ಬ ದೇವದೂತನ ಮುಖಾಂತರ ನನಗೆ ಯೆಹೋವ ದೇವರ ವಾಕ್ಯವು ಉಂಟಾಗಿ, ನಿನ್ನನ್ನು ಹಿಂದಕ್ಕೆ ಕರಕೊಂಡು ಬರಬೇಕೆಂದೂ ನಿನಗೆ ಅನ್ನಪಾನಗಳನ್ನು ಕೊಡಬೇಕೆಂದೂ ಆಜ್ಞೆಯಾಗಿದೆ ಎಂದು ಹೇಳಿದನು.” ಆದರೆ ವೃದ್ಧನು ಅವನಿಗೆ ಸುಳ್ಳು ಹೇಳಿದನು. ಅಧ್ಯಾಯವನ್ನು ನೋಡಿ |
ಹಿಂದಿನ ಕಾಲದಲ್ಲಿ, ದೇವಜನರಲ್ಲಿ ಸುಳ್ಳುಪ್ರವಾದಿಗಳಿದ್ದರು. ಈಗಲೂ ಇದ್ದಾರೆ. ನಿಮ್ಮಲ್ಲಿಯೂ ಸಹ ಕೆಲವು ಸುಳ್ಳುಪ್ರವಾದಿಗಳಿರುತ್ತಾರೆ. ಜನರನ್ನು ನಾಶನಕ್ಕೆ ನಡೆಸುವ ಸುಳ್ಳುಬೋಧನೆಗಳನ್ನು ಅವರು ಬೋಧಿಸುತ್ತಾರೆ. ತಾವು ಸುಳ್ಳುಬೋಧಕರೆಂಬುದು ನಿಮಗೆ ಸುಲಭವಾಗಿ ತಿಳಿಯದ ರೀತಿಯಲ್ಲಿ ಅವರು ಬೋಧಿಸುತ್ತಾರೆ. ಅವರು ತಮಗೆ ಬಿಡುಗಡೆ ತಂದುಕೊಟ್ಟ ಒಡೆಯನನ್ನೇ (ಯೇಸು) ಒಪ್ಪಿಕೊಳ್ಳುವುದಿಲ್ಲ. ಆದ್ದರಿಂದ ಅವರು ಬಹುಬೇಗನೆ ತಮ್ಮನ್ನು ತಾವೇ ನಾಶಪಡಿಸಿಕೊಳ್ಳುತ್ತಾರೆ.
ನಾನು ಕಾಲ್ಪನಿಕ ಕನಸುಗಳನ್ನು ಬೋಧಿಸುವ ಸುಳ್ಳುಪ್ರವಾದಿಗಳ ವಿರೋಧಿಯಾಗಿದ್ದೇನೆ.” ಇದು ಪ್ರಭುವಿನ ನುಡಿ. “ಅವರು ತಮ್ಮ ಸುಳ್ಳುಬೋಧನೆಗಳಿಂದ ನನ್ನ ಜನರನ್ನು ಅಡ್ಡದಾರಿಗೆಳೆಯುತ್ತಾರೆ. ನಾನು ಜನರಿಗೆ ಉಪದೇಶ ಮಾಡುವದಕ್ಕಾಗಿ ಆ ಪ್ರವಾದಿಗಳನ್ನು ಕಳುಹಿಸಿಲ್ಲ. ನನಗೋಸ್ಕರವಾಗಿ ಏನನ್ನಾದರೂ ಮಾಡಲು ನಾನು ಅವರಿಗೆ ಎಂದೂ ಆಜ್ಞಾಪಿಸಿಲ್ಲ. ಅವರು ಯೆಹೂದದ ಜನರಿಗೆ ಸ್ವಲ್ಪವೂ ಸಹಾಯವನ್ನು ಮಾಡಲಾರರು” ಇದು ಯೆಹೋವನ ನುಡಿ.
ಆದರೆ ಆ ಮೃಗವನ್ನೂ ಸುಳ್ಳುಪ್ರವಾದಿಯನ್ನೂ ಸೆರೆಹಿಡಿಯಲಾಯಿತು. ಈ ಸುಳ್ಳುಪ್ರವಾದಿಯೇ ಮೃಗಕ್ಕಾಗಿ ಅದ್ಭುತಗಳನ್ನು ಮಾಡಿದವನು. ಈ ಸುಳ್ಳುಪ್ರವಾದಿಯು ಮೃಗದ ಗುರುತು ಹಾಕಿಸಿಕೊಂಡಿರುವ ಮತ್ತು ಅದರ ವಿಗ್ರಹವನ್ನು ಆರಾಧಿಸಿದ ಜನರನ್ನು ಮರುಳು ಮಾಡಲು ಈ ಅದ್ಭುತಗಳನ್ನು ಬಳಸಿದ್ದನು. ಈ ಸುಳ್ಳುಪ್ರವಾದಿಯನ್ನೂ ಮೃಗವನ್ನೂ, ಬೆಂಕಿ ಮತ್ತು ಗಂಧಕಗಳಿಂದ ಉರಿಯುವ ಕೆರೆಯಲ್ಲಿ ಜೀವಂತವಾಗಿ ಎಸೆಯಲಾಯಿತು.
ಯೆಹೂದದ ಪ್ರವಾದಿಗಳು ಜೆರುಸಲೇಮಿನಲ್ಲಿ ಭಯಂಕರ ದುಷ್ಕೃತ್ಯಗಳನ್ನು ಮಾಡುವುದನ್ನು ನಾನು ನೋಡಿದ್ದೇನೆ. ಈ ಪ್ರವಾದಿಗಳು ವ್ಯಭಿಚಾರ ಮಾಡುತ್ತಾರೆ. ಅವರು ಸುಳ್ಳುಗಳನ್ನು ಕೇಳಿ, ಆ ಸುಳ್ಳುಬೋಧನೆಗಳನ್ನು ಪಾಲಿಸುತ್ತಾರೆ. ಅವರು ದುಷ್ಟರಿಗೆ ಅವರ ದುಷ್ಟತನವನ್ನು ಮುಂದುವರಿಸಲು ಪ್ರೋತ್ಸಾಹಿಸುತ್ತಾರೆ. ಆದ್ದರಿಂದ ಜನರು ಪಾಪಮಾಡುವುದನ್ನು ನಿಲ್ಲಿಸಲಿಲ್ಲ. ಅವರೆಲ್ಲರು ನನಗೆ ಸೊದೋಮ್ ನಗರದಂತೆ ಇದ್ದಾರೆ. ಜೆರುಸಲೇಮಿನ ಜನರು ಗೊಮೋರ ನಗರದಂತೆ ಇದ್ದಾರೆ.”
ಯೆಹೋವನು, ‘ರಾಜನಾದ ಅಹಾಬನನ್ನು ನೀನು ಹೇಗೆ ಪ್ರೇರೇಪಿಸುವೆ?’ ಎಂದು ಉತ್ತರಿಸಿದಾಗ, ದೂತನು, ‘ಅಹಾಬನ ಎಲ್ಲಾ ಪ್ರವಾದಿಗಳು ಗಲಿಬಿಲಿಗೊಳ್ಳುವಂತೆ ಮಾಡುತ್ತೇನೆ. ರಾಜನಾದ ಅಹಾಬನಿಗೆ ಪ್ರವಾದಿಗಳು ಸುಳ್ಳುಹೇಳುವಂತೆ ನಾನು ಮಾಡುತ್ತೇನೆ. ಪ್ರವಾದಿಗಳ ಸಂದೇಶವೆಲ್ಲವೂ ಸುಳ್ಳಾಗಿರುವುದು’ ಎಂದನು. ಆದ್ದರಿಂದ ಯೆಹೋವನು, ‘ಸರಿ, ಹೋಗಿ ರಾಜನಾದ ಅಹಾಬನನ್ನು ಪ್ರೇರೇಪಿಸು. ನೀನು ಸಫಲನಾಗುವೆ’” ಎಂದು ಹೇಳಿದನು.