1 ಅರಸುಗಳು 13:21 - ಪರಿಶುದ್ದ ಬೈಬಲ್21 ಆ ಪ್ರವಾದಿಯು ಯೆಹೂದ ದೇಶದವನಾದ ದೇವಮನುಷ್ಯನಿಗೆ, “ಯೆಹೋವನು ಹೇಳುವುದೇನೆಂದರೆ, ನೀನು ಆತನಿಗೆ ವಿಧೇಯನಾಗಲಿಲ್ಲ. ಆತನ ಆಜ್ಞೆಯನ್ನು ನೀನು ಅನುಸರಿಸಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಅವನು ಆ ಯೆಹೂದ ದೇಶದವನಾದ ಆ ದೇವರ ಮನುಷ್ಯನಿಗೆ, “ನಿನ್ನ ದೇವರಾದ ಯೆಹೋವನು ನಿನಗೆ ಈ ಸ್ಥಳದಲ್ಲಿ ಅನ್ನಪಾನಗಳನ್ನು ತೆಗೆದುಕೊಳ್ಳಬಾರದೆಂದು ಆಜ್ಞಾಪಿಸಿದರೂ ನೀನು ಆತನ ಆಜ್ಞೆಯನ್ನು ಮೀರಿ ಅವಿಧೇಯನಾಗಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಅವನು ಜುದೇಯ ನಾಡಿನ ಆ ದೈವಭಕ್ತನಿಗೆ, “ನಿನ್ನ ದೇವರಾದ ಸರ್ವೇಶ್ವರ ನಿನಗೆ ಈ ಸ್ಥಳದಲ್ಲಿ ಅನ್ನಪಾನಗಳನ್ನು ತೆಗೆದುಕೊಳ್ಳಬಾರದೆಂದು ಆಜ್ಞಾಪಿಸಿದರೂ ನೀನು ಅವರ ಆಜ್ಞೆಯನ್ನು ಮೀರಿ, ಅವಿಧೇಯನಾಗಿ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಅವನು ಯೆಹೂದ ದೇಶದವನಾದ ಆ ದೇವರ ಮನುಷ್ಯನಿಗೆ - ನಿನ್ನ ದೇವರಾದ ಯೆಹೋವನು ನಿನಗೆ ಈ ಸ್ಥಳದಲ್ಲಿ ಅನ್ನಪಾನಗಳನ್ನು ತೆಗೆದುಕೊಳ್ಳಬಾರದೆಂದು ಆಜ್ಞಾಪಿಸಿದರೂ ನೀನು ಆತನ ಆಜ್ಞೆಯನ್ನು ಮೀರಿ ಅವಿಧೇಯನಾಗಿ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಅವನು ಯೆಹೂದ ದೇಶದವನಾದ ಆ ದೇವರ ಮನುಷ್ಯನಿಗೆ, “ನೀನು ಯೆಹೋವ ದೇವರ ಮಾತಿಗೆ ತಿರುಗಿಬಿದ್ದು, ನಿನ್ನ ದೇವರಾದ ಯೆಹೋವ ದೇವರು ನಿನಗೆ ಆಜ್ಞಾಪಿಸಿದ ಆಜ್ಞೆಯನ್ನು ಕೈಗೊಳ್ಳದೆ, ಹಿಂದಕ್ಕೆ ಬಂದು, ‘ರೊಟ್ಟಿ ತಿನ್ನಬೇಡ, ನೀರು ಕುಡಿಯಬೇಡ,’ ಎಂದು ಯೆಹೋವ ದೇವರು ನಿನಗೆ ಹೇಳಿದ ಸ್ಥಳದಲ್ಲಿ ಅಧ್ಯಾಯವನ್ನು ನೋಡಿ |
ನೀವು ಕೆಟ್ಟದ್ದನ್ನು ಮಾಡಿದರೆ ಆ ಕೆಟ್ಟತನ ನಿಮಗೆ ಶಿಕ್ಷೆಯಾಗುವಂತೆ ಮಾತ್ರ ಮಾಡುತ್ತದೆ. ನಿಮಗೆ ವಿಪತ್ತು ಬರುತ್ತದೆ. ಆ ವಿಪತ್ತು ನಿಮಗೊಂದು ಪಾಠವನ್ನು ಕಲಿಸುತ್ತದೆ. ಅದರ ಬಗ್ಗೆ ಯೋಚಿಸಿರಿ. ಆಗ ನಿಮ್ಮ ದೇವರಿಗೆ ವಿಮುಖರಾಗುವುದು ಎಷ್ಟು ಕೆಟ್ಟದ್ದೆಂದು ನಿಮಗೆ ಗೊತ್ತಾಗುತ್ತದೆ. ನನಗೆ ಭಯಭಕ್ತಿ ತೋರದೆ ಇರುವದು ತಪ್ಪು.” ಈ ಸಂದೇಶವು ನನ್ನ ಒಡೆಯನೂ ಸರ್ವಶಕ್ತನೂ ಆಗಿರುವ ಯೆಹೋವನಿಂದ ಬಂದಿತು.
ಗಾದನು ದಾವೀದನ ಬಳಿಗೆ ಹೋಗಿ, “ಈ ಮೂರು ಶಿಕ್ಷೆಗಳಲ್ಲಿ ಒಂದನ್ನು ಆರಿಸಿಕೊ: ನಿನಗೆ ಮತ್ತು ನಿನ್ನ ದೇಶಕ್ಕೆ ಏಳು ವರ್ಷಗಳ ಕಾಲ ಬರಗಾಲ ಬರಬೇಕೇ? ಅಥವಾ ನಿನ್ನ ಶತ್ರುಗಳು ನಿನ್ನನ್ನು ಮೂರು ತಿಂಗಳ ಕಾಲ ಅಟ್ಟಿಸಬೇಕೇ? ಅಥವಾ ಮೂರು ದಿನಗಳ ಕಾಲ ನಿನ್ನ ದೇಶದಲ್ಲಿ ರೋಗರುಜಿನಗಳು ವ್ಯಾಪಿಸಬೇಕೇ? ಇವುಗಳ ಬಗ್ಗೆ ಯೋಚಿಸು, ನನ್ನನ್ನು ಕಳುಹಿಸಿದ ಯೆಹೋವನಿಗೆ ನಾನು ಏನು ಹೇಳಬೇಕೆಂಬುದನ್ನು ನೀನು ತೀರ್ಮಾನಿಸು” ಎಂದು ಹೇಳಿದನು.