1 ಅರಸುಗಳು 13:2 - ಪರಿಶುದ್ದ ಬೈಬಲ್2 ಯಜ್ಞವೇದಿಕೆಯ ವಿರುದ್ಧ ಮಾತನಾಡುವಂತೆ ಆ ದೇವಮನುಷ್ಯನಿಗೆ ಯೆಹೋವನು ಆಜ್ಞಾಪಿಸಿದನು. ಆಗ ಅವನು ಹೇಳಿದ್ದೇನೆಂದರೆ: “ಯಜ್ಞವೇದಿಕೆಯೇ, ಯೆಹೋವನು ನಿನಗೆ ಹೀಗೆನ್ನುತ್ತಾನೆ: ‘ದಾವೀದನ ವಂಶದಲ್ಲಿ ಯೋಷೀಯನೆಂಬ ಮಗನು ಹುಟ್ಟುವನು. ಈಗ ಈ ಪೂಜಾಸ್ಥಳಗಳಲ್ಲಿ ಧೂಪಸುಡುತ್ತಿರುವ ಈ ಯಾಜಕರನ್ನು ಅವನು ಹಿಡಿದು ಅವರನ್ನು ನಿನ್ನ ಮೇಲೆಯೇ ಕೊಲ್ಲುವನು; ಈಗ ನಿನ್ನ ಮೇಲೆ ಧೂಪಸುಡುತ್ತಿರುವ ಯಾಜಕರನ್ನು ಅವನು ಹಿಡಿದು ಅವರ ಮೂಳೆಗಳನ್ನು ನಿನ್ನ ಮೇಲೆ ಸುಡುವನು.’” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಆಗ ಆ ಮನುಷ್ಯನು ಯೆಹೋವನ ಅಪ್ಪಣೆಯಿಂದ ಯಜ್ಞವೇದಿಯನ್ನು ಕುರಿತು, “ವೇದಿಯೇ, ವೇದಿಯೇ, ದಾವೀದನ ಸಂತಾನದಲ್ಲಿ ಯೋಷೀಯನು ಎಂಬ ಒಬ್ಬ ಮನುಷ್ಯನು ಹುಟ್ಟುವನು. ಅವನು ನಿನ್ನ ಮೇಲೆ ಧೂಪಹಾಕುವ ಪೂಜಾಸ್ಥಳಗಳ ಯಾಜಕರನ್ನು ಹಿಡಿದು, ಅವರನ್ನು ನಿನ್ನ ಮೇಲೆಯೇ ಯಜ್ಞಮಾಡುವನು. ಮನುಷ್ಯರ ಎಲುಬುಗಳು ನಿನ್ನ ಮೇಲೆ ಸುಡಲ್ಪಡುವವು ಎಂದು ಯೆಹೋವನು ಹೇಳುತ್ತಾನೆ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಆ ಭಕ್ತನು ಸರ್ವೇಶ್ವರನ ಅಪ್ಪಣೆಯಿಂದ ಆ ಪೀಠವನ್ನು ಉದ್ದೇಶಿಸಿ, “ಎಲೈ ಪೀಠವೇ, ಪೀಠವೇ, ದಾವೀದನ ಸಂತಾನದಲ್ಲಿ ಯೋಷೀಯ ಎಂಬೊಬ್ಬನು ಹುಟ್ಟುವನು. ಅವನು, ನಿನ್ನ ಮೇಲೆ ಧೂಪಸುಡುವ ಪೂಜಾಸ್ಥಳಗಳ ಯಾಜಕರನ್ನು ಹಿಡಿದು, ಅವರನ್ನು ನಿನ್ನ ಮೇಲೆಯೇ ಬಲಿಕೊಡುವನು. ಮನುಷ್ಯರ ಎಲುಬುಗಳನ್ನು ನಿನ್ನ ಮೇಲೆ ಸುಡಲಾಗುವುದು ಎಂದು ಸರ್ವೇಶ್ವರ ಹೇಳುತ್ತಾರೆ,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಆ ಮನುಷ್ಯನು ಯೆಹೋವನ ಅಪ್ಪಣೆಯಿಂದ ವೇದಿಯನ್ನು ಕುರಿತು - ವೇದಿಯೇ, ವೇದಿಯೇ, ದಾವೀದನ ಸಂತಾನದಲ್ಲಿ ಯೋಷೀಯನು ಎಂಬೊಬ್ಬನು ಹುಟ್ಟುವನು; ಅವನು ನಿನ್ನ ಮೇಲೆ ಧೂಪಸುಡುವ ಪೂಜಾಸ್ಥಳಗಳ ಯಾಜಕರನ್ನು ಹಿಡಿದು ಅವರನ್ನು ನಿನ್ನ ಮೇಲೆಯೇ ಯಜ್ಞಮಾಡುವನು. ಮನುಷ್ಯರ ಎಲುಬುಗಳು ನಿನ್ನ ಮೇಲೆ ಸುಡಲ್ಪಡುವವು ಎಂದು ಯೆಹೋವನು ಹೇಳುತ್ತಾನೆ ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಅವನು ಯೆಹೋವ ದೇವರ ಅಪ್ಪಣೆಯಿಂದ ಆ ಪೀಠವನ್ನು ಕುರಿತು: “ಪೀಠವೇ, ಪೀಠವೇ! ದಾವೀದನ ಸಂತಾನದಲ್ಲಿ ಯೋಷೀಯ ಎಂಬ ಹೆಸರುಳ್ಳ ಒಬ್ಬ ಮಗನು ಹುಟ್ಟುವನು. ಅವನು ನಿನ್ನ ಮೇಲೆ ಧೂಪವನ್ನರ್ಪಿಸುವ ಪೂಜಾಸ್ಥಳಗಳ ಯಾಜಕರನ್ನು ಹಿಡಿದು ಬಲಿಯಾಗಿ ಅರ್ಪಿಸುವನು. ಮನುಷ್ಯರ ಎಲುಬುಗಳನ್ನು ನಿನ್ನ ಮೇಲೆ ಸುಡಲಾಗುವವು,” ಎಂದು ಯೆಹೋವ ದೇವರು ಹೇಳುತ್ತಾರೆ ಎಂದನು. ಅಧ್ಯಾಯವನ್ನು ನೋಡಿ |